ಬೆಂಗಳೂರು: ಸಾರಿಗೆ ನಿಗಮಗಳ ಬಸ್ ಸಂಚಾರಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕಿಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವ ಬೊಮ್ಮಾಯಿ, ಮೂರೂ ನಿಗಮಗಳ ಬಸ್’ಗಳ ಸೇವೆಯನ್ನು ಪ್ರಾರಂಭಿಸಲು ಸಾರಿಗೆ ನೌಕರಿಗೆ ನಾನು ಮನವಿ ಮಾಡಿಕೊಳ್ಳುತ್ತೇನೆ. ಬಸ್ ಗಳ ಸೇವೆ ಪ್ರಾರಂಭಿಸುವ ನೌಕರರರಿಗೆ ಸರಕಾರದಿಂದ ಸಂಪೂರ್ಣ ರಕ್ಷಣೆ ನೀಡಲಾಗುವುದು ಹಾಗೂ ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ. ನಾಳೆ ದಿ. 14/12/2020 ರಿಂದ #BMTC ಹಾಗೂ ಮೂರು ನಿಗಮಗಳ ಬಸ್ ಗಳ ಸೇವೆಯನ್ನು ಪ್ರಾರಂಭಿಸಲು ಸಾರಿಗೆ ನೌಕರಿಗೆ ನಾನು ಮನವಿ ಮಾಡಿಕೊಳ್ಳುತ್ತೇನೆ. ಬಸ್ ಗಳ ಸೇವೆ ಪ್ರಾರಂಭಿಸುವ ನೌಕರರರಿಗೆ ಸರಕಾರದಿಂದ ಸಂಪೂರ್ಣ ರಕ್ಷಣೆ ನೀಡಲಾಗುವುದು ಹಾಗೂ ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. — Basavaraj S…
Year: 2020
ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಬಿಡಲು ಮುಖ್ಯಮಂತ್ರಿ ಕರೆ
ಬೆಂಗಳೂರು, ಡಿಸೆಂಬರ್ 13: ಮುಷ್ಕರ ನಿರತ ರಾಜ್ಯ ಸಾರಿಗೆ ಸಂಸ್ಥೆ ನೌಕರರು ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಚರ್ಚೆಯಲ್ಲಿ ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆಯನ್ನು ಹೊರತುಪಡಿಸಿ ವೇತನ ತಾರತಮ್ಯ, ಕೋವಿಡ್ 19 ರಿಂದ ಮೃತರಾದ ಸಾರಿಗೆ ನೌಕರರ ಕುಟುಂಬಗಳಿಗೆ 30 ಲಕ್ಷ ರೂ.ಗಳ ಪರಿಹಾರ, ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಲು ಕ್ರಮ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು. ಇವುಗಳಿಗೆ ಸಭೆಯಲ್ಲಿ ಒಪ್ಪಿಕೊಂಡು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದವರು ಅಸಮಾಧಾನ ಹೊರಹಾಕಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರು ಅನಗತ್ಯವಾಗಿ ನೌಕರರ ದಾರಿತಪ್ಪಿಸುತ್ತಿರುವುದು…
ಸಾರಿಗೆ ನೌಕರರ ಮುಷ್ಕರ ವಿಚಾರ: ಡಿಕೆಶಿ, ಕೋಡಿಹಳ್ಳಿ ವಿರುದ್ಧ ಸುಧಾಕರ್ ಟೀಕಾಸ್ತ್ರ
ಬೆಂಗಳೂರು: ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ತಮ್ಮನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ಪ್ರಚೋದನೆಗೊಳಗಾಗಬಾರದು ಎಂದು ಸಾರಿಗೆ ನಿಗಮಗಳ ನೌಕರರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ಮಾಡಿದ್ದಾರೆ. ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ. ಸಾರಿಗೆ ವ್ಯವಸ್ಥೆ ಅತ್ಯಂತ ಪ್ರಮುಖ ಮತ್ತು ಅಗತ್ಯ ಸೇವೆಯಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದಾಗಿನಿಂದ ಪದೇ ಪದೇ ಮುಷ್ಕರ, ಬಂದ್ ಗಳಿಗೆ ಕುಮ್ಮಕ್ಕು ನೀಡುವ ಮೂಲಕ ಸಾರ್ವಜನಿಕರ ದೈನಂದಿನ ಜೀವನಕ್ಕೆ ತೊಂದರೆ ಉಂಟುಮಾಡುತ್ತಿದ್ದಾರೆ. ಇದರಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರಿಗೆ ಕಿರುಕುಳ ಉಂಟಾಗಿದೆ. ಆದರೆ ಈಗ ಪ್ರಚೋದನೆಗೆ ಒಳಗಾಗದೆ ಮರಳಿ ಕರ್ತವ್ಯಕ್ಕೆ ಹಾಜರಾಗುತ್ತಿರುವ ನೌಕರರಿಗೆ ಧನ್ಯವಾದ ಎಂದು ಸಚಿವರು ಹೇಳಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್…
ದರ್ಶನ್ & ಮನರಂಜನ್.. ‘ಪ್ರಾರಂಭ’ದಲ್ಲಿ ಏನೋ ಅಡಗಿದೆ
ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೂ ರವಿಚಂದ್ರನ್ ಪುತ್ರ ಮನರಂಜನ್’ಗೂ ಏನು ಸಂಬಂಧ? ಸಿನಿಮಾದಲ್ಲಿ ಇವರಿಬ್ಬರ ಸಮ್ಮಿಳಿತ ಇದೆಯೇ? ‘ಪ್ರಾರಂಭ’ ಚಿತ್ರದ ಟ್ರೈಲರ್ ಬಿಡುಗಡೆಯ ನಂತರ ಎಲ್ಲರಲ್ಲೂ ಈ ಪ್ರಶ್ನೆಗಳು ಕಾಡತೊಡಗಿದೆ. ಮನರಂಜನ್ ರವಿಚಂದ್ರನ್ ಮತ್ತು ಕೀರ್ತಿ ಕಲಕೆರಿ ಅಭಿನಯದ ‘ಪ್ರಾರಂಭ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಮನು ಕಲ್ಯಾಡಿ ನಿರ್ದೇಶಿಸಿರುವ ಈ ಚಿತ್ರದ ಟ್ರೈಲರ್’ನಲ್ಲಿ ದರ್ಶನ್ ದ್ವನಿ ಅಡಗಿದೆ. ಈ ದ್ವನಿಯೇ ಈಗ ಎಲ್ಲರ ಕುತೂಹಲ.
‘ವರ್ಣಪಟಲ’; ಸಕತ್ ಲೈಕ್ ಯಾಕೆ ಗೊತ್ತಾ?
ಕನ್ನಡ ಸಿನಿಲೋಕದಲ್ಲಿ ಮತ್ತೊಂದು ಕುತೂಹಲಕಾರಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜ್ಯೋತಿ ರಾಯ್ ಅಭಿನಯದ ವರ್ಣಪಟಲ ಚಿತ್ರದ ಟ್ರೈಲರ್ ಅನಾವರಣವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು ಮಾಡುತ್ತಿದೆ.
ಸಾರಿಗೆ ಸಂಸ್ಥೆ ನೌಕರರಿಗೆ ಗುಡ್ ನ್ಯೂಸ್; ಬೇಡಿಕೆ ಈಡೇರಿಸಲು ಸರ್ಕಾರದ ಚಿಂತನೆ
ಬೆಂಗಳೂರು: ಸಾರಿಗೆ ಸಂಸ್ಥೆಯ ನೌಕರರ ಮುಷ್ಕರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಮಸ್ಯೆ ಬಗೆಹರಿಸಲು ಹರಸಾಹಸ ನಡೆಸುತ್ತಿದೆ. ಈ ಸಂಬಂಧ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸಾರಿಗೆ ಸಂಸ್ಥೆಯ ನೌಕರರ ಒಕ್ಕೂಟಗಳ ಮುಖಂಡರ ಜೊತೆ ನಡೆಸಿದ ಸಭೆ ಗಮನಸೆಳೆಯಿತು. ಸಾರಿಗೆ ಸಿಬ್ಬಂದಿಗಳ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಸಹಾನುಭೂತಿ ಇದೆ. ಅವರ ಬೇಡಿಕೆಗಳ ಬಗ್ಗೆ ಈಗಾಗಲೇ ಒಕ್ಕೂಟಗಳ ಮುಖಂಡರ ಒಂದು ಸುತ್ತಿನ ಸಭೆ ನಡೆಸಲಾಯಿತು. ಅಗತ್ಯವಿದ್ದರೆ ಮತ್ತಷ್ಟು ಮಾತುಕತೆಗಳನ್ನು ನಡೆಸಿ ಸಂಧಾನ ಮಾರ್ಗದಲ್ಲಿ ಸಮಸ್ಯೆ ಪರಿಹರಿಸುವ ಉದ್ದೇಶ ನಮ್ಮ ಸರ್ಕಾರದ್ದಾಗಿದೆ ಎಂದರು. ನಿಗಮದ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವ ಬೇಡಿಕೆ ಬಗ್ಗೆ ಪರಿಶೀಲಿಸಲು ಸನ್ಮಾನ್ಯ ಮುಖ್ಯಮಂತ್ರಿಯವರೊಂದಿಗೆ ಒಕ್ಕೂಟದ ಮುಖಂಡರುಗಳ ಸಭೆಯನ್ನು ಏರ್ಪಡಿಸಿ ಶೀಘ್ರವೇ ಮುಂದಿನ ಮಾರ್ಗೋಪಾಯಗಳನ್ನು ನಿರೂಪಿಸಲಾಗುವುದು ಎಂದರು. ಕೋವಿಡ್‍ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು…
ಸರ್ಕಾರವೇ ರೈತರಿಂದ ಹಸುಗಳನ್ನು ಖರೀದಿಸಲಿ: ಡಿ.ಕೆ. ಶಿವಕುಮಾರ್ ಆಗ್ರಹ
ಬೆಂಗಳೂರು: ‘ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನೂತನ ಗೋಹತ್ಯೆ ನಿಷೇಧ ಮಸೂದೆಯು ರೈತರು ಹಾಗೂ ಚರ್ಮೊದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಹೀಗಾಗಿ ವಯಸ್ಸಾದ ಜಾನುವಾರುಗಳನ್ನು ಸರ್ಕಾರವೇ ರೈತರಿಂದ ಖರೀದಿಸಿ, ಬಿಜೆಪಿ ಮುಖಂಡರ ಮನೆಯಲ್ಲೋ, ಜಮೀನಿನಲ್ಲೋ ಸಾಕಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ‘ನೂತನ ಗೋಹತ್ಯೆ ನಿಷೇಧ ಮಸೂದೆ ರೈತರು ಹಾಗೂ ಚರ್ಮೊದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಗ್ರಾಮ ಪಂಚಾಯ್ತಿ ಚುನಾವಣೆ ನಂತರ ರಾಜ್ಯದ ಉದ್ದಗಲಕ್ಕೂ ಪ್ರತಿ ತಾಲೂಕು ಮಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮ ಮಾಡುತ್ತೇವೆ ಎಂದರು. ಮಯಸ್ಸಾದ ಹಾಗೂ ರೈತರಿಗೆ ಅನುಕೂಲವಾಗದ ಜಾನುವಾರುಗಳನ್ನು ರಾಜ್ಯ ಸರ್ಕಾರವೇ ಒಂದು ದರ ನಿಗದಿ ಮಾಡಿ ಅವರಿಂದ ಖರೀದಿ ಮಾಡಬೇಕು. ಹಸುಗಳ ಮಾಲೀಕತ್ವವನ್ನು ಸರಕಾರದ ಪ್ರತಿನಿಧಿಗಳೇ ಪಡೆದು, ಮಂತ್ರಿಗಳ ಮನೆಯಲ್ಲೋ, ಜಮೀನಿನಲ್ಲೋ ಸಾಕಲಿ ಎಂದವರು ಸವಾಲು ಹಾಕಿದರು. ಇನ್ನು ಈ…
‘ಭೂ ಸಿರಿ’ ಹಾಗೂ ತಕ್ಷಣ ಮಣ್ಣು ಪರೀಕ್ಷಿಸುವ ‘ಭೂಮಿತ್ರ’ ಉಪಕರಣದ ವೈಶಿಷ್ಟ್ಯ
ಹಸಿ ಮತ್ತು ಒಣ ತ್ಯಾಜ್ಯವನ್ನು ತಕ್ಷಣ ಸಾವಯವ ಗೊಬ್ಬರವನ್ನಾಗಿ ಪರಿವರ್ತಿಸುವ ಭೂ ಸಿರಿ ಹಾಗೂ ತಕ್ಷಣ ಮಣ್ಣು ಪರೀಕ್ಷಿಸುವ ಭೂಮಿತ್ರ ಉಪಕರಣವನ್ನು ಸಿಎಂ ಯಡಿಯೂರಪ್ಪ ಲೋಕಾರ್ಪಣೆ ಮಾಡಿದ್ದಾರೆ. ಈ ಉಪಕರಣಗಳ ವೈಶಿಷ್ಟ್ಯ ಹೀಗಿದೆ. ಸಾವಯವ ಬೇಸಾಯ ಪದ್ದತಿಯು ಸಂಪ್ರದಾಯ, ನಾವೀನ್ಯತೆ ಮತ್ತು ವಿಜ್ಞಾನವನ್ನು ಒಳಗೊಂಡು ಪರಿಸರದಲ್ಲಿರುವ ಜೀವಿಗಳೊಂದಿಗೆ ಉತ್ತಮ ಸಂಬಂಧವನ್ನು ಏರ್ಪಡಿಸುತ್ತದೆ. ಜಪಾನಿನ ಸಹಜ ಕೃಷಿಯ ಹರಿಕಾರ ಮಸನೊಬು ಫುಕುವೋಕಾ ಅವರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಹಜ ಕೃಷಿಯನ್ನು ಗಾಂಧಿ ಕೃಷಿ ಎಂದು ಕರೆದಿದ್ದರು. ನೈಸರ್ಗಿಕವಾಗಿ ದೊರೆಯುವ ಸಂಪನ್ಮೂಲಗಳನ್ನು ಬಳಸಿಕೊಂಡು ಬೇಸಾಯ ಮಾಡುವುದು ಸಾವಯವ ಕೃಷಿಯ ಮೂಲ ಆಶಯವಾಗಿದೆ. ರಾಸಾಯನಿಕಗಳ ಬಳಕೆ, ಅವೈಜ್ಞಾನಿಕ ಸಾಗುವಳಿ ಪದ್ಧತಿಗಳಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತಿದ್ದು, ಕೃಷಿ ಭೂಮಿ ಬರಡಾಗುತ್ತಿದೆ. ಮಣ್ಣಿನ ಫಲವತ್ತೆಯನ್ನು ಉಳಿಸಲು ಸಾವಯವ ಕೃಷಿ ಅತ್ಯಂತ ಸಹಕಾರಿಯಾಗಿದೆ. ಕೇಂದ್ರ ಸರ್ಕಾರದ ಆಯವ್ಯಯದಲ್ಲಿಯೂ ಸಾವಯವ ಕೃಷಿಯನ್ನು ದೊಡ್ಡಮಟ್ಟದಲ್ಲಿ ಉತ್ತೇಜಿಸಲಾಗುತ್ತಿದೆ. ರಾಜ್ಯ…
ಗೊಬ್ಬರ ತಯಾರಿಕಾ ಯಂತ್ರ ‘ಭೂಸಿರಿ’ ಲೋಕಾರ್ಪಣೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೊಬ್ಬರ ತಯಾರಿಕಾ ಯಂತ್ರ ‘ಭೂಸಿರಿ’ ಹಾಗೂ ‘ಭೂ ಮಿತ್ರ’ ಮಣ್ಣು ಪರೀಕ್ಷಿಸುವ ಉಪಕರಣಗಳನ್ನು ಲೋಕಾರ್ಪಣೆ ಮಾಡಿದರು. ಶುಕ್ರವಾರ ನಡೆದ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಅರಣ್ಯ ಸಚಿವ ಆನಂದ್ ಸಿಂಗ್, ಹೈಟೆಕ್ ಅಗ್ರಿಕ್ಯೂಲಂ ಸಂಸ್ಥೆಯ ಅಧ್ಯಕ್ಷ ಡಾ: ನಾಗರಾಜ್ ಹೆಗಡೆ ಉಪಸ್ಥಿತರಿದ್ದರು.
ಫೆಬ್ರವರಿ ತಿಂಗಳ 8 ಮತ್ತು 9 ರಂದು ವಾಲ್ಮೀಕಿ ಜಾತ್ರೆ
ದಾವಣಗೆರೆ: ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ 2021ರ ಫೆಬ್ರವರಿ ತಿಂಗಳ 8 ಮತ್ತು 9 ರಂದು ವಾಲ್ಮೀಕಿ ಜಾತ್ರೆ ನಡೆಯಲಿದೆ. ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ನೇಮಕವಾಗಿದ್ದಾರೆ. ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿ ಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸರ್ವಾನುಮತದಿಂದ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಸಮಾಜ ಕಲ್ಯಾಣ ಸಚಿವರಾದ ಶ್ರೀ ಬಿ ಶ್ರೀರಾಮುಲು ಅವರು, ಅಧ್ಯಕ್ಷ ಸ್ಥಾನಕ್ಕೆ ಸಚಿವ ರಮೇಶ್ ಜಾರಕಿಹೊಳಿ ಅವರ ಹೆಸರನ್ನು ಸೂಚಿಸಿದರು ಮತ್ತು ಶಾಸಕರಾದ ರಘು ಮೂರ್ತಿ, ಸೋಮಲಿಂಗಪ್ಪ, ನಾಗೇಂದ್ರ, ಗಣೇಶ್, ಬಸವನಗೌಡ ದದ್ದಲ್, ಅನಿಲ್ ಚಿಕ್ಕಮಾದು, ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್, ಗಂಗಾಧರ ನಾಯಕ್ ಮೊದಲಾದವರು ರಮೇಶ್ ಜಾರಕಿಹೊಳಿ…
