ಹೈಕೋರ್ಟ್‌ನಲ್ಲಿ ಇನ್ನೇನು ತೀರ್ಪು ಬರಬೇಕು ಎನ್ನುವಷ್ಟರಲ್ಲಿ ಸಿಎಂಗೆ ಲೋಕಾಯುಕ್ತ ಕ್ಲೀನ್ ಚಿಟ್

ಬೆಂಗಳೂರು: ಮುಡಾ ಪ್ರಕರಣದ ಕುರಿತು ಹೈಕೋರ್ಟ್‌ನಲ್ಲಿ ಇನ್ನೇನು ತೀರ್ಪು ಬರಬೇಕು ಎನ್ನುವಷ್ಟರಲ್ಲಿ ಲೋಕಾಯುಕ್ತ ಸಂಸ್ಥೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ವರದಿ ಬಹಿರಂಗವಾಗಿದೆ. ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ ಚಿಟ್ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಯಾವುದೇ ತನಿಖೆ ಸಂಸ್ಥೆಗಳು ಆಧಾರ ರಹಿತವಾಗಿ ಮಾಹಿತಿ ನೀಡುವುದಿಲ್ಲ. ಮುಡಾ ಪ್ರಕರಣದಲ್ಲಿ ಆಧಾರ ಸಹಿತವಾಗಿ ಜಾರಿ ನಿರ್ದೇಶನಾಲಯ ವರದಿ ನೀಡಿದ ಬೆನ್ನಲ್ಲೇ ಲೋಕಾಯುಕ್ತ ಸಂಸ್ಥೆಯು ಅತುರಾತುರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

Related posts