ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ಸಂಪುಟ ಒಪ್ಪಿಗೆ.

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ; ಶೇ. 60:40 ಅನುಪಾತಕ್ಕೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ. ಬೆಂಗಳೂರು: ಕರ್ನಾಟಕ ರಾಜ್ಯದ ಬಯಲು ಸೀಮೆಗೆ ನೀರುಣಿಸುವ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಲಿದೆ. ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಕೇಂದ್ರದ ಮೇಲೆ ನಿರಂತರ ಒತ್ತಡ ಹೇರಿದ್ದು, ಆ ಪ್ರಯತ್ನದ ಫಲವಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಜಲಶಕ್ತಿ ಸಚಿವರು ಸಮ್ಮತಿಸಿದ್ದಾರೆ ಎನ್ನಲಾಗಿದೆ. ಕೋವಿಡ್ ಲಾಕ್ ಡೌನ್ ಮಧ್ಯೆಯೂ 11 ಬಾರಿ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರನ್ನು ತರ್ಕಬದ್ಧವಾಗಿ ಒತ್ತಾಯಿಸಿದ್ದ ಸಚಿವ ರಮೇಶ್ ಜಾರಕಿಹೊಳಿ‌ ಅವರ ಕತೃತ್ವಶಕ್ತಿ ಮತ್ತು ಪೂರಕ ದಾಖಲೆಗಳನ್ನು ಪರಿಶೀಲಿಸಿದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ, ಒಟ್ಟು ಅನುದಾನದ ಶೇ. 60ರಷ್ಟು ಹಣಕಾಸಿನ ನೆರವು ನೀಡಲಿದೆ.…

ಟಯೋಟ ಕಿರ್ಲೋಸ್ಕರ್ ಮೋಟಾರ್ಸ್’ನ ನಿಯೋಗ ಸಿಎಂ ಭೇಟಿ

ಬೆಂಗಳೂರು: ಕಾರ್ಮಿಕರ ಹೋರಾಟದ ನಡುವೆ ದೇಶದ ಪ್ರತಿಷ್ಠಿತ ವಾಹನ ತಯಾರಿಕಾ ಸಂಸ್ಥೆ ಟಯೋಟ ಕಿರ್ಲೋಸ್ಕರ್ ಮೋಟಾರ್ಸ್’ನ ನಿಯೋಗ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಮಾಡಿ ಕುತೂಹಲಕಾರಿ ಬೆಳವಣಿಗೆಗೆ ಸಾಕ್ಷಿಯಾಯಿತು. ಟಯೋಟ ಕಿರ್ಲೋಸ್ಕರ್ ಮೋಟಾರ್ಸ್’ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಸೇರಿದಂತೆ ಹಲವು ಅಧಿಕಾರಿ ಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಸಚಿವರಾದ ಜಗದೀಶ್ ಶೆಟ್ಟರ್ ಶಿವರಾಮ್ ಹೆಬ್ಬಾರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು

ಮಂಗಳವಾರ ಭಾರತ್ ಬಂದ್; ಏನಿರುತ್ತೆ? ಏನಿರಲ್ಲ?

ದೆಹಲಿ: ಮೋದಿ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ಮಂಗಳವಾರ ಭಾರತ್ ಬಂದ್’ಗೆ ಕರೆ ನೀಡಿದೆ. ಆದರೆ ಬಂದ್ ಯಶಸ್ವಿಯಾಗುತ್ತಾ? ಬಂದ್ ಆದರೆ ಏನಿರುತ್ತೆ? ಏನಿರಲ್ಲ? ಎಂಬ ಕುತೂಹಲ ಎಲ್ಲರನ್ನೂ ಕಾದಿದೆ. ಡಿಸೇಂಬರ್ 5ರಂದು ಕರ್ನಾಟಕ ಬಂದ್’ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದವು. ಅದು ಯಶಸ್ಸಾಗಲಿಲ್ಲ. ಇದೀಗ ಮೂರು ದಿನಗಳ ನಂತರ ಭಾರತ್ ಬಂದ್’ಗೆ ರಾಷ್ಟ್ರೀಯ ಮಟ್ಟದಲ್ಲಿ ಪ್ರಯತ್ನ ಸಾಗಿದೆ. ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿವೆ. ಸರ್ಕಾರ ನಡೆಸಿರುವ ಹಲವು ಸುತ್ತುಗಳ ಸಂಧಾನ ವಿಫಲವಾದ ನಂತರ ವಿವಿಧ ಸಂಘಟನೆಗಳು ಮಂಗಳವಾರದಂದು ಭಾರತ್ ಬಂದ್’ಗೆ ಕರೆ ನೀಡಿವೆ. ಈ ಬಂದ್ ಕರೆಯನ್ನು ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲಿಸುವುದಾಗಿ ಹೇಳಿವೆ. ಈ ನಡುವೆ ಹೆದ್ದಾರಿ ಬಂದ್ ನಡೆಸುವುದಾಗಿ ಕೆಲವು ಸಂಘಟನೆಗಳು ಹೇಳಿವೆ. ಆದರೆ ಎಪಿಎಂಸಿ ಮಾರುಕಟ್ಟೆ ಹಾಗೂ…

ಪಂಚಾಯತ್ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ; ಸುರ್ಜೆವಾಲಾ

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಬಳಿಕ ರಾಜ್ಯದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಪ್ರದೇಶ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಹಿರಿಯ ಮುಖಂಡರು, ಸಂಸದರು, ಶಾಸಕರು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ಜನರ ಒಳಿತಿಗಾಗಿ ಈ ಸರ್ಕಾರ ಕೆಲಸ ಮಾಡುತ್ತಿಲ್ಲ. ಸರ್ಕಾರದ ನಡೆಗೆ ಕೇಂದ್ರದ ಬಿಜೆಪಿ ನಾಯಕರೇ ಬೇಸತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು ಹೇಳಿದರು. ಪಕ್ಷದಲ್ಲಿ ಈಗಾಗಲೇ ಸಾಕಷ್ಟು ಸೋಲು ಕಂಡಿದ್ದೇವೆ, ಆದರೆ ಪ್ರತಿ ಸೋಲೂ ಹೊಸ ಭರವಸೆಯೊಂದಿಗೆ ಹೆಜ್ಜೆ ಇಡಲು ಅವಕಾಶ್ ನಿಡುತ್ತಿದೆ ಎಂದಿದ್ದಾರೆ.

ಪ್ರೌಢಶಾಲಾ ಸಂವೇದಾ ತರಗತಿ; ಸಮಯ ಬದಲು

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ದೂರದರ್ಶನ ಚಂದನಾ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸಂವೇದಾ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮದ ಸಮಯಗಳಲ್ಲಿ ಡಿಸೆಂಬರ್ 7 ರಿಂದ ಸ್ವಲ್ಪ ಬದಲಾವಣೆಯಾಗಿದ್ದು, ವಿದ್ಯಾರ್ಥಿಗಳು ಈ ಬದಲಾವಣೆಯನ್ನು ಗಮನಿಸಿ ತರಗತಿಗಳ ಸದುಪಯೋಪಡಿಸಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೋವಿಡ್-19 ಪ್ರಸರಣದ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ವಿಳಂಬವಾಗುತ್ತಿರುವುದರಿಂದ ಆಗಸ್ಟ್ ನಿಂದಲೇ 8, 9, 10 ನೇ ತರಗತಿಗಳಿಗೆ ಸಂವೇದಾ ಪಾಠಗಳು ನಡೆಯುತ್ತಿವೆ. ಪ್ರಸ್ತುತ ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ತರಗತಿಗಳ ಪ್ರಸಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಷಯಗಳಲ್ಲಿ ವಿಡಿಯೋ ಪಾಠಗಳ ವೇಳಾಪಟ್ಟಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ-ಡಿ.ಎಸ್.ಇ.ಆರ್.ಟಿ ಬಿಡುಗಡೆ ಮಾಡಿದೆ. ತರಗತಿಗಳು ಬೆಳಗ್ಗೆ 7.00 ರಿಂದ 10.30 ರವರೆಗೆ ಮತ್ತು ಸಂಜೆ 5 ರಿಂದ…

ಧಾರವಾಡದಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಲೋಕಾರ್ಪಣೆ

ಭಾರತ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆ ಅನುದಾನ, ಕರ್ನಾಟಕ ರಾಜ್ಯ ಸರ್ಕಾರದ ಅನುದಾನದ ಅಡಿಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾದ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣ ಘಟಕ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಧಾರವಾಡ ಕೇಂದ್ರ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಕಟ್ಟಡದ ಉದ್ಘಾಟನೆಯನ್ನು ಮಾನ್ಯ ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟಿಸಿದರು. ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ ಬಸವರಾಜ ಉಪಸ್ಥಿತಿಯಲ್ಲಿ ಉದ್ಘಾಟನೆ ನೆರವೇರಿತು. ವಿಧಾನಸಭಾ ಸದಸ್ಯರಾದ ಅರವಿಂದ ಚಂದ್ರಕಾಂತ ಬೆಲ್ಲದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಮೋಹನ್ ಲಿಂಬಿಕಾಯಿ ಸೇರಿದಂತೆ ಜಿಲ್ಲೆಯ ಹಲವು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇವರು ಸಾಂಪ್ರದಾಯಿಕ ಶತ್ರುಗಳೇ..? ಅಲ್ಲ ಸಮ್ಮಿತ್ರರು.. ಇಲ್ಲಿದೆ ನೋಡಿ ಅಸಲಿ ಸತ್ಯ

ರಾಜಕೀಯ ಸನ್ನಿವೇಶಗಳಲ್ಲಿ ರಾಜಿಯಿಲ್ಲದ ನಡೆ. ಆದರೆ ಸಾಮಾಜಿಕ ಜೀವನದಲ್ಲಿ? ಹೌದು ಈ ನಾಯಕರು ರಾಜಕೀಯ ವಲಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗಿದ್ದಾರೆಯೇ ಹೊರತು ನಿಜ ಜೀವನದಲ್ಲಿ ಸಮ್ಮಿತ್ರರು ಎಂಬುದಕ್ಕೆ ಅನೇಕ ಸನ್ನಿವೇಶಗಳು ಉದಾಹರಣೆಯಾಗಿವೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಈ ಮೂವರು ನಾಯಕರು ಮುಖಾಮುಖಿಯಾದಾಗಲೂ ಒಂದು ಅಚ್ಚರಿಯ ಸನ್ನಿವೇಶ ಸೃಷ್ಟಿಯಾಯಿತು. ಪ್ರವಾಸ ನಿಮಿತ್ತ ಉತ್ತರ ಕರ್ನಾಟಕ ಪ್ರವಾಸ ತೆರಳಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಯಡಿಯೂರಪ್ಪ ಶನಿವಾರ ಪರಸ್ಪರ ಟೀಕಾಸ್ತ್ರ ಪ್ರಯೋಗಿಸಿ ಒಬ್ಬರನ್ನೊಬ್ಬರು ಕೆಣಕಿದ್ದರು. ಅದೇ ದಿನ ಸಂಜೆ ಬೆಂಗಳೂರಿಗೆ ವಾಪಾಸಾದ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅಪ್ಪಿಕೊಂಡರು. ಬೆಳಗಾವಿಯ ಸಾಂಬ್ರ ವಿಮಾನ ನಿಲ್ದಾಣದಲ್ಲಿ ಈ ಮೂವರು ಹಿರಿಯ ನಾಯಕರು ಮುಖಾಮುಖಿಯಾದ ಸಂದರ್ಭ ಅಚ್ಚರಿಯ ಸನ್ನಿವೇಶಕ್ಕೆ ಕಾರಣವಾಯಿತು. ರಾಜಕೀಯ ಮರೆತು ಕುಶಲೋಪರಿ ಸಮಾಲೋಚನೆಗೆ ಅವರು ಶರಣಾಗಿದ್ದರು. ಅಲ್ಲಿ ಒಂದಷ್ಟು ತಮಾಷೆಯ ಮಾತುಗಳು ಇವರ ಗಾಂಭೀರ್ಯಕ್ಕೆ ಅಡ್ಡಿಯಾಗುತ್ತಲಿತ್ತು ಎನ್ನುವುದಕ್ಕಿಂತ…

ಸಚಿವ ಸೋಮಣ್ಣರ ನೂತನ ಶಾಸಕರ ಕಛೇರಿ ಕಾರ್ಯಾರಂಭ

ವಸತಿ ಸಚಿವ ವಿ.ಸೋಮಣ್ಣರ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರ ಕಛೇರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಉದ್ಘಾಟಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಶ್ರೀರಾಮಲು ಸಂಸದ ತೇಜಸ್ವಿ ಸೂರ್ಯ ಮೊದಾಲಾದ ನಾಯಕರು ಈ ಸಂದರ್ಭದ್ಲಲ್ಲಿ ಉಪಸ್ಥಿತರಿದ್ದರು.

ನಿವಾರ್ ಚಂಡಮಾರುತದ ಹೊಡೆತ; ರಾಜ್ಯದಲ್ಲೂ 3 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿನ ನಿವಾರ್ ಚಂಡಮಾರುತದ ಹೊಡೆತದ ಪರಿಣಾಮ ದಕ್ಷಿಣ ಭಾರತದ ಹಲವು ರಾಜ್ಯಗಳ ಜನರ ನಿದ್ದೆಗೆಡಿಸಿದೆ. ಕೇರಳಕ್ಕೆ ಬುರೇವಿ ಚಂಡಮಾರುತದ ಆಗಮನವಾಗಲಿದ್ದು ಆ ರಾಜ್ಯಕ್ಕಷ್ಟೇ ಅಲ್ಲ ನೆರೆಯ ರಾಜ್ಯಗಳಾದ ತಮಿಳುನಾಡು ಕರ್ನಾಟಕದಲ್ಲಿ ಕೂಡ ನಾಲ್ಕೈದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಹವಾಮಾನ ಇಲಾಖೆ , ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವೆಡೆ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಡಿಸೇಂಬರ್ 5ವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಪುಲಿಕೇಶೀನಗರ ರಾಜಕೀಯ; ಯಾರು ಈ ಅಚ್ಚರಿಯ ಯುವ ನಾಯಕ?

ಬೆಂಗಳೂರು: ರಾಜ್ಯ ರಾಜಕಾರಣ ದಿನಕ್ಕೊಂದು ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ಕಳೆದ ಲೋಕಸಭಾ ಸಮರದಲ್ಲಿ ಬೆಂಗಳೂರು ದಕ್ಷಿಣಾ ಲೋಕಸಭಾ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ಆಯ್ಕೆ ಮಾಡಿದಂತೆ, ಕೆಲ ಸಮಯದ ಹಿಂದೆ ಕಾಂಗ್ರೆಸ್ ಕೂಡಾ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಡಿ.ಕೆ.ರವಿ ಪತ್ನಿ ಕುಸುಮಾ ಅವರನ್ನು ಕಣಕ್ಕಿಳಿಸಿ ಅಚ್ಚರಿಗೆ ಕಾರಣವಾಗಿತ್ತು. ಇದೀಗ ಅಂಥದ್ದೇ ಕುತೂಹಲಕಾರಿ ಬೆಳವಣಿಗೆಗೆ ಬೆಂಗಳೂರಿನ ಪುಲಿಕೇಶಿನಗರ ಕ್ಷೇತ್ರ ಕೂಡಾ ಕಾರಣವಾಗುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಒಂದು ಮೂಲದ ಪ್ರಕಾರ ಈವರೆಗೂ ಮೀಸಲು ಕ್ಷೇತ್ರವಾಗಿರುವ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ ಮುಂದಿನ ಚುನಾವಣಾ ಹೊತ್ತಿಗೆ ಮೀಸಲಾತಿಯಿಂದ ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ. ಅಂತಹಾ ಸಂದರ್ಭದಲ್ಲಿ ತಾವು ಕೈ ಚಿಹ್ನೆಯಿಂದ ಸ್ಪರ್ಧಿಸಬೇಕೆಂದು ಪ್ರಯತ್ನದಲ್ಲಿದ್ದ ಮಾಜಿ ಮೇಯರ್ ಸಂಪತ್ ಕುಮಾರ್ ಅವರು ಗಲಭೆ ಆರೋಪಕ್ಕೊಳಗಾಗಿದ್ದಾರೆ. ಈವರೆಗೂ ಕೈ ಶಾಸಕರಾಗಿರುವ ಅಖಂಡ ಶ್ರೀನಿವಾಸಮೂರ್ತಿ ಬಗ್ಗೆ ಕಾಂಗ್ರೆಸ್ ನಾಯಕರು ಮುನಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಅವರನ್ನು ಬಿಜೆಪಿಗೆ ಸೆಳೆಯುವ…