ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಚುನಾವಣೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಶಿಗ್ಗಾಂವಿ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಸೈಯದ್ ಅಜ್ಜಂ ಪೀರ್ ಖಾದ್ರಿ ಅವರು ನಾಮಪತ್ರ ಹಿಂಪಡೆಯಲಿದ್ದು, ಎಲ್ಲರೂ ಒಟ್ಟಾಗಿ ಪಕ್ಷದ ಪರವಾಗಿ ಚುನಾವಣೆ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಶಿಗ್ಗಾಂವಿಯಲ್ಲಿ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಗ್ಗೆ ಪ್ರತಿಕ್ರಿಯಿಸಿ,, “ನಾನು ಖಾದ್ರಿ ಅವರು ಹಾಗೂ ಅವರ ಕಾರ್ಯಕರ್ತರ ಜತೆ ಮಾತನಾಡಿದ್ದೇನೆ. ಈ ವಿಚಾರವಾಗಿ ಸಚಿವರಾದ ಜಮೀರ್ ಅಹ್ಮದ್, ರಹೀಂ ಖಾನ್, ರೆಹಮಾನ್ ಖಾನ್ ಸೇರಿದಂತೆ ಆ ಜಿಲ್ಲೆಯ ನಾಯಕರ ಜತೆ ಚರ್ಚೆ ಮಾಡಿದ್ದು, ನಾಮಪತ್ರ ಹಿಂಪಡೆದು ಒಟ್ಟಾಗಿ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

Related posts