ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಪಕ್ಷವನ್ನು ನಿರಂತರವಾಗಿ ಸಂಘಟನೆ ಮಾಡಬೇಕು. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಶ್ರಮಿಸಬೇಕು. 100 ದಿನಗಳಲ್ಲಿ ಸಿದ್ದರಾಮಯ್ಯನವರ ಸರಕಾರವು ಜನಪ್ರಿಯತೆ ಕಳಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಎಂದು ನಾಯಕರಿಗೆ ಮಾರ್ಗದರ್ಶನ ಮಾಡಿದರು.
ಅನೇಕ ಜ್ವಲಂತ ಸಮಸ್ಯೆಗಳು ಇದ್ದರೂ ಅದಕ್ಕೆ ಸಮರ್ಪಕವಾಗಿ ಸ್ಪಂದಿಸದೆ, ಜನವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ.
– ಶ್ರೀ @BSYBJP, ಮಾಜಿ ಮುಖ್ಯಮಂತ್ರಿಗಳು pic.twitter.com/RGckwM6erc
— BJP Karnataka (@BJP4Karnataka) September 12, 2023
ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ಅವರು ತಿಳಿಸಿದರು. ಎಸ್‍ಸಿ, ಎಸ್‍ಟಿ ಸಮುದಾಯದ ಅನುದಾನವನ್ನು ದುರುಪಯೋಗ ಮಾಡಿಕೊಂಡು ಈ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಭೀಕರ ಬರಗಾಲ ಇದ್ದರೂ ಅದರ ಕಡೆಗೆ ಗಮನ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿದರು.
ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿ ಮಾತನಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾಗಿ ಆಗ್ರಹಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ ಸಹಿತ ಪಾಖ್ಸದ ನಾಯಕರನೇಕರು ಭಾಗವಹಿಸಿದ್ದರು.