ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

ಉಡುಪಿ: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೊಳಪಡಿಸಿ ಆದೇಶಿಸಿದೆ.

ಬ್ರಹ್ಮಾವರ ಪೊಲೀಸರು ಗುರುವಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ್ದರು. ಗುರುವಾರ ಬೆಳಗ್ಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆದೊಯ್ದ ಪೊಲೀಸರು ಬ್ರಹ್ಮಾವರದಲಿರುವ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಲಯ ಮಹೇಶ್ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೇ ಸಂದರ್ಭದಲ್ಲಿ ಮಹೇಶ್‌ ಶೆಟ್ಟಿ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಈ ಸಂಬಂಧ ಅಗಸ್ಟ್ 23ರಂದು ನಡೆಯಲಿದೆ.

Related posts