ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿದ ಘಟನೆಯನ್ನು ಬೇಧಿಸಿರುವ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಡಿಸಿಪಿ ದೀಕ್ಷಿತ್‌ಕುಮಾರ್ ಅಶೋಕ್ ಗೆದಮ್ ಆರೋಪಿಯನ್ನು ಥಾಣೆಯ ಘೋಡ್‌ಬಂದರ್ ರಸ್ತೆಯಲ್ಲಿರುವ ಹಿರಾನಂದಾನಿ ಎಸ್ಟೇಟ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ. ಕಳ್ಳತನ ಸಂಬಂಧ ಆತ ಮನೆಯೊಳಗೆ ನುಗ್ಗಿದ್ದು, ಆತನಿಗೆ ತಾನು ನತಮ ಮನೆಯೊಳಗೆ ಪ್ರವೇಶಿಸಿದ್ದೇನೆ ಎಂಬುದು ಗೊತ್ತಿರಲಿಲ್ಲ ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಸಂಗತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದವರು ವಿವರಿಸಿದ್ದಾರೆ.