ಬಂಟ್ವಾಳ ತಾಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪಂಚಮಿ ಉತ್ಸವ ಪ್ರಯುಕ್ತ ಶನಿವಾರ ರಾತ್ರಿ ದೇವರ ಬಲಿ ಗಮನಸೆಳೆಯಿತು. ಉತ್ಸವ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.
Year: 2020
ಪಂಚಾಯತ್ ಸಮರಕ್ಕೆ ಬಲಿಯಾಯಿತೇ 2,000 ಅಡಿಕೆ ಮರ?
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪದ ಬೀಸು ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರೈತ ರಂಜನ್ ಎಂಬುವರ 2000 ಅಡಿಕೆ ಗಿಡಗಳನ್ನು ಕಡಿದಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತೀರ್ಥಹಳ್ಳಿ ಅರಣ್ಯ ಇಲಾಖೆ ಎದುರು ರಾತ್ರಿ ಧರಣಿ ಕೈಗೊಂಡರು. ಬೀಸು ಗ್ರಾಮದಿಂದ ಸುಪ್ರಿತಾ ರಂಜನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು, ಕೆಲವು ಪ್ರಭಾವಿಗಳು ನಾಮಪತ್ರ ವಾಪಾಸ್ ಪಡೆಯುವಂತೆ ಒತ್ತಡ ಹೇರಿದ್ದಾರೆನ್ನಲಾಗಿದೆ. ಇದಕ್ಕೆ ರಂಜಾನ್ ಮಣಿಯಲಿಲ್ಲ. ಇದೆ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳು 2000 ಅಡಿಕೆ ಗಿಡ ಕಡಿದಿದ್ದಾರೆ ಎನ್ನಲಾಗಿದೆ. ಈ ಘಟನೆ ಖಂಡಿಸಿ ಸ್ಥಳೀಯ ರೈತರ ಜೊತೆ ತೀರ್ಥಹಳ್ಳಿ ಅರಣ್ಯ ಇಲಾಖೆ ಎದುರು ರಾತ್ರಿ ಧರಣಿ ಕೈಗೊಂಡರು. ಬಿಜೆಪಿ ನಾಯಕರು ಎಲ್ಲಾ ಕಡೆ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು, ಶಾಸಕರ ಅಧಿಕಾರ ಬಳಸಿ ದೌರ್ಜನ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು…
ಕಬ್ಬಿನ ರಸ ಮತ್ತು ಭತ್ತದಿಂದ ಎಥನಾಲ್ ಉತ್ಪಾದನೆಗೆ ಕೇಂದ್ರ ಪ್ರೋತ್ಸಾಹ: ನಿತಿನ್ ಗಡ್ಕರಿ
ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಅದರಲ್ಲೂ ಕಬ್ಬು ಮತ್ತು ಭತ್ತ ಬೆಳೆಯುವವರ ಹಿತಾಸಕ್ತಿಯನ್ನು ಕಾಪಾಡಲು ಎಥನಾಲ್ ನೀತಿಯನ್ನು ರೂಪಿಸುವುದಾಗಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ, ರಸ್ತೆ ಸಾರಿಗೆ, ಎಂಎಸ್‍ಎಂಇ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ರಾಜ್ಯದಲ್ಲಿ 10,904 ಕೋಟಿ ರೂ. ವೆಚ್ಚದಲ್ಲಿ 1,197 ಕಿ.ಮೀ. ಉದ್ದದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆಯನ್ನು ಇಂದು ನಡೆದ ವರ್ಚುಯಲ್ ಕಾರ್ಯಕ್ರಮದ ಮೂಲಕ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಬ್ಬು ಮತ್ತು ಭತ್ತ ಬೆಳೆಯುವವರ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸಕ್ಕರೆ ಮತ್ತು ಅಕ್ಕಿಯ ಉತ್ಪಾದನೆ ದೇಶದಲ್ಲಿ ಅಧಿಕವಾಗಿರುವುದರಿಂದ ರೈತರಿಗೆ ನೆರವಾಗಲು ಭಾರತ ಸರ್ಕಾರ ಕಬ್ಬು ಹಾಗೂ ಅಕ್ಕಿಯಿಂದ ಎಥನಾಲ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ ಎಂದರು.
ಬಿಜೆಪಿಯಲ್ಲಿ ಕೆಲಸ ಮಾಡಿದವರಿಗೆ ಹೆಚ್ಚಿನ ಜವಾಬ್ದಾರಿ; ಕಟೀಲ್ ಘೋಷಣೆ
ಬೆಂಗಳೂರು: ಬಿಜೆಪಿಯಲ್ಲಿ ಕೆಲಸ ಮಾಡಿದವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುತ್ತದೆ. ಅವರ ಕೆಲಸವನ್ನು ಗುರುತಿಸುವ ಕೆಲಸವನ್ನು ಪಕ್ಷ ಮಾಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಘೋಷಿಸಿದ್ದಾರೆ. ಬೆಂಗಳೂರಿನ ನ್ಯೂ ತಿಪ್ಪಸಂದ್ರ ಮುಖ್ಯರಸ್ತೆಯ ಶ್ರೀ ಶಕ್ತಿಗಣಪತಿ ಕಲ್ಯಾಣಮಂಟಪದಲ್ಲಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಯಾರನ್ನೂ ಕಡೆಗಣಿಸುವುದಿಲ್ಲ, ಯಾರನ್ನೂ ತುಳಿಯುವುದಿಲ್ಲ ಎಂಬ ವಿಚಾರವನ್ನು ಕಾರ್ಯಕರ್ತರು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಧಿಕಾರವು ಪರಿವರ್ತನೆ ತರುವುದಕ್ಕೆ ಸಾಧನ ಆಗಬೇಕು. ಪ್ರಕೋಷ್ಠಗಳ ಜವಾಬ್ದಾರಿ ಪಡೆದವರು ಇದನ್ನು ನೆನಪಿನಲ್ಲಿ ಇಡಬೇಕು ಎಂದ ನಳಿನ್‌ಕುಮಾರ್ ಕಟೀಲ್, ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಆಗುವ ಪರಿಕಲ್ಪನೆ ಈಡೇರಲು ಪ್ರಕೋಷ್ಠಗಳು ಸರ್ವರನ್ನೂ ಪಕ್ಷಕ್ಕೆ ಜೋಡಿಸುವ ಕೆಲಸ ಮಾಡಬೇಕು ಎಂದು ಅವರು ಆಶಿಸಿದರು. ನಮ್ಮ ಪ್ರಕೋಷ್ಠದ ವ್ಯಾಪ್ತಿಯ ಸಮಸ್ಯೆ ಬಂದಾಗ ಅದನ್ನು ಪರಿಹರಿಸಬೇಕು ಎಂದು ತಿಳಿಸಿದರು.
ಬಿಜೆಪಿ-ಜೆಡಿಎಸ್ ವಿಲೀನ ಸುದ್ದಿ ಬಗ್ಗೆ ಹೆಚ್ಡಿಕೆ ಕೆಂಡ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಜೊತೆ ತಮ್ಮ ಪಕ್ಷ ವಿಲೀನವಾಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದವರು ಟ್ವೀಟ್ ಮಾಡಿದ್ದಾರೆ. ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ.1/4 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 20, 2020 ಜೆಡಿಎಸ್ ಬಿಜೆಪಿಯ…
ಪವರ್ ಸ್ಟಾರ್ ಆಲ್ಬಂ ವಿಡಿಯೋ ಸಾಂಗ್ ಸೂಪರ್
ಪುನೀತ್ ರಾಜಕುಮಾರ್ ಅವರ ಪಿಆರ್ ಕೆ ಬ್ಯಾನರ್ ನ ಮೊದಲ ಆಲ್ಬಂ ವಿಡಿಯೋ ಸಾಂಗ್ ಟೀಸರ್ ಬಿಡುಗಡೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಟೀಸರ್ ಸಕತ್ ಕೈಲ್ ಗಿಟ್ಟಿಸಿಕೊಂಡಿದ್ದು ಸಿಕ್ಕಾಪಟ್ಟೆ ಶೇರ್ ಆಗುತ್ತಿದೆ. ಯುವಜನರ ಚಿತ್ತ ಸೆಳೆಯುವಲ್ಲಿ ಇದು ಯಶಸ್ಸಾಗಿದೆ.
ಶ್ರೀಮುರಳಿಯಾ ‘ಮದಗಜ’ ಹೇಗಿದೆ ಗೊತ್ತಾ?
ಶ್ರೀಮುರಳಿ ಅಭಿನಯದ ಬಹು ನಿರೀಕ್ಷಿತ ಮದಗಜ ಚಿತ್ರ ಸದ್ಯದಲ್ಲೇ ಪ್ರೇಕ್ಷಕರ ಮುಂದಿರಲಿದೆ. ‘ಮಾದಗಜ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಮೋದಿಯನ್ನು ಆಧುನಿಕ ಭಸ್ಮಾಸುರ ಎಂದ ಎಂದ ಕೈ ನಾಯಕ
ಬಳ್ಳಾರಿ: ರೈತರ ಪಾಲಿಗೆ ಪ್ರಧಾನಿ ನರೇಂದ್ರ ಮೋದಿ ಆಧುನಿಕ ಭಸ್ಮಾಸುರ ಎಂದು ಮಾಜಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಟೀಕಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋದಿಯವರು ನಮ್ಮ ದೇಶದ ಆರ್ಥಿಕ ಪರಿಸ್ಥಿತಿಯನ್ನು ಅಧೋಗತಿಗೆ ಕೊಂಡೊಯ್ದಿದ್ದಾರೆಎಂದು ದೂರಿದರು. ಪ್ರತಿ ವರ್ಷ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ನೀಡಿದ್ದ ಭರವಸೆ ಈಡೇರಲಿಲ್ಲ. ಬಡವರ ಖಾತೆಗೆ ಹಣವೂ ಬರಲಿಲ್ಲ ಎಂದು ವಿಮೋದಿಯವರ ಆಡಳಿತ ವೈಖರಿ ಬಗ್ಗೆ ಕಾಟು ಟೀಕೆ ಮಾಡಿದ ವಿ.ಎಸ್. ಉಗ್ರಪ್, ಹಿಂದಿನ ಕಾಂಗ್ರೆಸ್ಸರ್ಕಾರ ರೈತರ ಪಾಲಿಗೆ ವರದಾನವಾಗಿತ್ತು ಎಂದರು.
ಈ ತಿಂಗಳ ಅಂತ್ಯ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಸಾಧ್ಯತೆ
ಬೆಳಗಾವಿ: ಈ ತಿಂಗಳ ಅಂತ್ಯ ಅಥವಾ ಜನವರಿ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಈ ಕುರಿತಂತೆ ಬೆಳಗಾವಿಯಲ್ಲಿ ಸುಳಿವು ನೀಡಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ತಡವಾಗಿದೆ. ಆದರೂ ಈ ತಿಂಗಳ ಕೊನೆಯಲ್ಲಿ ಅಥವಾ ಜನವರಿ ಮೊದಲ ವಾರದಲ್ಲಿ ಆಗುವ ಸಾಧ್ಯತೆ ಇದೆ ಎಂದರು.
ಸಾಲದ ಹಣ ಸ್ವಾವಲಂಬಿ ಬದುಕಿಗೆ ಆಧಾರವಾಗಬೇಕು: ಬಿ.ಸಿ.ಪಾಟೀಲ್
ಹಾವೇರಿ,: ಸಾಲ ಪಡೆದ ಹಣದಲ್ಲಿ ಸಂಭ್ರಮ ಪಡದೇ ಸಾಲವನ್ನು ಆರ್ಥಿಕಾಭಿವೃದ್ಧಿಗೆ ಬುನಾದಿಯನ್ನಾಗಿಸಿ ಸ್ವಾವಲಂಬಿ ಬದುಕು ಕಂಡುಕೊಂಡಾಗ ಮಾತ್ರ ಸಾಲ ಪಡೆದಿದ್ದು ಹಾಗೂ ಸಾಲ ನೀಡಿದ ಉದ್ದೇಶವು ಈಡೇರಿದಂತಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. ಹಿರೇಕೆರೂರು ಪಟ್ಟಣ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಆತ್ಮ ನಿರ್ಭರ್ ನಿಧಿ” ಯಡಿಯಲ್ಲಿ 2019-20 ನೇ ಸಾಲಿನ ಶೇ.5 ರಂತೆ ವಿಶೇಷ ಚೇತನರಿಗೆ “ತ್ರಿಚಕ್ರ ವಾಹನ” ಹಾಗೂ ಸಹಾಯಧನ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಸಾಲಪತ್ರ ಮತ್ತು 2020-21 ನೇ ಸಾಲಿನ ಶೇ.24.10 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಹಾಗೂ 7.25 ರಷ್ಟು ಹಿಂದುಳಿದ ಸಮುದಾಯದ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ಸಚಿವ ಬಿ.ಸಿ.ಪಾಟೀಲ್ ವಿತರಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಚಿವರು, ಸ್ವಾವಲಂಬಿ ಬದುಕಿಗೆ ಆಧಾರವಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರು ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ…
