ಪರಿಷ್ಕೃತ ರೂಪದಲ್ಲಿ ವಿದ್ಯಾಗಮ ; ಹೊಸ  ರೀತಿಯಲ್ಲಿ ಅನುಷ್ಠಾನ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದಾಗಿ ಶಾಲಾರಂಭ ತಡವಾದ ಹಿನ್ನೆಲೆಯಲ್ಲಿ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು  ಸುರಕ್ಷತಾ ಕ್ರಮಗಳೊಂದಿಗೆ ಹೊಸ  ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕಳೆದ ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮವನ್ನು ಅಕ್ಟೋಬರ್ 10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಆರಂಭಿಸಿದ್ದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು, ಗ್ರಾಮೀಣ ಪ್ರದೇಶದಲ್ಲಿ ಪೋಷಕರೊಂದಿಗೆ ಶಾಲಾ ಸಮಯದಲ್ಲಿ ಕೆಲಸಗಳಿಗೆ  ತೆರಳುವುದು, ಬಾಲ್ಯ ವಿವಾಹ, ಬಾಲ್ಯ ಕಾರ್ಮಿಕ ಪದ್ಧತಿಯಂತಹ ಪಿಡುಗುಗಳಿಗೆ ಬಲಿಯಾಗುವುದನ್ನು ತಪ್ಪಿಸಲು ಅನುವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಮತ್ತೆ ಸುದ್ದಿಗೆ ಗುದ್ದು ಕೊಟ್ಟ ಬೋಜರಾಜ್

ಸಿನಿಮಾ ನಟ ಭೋಜರಾಜ್ ವಾಮಂಜೂರು ಮತ್ತೆ ಸುದ್ದಿಯಲ್ಲಿದ್ದಾರೆ. ಈ ಸುದ್ದಿಯ ಜೊತೆಯಲ್ಲೇ ಇಸ್ಮಾಯಿಲ್ ಮೂಡುಶೆಡ್ಡೆ ತನ್ನ ಸಿನಿ ಪಯಣದ ಒಂದು ಮಜಲನ್ನು ಕ್ರಮಿಸುವ ತರಾತುರಿಯಲ್ಲಿದ್ದಾರೆ. ಕೊರೋನಾ ಸಂಕಟಕಾಲದಲ್ಲಿ ಕೆಲವು ಸಮಯ ಸಿನಿಮಾ ಕ್ಷೇತ್ರ ಸ್ತಬ್ಧವಾಗಿತ್ತು. ಕನ್ನಡ, ತುಳು ಸಿನಿಮಾ ದಿಗ್ಗಜರ ಪಾಲಿಗೂ ಈ ಕೊರೋನಾ ಅವಧಿ ಸಹಿಸಲಾಗದ ಏಟನ್ನೇ ನೀಡಿತ್ತು. ಅಂತೂ ಇಂತು ಇದೀಗ ಮಾರ್ಗಸೂಚಿ ನಿಯಮಗಳು ಸಡಿಲವಾಗಿದ್ದರೂ ಶೂಟಿಂಗ್ ಪ್ರಕ್ರಿಯೆಗೆ ಒಂದಿಲ್ಲೊಂದು ಅಡ್ಡಿ ಎದುರಾಗುತ್ತಲೇ ಇದೆ. ಆದರೂ ಇಲ್ಲಿ ಡಾ.ಬೋಜರಾಜ್ ತನ್ನ ಪಯಣ ಮುಂದುವರಿಸಲು ಬಸ್ ಹತ್ತಿದ್ದಾರೆ. ಬಣ್ಣ ಬಣ್ಣದ ಬದುಕು ನಿರ್ದೇಶಕ ಇಸ್ಮಾಯಿಲ್ ಮೂಡುಶೆಡ್ಡೆಯವರು ಆ್ಯಕ್ಷನ್ ಕಟ್ ಹೇಳುತ್ತಿರುವ ‘ಭೋಜರಾಜ್ ಎಂಬಿಬಿಎಸ್’ ತುಳು ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದರೂ ಪರಿಪೂರ್ಣಗೊಳ್ಳಲು ಇನ್ನೇನು ಒಂದೇ ಗೇಣು ಬಾಕಿಯಿದೆ ಎನ್ನಬಹದು. ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೂಡಾ ಮುಗಿದಿದ್ದು ಕ್ಲೈಮ್ಯಾಕ್ಸ್‌ಗಷ್ಟೇ ಅಂತಿಮ ಸ್ಪರ್ಷ ಸಿಗಬೇಕಿರುವುದು. ಈ ಕೊನೆಯ ಸಾಲಿನ ಪ್ರಿಸ್ಕ್ರಿಪ್ಷನ್…

ಸಭಾಪತಿಗಳಿಗೆ ನಿರ್ಬಂಧ ಹಾಕಲು ಅಧಿಕಾರ ಕೊಟ್ಟಿದ್ದು ಯಾರು?; ಡಿ.ಕೆ.ಶಿ ಪ್ರಶ್ನೆ

ದೆಹಲಿ: ಸರ್ಕಾರದ ಮನವಿಗೆ ಗೌರವ ನೀಡಿ ಸಭಾಪತಿಗಳು ಕಲಾಪ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಸಂವಿಧಾನ ಬಾಹಿರವಾಗಿ ಸಭಾಪತಿಗಳಿಗೆ ನಿರ್ಬಂಧ ಹೇರಿದ್ದು ಯಾಕೆ? ಆ ಅಧಿಕಾರವನ್ನು ಅವರಿಗೆ ಕೊಟ್ಟಿದ್ದು ಯಾರು?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರಾಜ್ಯ ವಿಧಾನಪರಿಷತ್ನಲ್ಲಿನ ಘಟನೆ ಕುರಿತಂತೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ನಮ್ಮ ಸದನಗಳಿಗೆ ಬಹಳ ಗೌರವ, ಘನತೆ ಇದೆ. ರಾಜ್ಯಪಾಲರು, ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು. ಅದರ ಆಧಾರದ ಮೇಲೆ ಕಾರ್ಯದರ್ಶಿಗಳು ಪತ್ರ ಬರೆದರು ಎಂದು ವಿಧಾನ ಪರಿಷತ್ತಿನ ಸಭಾಪತಿಗಳು ಇಂದು ಕಲಾಪ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸಭಾಪತಿಗಳು ಬಂದು, ಗಂಟೆ ನಿಲ್ಲುವುದಕ್ಕೂ ಮುನ್ನ ಉಪಸಭಾಪತಿಗಳು ಹಠಾತ್ತನೆ ಬಂದು ಬಾಗಿಲು ಮುಚ್ಚಿ ಪೀಠದ ಬಳಿ ಬಂದು ಸಭಾಪತಿಗಳ ಪ್ರವೇಶಕ್ಕೆ ನಿರ್ಬಂಧ ಹಾಕಿದ್ದಾರೆ. ಇದು ಕರ್ನಾಟಕ ವಿಧಾನ ಮಂಡಲ ಹಾಗೂ ಅದರಲ್ಲೂ ವಿಶೇಷವಾಗಿ ವಿಧಾನ ಪರಿಷತ್ ಗೆ…

ಮೋದಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಣ್ಣಾ ಹಜಾರೆ ಸಜ್ಜು

ದೆಹಲಿ: ಅಂದು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಇದೀಗ ಮೋದಿ ಸರ್ಕಾರದ ವಿರುದ್ದವೂ ಸಮರಕ್ಕೆ ಸಜ್ಜಾಗಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರ ಚಳವಳಿ ಜೋರಾಗಿರುವಂತೆಯೇ ಅಣ್ಣಾ ಹಜಾರೆ ಕೂಡಾ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ. ಎಂ ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸೇರಿದಂತೆ ಕೃಷಿಗೆ ಸಂಬಂಧಿಸಿದ ಇತರೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಮತ್ತೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾ ಹಜಾರೆ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರಬರೆದು ಎಚ್ಚರಿಕೆ ನೀಡಿದ್ದಾರೆ. ಈ ಹಿಂನೀಡಿದ್ದ ಭರವಸೆಯನ್ನು ಈಡೇರಿಸಬೇಕು, ವಿರುದ್ಧ ಮತ್ತೆ ಉಪವಾಸ ಸತ್ಯಾಗ್ರಹ ಆರಂಭಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ. ಅಲ್ಲದೆ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗಕ್ಕೆ(ಸಿಎಸಿಪಿ) ಸ್ವಾಯತ್ತತೆ ನೀಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ…

ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ವಿಧಿವಶ

ಬೆಂಗಳೂರು: ಹಿರಿಯ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ ಅವರು ನಿಧನರಾಗಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಹಾಗೂ ಕ್ಯಾಲಿಫೊರ್ನಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಉನ್ನತ ವ್ಯಾಸಂಗ ಮತ್ತು ಸಂಶೋರಾಗಿ, NAL ನಿರ್ದೇಶಕರೂ, ನಿಯಾಸ್ ನ ನಿರ್ದೇಶಕರಾಗಿ, ಬೆಂಗಳೂರಿನ ಜವಾಹರಲಾಲ್ ನೆಹರು ಕೇಂದ್ರದ ಇಂಜಿನಿಯರಿಂಗ್ ಮೆಕ್ಯಾನಿಕ್ಸ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 87 ವರ್ಷದ ರೊದ್ದ ನರಸಿಂಹ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದೊಂದು ವಾರದಿಂದ ಬೆಂಗಳೂರಿನ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಈ ಬಾರಿ ಜನ್ಮದಿನ ಆಚರಿಸದಿರಲು ಹೆಚ್.ಡಿ.ಕೆ ನಿರ್ಧಾರ

ಬೆಂಗಳೂರು: ‘ಡಿಸೇಂಬರ್ 16ರಂದು ನನ್ನ‌ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ’ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು ಎಂದು ಅವರು ಟ್ವೀಟ್ ಮಾಡಿದ್ದಾರೆ. ಡಿ.16 ನನ್ನ‌ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ.ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು.1/2 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 14, 2020 ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ…

ತೆನೆ ಹೊರುತ್ತಾರೆ ಇಬ್ರಾಹಿಂ? ಕೈ-ಜೆಡಿಎಸ್ ಪಾಳಯದಲ್ಲಿ ಹಾವು ಏಣಿಯಾಟ

ಬೆಂಗಳೂರು: ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರ್ಪಡೆ ಸನ್ನಿಹಿತವೆ? ಈ ಕುರಿತ ಸುದ್ದಿಗಳು ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಸಿ.ಎಂ.ಇಬ್ರಾಹಿಂ ಅವರು ಜಾತ್ಯತೀತ ಜನತಾ ದಳದತ್ತ ಒಲವು ಹೊಂದಿದ್ದಾರೆಂದು ವಿಶ್ಲೇಷಿಸಬಹುದಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತದೆ ಎಂದು ಆಪ್ತರ ಜೊತೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿ.ಎಂ.ಇಬ್ರಾಹಿಂ ಕೆಲ ದಿನಗಳ ಹಿಂದೆ ಜೆಡಿಎಸ್ ಸೇರುವ ಬಗ್ಗೆ ಆಪ್ತರ ಜೊತೆ ಚರ್ಚಿಸಿದ್ದಾರೆನ್ನಲಾಗಿದೆ. ಈ ನಡುವೆ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿಯಾಗಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಪಕ್ಷದಲ್ಲಿ ಹಿರಿಯರನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನಿ ಡಿಕೆಶಿ ನೀಡಿದ್ದರು. ಗೌಡರ ಭೇಟಿಯ ಅಚ್ಚರಿ ಇದೆಲ್ಲದರ ನಡುವೆ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ ವರಿಷ್ಠ ನಾಯಕ ಎಚ್. ಡಿ ದೇವೇಗೌಡರನ್ನು ಭೇಟಿ ಮಾಡಿ ಈ ವಿದ್ಯಮಾನಗಳಿಗೆ ಪುಷ್ಠಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ…

ಪಾಂಡವರಿಂದ ನಿರ್ಮಿತ ನರಹರಿ ಕ್ಷೇತ್ರ; ಕರಾವಳಿಯಲ್ಲಿ ಭಕ್ತಿ ವೈಭವದ ತಾಣ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳದ ಪುರಾಣ ಪ್ರಸಿದ್ಧ ನರಹರಿ ಕ್ಷೇತ್ರದ ಜಾತ್ರಾ ಮಹೋತ್ಸ ಅಂಗವಾಗಿ ವಿವಿಧ ಪೂಜಾ ಕಾರ್ಯಕ್ರಮಗಳು ಗಮನಸೆಳೆಯಿತು. ಪುರಾಣದಲ್ಲಿ ಪಾಂಡವರಿಂದ ನರಹರಿ ಪರ್ವತದಲ್ಲಿ ನಿರ್ಮಾಣಗೊಂಡಿದೆ ಎಂದೇ ಹೇಳಾಗುತ್ತಿರುವ ಶ್ರೀ ಕ್ಷೇತ್ರ ನರಹರಿಯಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಹಲವಾರು ಕೈಂಕರ್ಯಗಳು ನೆರವೇರಿದವು. ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ಕಾರ್ಯವನ್ನು ಪರಿಶೀಲಿಸಿದರು. ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಆಡಳಿತ ಮೊಕ್ತೇಸರರಾದ ಡಾ.ಪ್ರಶಾಂತ್ ಮಾರ್ಲ ಮೊದಲಾದರವರು ಉಪಸ್ಥಿತರಿದ್ದರು.

Uncategorized

ವಿವಾದ ಸೃಷ್ಟಿಸಿದ ಸಿಎಂ Vs ಬಿಜೆಪಿ ಹೋರಾಟ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಒಂದೆಡೆ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಅಖಾಡದಲ್ಲಿದ್ದರೆ ಇನ್ನೊಂದೆಡೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಸರಿ ಸೈನ್ಯ ಹೋರಾಟಕ್ಕಿಳಿದಿದೆ. ದೆಹಲಿಯಲ್ಲಿ ಬಿಜೆಪಿ ಆಡಳಿತವಿರುವ ಮಹಾನಗರ ಪಾಲಿಕೆಗಳಿಗೆ ಬಾಕಿ ಇರುವ ಹಣ ನೀಡಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸ ಬಳಿ ಬಿಜೆಪಿ ಕಾರ್ಯಕರ್ತರು ಭಾನುವಾರ ಭಾರೀ ಪ್ರತಿಭಟನೆ ನಡೆಸಿದರು. ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ಸಿಎಂ ನಿವಾಸ ಬಳಿ ಇದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕೃತ್ಯ ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ಹೇಳಿಕೆ ನೀಡಿರುವ ಬಿಜೆಪಿ ನಾಯಕರು, ಮಹಿಳಾ ಕೌನ್ಸಿಲರ್‌ಗಳು ತಮ್ಮ ಖಾಸಗಿತನ ಕಾಪಾಡಿಕೊಳ್ಳಲು ಈ ಕ್ರಮಕ್ಕೆ ಮುಂದಾಗಿದ್ದಾರೆಂದು ಹೇಳಿಕೊಂಡಿದ್ದಾರೆ.

ರೈತರ ಪ್ರತಿಭಟನೆಗೆ ಎದಿರೇಟು; ಅಖಾಡಕ್ಕಿಳಿದ ಬಿಜೆಪಿ

ದೆಹಲಿ: ಕೇಂದ್ರ ಸರ್ಕಾರ ರೂಪಿಸಿರುವ ನೂತನ ಕೃಷಿ ಮಸೂದೆಗಳ ವಿರುದ್ಧ ದೆಹಲಿ ಸೇರಿದಂತೆ ದೇಶಾದ್ಯಂತ ರೈತರು ರೊಚ್ಚಿರುವಂತೆಯೇ ಅದಕ್ಕೆ ಎದಿರೇಟು ನೀಡಲು ಸಂಘ ಪರಿವಾರ ಸಜ್ಜಾಗುತ್ತಿದೆ. ಒಂದೆಡೆ ರೈತರ ಪ್ರತಿಭಟನೆ ಸಾಗಿದ್ದಾರೆ, ಅದಕ್ಕೆ ಪ್ರತಿಯಾಗಿ ಮಸೂದೆ ಬಗ್ಗೆ ಜಾಗೃತಿ ಕಾರ್ಯಕ್ರಮಕ್ಕೆ ಬಿಜೆಪಿ ಬೆಂಬಲಿತ ಸಂಘಟನೆಗಳು ಮುಂದಾಗಿವೆ. ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಮಸೂದೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಉತ್ತರ ಪ್ರದೇಶದ ಹಲವು ಕಡೆ ರೈತರ ಸಭೆಗಳನ್ನು ನಡೆಸಲು ಬಿಜೆಪಿ ತೀರ್ಮಾನಿಸಿದೆ. ಈ ಸಂಬಂಧ ಉತ್ತರಪ್ರದೇಶದಲ್ಲಿ ಬಿಜೆಪಿ ನಾಯಕರ ಉಸ್ತುವಾರಿಯಲ್ಲಿ ಆಯೋಜಿಸಿರುವ ಕಿಸಾನ್ ಸಮ್ಮೇಳನ ದೇಶದ ಗಮನಸೆಳೆದಿದೆ. ಈ ಕಿಸಾನ್ ಸಮ್ಮೇಳನ ಡಿಸೆಂಬರ್ 18ರವರೆಗೆ ನಡೆಯಲಿದೆ.