ಲಾಕ್’ಡೌನ್ ನಿಯಮಗಳು ಸಡಿಲವಾಗುತ್ತಿದ್ದಂತೆಯೇ ಸಿನಿಮಾ ರಂಗದಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಒಂದೊಂದೇ ಸಿನಿಮಾಗಳ ಟೀಸರ್ ಟ್ರೇಲರ್’ಗಳು ಬಿಡುಗಡೆಯಾಗುತ್ತಿವೆ. ಈ ನಡುವೆ, ರವಿ ಗೌಡ ಮತ್ತು ದಿವ್ಯಾ ರಾವ್ ಅಭಿನಯದ ರೌಡಿ ಬೇಬಿ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ರೆಡ್ಡಿ ಕೃಷ್ಣ ನಿರ್ದೇಶನದ ರೌಡಿ ಬೇಬಿ ತೀವ್ರ ಕುತೂಹಲ ಮೂಡಿಸಿದೆ.
Month: October 2020
ಡ್ರಗ್ಸ್ ಕೇಸ್; ನಿರೂಪಕಿ ಅನುಶ್ರೀ ಮನೆಯಲ್ಲೂ ತಲ್ಲಣ
ಬೆಂಗಳೂರು: ರಾಜ್ಯದಲ್ಲಿನ ಡ್ರಗ್ ಮಾಫಿಯಾ ಬಗ್ಗೆ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಿನಿಮಾ ತಾರೆಯರಿಗೂ ಈ ನಶಾ ಲೋಕದ ನಂಟು ಇರುವ ಸಂಗತಿಗಳು ಬೆಳಕಿಗೆ ಬರುತ್ತಿವೆ. ನಟಿಯರಾದ ರಾಗಿಣಿ ಹಾಗೂ ಸಂಜನಾ ಬಂಧನಕ್ಕೊಳಗಾದ ನಂತರವಂತೂ ಈ ಪ್ರಕರಣದ ತನಿಖೆ ಕುತೂಹಲಘಟ್ಟಕ್ಕೆ ತಲುಪಿದೆ. ಆದರೆ ಅನುಶ್ರೀ ಬಗ್ಗೆ..? ನಟಿ ಹಾಗೂ ನಿರೂಪಕಿ ಅನುಶ್ರೀ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ ವಿಚಾರದ ನಂತರ ಬಗೆಬಗೆಯ ಚರ್ಚೆಗಳು ಸಾಗಿವೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹರಿಯಬಿಟ್ಟಿರುವ ಅನುಶ್ರೀ, ಇತ್ತೀಚಿನ ಬೆಳವಣಿಗೆ ಬಗ್ಗೆ ನೋವು ವ್ಯಕ್ತಪಡಿಸಿದ್ದಾರೆ. ತನಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ ಎನ್ನುತ್ತಿರುವ ಅವರು, ತಾನು ಸಿಸಿಬಿ ನೋಟಿಸ್ ಹಿನ್ನೆಲೆಯಲ್ಲಿ ಪೊಲೀಸರೆದುರು ಹಾಜರಾದ ಮಾತ್ರಕ್ಕೆ ಅಪರಾಧಿಯಲ್ಲ, ಆರೋಪಿಯೂ ಅಲ್ಲ ಎಂದು ಸ್ಪಷ್ಟಪಡಿಸಿದ ಅನುಶ್ರೀ, ತಮ್ಮ ಬಗ್ಗೆ ಹರಿದಾಡುತ್ತಿರುವ ಸುದ್ದಿಯಿಂದಾಗಿ ಮನೆಯವರಿಗೂ ನೆಮ್ಮದಿ ಇಲ್ಲದಂತಾಗಿದೆ ಎಂದು ನೋವು ತೋಡಿಕೊಂಡಿದ್ದಾರೆ.
ಪೊಳಲಿ ರಾಜರಾಜೇಶ್ವರಿ ದೇವಾಲಯ ಬಳಿ ಸ್ವಚ್ಛ ಭಾರತ್
ಮಂಗಳೂರು: ಗಾಂಧೀ ಜಯಂತಿ ದಿನವಾದ ಇಂದು ಮಂಗಳೂರು ಸಮೀಪದ ಪೊಳಲಿ ರಾಜರಾಜೇಶ್ವರಿ ದೇವಾಲಯ ಬಳಿ ಯುವಕರ ಸಮೂಹ ವಿಶಿಷ್ಟ ಕಾರ್ಯಕ್ರಮ ಆಯೋಜಿಸುವ ಮೂಲಕ ಗಮನಸೆಳೆದರು. ಪುರಾಣ ಪ್ರಸಿದ್ಧ ಪೊಳಲಿ ಕ್ಷೇತ್ರ ಸುತ್ತಮುತ್ತಲ ಪ್ರದೇಶಗಳನ್ನು ಸ್ವಚ್ಛ ಭಾರತ್ ಅಭಿಯಾನ ಮೂಲಕ ಶುಚಿಗೊಳಿಸಲಾಯಿತು. ಬಿಜೆಪಿ ಯುವಮೋರ್ಚಾ ಬಂಟ್ವಾಳ ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವಠಾರವನ್ನು ಸ್ವಚ್ಛಗೊಳಿಸಿದ ಕೈಂಕರ್ಯದಲ್ಲಿ ಗ್ರಾಮಸ್ಥರೂ ಸಾಥ್ ನೀಡಿದರು. ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಚಂದ್ರವತಿ ಪೊಳಲಿ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ, ಯುವಮೋರ್ಚಾ ಅಧ್ಯಕ್ಷರಾದ ಪ್ರದೀಪ್ ಅಜ್ಜಿಬೆಟ್ಟು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ದಂಬೆದಾರು, ಜಿಲ್ಲಾ ಯುವಮೋರ್ಚಾ ಸದಸ್ಯರಾದ ಕಿಶೋರ್ ಪಲ್ಲಿಪ್ಪಾಡಿ ಸೇರಿದಂತೆ ಅನೇಕ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ರಾಹುಲ್ ಗಾಂಧಿ, ಪ್ರಿಯಾಂಕಾ ವಿರುದ್ಧ ಕೇಸ್; ಯೋಗಿ ಸರ್ಕಾರದ ಅಚ್ಚರಿಯ ನಡೆ
ದೆಹಲಿ: ಉತ್ತರ ಪ್ರದೇಶದ ಹತ್ರಾಸ್’ನಲ್ಲಿನ ಯುವತಿಯ ಅತ್ಯಾಚಾರ ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶದ ಏಲ್ ಎಬ್ಬಿಸಿದೆ. ಈ ಪ್ರಕರಣ ಖಂಡಿಸಿ ಹತ್ರಾಸ್’ಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೊಲೀಸರಿಂದ ಬಂಧನಕ್ಕೊಳಗಾಗಿ ಬಿಡುಗಡೆಗೊಂಡಿದ್ದರು. ಇದೀಗ ಅವರ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರು, ಗ್ರೇಟರ್ ನೋಯ್ಡಾದ ಎಕ್ಸ್‌ಪ್ರೆಸ್‌ವೇಗಳಲ್ಲಿ ಪ್ಯಾರಿ ಚೌಕ್ ಬಳಿ ಮೆರವಣಿಗೆ ಆರಂಭಿಸಿದ್ದರು. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಸಹಿತ ಹಲವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು. ಆ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು…
ಹತ್ರಾಸ್ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶದ ಅಲೆ
ಕೋಲ್ಕತಾ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸಿದೆ. ಈ ಪ್ರಕರಣವನ್ನು ಖಂಡಿಸಿರುವ ರಾಜಕೀಯ ಮುಖಂಡರು ಉತ್ತರಪ್ರದೇಶ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯನ್ನು ಖಂಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಆಡಳಿತದಲ್ಲಿ ದಲಿತರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ದೊಡ್ಡ ತಮಾಷೆಯಾಗಿ ಪರಿಣಮಿಸಿದೆ ಎಂದಿದ್ದಾರೆ. Have no words to condemn the barbaric & shameful incident at Hathras involving a young Dalit girl. My deepest condolences to the family.More shameful is the forceful cremation without the family’s presence or consent, exposing those who use slogans…
ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ; ಗಣ್ಯರಿಂದ ಗೌರವ ನಮನ
ದೆಹಲಿ: ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಲಾಲ್ ಬಹದ್ದೂರ್ ಶಾಸ್ತ್ರಿಯವರ 116ನೇ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯ ಸಹಿತ ಗಣ್ಯರು ಗೌರವ ಸಲ್ಲಿಸಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರು ಸ್ಥಿರ ಮತ್ತು ಅತ್ಯಂತ ದೃಢ ನಿಲುವಿನ ವ್ಯಕ್ತಿಯಾಗಿದ್ದರು ಎಂದು ಬಣ್ಣಿಸಿದ ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರು ಸರಳತೆಯನ್ನು ನಿರೂಪಿಸಿದ್ದರು. ರಾಷ್ಟ್ರದ ಕಲ್ಯಾಣಕ್ಕಾಗಿ ಬದುಕಿದರು. ಭಾರತಕ್ಕಾಗಿ ಅವರು ಮಾಡಿದ ಎಲ್ಲದಕ್ಕೂ ಆಳವಾದ ಕೃತಜ್ಞತೆಗಳೊಂದಿಗೆ ಅವರ ಜಯಂತಿಯಲ್ಲಿ ನಾವು ಅವರನ್ನು ನೆನಪಿಸಿಕೊಳ್ಳುತ್ತೇವೆಂದು ಮೋದಿ ಹೇಳಿದ್ದಾರೆ. Lal Bahadur Shastri Ji was humble and firm. He epitomised simplicity and lived for the welfare of our nation. We remember him on his Jayanti with a deep sense…
ಗಾಂಧಿ ಜಯಂತಿ; ರಾಷ್ಟ್ರಪಿತನಿಗೆ ಗೌರವ ನಮನ
ದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಜನ್ಮದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಿದ್ದಾರೆ. ಗಾಂಧೀಜಿಯವರ ಸ್ಮಾರಕ ದೆಹಲಿಯಲ್ಲಿರುವ ರಾಜ್’ಘಾಟ್ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಸ್ಮಾರಕ ವಿಜಯ್ ಘಾಟ್’ಗೆ ತೆರಳಿ ಪ್ರಧಾನಿ ಮೋದಿಯವರು ನಮನ ಸಲ್ಲಿಸಿದರು. ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಸಂದೇಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರೀತಿಯ ಬಾಪುವಿಗೆ ನಮಸ್ಕರಿಸುತ್ತೇನೆ. ಅವರ ಜೀವನ ಮತ್ತು ಉದಾತ್ತ ಆಲೋಚನೆಗಳಿಂದ ಕಲಿಯಬೇಕಾದದ್ದು ಬಹಳಷ್ಟಿದೆ. ಸಮೃದ್ಧ ಮತ್ತು ಸಹಾನುಭೂತಿಯುಳ್ಳ ಭಾರತವನ್ನು ರಚಿಸುವಲ್ಲಿ ಬಾಪು ಅವರ ಆದರ್ಶಗಳು ನಮಗೆ ಮಾರ್ಗದರ್ಶನ ನೀಡಲಿ ಎಂದು ಹೇಳಿದ್ದಾರೆ.
