ಬೆಂಗಳೂರು: ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸಿನಿಮಾ ತಾರೆಯರು ಬೆಂಬಲ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ಶಿವರಾಜ್ ಕುಮಾರ್, ‘ರೈತರ ಪರ ಇದ್ದೀವಿ. ರೈತರ ಕಷ್ಟಕ್ಕೆ ಯಾವಾಗಲೂ ಜೊತೆ ಇರುತ್ತೇವೆ’ ಎಂದಿದ್ದಾರೆ. ರೈತ ದೇಶದ ಬೆನ್ನೆಲುಬು , ರೈತ ಇದ್ರೇನೆ ದೇಶ .. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ ..ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ — DrShivaRajkumar (@NimmaShivanna) December 8, 2020
Year: 2020
ತ್ಯಾಜ್ಯದಿಂದ ವಿದ್ಯುತ್; 2 ವರ್ಷಗಳಲ್ಲಿ ಕಾರ್ಯರೂಪ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಂದಿನ ಎರಡು ವರ್ಷದಲ್ಲಿ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಿ ತ್ಯಾಜ್ಯ ವಿದ್ಯುತ್ ಉತ್ಪಾದನೆ ಮಾಡುವ ಘಟಕಗಳನ್ನು ಆರಂಭಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರಕಟಿಸಿದ್ದಾರೆ. ಪ್ರತಿ ದಿನ ಸುಮಾರು ನಾಲ್ಕುವರೆ ಮೆಟ್ರಿಕ್ ಟನ್ ನಷ್ಟು ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಮಂಗಳವಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಮಧುಗಿರಿ ಮತ್ತು ಕನಕಪುರದಲ್ಲಿ ಸಾವಿರ ಎಕರೆ ಪ್ರದೇಶದಲ್ಲಿ ತ್ಯಾಜ್ಯಪುನರ್ ಬಳಕೆ ಪಾರ್ಕ್ ಸ್ಥಾಪನೆ ಮಾಡುವ ಸಂಬಂಧ ಪ್ರಸ್ತಾವನೆ ಇತ್ತು. ಆದರೆ ಸ್ಥಳೀಯರಿಂದ ಪ್ರತಿರೋಧ ಹಿನ್ನೆಲೆಯಲ್ಲಿ ಆ ಪ್ರಸ್ತಾವನೆಯನ್ನು ತಡೆಹಿಡಿಯಲಾಗಿದೆ ಎಂದ ಅವರು, ಘನ್ಯ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ಐದು ಕಂಪನಿಗಳಿಗೆ ಅನುಮೋದನೆ ನೀಡಲಾಗಿದೆ. ಈ ಪೈಕಿ ಎರಡು ಸಂಸ್ಥೆಗಳಿಂದ ಘಟಕಗಳ ಸಿದ್ದತಾ ಕಾರ್ಯ…
ಕೃಷಿ ಕಾಯ್ದೆ; ರಾಜಕೀಯ ದುರುದ್ದೇಶದ ವಿರುದ್ಧ ಬಿಜೆಪಿ ಹೋರಾಟ
ಬೆಂಗಳೂರು: ಈ ಹಿಂದೆ ತಾವೇ ಬೆಂಬಲಿಸಿದ್ದ ಕೃಷಿ ಸುಧಾರಣೆಗಳನ್ನು ಈಗ ಪ್ರತಿಪಕ್ಷಗಳು ವಿನಾಕಾರಣ ವಿರೋಧಿಸುತ್ತಿದ್ದು, ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದೆ. ಪ್ರತಿಪಕ್ಷಗಳು ಈ ಹಿಂದೆ ತಾವೇ ಕೃಷಿ ಸುಧಾರಣೆಗಳನ್ನು ಬೆಂಬಲಿಸಿದ್ದವು. ಪ್ರತಿಪಕ್ಷಗಳ ಈಗಿನ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಜನರ ವಿಶ್ವಾಸ ಕಳೆದುಕೊಂಡು ಚುನಾವಣೆಗಳಲ್ಲಿ ಸತತ ಸೋಲುಗಳಿಂದ ಹತಾಶಗೊಂಡಿರುವ ವಿಪಕ್ಷಗಳು ರೈತರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿವೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ವಿಸ್ತøತ ಮಾರುಕಟ್ಟೆ ಕಲ್ಪಿಸಿ, ಅನ್ನದಾತರ ಆದಾಯ ಹೆಚ್ಚಿಸುವ ಸದುದ್ದೇಶ ಹೊಂದಿದ್ದು, ಈಗಿರುವ ಎಪಿಎಂಸಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಸಹ ಮುಂದುವರಿಯಲಿದೆ ಎಂದು ಸುಧಾಕರ್…
ವರ್ತೂರು ಪ್ರಕಾಶ್’ಗೂ ಕಾಂಗ್ರೆಸ್ ಗೂ ಯಾವುದೇ ಸಂಬಂಧವಿಲ್ಲ: ಡಿಕೆಶಿ
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ನನ್ನನ್ನು ಭೇಟಿ ಮಾಡಿಲ್ಲ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಯಾವುದೇ ಆಲೋಚನೆಯೂ ಇಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ವರ್ತೂರು ಪ್ರಕಾಶ್ ಅವರು ಈ ಕ್ಷಣದವರೆಗೂ ನನ್ನನ್ನು ಭೇಟಿ ಮಾಡಿಲ್ಲ. ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸುಳ್ಳು ಪ್ರಚಾರ ಮಾಡುತ್ತಿದ್ದು, ನಮ್ಮ ಪಕ್ಷದ ಹಾಗೂ ಪಕ್ಷದ ನಾಯಕರ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ವರ್ತೂರು ಪ್ರಕಾಶ್ ಅವರು ಮುಂದಿನ ದಿನಗಳಲ್ಲಿ ಇದೇ ರೀತಿಯ ಕುತಂತ್ರ, ಅಪಪ್ರಚಾರ ಮುಂದುವರಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾರೆ.
ಬಲವಂತದ ಬಂದ್’ಗೆ ಪೊಲೀಸ್ ಬ್ರೇಕ್; ಹುಬ್ಬಳ್ಳಿಯಲ್ಲಿ ಖಾಕಿ-ರೈತರ ನಡುವೆ ಜಟಾಪಟಿ
ಹುಬ್ಬಳ್ಳಿ : ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್’ಗೆ ಹುಬ್ಬಳ್ಳಿ ಧಾರವಾಡ ನಗರಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ರೈತ ಸಂಘಟನೆಗಳು ಬಂದ್ ಬೆಂಬಲಿಸಿ ರಸ್ತೆಗಿಳಿದಿವೆ. ಬಂದ್ ಕರೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಹೀಗಿದ್ದರೂ ರೈತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಹೊಸೂರು ಬಸ್ ಡಿಪೋ ಬಳಿ ಬಸ್ ತಡೆದ ರೈತ ಹೊರಾಟಗಾರರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರೈತ ಹೊರಾಟಗಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿನಡೆದು ಗೊಂದಲದ ವಾತಾವರಣ ನಿರ್ಮಾಣವಾಯಿತು.
ಭಾರತ್ ಬಂದ್: ಸರ್ಕಾರದ ವಿರುದ್ಧ ಆಕ್ರೋಶದ ಭುಗಿಲು
ದೆಹಲಿ: ಮೋದಿ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ಮಂಗಳವಾರ ಭಾರತ್ ಬಂದ್’ಗೆ ಕರೆ ನೀಡಿದ್ದು, ಹಲವು ರಾಜ್ಯಗಳಲ್ಲಿ ಬಂದ್ ನಡೆದಿದೆ. ಕರ್ನಾಟಕ ರಾಜ್ಯದಲ್ಲೂ ಹಲವೆಡೆ ಭಾರತ್ ಬಂದ್’ಗೆ ಬೆಂಬಲವ್ಯಕ್ತವಾಗಿದೆ. ಡಿಸೇಂಬರ್ 5ರಂದು ಕರ್ನಾಟಕ ಬಂದ್’ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದವು. ಅದು ಯಶಸ್ಸಾಗಲಿಲ್ಲ. ಇದೀಗ ಮೂರು ದಿನಗಳ ನಂತರ ಭಾರತ್ ಬಂದ್’ಗೆ ರಾಷ್ಟ್ರೀಯ ಮಟ್ಟದಲ್ಲಿ ಬಂದ್ ಆಚರಿಸಲಾಗುತ್ತಿದೆ. ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿವೆ. ಸರ್ಕಾರ ನಡೆಸಿರುವ ಹಲವು ಸುತ್ತುಗಳ ಸಂಧಾನ ವಿಫಲವಾದ ನಂತರ ವಿವಿಧ ಸಂಘಟನೆಗಳು ಈ ಭಾರತ್ ಬಂದ್’ಗೆ ಕರೆ ನೀಡಿವೆ. ಈ ಬಂದ್ ಕರೆಯನ್ನು ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲಿಸಿದೆ. ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ವಿವಿಧ ಸಂಘಟನೆಗಳು ಬಂದ್ ಬೆಂಬಲಿಸಿ ರಸ್ತೆಗಿಳಿದಿವೆ. ನಸುಕಿನ ಜಾವವೇ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಕಾರ್ಯಕರ್ತರು…
ಇಂಜಿನಿಯರಿಂಗ್ ಪದವೀಧರರಿಗೂ ಶಿಕ್ಷಕ ಹುದ್ದೆ: ಸುರೇಶ್ ಕುಮಾರ್
ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ (6ರಿಂದ 8ನೇ ತರಗತಿ) ಹುದ್ದೆಗಳಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡುವುದರೊಂದಿಗೆ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಶಕೆ ಪ್ರಾರಂಭವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 2017ರ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಅಸ್ತಿತ್ವಕ್ಕೆ ಬಂದ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ಹುದ್ದೆಗಳ ಭರ್ತಿಗಾಗಿ 2018 ಮತ್ತು 2019ರ ನೇಮಕಾತಿ ಅಧಿಸೂಚನೆಗೆ ಅಗತ್ಯ ಸಂಖ್ಯೆಯ ಅಭ್ಯರ್ಥಿಗಳ ಕೊರತೆಯಿಂದ ಹೆಚ್ಚಿನ ಸ್ಥಾನಗಳು ಖಾಲಿ ಬಿದ್ದಿದ್ದವು. ಶೈಕ್ಷಣಿಕ ಸುಧಾರಣೆಗೆ, ಶಿಕ್ಷಕ ಸಂಪನ್ಮೂಲದಲ್ಲಿ ವೈವಿಧ್ಯತೆಯ ಅಗತ್ಯವನ್ನು ಮನಗಂಡು ವೃಂದ ನಿಯಮಗಳಿಗೆ ಕೆಲ ತಿದ್ದುಪಡಿಯನ್ನು ಶಿಕ್ಷಣ ಇಲಾಖೆ ಪ್ರಸ್ತಾಪಿಸಿದ್ದು, ಈ ತಿದ್ದುಪಡಿಗೆ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೃಂದ ನಿಯಮಗಳಿಗೆ ಕೆಲವು…
ಭಾರತ್ ಬಂದ್’; ಕಾಂಗ್ರೆಸ್ ನಾಯಕರಿಗೆ ಸಚಿವ ಸುಧಾಕರ್ ತರಾಟೆ
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧದ ಭಾರತ್ ಬಂದ್’ಗೆ ಬೆಂಬಲ ನೀಡಿರುವ ಕಾಂಗ್ರೆಸ್ ನಾಯಕರನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಅವರು ಈ ಸುಧಾರಣೆಗಳನ್ನು ತರಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂಬ ಸಂಗತಿಯನ್ನು ಸುಧಾಕರ್ ಬಹಿರಂಗ ಮಾಡಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶ್ರೀ ಶರದ್ ಪವಾರ್ ಅವರು ಈ ಸುಧಾರಣೆಗಳನ್ನು ತರಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. (2/4)#FarmersWithModi pic.twitter.com/bJVnjfUg9A — Dr Sudhakar K (Modi ka Parivar)…
ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಮೋದನೆ: ಶಾಲಾ ಶಿಕ್ಷಣದಲ್ಲಿ ಹೊಸ ಶಕೆ- ಸುರೇಶ್ ಕುಮಾರ್
ಬೆಂಗಳೂರು: ಕೇಂದ್ರ ಸರ್ಕಾರ ಅನುಮೋದಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದ ಸಾಂಸ್ಕೃತಿಕ ಅವಶ್ಯಕತೆಗಳಿಗೆ ಒಗ್ಗೂಡುವ ರೀತಿಯಲ್ಲಿ ತಯಾರಿಸಲಾದ ರಾಜ್ಯದ ಕಾರ್ಯಪಡೆ ಸಲ್ಲಿಸಿರುವ ವರದಿಗೆ ಸಂಪುಟ ತಾತ್ವಿಕ ಅನುಮೋದನೆ ನೀಡಿದ್ದು, ಇದು ಶಾಲಾ ಶಿಕ್ಷಣದಲ್ಲಿ ಹೊಸ ಶಕೆಗೆ ನಾಂದಿಯಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಪುಟ ಅನುಮೋದನೆ ನೀಡಿದ ನಂತರ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಶಿಕ್ಷಣ ಆಯೋಗ ಸ್ಥಾಪನೆ ಸೇರಿದಂತೆ ಶಾಲಾ ಆಡಳಿತ, ನಿಯಂತ್ರಣ ನಿರ್ಣಯಗಳನ್ನು ತೆಗೆದುಕೊಳ್ಳುವಿಕೆ ಮತ್ತು ಶೈಕ್ಷಣಿಕ ಆಯಾಮಗಳ ಕುರಿತು ಮೌಲ್ಯಮಾಪನಗಳಿಗಾಗಿ ಸ್ವತಂತ್ರ ಸಂಸ್ಥೆಗಳನ್ನು ಸ್ಥಾಪನೆ ಸೇರಿದಂತೆ ಹಲವು ವೈಶಿಷ್ಟ್ಯಗಳ ಹಿನ್ನೆಲೆಯಲ್ಲಿ ಮಂದಿನ ದಿನಗಳಲ್ಲಿ ಶಾಲಾ ಶಿಕ್ಷಣದ ಚಿತ್ರಣವನ್ನೇ ಸಂಪೂರ್ಣವಾಗಿ ಪರಿವರ್ತಿಸಲಿದ್ದು, ಶಾಲಾಡಳಿತ ಮತ್ತು ಶೈಕ್ಷಣಿಕ ಆಯಾಮಗಳಲ್ಲಿ ಹೊಸ ಮನ್ವಂತರಕ್ಕೆ ಕಾರಣವಾಗಲಿದೆ ಎಂದಿದ್ದಾರೆ. ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆಕರ್ನಾಟಕ ಶಾಲಾ ಶಿಕ್ಷಣ…
ಬೆಳಗಾವಿ ಉಪಚುನಾವಣೆಗೆ ಕೈ ರಣತಂತ್ರ
ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರ ಜೊತೆ ಸಮಾಲೋಚನೆ ನಡೆಸಿದರು. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಉಪ ಚುನಾವಣೆಯ ಉಸ್ತುವಾರಿ ವಹಿಸಿರುವ ಎಂ.ಬಿ. ಪಾಟೀಲ್, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಮಹಾಂತೇಶ ಕೌಜಲಗಿ ಹಾಜರಿದ್ದರು.
