ಕಾರವಾರ: ಜುಲೈ ತಿಂಗಳಲ್ಲಿ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದ ವೇಳೆ ನಾಪತ್ತೆಯಾಗಿದ್ದ ಕೇರಳ ಮೂಲದ ಚಾಲಕ ಅರ್ಜುನ್ ಎಂಬಾತನ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದು 72 ದಿನಗಳ ಬಳಿಕ ಮೃತದೇಹ ಪತ್ತೆಯಾಗಿದೆ
ಗುಡ್ಡ ಕುಸಿತದಲ್ಲಿ 11 ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದು ಈ ಪೈಕಿ 8 ಮಂದಿಯ ಶವ ಪತ್ತೆಯಾಗಿತ್ತು. ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಎಂಬಾತನೂ ನಾಪತ್ತೆಯಾಗಿದ್ದ. ಇದೀಗ ಈತನ ಶವ ಪತ್ತೆಯಾಗಿದೆ.