ಬಳ್ಳಾರಿ : ಸಂಡೂರು ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.
ಕಾಂಗ್ರೆಸ್‌ನ ಭದ್ರಕೋಟೆಯೆಂದು ಬಿಂಬಿತವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಜಯಗಳಿಸಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಾಲಿಗೆ ತೀವ್ರ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿತ್ತು. ಕಾಂಗ್ರೆಸ್‌ನ ಸಚಿವ ಸಂತೋಷ್ ಲಾಡ್ ಹಾಗೂ ಬಿಜೆಪಿಯ ಶಾಸಕ ಜಿ. ಜನಾರ್ದನ ರೆಡ್ಡಿ ನಡುವೀಣೆ ವೈಯಕ್ತಿಕ ವರ್ಚಸ್ಸಿನ ಪ್ರಶ್ನೆಯ ಕಣವಾಗಿ ಗುರುತಾಗಿದ್ದ ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಕನಸು ಭಗ್ನವಾಗಿದೆ.
ಕಾಂಗ್ರೆಸ್ ಸಂಸದ ಇ.ತುಕಾರಾಮ್ ರಾಜೀನಾಮೆಯಿಂದಾಗಿ ತೆರವಾಗಿದ್ದ ಸಂಡೂರಿನಲ್ಲಿ ಉಪಚುನಾವಣೆ ನಡೆದಿದೆ. ಕಾಂಗ್ರೆಸ್ ಪಕ್ಷವು ತುಕಾರಾಂ ಪತ್ನಿ ಅನ್ನಪೂರ್ಣ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿಯು ಬಂಗಾರು ಹನುಮಂತು ಅವರನ್ನು ಕಣಕ್ಕಿಳಿಸಿತ್ತು. ಆದರೆ ವಿಜಯಮಾಲೆ ಕಾಂಗ್ರೆಸ್ ಅಭ್ಯರ್ಥಿಯ ಕೊರಳಿಗೆ ಬಿದ್ದಿದೆ.