ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಮಂಗಳೂರಿನ ಹಿಂದೂ ಪರ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂಬ ಬಿಜೆಪಿ ನಾಯಕರ ಆಗ್ರಹ ಕುರಿತಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಪರಮೇಶ್ವರ್, ನಮ್ಮ ಪೋಲೀಸರು ತಮ್ಮ ಕೆಲಸವನ್ನು ಚೆನ್ನಾಗಿ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರಕರಣ ಈ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿರುವುದರಿಂದ ಈ ಹಂತದಲ್ಲಿ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುವ ಅಗತ್ಯವಿಲ್ಲ ಎಂದರು.

Related posts