ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೊತ್ತನೂರಿನಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ನಿರ್ದೇಶನ ನೀಡಿದ್ದಾರೆ.
22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸಬೇಕು ಎಂದು ಸೂಚಿಸಿರುವ ಅವರು, ಕೆ.ಆರ್.ಪುರ-2 ಹೋಬಳಿಯ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 8 ಗುಂಟೆ ಜಮೀನನ್ನು ಅರಣ್ಯ ಇಲಾಖೆಗೆ 2000 ಇಸವಿಯಲ್ಲಿ ವಹಿಸಲಾಗಿರುತ್ತದೆ. ಆದರೆ, ಅಧಿಕಾರಿಗಳು ಇಲಾಖೆಗೆ ಮಂಜೂರಾದ ಭೂಮಿಯನ್ನು ವಶಕ್ಕೆ ಪಡೆದು ಅರಣ್ಯ ಬೆಳೆಸುವಲ್ಲಿ ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಈಶ್ವರ್ ಬಿ. ಖಂಡ್ರೆ, ಬೆಂಗಳೂರಿನಲ್ಲಿ ಹಸಿರು ಹೊದಿಕೆ ಹೆಚ್ಚಿಸುವ ಉದ್ದೇಶದಿಂದ 1999-2000 ಸಾಲಿನಲ್ಲಿ ಕೆಆರ್ ಪುರಂ ಬಳಿಯ ಕೊತ್ತನೂರು ಸರ್ವೇ ನಂ. 48ರಲ್ಲಿನ 22.08 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು. ಆದರೆ, ಈ ಜಮೀನನ್ನು ವಶಕ್ಕೆ ಪಡೆದು ಅರಣ್ಯ ಬೆಳೆಯುವಲ್ಲಿ ಈ ಹಿಂದಿನ ಅರಣ್ಯ ಅಧಿಕಾರಿಗಳು ವಿಫಲವಾಗಿದ್ದಾರೆ ಎಂಬುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
700 ಕೋಟಿ ರೂ. ಮೌಲ್ಯದ ಈ ಭೂಮಿಯನ್ನು ಕೂಡಲೇ ವಶಕ್ಕೆ ಪಡೆಯಲು ಮತ್ತು ಅಕ್ರಮ ಒತ್ತುವರಿಯನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಸಿರು ಹೊದಿಕೆ ಹೆಚ್ಚಿಸುವ ಉದ್ದೇಶದಿಂದ 1999-2000 ಸಾಲಿನಲ್ಲಿ ಕೆಆರ್ ಪುರಂ ಬಳಿಯ ಕೊತ್ತನೂರು ಸರ್ವೇ ನಂ. 48ರಲ್ಲಿನ 22.08 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು. ಆದರೆ, ಈ ಜಮೀನನ್ನು ವಶಕ್ಕೆ ಪಡೆದು ಅರಣ್ಯ ಬೆಳೆಯುವಲ್ಲಿ ಈ ಹಿಂದಿನ ಅರಣ್ಯ ಅಧಿಕಾರಿಗಳು ವಿಫಲವಾಗಿದ್ದಾರೆ ಎಂಬುದನ್ನು ಸರ್ಕಾರ… pic.twitter.com/P0T0eOsVTi
— Eshwar Khandre (@eshwar_khandre) September 20, 2024