ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ಸಿಗರಿಂದ ಸಂವಿಧಾನಕ್ಕೆ ಅಪಚಾರ; ವಿಜಯೇಂದ್ರ

ಬೆಂಗಳೂರು: ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಾ ಬಂದಿರುವ ಏಕೈಕ ಪಕ್ಷ ಎಂದಿದ್ದರೆ ಅದು ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸ್ವಾತಂತ್ರ್ಯ ಬಂದಾಗಿನಿಂದ ಪ್ರತಿ ಹಂತದಲ್ಲೂ ಕಾಂಗ್ರೆಸ್ಸಿಗರು ಸಂವಿಧಾನಕ್ಕೆ ಅಪಚಾರ ಮಾಡುತ್ತಾ ಬಂದಿದ್ದಾರೆ ಎಂದವರು ಆರೋಪಿಸಿದ್ದಾರೆ.

ಸಂವಿಧಾನಕ್ಕೆ 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂವಿಧಾನ ಸನ್ಮಾನ ಅಭಿಯಾನದಡಿಯಲ್ಲಿ ಸಂವಿಧಾನವನ್ನು ಗೌರವಿಸಬೇಕು ಎಂಬುದು ಪ್ರಧಾನಿ ಮೋದಿ ಅವರ ಆಶಯವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Related posts