ರಾಯಚೂರು : ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್ ಬಳಿ ಎರಡು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಸಿಂಧನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಶಿವಪ್ಪ ಹುಸೇನಪ್ಪ(37), ಮೌನೇಶ್ ಮಹಾದೇವ(20) ಮತ್ತು ಹನುಮೇಶ(24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಂಧನೂರು ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.