ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನವರಿ 13ರಂದು ಪ್ರಾರಂಭವಾಗಿರುವ ಮಹಾಕುಂಭ ಮೇಳವು ಫೆಬ್ರವರಿ 26ರವರೆಗೆ ನಡೆಯಲಿದೆ. ಹಿಂದೂಗಳು ಪವಿತ್ರವೆಂದು ಪರಿಗಣಿಸುವ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮವಾದ ತ್ರಿವೇಣಿ ಸಂಗಮದ ದಡದಲ್ಲಿ ಮಹಾಕುಂಭ ನಡೆಯುತ್ತಿದೆ.ಈ ಮಹಾಕುಂಭಮೇಳದ ಸಂದರ್ಭದಲ್ಲಿ ಈವರೆಗೆ 50 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.