ಬೆಂಗಳೂರು: ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಗುರುವಾರ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮತ್ತೊಮ್ಮೆ ಭೇಟಿಯಾಗಿ ನಡೆಸಿದ ಸಮಾಲೋಚನೆ ರಾಜ್ಯ ರಾಜಕೀಯದಲ್ಲಿ ಕುತೂಹಲಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಯಿತು. ಬಿಜೆಪಿಯಿಂದ ಹೊಸಕೋಟೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಶರತ್ ಬಚ್ಚೇಗೌಡ ಆಯ್ಕೆಯಾಗಿದ್ದರು. ಇದೀಗ ಗ್ರಾಮಪಂಚಾಯತ್ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾಂಗ್ರಸ್ ಬೆಂಬಲಿತ ಅಭ್ಯರ್ಥಿಗಳ ಪರ ಕೆಲಸ ಮಾಡಲು ಶರತ್ ಬಚ್ಚೇಗೌಡ ತೀರ್ಮಾನಿಸಿದ್ದಾರೆನ್ನಲಾಗಿದೆ. ಡಿಕೆಶಿ ಭೇಟಿ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶರತ್ ಬಚ್ಚೇಗೌಡ, ನಾನು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದೇನೆ, ಆದರೆ ಯಾವಾಗ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಲಾಗದು ಎಂದು ಮಾಹಿತಿ ಹಂಚಿಕೊಂಡರು.
Month: December 2020
ಕುತೂಹಲ ಕೆರಳಿಸಿರುವ ಶಕೀಲಾ ಚಿತ್ರ; ನೆಟ್ಟಿಗರಿಂದ ಸಕತ್ ಲೈಕ್
ತೀವ್ರ ಕುತೂಹಲ ಕೆರಳಿಸಿರುವ ಶಕೀಲಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರವನ್ನು ಇಂದ್ರಜಿತ್ ಲಂಕೇಶ್ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಚಾ ಚಡ್ಡಾ ಮತ್ತು ಪಂಕಜ್ ತ್ರಿಪಾಠಿ ನಟಿಸಿದ್ದಾರೆ. ಈ ಟ್ರೈಲರ್’ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ ಸಿಗುತ್ತಿದೆ.
ಮುರುಡೇಶ್ವರ ದೇಗುಲ ಅಭಿವೃದ್ಧಿಯ ರೂವಾರಿಗೆ ಶ್ರದ್ದಾಂಜಲಿಯ ಮಹಾಪೂರ
ಬೆಂಗಳೂರು: ದೇಶ ವಿದೇಶಗಳ ಉದ್ಯಮ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಆರ್.ಎನ್. ಶೆಟ್ಟಿ ಇನ್ನಿಲ್ಲ. ಗುರುವಾರ ಮುಂಜಾನೆ ಬೆಂಗಳೂರಿನಲ್ಲಿ ಹೃದಯಾಘಾತಕ್ಕೊಳಗಾಗಿ ಅವರು ಕೊನೆಯುಸಿರೆಳೆದಿದ್ದಾರೆ. 1928ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಹುಟ್ಟಿದ ಆರ್.ಎನ್. ಶೆಟ್ಟಿ ಯಶಸ್ವಿ ಉದ್ಯಮಿಯಾಗಿ ಗಮನಸೆಳೆದವರು. ಹುಟ್ಟೂರಾದ ಮುರುಡೇಶ್ವರ ದೇವಾಲಯದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದ ಆರ್.ಎನ್. ಶೆಟ್ಟಿ, ದೇವಾಲಯ ಬಳಿ, ಸಮುದ್ರ ತೀರದಲ್ಲಿ ಬೃಹತ್ ಶಿವನ ಮೂರ್ತಿ, ಮುಗಿಲೆತ್ತರದ ರಾಜಗೋಪುರವನ್ನು ನಿರ್ಮಿಸಿ ಶ್ರೀ ಕ್ಷೇತ್ರದ ಖ್ಯಾತಿಯನ್ನು ಜಗತ್ತಿಗೆ ಸಾರಿದ್ದರು. ಮುರುಡೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಇದನ್ನು ಪ್ರವಾಸಿ ತಾಣವನ್ನಾಗಿ ರೂಪಿಸಿದ್ದರು. ಯಶಸ್ವೀ ಉದ್ಯಮಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗುತ್ತಿಗೆದಾರರಾಗಿ ಕೆಲಸ ಆರಂಭಿಸಿದ ಆರ್.ಎನ್. ಶೆಟ್ಟಿ ಈ ಕ್ಷೇತ್ರದಲ್ಲಿ ಬೆಳೆಯುತ್ತಾ 1967ರಲ್ಲಿ ಆರ್ಎನ್ ಶೆಟ್ಟಿ ಆ್ಯಂಡ್ ಕಂಪನಿಯನ್ನು ಸ್ಥಾಪಿಸಿದರು. ಹೊನ್ನಾವರ-ಬೆಂಗಳೂರು ರಸ್ತೆಯ ಸೇತುವೆ ನಿರ್ಮಾಣ, ಹಿಡಕಲ್ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ, ಮಾಣಿ ಡ್ಯಾಂ, ವರಾಹಿ…
ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ವಿಧಿವಶ
ಬೆಂಗಳೂರು: ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ವಿಧಿವಶರಾಗಿದ್ದಾರೆ. ಆರ್.ಎನ್.ಎಸ್ ಮೋಟಾರ್ಸ್, ಆರ್.ಎನ್.ಎಸ್ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿರುವ ಆರ್.ಎನ್. ಶೆಟ್ಟಿ ಇಂದು ಮುಂಜಾನೆ ಹೃದಯಾಘಾತಕ್ಕೊಳಗಾದರೆನ್ನಲಾಗಿದೆ. 92 ವರ್ಷ ವಯಸ್ಸಿನ ಅವರು ಮುರುಡೇಶ್ವರ ದೇವಾಲಯದ ಅಭಿವೃದ್ಧಿ ಮೂಲಕ ದೇಶವಿದೇಶಗಳ ಗಮನಸೆಳೆದಿದ್ದರು. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಆರ್ಎನ್ಎಸ್ ತಾಂತ್ರಿಕ ವಿದ್ಯಾಲಯ ಕಾಲೇಜಿನ ಆವರಣದಲ್ಲಿ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕಾಗಿ ಇರಿಸಲಾಗುವುದು ಎಂದು ಕುಟುಂಬ ಸದ್ಸ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ಪಿ ನೇಣಿಗೆ ಶರಣು
ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉಪಪೊಲೀಸ್ ಅಧೀಕ್ಷಕಿಯೊಬ್ಬರು ಆತ್ಮಹತ್ಯಗೆ ಶರಣಾಗಿದ್ದಾರೆ. ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್ಪಿ ಲಕ್ಷ್ಮೀ ನೇಣಿಗೆ ಶರಣಾಗಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾವ್ಯಾಪ್ತಿಯಲ್ಲಿ ಪರಿಚಿತರ ಮನೆಯಲ್ಲಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಅವರು ಇದ್ದಕ್ಕಿದ್ದಂತೆ ಕೊಠಡಿಯೊಳಗೆ ತೆರಳಿ ನೇಣಿಗೆ ಶರಣಾಗಿದ್ದಾರೆನ್ನಲಾಗಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
2022ರ ಐಸಿಸಿ ಕ್ರಿಕೆಟ್ ಮಹಿಳಾ ವಿಶ್ವಕಪ್ ವೇಳಾಪಟ್ಟಿ
ದುಬೈ: 2022 ಮಾರ್ಚ್ 4 ರಿಂದ ನ್ಯೂಜಿಲೆಂಡ್ನಲ್ಲಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿ ನಡೆಯಲಿದೆ. ಈ ಟೂರ್ನಿಯ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ.ಈ ವೇಳಾಪಟ್ಟಿ ಹೀಗಿದೆ. ಬೇ ಓವಲ್, ಟೌರಂಗಾ 04 ಮಾರ್ಚ್ 2022 – ನ್ಯೂಜಿಲೆಂಡ್ v/s ಕ್ವಾಲಿಫೈಯರ್ 06 ಮಾರ್ಚ್ 2022 – ಕ್ವಾಲಿಫೈಯರ್ v/s ಟೀಂ ಇಂಡಿಯಾ 08 ಮಾರ್ಚ್ 2022 – ಆಸ್ಟ್ರೇಲಿಯಾ v/s ಕ್ವಾಲಿಫೈಯರ್ 11 ಮಾರ್ಚ್ 2022 – ಕ್ವಾಲಿಫೈಯರ್ v/s ದಕ್ಷಿಣ ಆಫ್ರಿಕಾ 14 ಮಾರ್ಚ್ 2022 – ದಕ್ಷಿಣ ಆಫ್ರಿಕಾ v/s ಇಂಗ್ಲೆಂಡ್ 16 ಮಾರ್ಚ್ 2022 – ಇಂಗ್ಲೆಂಡ್ v/s ಟೀಂ ಇಂಡಿಯಾ 18 ಮಾರ್ಚ್ 2022 – ಕ್ವಾಲಿಫೈಯರ್ v/s ಕ್ವಾಲಿಫೈಯರ್ ಯೂನಿವರ್ಸಿಟಿ ಓವಲ್, ಡುನೆಡಿನ್ 05 ಮಾರ್ಚ್ 2022 – ಕ್ವಾಲಿಫೈಯರ್ v/s ದಕ್ಷಿಣ ಆಫ್ರಿಕಾ 07 ಮಾರ್ಚ್…
ಐಐಟಿ ಮಾದರಿಯಲ್ಲಿ ಯುವಿಸಿಇ ಅಭಿವೃದ್ಧಿ; ಮುಂದಿನ ಅಧಿವೇಶನದಲ್ಲಿ ವಿಧೇಯಕ
ಬೆಂಗಳೂರು: ಪ್ರತಿಷ್ಠಿತ ಯೂನಿವರ್ಸಿಟಿ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು (UVCE) ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆಯ ಅಗತ್ಯವಿದ್ದು, ಅದಕ್ಕೆ ಬೇಕಾದ ವಿಧೇಯಕವನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಯುವಿಸಿಇ ಕಾಯ್ದೆಯನ್ನು ರೂಪಿಸುವ ನಿಟ್ಟಿನಲ್ಲಿ ವಿವಿಧ ಐಐಟಿಗಳು ಹಾಗೂ ಐಐಎಂಗಳ ಕಾಯ್ದೆಗಳನ್ನು ಅಧ್ಯಯನ ಮಾಡಿ ಸಿದ್ಧಪಡಿಸಿದ ಸಮಗ್ರ ವರದಿಯನ್ನು ಐಐಐಟಿಬಿ ನಿರ್ದೇಶಕ ಡಾ.ಸಡಗೋಪನ್ ನೇತೃತ್ವದ ಸಮಿತಿ ಬೆಂಗಳೂರಿನಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಸಲ್ಲಿಸಿತು. ವರದಿ ಸ್ವೀಕರಿಸಿದ ಡಿಸಿಎಂ, ನಮ್ಮ ರಾಜ್ಯದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾದ ಯುವಿಸಿಇ ಅನ್ನು ಅತ್ಯುನ್ನತ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆಯ ಅಗತ್ಯವಿದೆ ಎಂದರು. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ಸ್ವಾಯತ್ತತೆಯನ್ನು ನೀಡುವ ಬಗ್ಗೆ ಸರಕಾರಕ್ಕೆ ಮಹತ್ವದ ಶಿಫಾರಸುಗಳನ್ನು ಮಾಡಿರುವ ಸಮಿತಿಯು, ಸಂಸ್ಥೆಗೆ ಮೀಸಲಾದ ಪ್ರತ್ಯೇಕ ಹಾಗೂ ವಿಶೇಷ ಕಾಯ್ದೆ…
ಮೇಲ್ಮನೆ ಘಟನೆ ದುರದೃಷ್ಟಕರ: ಕಾಂಗ್ರೆಸ್ ನವರ ನೈಜ ಬಣ್ಣ ಬಯಲು?
ಬೆಂಗಳೂರು: ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುವ ಮೇಲ್ಮನೆಯಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಪ್ರಜಾಪ್ರಭುತ್ವದ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯರ ಅನುಚಿತ ವರ್ತನೆ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಸದನದ ಮೇಲ್ಮನೆ ಚಿಂತಕರ ಚಾವಡಿ ಎಂದು ಕರೆಯಿಸಿಕೊಳ್ಳುತ್ತದೆ. ಆದರೆ ಇಲ್ಲಿ ಇಂದು ನಡೆದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಭಾಷಣ ಮಾಡುವ, ಇತರರಿಗೆ ಪಾಠ ಹೇಳುವ ಕಾಂಗ್ರೆಸ್ ಪಕ್ಷದ ನಾಯಕರ ನೈಜ ಬಣ್ಣ ಬಯಲಾಗಿದೆ ಎಂದು ಹೇಳಿದ್ದಾರೆ. ‘ಯಥಾ ರಾಜ ತಥಾ ಪ್ರಜಾ’ ಎಂಬಂತೆ, ಕೆಪಿಸಿಸಿಗೆ ನೂತನ ಅಧ್ಯಕ್ಷರು ನೇಮಕಗೊಂಡಾಗಿನಿಂದ ಕಾಂಗ್ರೆಸ್ ಪಕ್ಷದವರ ನಡವಳಿಕೆ ಹಾಗೂ ನೈತಿಕತೆ ಪಾತಾಳಕ್ಕೆ ಕುಸಿದಿದೆ. ರಾಜ್ಯದ ಜನರು ಸಜ್ಜನಿಕೆಗೆ ಹೆಸರಾಗಿದ್ದು,…
‘ನಾನೊಂಥರ..;’ ಇದು ಕೂಡಾ ಒಂಥರಾ ಸ್ಪೆಷಲ್
‘ನಾನೊಂಥರ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಜಾಕ್ವೆಲಿನ್ ಫರ್ನಾಂಡಿಸ್ ನಿರ್ಮಾಣದ, ನಿರ್ದೇಶಕ ರಮೇಶ್ ಕಗ್ಗಲ್ಲು ಅವರ ಈ ಚಿತ್ರದ ಈ ಟ್ರೈಲರ್ ಕೂಡಾ ಒಂಥರಾ ಸ್ಪೆಷಲ್. ತಾರಕ್ ವಿ. ಶೇಖರಪ್ಪ ಈ ಸಿನಿಮಾದಲ್ಲಿ ನಾಯಕನಾಗಿದ್ದು ಡೈನಾಮಿಕ್ ಸ್ಟಾರ್ ದೇವರಾಜ್ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ವಿದ್ಯಾಗಮವು ಶಾಲಾರಂಭವಲ್ಲ: ಸುರೇಶ ಕುಮಾರ್ ಸ್ಪಷ್ಟನೆ
ಬೆಂಗಳೂರು: ವಿದ್ಯಾಗಮವು ಶಾಲೆಯ ಆರಂಭವಲ್ಲ. ಒಮ್ಮೆಗೆ ಅತಿ ಕಡಿಮೆ ಸಂಖ್ಯೆಯ ಮಕ್ಕಳ ತಂಡದೊಂದಿಗೆ ಶಾಲಾವರಣದಲ್ಲಿ ಲಭ್ಯವಿರುವ ಸ್ಥಳದಲ್ಲಿ ಅನುಕೂಲಕ್ಕೆ ತಕ್ಕಂತೆ ಪಾಠಗಳು ನಡೆಯುತ್ತವೆ. ತಜ್ಞರ ಸಮಿತಿಯ ಶಿಫಾರಸಿನನ್ವಯ ವೈಜ್ಞಾನಿಕವಾಗಿ ತರಗತಿಗಳು ನಡೆಯುತ್ತಿದ್ದು, ಎಲ್ಲ ರೀತಿಯ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳು-ಎಸ್ಒಪಿ ಆಧಾರದಲ್ಲಿ ಕೈಗೊಳ್ಳಲಾಗುತ್ತದೆ. ಮಕ್ಕಳು ತರಗತಿ ಪಾಠಗಳಿಗೆ ಹಾಜರಾದಂತೆ ಎಲ್ಲರೂ ಒಂದೇ ಬಾರಿಗೆ ಬರುತ್ತಿಲ್ಲ. ಆಯಾ ಪ್ರದೇಶದ ಮಾರ್ಗದರ್ಶಿ ಶಿಕ್ಷಕರು ತಮಗೆ ಸನಿಹದ ನೆರೆಹೊರೆಯ ಕೆಲವೇ ಮಕ್ಕಳನ್ನು ತಂಡದಲ್ಲಿ ಪಟ್ಟಿ ಮಾಡುತ್ತಾರೆ. ಇದು ಶಾಲಾರಂಭವಲ್ಲ ಎಂಬುದನ್ನು ಪೋಷಕರು ಮನಗಾಣಬೇಕು ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ಹೇಳಿದ್ದಾರೆ. ವಿದ್ಯಾಗಮ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಆನ್-ಲೈನ್ ಶಿಕ್ಷಣ ವಂಚಿತರಿಗೆ ಅನುಕೂಲವಾಗಿದೆ. ಕಡ್ಡಾಯ ಶಿಕ್ಷಣ ಕಾಯ್ದೆಯು ಯಾವುದೇ ವಿದ್ಯಾರ್ಥಿಯ ಕಲಿಕೆಯನ್ನು ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಗಳಿಗೆ ಯಾವುದೇ ವಾತಾವರಣದಲ್ಲಿಯೂ ಶಿಕ್ಷಣವನ್ನು ನೀಡುವುದು ಸರ್ಕಾರದ ಜವಾಬ್ದಾರಿಯಾದ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗಳಿಗೆ ಕಡ್ಡಾಯವಾಗಿ…
