ಚಿಕ್ಕಮಗಳೂರು: ಹುಲಿ ಉಗುರು ಹೊಂದಿದ ಆರೋಪದಲ್ಲಿ ಬಿಗ್ ಬಾಸ್ ರಿಯಾಲಿಟಿ ಷೋ ಸ್ಪರ್ಧಿ ಸಂತೋಷ್ ಬಂಧನವಾಗುತ್ತಿದ್ದಂತೆಯೇ ರಾಜ್ಯದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಹಲವು ಗಣ್ಯರು ಹುಲಿ ಉಗುರಿನ ಆಕಾರದ ಲಾಕೆಟ್ ಧರಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅರಣ್ಯ ಇಲಾಖಾಧಿಕಾರಿಗಳು ತನಿಖೆಯ ಅಖಾಡಕ್ಕೆ ಧುಮುಕಿದ್ದಾರೆ.
ಈ ನಡುವೆ ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಪ್ರಕರಣದಲ್ಲಿ ಇಬ್ಬರು ಅರ್ಚಕರನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ ಎಂಬವರು ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು, ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಡಿದ್ದಾರೆ.