ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಬಿಡುಗಡೆಯ ಭಾಗ್ಯ ದೊರೆತಿದೆ. ಹೈಕೋರ್ಟ್ ನಟಿ ಸಂಜನಾ ಜಾಮೀನು ಮಂಜೂರು ಮಾಡಿದೆ. ಅನಾರೋಗ್ಯದಿಂದ ಬಳಲುತ್ತಿರುವ ಸಂಜನಾಗೆ ಶಸ್ತ್ರ ಚಿಕಿತ್ಸೆ ಮಾಡುವ ಅಗತ್ಯವಿದೆ ಎಂದು ವೈದ್ಯರು ಮಾಡಿರುವ ಸಲಹೆಯ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸೆಪ್ಟೆಂಬರ್ 8 ರಂದು ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ವಿಚಾರಣೆಗೆ ಕರೆದು, ನಂತರ ಬಂಧಿಸಿದ್ದರು.
Year: 2020
ರೈತರನ್ನು ರಕ್ಷಿಸುವ ಕಾಯಿದೆಯನ್ನೂ ರೂಪಿಸಿ; ಹೆಚ್ಡಿಕೆ ಸಲಹೆ
ಬೆಂಗಳೂರು: ಗೋಹತ್ಯೆ ನಿಷೇಧ ಜಾರಿ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ರೈತರನ್ನು ರಕ್ಷಿಸುವ ಕಾಯಿದೆಯನ್ನೂ ಜಾರಿಗೊಳಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್-ಬಿಜೆಪಿಗೆ ಮತಬ್ಯಾಂಕ್‌ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ಬಗ್ಗೆ ಇರಬಹುದಾದ ಆತಂಕಗಳನ್ನು ಜೆಡಿಎಸ್ ವಿಮರ್ಶಿಸಲು ಬಯಸುತ್ತದೆ. ಈ ಹಿಂದೆಯೇ ಹೇಳಿದಂತೆ ಜೆಡಿಎಸ್ ಒಂದು ಪಕ್ಷವಾಗಿ ಮಾತ್ರವಲ್ಲ, ರೈತ ಸಂಘವಾಗಿ ಕೆಲಸ ಮಾಡಲಿದೆ ಎಂದಿದ್ದಾರೆ. ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು…
ಸೋಮಣ್ಣ ಬೇವಿನಮರದ್ ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪಕ್ಷದ ಕಚೇರಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ್ ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಕಿತ್ತೂರಿನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಬಾಬಸಾಬ್ ಪಾಟೀಲ್ ಅವರಿಗೆ ಕಾಂಗ್ರೆಸ್ ಶಾಲು ಹೊದಿಸಿ ಪಕ್ಷಕ್ಕೆ ಗುರುವಾರ ಸೇರ್ಪಡೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಏನಿದು ‘ಮೈನಸ್ ಒನ್’.. ಸಕತ್ ಮೆಚ್ಚುಗೆ
ಏನಿದು ಮೈನಸ್ ಒನ್ ಅಂತೀರಾ? ರೋಹಿತ್ ಕಿರಣ್ ಮತ್ತು ರಮಿತ ಶೆಟ್ಟಿಗಾರ್ ಅಭಿನಯದ ‘ಮೈನಸ್ ಒನ್’ ಚಿತ್ರ ತೀವ್ರ ಕುತೂಹಲ ಕೆರಳಿಸಿದೆ. ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಈ ಸಿನಿಮಾ ಕುರಿತು ಸಾಕಷ್ಟು ಚರ್ಚೆಗಳು ಸಾಗಿವೆ. ಈ ಟ್ರೈಲರ್ ಸಕತ್ ಮೆಚ್ಚುಗೆಗೂ ಪಾತ್ರವಾಗಿದೆ.
ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ’ಗೆ ಭೀಮ ಬಲ
ದೆಹಲಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸಿ ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಮೋದಿ ನರೇಂದ್ರ ಮೋದಿ ಘೋಷಿಸಿರುವ ‘ಆತ್ಮ ನಿರ್ಭರ ಭಾರತ್ ರೊಜ್ ಗಾರ್ ಯೋಜನೆ’ಗೆ ಕೇಂದ್ರ ಸರ್ಕಾರ ಭಾರೀ ಮೊತ್ತದ ಹಣವನ್ನು ಹಂಚಿಕೆ ಮಾಡಿದೆ. ಈ ಯೋಜನೆ ಅನುಷ್ಠಾನಕ್ಕೆ 22,810 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 1,584 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್ ಹಾಗೂ ಸಂತೋಷ್ ಗಂಗ್ವಾರ್ ಮಾಧ್ಯಮಗಳಿಗೆ ವಿವರಿಸಿದರು. ಆತ್ಮನಿರ್ಭರ ಭಾರತ್ ರೋಜಗಾರ್ ಯೋಜನೆಯಡಿ ಉದ್ಯೋಗ ಕಲ್ಪಿಸುವ ಸಂಸ್ಥೆಗಳ, ಕೈಗಾರಿಕೆಗಳ ಪರವಾಗಿ ಉದ್ಯೋಗಿ, ಸಂಸ್ಥೆ ಪಾಲನ್ನು ಕೇಂದ್ರ ಸರ್ಕಾರ ಭರಿಸಲಿದೆ.
ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧಕ್ಕೆ ಸರ್ಕಾರದ ಮುನ್ನುಡಿ
ಬೆಂಗಳೂರು: ಕೇಸರಿ ಪಾಳಯದ ಮಹತ್ವಾಕಂಕ್ಷೆಯ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ರಾಜ್ಯ ಬಿಜೆಪಿ ಸರ್ಕಾರ ಅಸ್ತು ಎಂದಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧದ ನಡುವೆಯೇ 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ಅಂಗೀಕಾರ ಪಡೆಯಲಾಗಿದೆ. ಪಶು ಸಂಗೋಪನೆ ಮತ್ತು ವಕ್ಪ್ ಸಚಿವ ಪ್ರಭು ಚೌವ್ಹಾಣ್ ವಿಧೇಯಕ ಮಂಡಿಸಿದರು. ಇದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಏಕಾಏಕಿ ಹೊಸ ಬಿಲ್ ಮಂಡಿಸುತ್ತಿದ್ದಾರೆ ಎಂದು ಈ ವಿದೇಯಕವನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಆರೋಪ ಪ್ರತ್ಯಾರೋಪ ತಾರಕಕ್ಕೇರುತ್ತಿದ್ದಂತೆಯೇ ಜೆಡಿಎಸ್ ಶಾಸಕರೂ ರಾಜ್ಯ ಸರ್ಕಾರದ ತೀರ್ಮಾನದ ವಿರುದ್ಧ ಆಕ್ರೋಶ ಹೊರಹಾಕಿದರು. ಈ ಎರಡೂ ಪಕ್ಷಗಳ ಪ್ರತಿರೋಧದ ನಡುವೆಯೇ ವಿದೇಯಕ ಅಂಗೀಕಾರಗೊಂಡಿತು.
ಮಾಜಿ ಸಚಿವ ಬಿ.ಎ.ಜೀವಿಜಯ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಮಾಜಿ ಸಚಿವ ಬಿ.ಎ. ಜೀವಿಜಯ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ ಹಾಗೂ ಅವರ ಅನೇಕ ಬೆಂಬಲಿಗರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಜಮೀರ್ ಅಹ್ಮದ್ ಮೊದಲಾದ ಮುಖಂಡರು ಉಪಸ್ಥಿತರಿದ್ದರು.
ಬ್ಯಾರಿ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರದಾನ ಸಮಾರಂಭ
ಬೆಂಗಳೂರು: ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಗುರುವಾರ ಬೆಂಗಳೂರಿನಲ್ಲಿ 2018, 2019 ಮತ್ತು 2020ರ ಸಾಲಿನ ಗೌರವ ಪ್ರಶಸ್ತಿ, ಪುರಸ್ಕಾರ ಪ್ರದಾನ ಸಮಾರಂಭ ನೆರವೇರಲಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ 2018, 2019 ಮತ್ತು 2020ರ ಸಾಲಿನ ಗೌರವ ಪ್ರಶಸ್ತಿ, ಪುರಸ್ಕಾರ ಪ್ರದಾನ ಮತ್ತು ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಅಭಿನಂದನಾ ಕಾರ್ಯಕ್ರಮ ಸಂಜೆ ಐದು ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಮಾಜಿ ಸಚಿವ ಸಿಟಿ ರವಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಗೌರವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೌರವ ಪುರಸ್ಕಾರ ನೀಡಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಇವರು ಲಿಪಿ ಸಂಶೋಧನಾ ಸದಸ್ಯರಿಗೆ ಗೌರವ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ…
‘ಸೂಪರ್ ಸ್ಟಾರ್..’ ಈ ಹಾಡನ್ನೊಮ್ಮೆ ಕೇಳಿ
ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಇದೀಗ ಕನ್ನಡ ಸಿನಿಮಾ ರಂಗದ ಕುತೂಹಲದ ಕೇಂದ್ರ ಬಿಂದು. ನಿರಂಜನ್ ಸುಧೀಂದ್ರ ಅಭಿನಯದ ‘ಸೂಪರ್ ಸ್ಟಾರ್’ ಚಿತ್ರದ ಟೈಟಲ್ ಸಾಂಗ್ ಯುವಜನರನ್ನು ರೊಚ್ಚಿಗೆಬ್ಬಿಸಿದೆ. ರಮೇಶ್ ವೆಂಕಟೇಶ್ ಬಾಬು ನಿರ್ದೇಶಿಸಿರುವ ‘ಸೂಪರ್ ಸ್ಟಾರ್’ ಸಾಧ್ಯವೇ ತೆರೆಕಾಣಲಿದ್ದು ಅದರ ಟೈಟಲ್ ಸಾಂಗ್ ಎಲ್ಲೆಲ್ಲೂ ಮೊಳಗಲಾರಂಭಿಸಿದೆ.
ಭಾರೀ ಸದ್ದು ಮಾಡುತ್ತಿದೆ ‘ಕೊರೋನಾ ವೈರಸ್’ ಸಿನಿಮಾ
ದೇಶದಲ್ಲಿ ಕೊರೋನಾ ಹಾವಳಿ ದೂರವಾಗಿಲ್ಲ. ಅದಾಗಲೇ ಕೊರೋನಾ ವೈರಸ್ ಕುರಿತ ಸಿನಿಮಾವೊಂದು ಭಾರೀ ಸದ್ದು ಮಾಡುತ್ತಿದೆ. ಪ್ರಚಲಿತ ಬೆಳವಣಿಗೆ ಬಗ್ಗೆ ಸಿನಿಮಾ ಮಾಡಿ ದೇಶದ ಗಮನಸೆಳೆಯುವ ರಾಜಗೋಪಾಲ ವರ್ಮಾ ಅವರ ಕೊರೋನಾ ವೈರಸ್ ಚಿತ್ರದ ಎರಡನೇ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ ಗಿಟ್ಟಿಸಿಕೊಳ್ಳುತ್ತಿದೆ.
