ಆನ್-ಲೈನ್ ಬೋಧನೆ ಅವಧಿ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕ್ರಮ: ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಶಾಲೆಗಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್‍ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಾಲೆಗಳು ಸರ್ಕಾರದ ಆನ್-ಲೈನ್ ಮಾರ್ಗಸೂಚಿ ಪಾಲಿಸದೇ ಹೆಚ್ಚಿನ ಅವಧಿ ಆನ್-ಲೈನ್ ತರಗತಿಗಳನ್ನು ನಡೆಸುತ್ತಿರುವುದರಿಂದ ಮಕ್ಕಳ ಆರೋಗ್ಯ ಮತ್ತು ದೃಷ್ಟಿಯ ಮೇಲೆ ಪರಿಣಾಮಗಳುಂಟಾಗುತ್ತಿವೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ತಜ್ಞರ ವರದಿಯ ಶಿಫಾರಸಿನ ಅವಧಿಯನ್ವಯ ಆನ್-ಲೈನ್ ಬೋಧನೆ ಮಾಡಬೇಕು. ಈ ಮಾರ್ಗಸೂಚಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ-1983 (1995)ರ ಸೆಕ್ಷನ್ 124(5) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಖಾಸಗಿ ಶಾಲೆಗಳು ಆನ್-ಲೈನ್ ಬೋಧನೆ ಆರಂಭಿಸಿ ಹೆಚ್ಚುವರಿ ಶುಲ್ಕ ಪಾವತಿಸಲು…

‘ಕೋಟಿ’ ಕನಸುಗಳ ಸುತ್ತ ಕಾವೇರಿ ತವರಿನ ಕುವರಿ

ಕನ್ನಡತಿ ರಶ್ಮಿಕಾ ಮಂದಣ್ಣ ಇದೀಗ ಕರುನಾಡಿಗಿಂತ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿ. ಅವರೀಗ ಭಾರಿ ಮೊತ್ತದ ಸಂಭಾವನೆ ವಿಚಾರದಿಂದಾಗಿ ಮತ್ತೆ ಸುದ್ದಿಯಾಗಿದ್ದಾರೆ. ಕನ್ನಡದ ‘ಕಿರಿಕ್ ಪಾರ್ಟಿ’ ನಂತರ ತೆಲುಗಿನ ‘ಗೀತಾ ಗೋವಿಂದಂ’ ಚಿತ್ರದ ಮೂಲಕ ತೆಲುಗು ಸಿನಿಮಾ ರಂಗದಲ್ಲಿ ಅವರು ಬಲವಾಗಿ ಬೇರೂರಿದರು. ಈ ಸಿನಿಮಾ ನಂತರ ತೆಲುಗು ಚಿತ್ರರಂಗದಲ್ಲಿ ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಲೇ ಸಾಗಿದ ಕೊಡಗಿನ ಕುವರಿ ರಶ್ಮಿಕಾ ಇದೀಗ ‘ಆಡಲ್ಲು ಮೀಕು ಜೋಹರ್ಲು’ ಚಿತ್ತ್ರ ಮೂಲಕ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದ್ದಾರೆ. ಕಿಶೋರ್ ತಿರುಮಲ ನಿರ್ದೇಶನದ ಈ ಚಿತ್ರಕ್ಕಾಗಿ ರಶ್ಮಿಕಾ ಒಂದು ಕೋಟಿಗೂ ಹೆಚ್ಚು ಮೊತ್ತದ ಸಂಭಾವನೆ ನಿರೀಕ್ಷಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ತಿರುಮಲದಲ್ಲಿ ಮುಹೂರ್ತ ಮುಗಿಸಿ ಸೆಟ್ಟೇರಿರುವ ಈ ಚಿತ್ರದಲ್ಲಿ ಶರ್ವಾನಂದ್ ಜೊತೆ ರಶ್ಮಿಕಾ ಮಂದಣ್ಣ ತೆರೆ ಹಂಚಿಕೊಳ್ಳಲಿದ್ದಾರೆ.

ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಅಂತಾ ಮನೆಗೆ ಬಂದಿದ್ದರು: ಹೆಚ್ಡಿಕೆ

ಬೆಂಗಳೂರು: ಈಗ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಸಿಎಂ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ ಎಂದು ದುಂಬಾಲು ಬಿದ್ದಿದ್ದನ್ನು ಇಡೀ ರಾಜ್ಯ ನೋಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಜರಾಜೇಶ್ವರಿ ನಗರ ಕ್ಷೇತ್ರದ ವ್ಯಾಪ್ತಿಯ ಬಂಗಾರಪ್ಪ ನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಬೆಳೆದು ಬೆನ್ನಿಗೆ ಚೂರಿ ಹಾಕಿದ ಸಿದ್ದರಾಮಯ್ಯ ಜೆಡಿಎಸ್ ಪಕ್ಷಕ್ಕೆ ಹೀರೋ ಆಗಲು ಸಾಧ್ಯವೇ ಇಲ್ಲ.  ಅವರು ಎಂದಿಗೂ  ವಿಲನ್.. ಕಾಂಗ್ರೆಸ್ ಪಕ್ಷದ ಒಂದು ವರ್ಗಕ್ಕೂ ಸಿದ್ದರಾಮಯ್ಯ ವಿಲನ್ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮುಂದೆ ಕೂಡ ಸಿದ್ದರಾಮಯ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತ ಸ್ಥಿತಿಗೆ ಬರುವ ಕಾಲ…

ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ

ದೆಹಲಿ: ಸಮಾಜಸೇವೆ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ವಯಂ ಸೇವಾ ಸಂಸ್ಥೆ ಮತ್ತು ಟ್ರಸ್ಟ್’ಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಬೆಂಗಳೂರಿನ ಒಂದು ಸ್ಥಳ ಹಾಗೂ ಕಾಶ್ಮೀರದ ಒಟ್ಟು 10 ಪ್ರದೇಶಗಳ ಮೇಲೆ ಎನ್ಐಎ ಕಾರ್ಯಾಚರಣೆ ನಡೆಸಿದೆ. ಸ್ಥಳೀಯ ಪೊಲೀಸ್‌ ಹಾಗೂ ಅರೆಸೇನಾ ಪಡೆಗಳ ನೆರವಿನೊಂದಿಗೆ ಎನ್‌ಐಎ ಶ್ರೀನಗರ, ಬಂಡಿಪೋರಾ ಹಾಗೂ ಬೆಂಗಳೂರಿನಲ್ಲಿ ಈ ಶೋಧ ಕಾರ್ಯಾಚರಣೆ ನಡೆಸಿದೆ. ಎನ್‌ಜಿಒ ಅಥರೌಟ್‌ ಮತ್ತು ಜೆಕೆ ಟ್ರಸ್ಟ್‌ಗಳ ಕಚೇರಿ ಮೇಲೂ ಶೋಧ ನಡೆದಿದೆ ಎನ್ನಲಾಗಿದೆ.

ಬಿಜೆಪಿ ಪರ ಚಿತ್ರ ನಟಿ ಖುಷ್ಬೂ ಪ್ರಚಾರ; ಭರ್ಜರಿ ರೋಡ್ ಶೋ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದೆ. ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹರಸಾಹಸ ಪಡುತ್ತಿದ್ದಾರೆ, ಬಿಜೆಪಿ ಹುರಿಯಾಳು ಮುನಿರತ್ನ ಅವರನ್ನು ಪುನರಾಯ್ಕೆ ಮಾಡಲು ಕಮಲ ನಾಯಕರು ಶತಪ್ರಯತ್ನದಲ್ಲಿ ತೊಡಗಿದ್ದಾರೆ. ಜೆಡಿಎಸ್ ನಾಯಕರು ಕೂಡಾ ತಮ್ಮ ಪಕ್ಷದ ಅಭ್ಯರ್ಥಿಯ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಪರವಾಗಿ ತಮಿಳುನಾಡಿನ ಬಿಜೆಪಿ ನಾಯಕಿ, ಚಿತ್ರ ನಟಿ ಖುಷ್ಬೂ ಸುಂದರ್ ಪ್ರಚಾರ ಕೈಗೊಂಡಿದ್ದಾರೆ. ಲಗ್ಗೆರೆಯ ಕೆಂಪೇಗೌಡ ಆರ್ಚ್ ಸ್ಥಳದಿಂದ ಲಕ್ಷ್ಮಿದೇವಿ ನಗರ ಮತ್ತು ಯಶವಂತಪುರದಲ್ಲಿ ರೋಡ್ ಶೋ ಮೂಲಕ ಪ್ರಚಾರ ಕೈಗೊಂಡರು.

ಸನಾತನ ಧರ್ಮವನ್ನು ಅಪ್ಪಿಕೊಂಡಿದ್ದ ಭಗಿನಿ ನಿವೇದಿತಾ: ಸಚಿವ ರಮೇಶ್ ಜಾರಕಿಹೊಳಿ‌

ಬೆಳಗಾವಿ: ಪಶ್ಚಿಮದ ರಾಷ್ಟ್ರದಲ್ಲಿ ಹುಟ್ಟಿದ್ದರೂ ಸಹೋದರಿ ನಿವೇದಿತಾ ಭಾರತೀಯತೆಯನ್ನು ಅಪ್ಪಿಕೊಂಡು ಆಧ್ಯಾತ್ಮಿಕ ಸಾಧನೆ ಮಾಡಿದವರು ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಸ್ಮರಿಸಿದ್ದಾರೆ. ಗೋಕಾಕ್ ನಗರದಲ್ಲಿರುವ ಜಲಸಂಪನ್ಮೂಲ ಸಚಿವರ ಗೃಹ ಕಚೇರಿಯಲ್ಲಿ ಭಗಿನಿ ನಿವೇದಿತಾ ಅವರ 153ನೇ ಜನ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ತಾಯಿ ಭಾರತಾಂಬೆಯ ಪದತಲದಲ್ಲಿ ಸಮರ್ಪಿತಗೊಂಡ ಶ್ರೇಷ್ಠ ಪುಷ್ಪವೇ ಭಗಿನಿ ನಿವೇದಿತಾ ಎಂದರು. ಭಾರತೀಯರ ಸೇವೆ ಮತ್ತು ಆಧ್ಯಾತ್ಮಿಕ ಚಿಂತನೆಗೆ ತನ್ನ ಜೀವನವನ್ನೇ ಮುಡಿಪಾಗಿಟ್ಟಂತಹಾ ಸಹೋದರಿ ನಿವೇದಿತಾ, ಸ್ವಾಮಿ ವಿವೇಕಾನಂದರ ಮಾನಸ ಪುತ್ರಿಯಾಗಿದ್ದರು. ಅವರಂತೆ ಪ್ರತಿಯೊಬ್ಬ ಮಹಿಳೆಗೂ ದೇಶದ ಮತ್ತು ಧರ್ಮದ ಬಗ್ಗೆ ಕಾಳಜಿ ಇರಬೇಕು. ಆಗ ನಮ್ಮ ದೇಶ ವಿಶ್ವಕ್ಕೇ ಮಾರ್ಗದರ್ಶನ ಮಾಡುವಂತಾಗುತ್ತದೆ ಎಂದು ಸಚಿವ ಜಾರಕಿಹೊಳಿ‌ ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕುರುಕ್ಷೇತ್ರ ಮುಗಿಯುತ್ತಿದ್ದಂತೆ ನನ್ನ, ಮುನಿರತ್ನ ಸಂಬಂಧ ಅಂತ್ಯ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಮುನಿರತ್ನ ನನ್ನ ಗಾಡ್‌ಫಾದರ್‌ ಅಲ್ಲ. ನಾನೊಬ್ಬ ನಟ, ಮುನಿರತ್ನ ನಿರ್ಮಾಪಕರಷ್ಟೇ. ಕುರುಕ್ಷೇತ್ರ ಸಿನಿಮಾ ಮುಗಿಯುತ್ತಿದ್ದಂತೆ ಅವರ ಹಾಗೂ ನನ್ನ ಸಂಬಂಧ ಮುಗಿದಿದೆ ಎಂದು ನಟ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಅವರ ಪರ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುನಿರತ್ನ ನಿರ್ಮಾಪಕರು, ನಾನೊಬ್ಬ ನಟ ಅಷ್ಟೇ, ಕುರುಕ್ಷೇತ್ರ ಸಿನಿಮಾದಲ್ಲಿ ನನಗೊಂದು ಪಾತ್ರ ಕೊಟ್ಟಿದ್ದರು. ಅದನ್ನು ನಾನು ಮಾಡಿದ್ದೇನೆ. ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ ಎಂದು ಹೇಳಿದರು. ನಾನು ಜೆಡಿಎಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನ ವೈಯಕ್ತಿಕ ಕಾರಣಕ್ಕಾಗಿ ಪಕ್ಷದ ಕಾರ್ಯಕರ್ತರಿಗೆ ವಿಷ ಹಾಕುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ.‌ ಈ ಬಗ್ಗೆ ಹಲವು ವದಂತಿಗಳನ್ನು ಕ್ಷೇತ್ರದಲ್ಲಿ ಹಬ್ಬಿಸಿದ್ದಾರೆ. ಅವುಗಳಿಗೆ ಕಿವಿಗೊಡುವ ಕೆಲಸವನ್ನು ಕಾರ್ಯಕರ್ತರು ಮಾಡಬಾರದು. ಕೃಷ್ಣಮೂರ್ತಿ ಅವರ ಗೆಲುವಿಗೆ ಕೆಲಸ ಮಾಡಿ ಎಂದು ಕರೆ ನೀಡಿದರು.…

ಆರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ವಿಧಾನಪರಿಷತ್ ಹಾಗೂ ವಿಧಾನಸಭೆಯ ಆರು ಕ್ಷೇತ್ರಗಳಲ್ಲೂ ಬಿಜೆಪಿ ವಿಜಯ ಸಾಧಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಸ್ವಾಸ ವ್ಯಕ್ತಪಡಿಸಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪೆರೇಸಂದ್ರ ಗ್ರಾಮದಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನ ಸಂಕಷ್ಟದಲ್ಲಿ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿಕೊಂಡು ಮತ ಚಲಾಯಿಸಬೇಕು ಎಂದು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ವಿಧಾನಪರಿಷತ್‍ನ ನಾಲ್ಕು ಹಾಗೂ ವಿಧಾನಸಭೆಯ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶಾಲಿಯಾಗಲಿದ್ದಾರೆ ಎಂದರು. ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರು 40-50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಶಿರಾದಲ್ಲಿ ಕಳೆದ ಬಾರಿ ಬಿಜೆಪಿಗೆ ಶಕ್ತಿ ಇರಲಿಲ್ಲ. ಆದರೆ ಬಿಜೆಪಿ ರಾಜ್ಯ ಸರ್ಕಾರದ ಆಡಳಿತವನ್ನು ನೋಡಿ ಯುವಕರು, ರೈತಾಪಿ ವರ್ಗದವರು ಆಕರ್ಷಿತರಾಗಿದ್ದಾರೆ. ಬಿಜೆಪಿ ಉಪಾಧ್ಯಕ್ಷ…

ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವುದು ಒಳಿತು: ಸಚಿವ .ಸುಧಾಕರ್

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದು ಹಬ್ಬ. ಆದರೆ ಕೋವಿಡ್ ಸಾಂಕ್ರಾಮಿಕದ ಈ ಸಮಯದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್ ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರು ಚುನಾವಣೆ ಮೂಲಕ ತಮ್ಮ ಸೇವೆ ಮಾಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಈ ರೀತಿ ಜನಾದೇಶದ ಮೂಲಕ ನಡೆಯುವ ವ್ಯವಸ್ಥೆ ಪ್ರಜೆಗಳ ಪರವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ಕೋವಿಡ್ ಮಹಾಮಾರಿಯಿಂದಾಗಿ ಎಲ್ಲ ಚಟುವಟಿಕೆಗಳಿಗೂ ಅಡ್ಡಿಯಾಗಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದರೆ ಕೋವಿಡ್ ಸೋಂಕು ಮತ್ತಷ್ಟು ಹರಡುವ ಆತಂಕವನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಮಾರ್ಚ್ ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸರಿಯಲ್ಲ ಎಂದು ತಜ್ಞರು ಕೂಡ ಅಭಿಪ್ರಾಯಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಕೊರೊನಾ ವೈರಸ್ ಯಾವ ಕಾಲದಲ್ಲಿ ಹೇಗೆ ವರ್ತಿಸುತ್ತದೆ…

ನವೆಂಬರ್ 7ರಂದು ಸರಳವಾಗಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು: ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವುದು ಸಂಪ್ರದಾಯವಾಗಿತ್ತು. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಸರಳವಾಗಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ನಾಡು-ನುಡಿ, ಸಾಹಿತ್ಯ, ರಂಗಭೂಮಿ, ಮಾಧ್ಯಮ, ಸಮಾಜಸೇವೆ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ 2020ನೇ ಸಾಲಿನ 65 ಸಾಧಕರಿಗೆ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಎಂದವರು ವಿವರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಿದ ಸಚಿವ ಸಿ.ಟಿ.ರವಿ ಅವರು, ನವೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪ್ರಶಸ್ತಿಯು ಒಂದು…