ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ಕಿರುಕುಳ ನಿಲ್ಲಬೇಕು’; ರಮ್ಯಾ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್‌ಗಳು ಮತ್ತು ಸಂದೇಶಗಳನ್ನು ಕಳುಹಿಸಿದವರ ವಿರುದ್ಧ ಕಾನೂನು ಹೋರಾಟ ಆರಂಭಿಸಿರುವ ನಟಿ ರಮ್ಯಾ (Ramya Divya Spandana) ಅವರು, ಆರೋಪಿಗಳನ್ನು ನೋಡಿದಾಗ ಕೆಲವೊಮ್ಮೆ ಬೇಸರವಾಗುತ್ತದೆ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಹೆಚ್ಚುತ್ತಿರುವ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದಲೇ ಈ ಪ್ರಕರಣವನ್ನು ದಾಖಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ದೂರಿನ ಸಂಬಂಧ ಬೆಂಗಳೂರು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಸಾಕ್ಷಿ ಹೇಳಿಕೆಗಾಗಿ ಮಂಗಳವಾರ ರಮ್ಯಾ ನ್ಯಾಯಾಲಯಕ್ಕೆ ಹಾಜರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪಿಗಳನ್ನು ನೋಡಿದರೆ ಪಾಪ ಅನ್ಸುತ್ತೆ. ಆದರೆ ನಾನು ಇದನ್ನು ನನಗೋಸ್ಕರ ಮಾಡುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ತುಂಬಾ ಕಿರುಕುಳ ನೀಡಲಾಗುತ್ತಿದೆ. ಅದನ್ನು ನಿಲ್ಲಿಸಬೇಕು. ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಅದಕ್ಕಾಗಿ ಈ ಕೇಸ್ ಹಾಕಿದ್ದೇನೆ,” ಎಂದು ಹೇಳಿದರು.

ಈ ಪ್ರಕರಣದಲ್ಲಿ ಮಂಗಳವಾರ ಅವರು ಸಾಕ್ಷಿ ನೀಡಿದ್ದಾರೆ. ಮುಂದಿನ ದಿನಾಂಕದಲ್ಲಿ ಕ್ರಾಸ್‌ ಎಕ್ಸಾಮಿನೇಷನ್ ನಡೆಯಲಿದೆ ಎಂದು ರಮ್ಯಾ ತಿಳಿಸಿದ್ದಾರೆ.

Related posts