ಡಿಜೆ ಹಳ್ಳಿ ಬೆಂಕಿ ಗಲಭೆ; ಮತ್ತೊಬ್ಬ ಕೈ ನಾಯಕ ಜಾಕೀರ್ ಬಂಧನ

ಬೆಂಗಳೂರು: ಡಿಜೆ ಹಳ್ಳಿ ಬೆಂಕಿ ಗಲಭೆ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕೀರ್’ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೆಲ ದಿನಗಳ ಹಿಂದಷ್ಟೇ ಬಂಧಿಸಿದ್ದ ಸಿಸಿಬಿ ಪೊಲೀಸರು ಕಾಂಗ್ರೆಸ್ ನಾಯಕಜಾಕೀರ್’ಗಾಗಿ ಹುಡುಕಾಟದಲ್ಲಿ ತೊಡಗಿದ್ದರು. ಪುಲಕೇಶಿನಗರ ವಾರ್ಡ್’ನ ಮಾಜಿ ಕಾರ್ಪೊರೇಟರ್ ರಾಕಿಬ್ ಜಾಕೀರ್’ಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದರು. ಒಮ್ಮೆ ವಿಚಾರಣೆಗೆ ಹಾಜರಾಗಿದ್ದ ಜಾಕೀರ್ ಬಳಿಕ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ. ಹಲವು ದಿನಗಳಿಂದ ಹುಡುಕಾಟದಲ್ಲಿದ್ದ ತಂಡ ಜಾಕೀರ್ ಬಗ್ಗೆ ಸುಳಿವು ಪಡೆದು ನಿನ್ನೆ ತಡರಾತ್ರಿ ವಿಶೇಷ ಬಂಧಿಸಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮತ್ತೊಂದು ಯಶೋಗಾಥೆಗೆ ಸಜ್ಜಾಗಿದೆ ‘ಪವರ್ ಆಫ್ ಯೂತ್’

‘ರಾಜಕುಮಾರ’ ಯಶಸ್ಸಿನ ನಂತರ ಇದೀಗ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಮತ್ತೊಂದು ಚಿತ್ರ ‘ಯುವರತ್ನ’ ಸಿನಿರಸಿಕರ ಕುತೂಹಲ ಕೆರಳಿಸಿದೆ. ಈ ಹೊಸ ಸಿನಿಮಾದ ‘ಪವರ್ ಆಫ್ ಯೂತ್’ ಹಾಡು ರಿಲೀಸ್ ಆಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಮೆಚ್ಚುಗೆ ಗಳಿಸಿದೆ. ನಕಶ್ ಅಜೀಜ್ ಹಾಡಿಗೆ ಪುನೀತ್ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗಲಿದ್ದು, ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3 ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯವಾಗಿದೆ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗಳು ಕೇಳಿಬರುತ್ತವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬಾರದು ಎಂದರು. ಪ್ರಪಂಚದಲ್ಲಿ ಶೇ.15 ರಿಂದ ಶೇ.20 ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿದೆ.…

ರಾಜ್ಯ ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆ.ವಿ.ನಾಗರಾಜು ಪದಗ್ರಹಣ

ಬೆಂಗಳೂರು: ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆ.ವಿ. ನಾಗರಾಜು ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಲಾಲ್ ಬಾಗ್’ನಲ್ಲಿರುವ ಡಾ.ಎಂ.ಎಚ್.ಮರೀಗೌಡ ಸಭಾಂಗಣದಲ್ಲಿ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷರ ಪದಗ್ರಹಣ ಸಮಾರಂಭ ಬುಧವಾರ ನೆರವೇರಿತು. ಸಮಾರಂಭದಲ್ಲಿ ಪಾಲ್ಗೊಂಡ ಆರೋಗ್ಯ ಸಚಿವ ಡಾ.ಸುಧಾಕರ್, ರಾಜ್ಯದಲ್ಲಿ ಮಾವು ಬೆಳೆಗಾರರಿಗೆ ನಿಗಮದಿಂದ ಹೆಚ್ಚಿನ ಪ್ರಯೋಜನ ಆಗಬೇಕಿದೆ. ತಳಿ ಆಯ್ಕೆಯಿಂದ ಮಾರುಕಟ್ಟೆ ಒದಗಿಸುವ ತನಕ ನಿಗಮವು ಬೆಳೆಗಾರ ಮತ್ತು ಗ್ರಾಹಕರಿಗೆ ಸೇತುವೆಯಂತೆ ಕಾರ್ಯ ನಿರ್ವಹಿಸಬೇಕಿದೆ ಎಂದರು. ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಾಗರಾಜು ಮಾತನಾಡಿ, ಸಹಕಾರ ಕ್ಷೇತ್ರದಲ್ಲಿನ ಅನುಭವ ಮತ್ತು ಮಾವು ಬೆಳೆಗಾರರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸುವುದಾಗಿ ಹೇಳಿದರು. ತಮಗೆ ಈ ಅವಕಾಶ ದೊರಕಿಸಿಕೊಟ್ಟಿರುವ ಸಿಎಂ ಮತ್ತು ಸಚಿವ ಸುಧಾಕರ್ ಅವರ ನಂಬಿಕೆಗೆ ಚ್ಯುತಿಯಾಗದಂತೆ ಕಾರ್ಯ ನಿರ್ವಹಿಸುತ್ತೇನೆ ಎಂದರು. ನಿಗಮದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ,…

ನಿಷ್ಠರಿಗೆ ಬಿಜೆಪಿಯಲ್ಲಿ ಅವಕಾಶ ನಿಶ್ಚಿತ : ಸಚಿವ ಸುಧಾಕರ್

ಬೆಂಗಳೂರು : ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡುವ ವ್ಯವಸ್ಥೆ ಇರುವುದು ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚುವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಸಿಕ್ಕಾಗ ಅಧಿಕಾರ ನೀಡಲಾಗುತ್ತದೆ ಎಂಬುದಕ್ಕೆ ರಾಜ್ಯಸಭೆ ಅಭ್ಯರ್ಥಿ ಆಯ್ಕೆಯೇ ನಿದರ್ಶನ. ನಿಷ್ಠೆ, ಪ್ರಾಮಾಣಿಕತೆ ಮತ್ತು ನಂಬಿಕೆಗೆ ಬಿಜೆಪಿ ಪ್ರಾಮುಖ್ಯತೆ ನೀಡುತ್ತದೆ ಎಂದು ಅಭಿಪ್ರಾಯಪಟ್ಟರು. ಲಾಲ್ ಬಾಗ್ ನ ಡಾ. ಎಂ.ಎಚ್. ಮರೀಗೌಡ ಸಭಾಂಗಣದಲ್ಲಿ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆ.ವಿ. ನಾಗರಾಜು ಪದಗ್ರಹಣ ಸಮಾರಂಭದಲ್ಲಿ ಬುಧವಾರ ಮಾತನಾಡಿದ ಅವರು, ಪಕ್ಷದ ನಾನಾ ಹಂತಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಕಾರ್ಯಕರ್ತರ ಕಾರ್ಯ ವೈಖರಿಯನ್ನು ಗಮನಿಸಲಾಗುತ್ತಿರುತ್ತದೆ. ಅವಕಾಶ ಸಿಕ್ಕಾಗ ಆದ್ಯತೆ ಮೇರೆಗೆ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸಲಾಗುತ್ತದೆ. ಎಲ್ಲರಿಗೂ ಒಂದೇ ಸಲ ಅವಕಾಶ ಸಾಧ್ಯವಿಲ್ಲ. ಆದರೆ ಎಲ್ಲರಿಗೂ ಒಂದಲ್ಲಾ…

ಸೇಡಂನಲ್ಲಿ ಗ್ರಾಮಸ್ವರಾಜ್ಯ ಸಮಾವೇಶ; ಬಿಜೆಪಿ ನಾಯಕರ ರೋಡ್ ಶೋ

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಇಂದು ಕಲ್ಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ಪಕ್ಷ ಆಯೋಜಿಸಿರುವ ಗ್ರಾಮಸ್ವರಾಜ್ಯ ಸಮಾವೇಶದ 5ನೇ ದಿನದ 10ನೇ ಸಮಾವೇಶದಲ್ಲಿ ಭಾಗವಹಿಸಿ ರೋಡ್ ಶೋ ನಡೆಸಿದರು.ತರುವಾಯ ಕಾರ್ಯಕರ್ತರ ಸಭೆಯ ಉದ್ಘಾಟನೆ ನೆರವೇರಿಸಿದರು. ಈ ಸಭೆಯಲ್ಲಿ ಮಾನ್ಯ ಸಚಿವರಾದ ವಿ ಸೋಮಣ್ಣ ಸಂಸದರಾದ ಉಮೇಶ್ ಜಾದವ್, ಭಗವಂತ ಖೂಬಾ, ಶಾಸಕರಾದ ರಾಜಕುಮಾರ್ ಪಾಟೀಲ್ ತೆಲ್ಕುರ್, ದತ್ತಾತ್ರೇಯ ಪಾಟೀಲ್, ರಾಜುಗೌಡ, ಸುಭಾಷ್ ಗುತ್ತೇದಾರ ಸುನಿಲ್ ವಲ್ಯಾಪುರೆ, ಬಸವರಾಜ್ ಮತ್ತಿಮೂಡ ಹಾಗೂ ವಿಧಾನಪರಿಷತ್ ಸದಸ್ಯರಾದ ಡಿ ಜಿ ಪಾಟೀಲ್, ಮಾಜಿ ಶಾಸಕರಾದ ಅಶ್ವತ್ಥನಾರಾಯಣ ಕಲ್ಬುರ್ಗಿ ನಗರ ಮತ್ತು ಗ್ರಾಮೀಣ ಜಿಲ್ಲೆಯ ಬಿಜೆಪಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾ.ಪಂ. ಚುನಾವಣೆ ಹೊತ್ತಿನಲ್ಲಿ ಡಿಸಿಎಂ ಆಮಿಷ: ಆಮ್ ಆದ್ಮಿ ಆರೋಪ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯತಿಗೆ 1.50 ಕೋಟಿ ಅನುದಾನವನ್ನು ನೇರವಾಗಿ ನೀಡಲಾಗುವುದು ಹಾಗೂ ನರೇಗಾ ಯೋಜನೆಯನ್ನು ನೇರವಾಗಿ ನೀಡಲಾಗುವುದು ಎಂದು ಆಮಿಷ ಒಡ್ಡಿರುವ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರಿಗೆ ಚುನಾವಣೆ ಘೋಷಣೆಯಾಗಿರುವ ಬಗ್ಗೆ ಕನಿಷ್ಠ ಜ್ಞಾನವಿಲ್ಲವೇ. ಈ ಕೂಡಲೇ ಈ ಹೇಳಿಕೆಯನ್ನು ವಾಪಸ್ಸು ಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಆಮ್ ಆದ್ಮಿ, ಇಷ್ಟು ದಿನ ಗ್ರಾಮಗಳ ಬಗ್ಗೆ ಮಾತನ್ನೇ ಆಡದ ನೀವು ಈಗ “ಗ್ರಾಮ ಸ್ವರಾಜ್ಯ” ಎನ್ನುವ ಮೂಲಕ ಮಹಾತ್ಮ ಗಾಂಧೀಜಿಯವರ ಆಶಯಗಳಿಗೆ ಮಸಿ ಬಳಿಯುತ್ತಿದ್ದೀರಿ. ಚುನಾವಣೆ ಹೊತ್ತಿನಲ್ಲೇ ನಿಮಗೆ ಗ್ರಾಮಗಳ ನೆಪಪಾಗಬೇಕೆ? ಇಷ್ಟು ದಿನ ನಾಪತ್ತೆಯಾಗಿದ್ದ ನೀವು ದಿಡೀರ್ ಎಂದು ಪ್ರತ್ಯಕ್ಷವಾಗಿ ಸುಮ್ಮನೆ ಬಡಬಡಾಯಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ. ಈ ಮೊದಲು ಕರ್ನಾಟಕದಲ್ಲಿ 5 ವರ್ಷ ಸರ್ಕಾರ ನಡೆಸಿದ ನಿಮ್ಮ ಕೊಡುಗೆ ಗ್ರಾಮಗಳ…

ಮೃತರ ಕುಟುಂಬಕ್ಕೆ ತಲಾ ರೂ.6 ಲಕ್ಷ ಪರಿಹಾರ ಘೋಷಣೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಂಭವಿಸಿದ ಮೀನುಗಾರಿಕಾ ದೋಣಿ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಸರ್ಕಾರ ತಲಾ 6 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೂಡ ಬುಧವಾರ ಬಂದರು ಧಕ್ಕೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಈ ನಡುವೆ ಸಚಿವರು, ರೂ.6 ಲಕ್ಷಕ್ಕಿಂತ ಹೆಚ್ಚಿನ ಪರಿಹಾರ ಮೊತ್ತ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಈ ಮಧ್ಯೆ ಬೋಟು ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ಕನಿಷ್ಟ ರೂ.25 ಪರಿಹಾರ ನೀಡುವಂತೆ ಡಿವೈಎಫ್ಎ ಘಟಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಮಂಗಳೂರು ದೋಣಿ ದುರಂತ; ಮತ್ತೆ ನಾಲ್ವರು ಮೀನುಗಾರರ ಶವ ಪತ್ತೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಮಂಗಳವಾರ ಬೋಟ್ ಮುಳುಗಿ ನಾಪತ್ತೆಯಾದವರ ಪೈಕಿ ಮತ್ತೆ ನಾಲ್ವರ ಮೃತದೇಹ ಪತ್ತೆಯಾಗಿದೆ. ಒಬ್ಬರ ಮೃತದೇಹಕ್ಕಾಗಿ ಹುಡುಕಾಟ ಸಾಗಿದೆ. ಮಂಗಳೂರು ಸಮೀಪ ಅರಬ್ಬೀ ಸಮುದ್ರದಲ್ಲಿ ಮಂಗಳವಾರ ಮೀನುಗಾರಿಕಾ ದೋಣಿ ದುರಂತಕ್ಕೀಡಾಗಿ ಆರು ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ನಾಪತ್ತೆಯಾದವರಲ್ಲಿ ಪಾಂಡುರಂಗ ಮತ್ತು ಪ್ರೀತಂ ಎಂಬುವವರ ಮೃತದೇಹ ಮಂಗಳವಾರವೇ ಪತ್ತೆಯಾಗಿತ್ತು. ಉಳಿದ ನಾಲ್ವರ ಪೈಕಿ ಕಸಬಾ ಬೆಂಗರೆ ನಿವಾಸಿ ಹಸೈನಾರ್ (28), ಚಿಂತನ್ (21), ಜಿಯಾವುಲ್ಲಾ (36) ಮತ್ತು ಅನ್ಸಾರ್ ಎಂಬವರ ಮೃತದೇಹ ಬುಧವಾರ ಪತ್ತೆಯಾಗಿದೆ. ಇನ್ನೊಬ್ಬ ಮೀನುಗಾರ ಅನ್ಸಾರ್ ಮೃತದೇಹ ಬಲೆಯಲ್ಲಿ ಸಿಲುಕಿತ್ತು. ಅದನ್ನು ಹೊರತೆಗೆಯಲು ರಕ್ಷಣಾ ತಂಡ ಹರಸಾಹಸ ಪಟ್ಟಿತ್ತಾದರೂ ಶವ ಮತ್ತೆ ಸಮುದ್ರಪಾಲಾಗಿದೆ.

ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್; ಅಪಹರಣಕಾರರಿಗೆ ಖಾಕಿ ಬೇಟೆ

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣದ ತನಿಖೆ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಅಪಹರಣ ಮಾಡಿದವರು ಯಾರು ಎಂಬ ಬಗ್ಗೆ ವರ್ತೂರು ಪ್ರಕಾಶ್ ಸ್ಪಷ್ಟ ಮಾಹಿತಿ ನೀಡದಿರುವುದು ಪೊಲೀಸ್ ತನಿಖೆಯ ವೇಗಕ್ಕೆ ಆದಿಯಾಗಿದೆ ಎನ್ನಲಾಗಿದೆ. ವರ್ತೂರು ಪ್ರಕಾಶ್ ಅವರನ್ನು ಕಿಡಿಗೇಡಿಗಳು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮದಲ್ಲಿ ತನಿಖೆ ಆರಂಭಿಸಿದ್ದಾರೆ. ವರ್ತೂರು ಪ್ರಕಾಶ್ ಹೇಳಿಕೆಯನ್ನಾಧರಿಸಿ ತನಿಖೆಗೆ ಮುನ್ನುಡಿ ಬರೆದಿರುವ ಬೆಳ್ಳಂದೂರು ಠಾಣೆಯ ಪೊಲೀಸರು, ವರ್ತೂರು ಪ್ರಕಾಶ್ ಕಿಡ್ನಾಪ್ ಆದ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ತನ್ನದೇ ಕಾರಿನಲ್ಲಿ ಕಿಡಿಗೇಡಿಗಳು ಕಿಡ್ನಾಪ್ ಮಾಡಿದ್ದರು. ಹಲ್ಲೆ ನಡೆಸಿ 30 ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಹಣ ಕೊಡದಿದ್ದರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದರು ಎಂದು ವರ್ತೂರು ಪ್ರಕಾಶ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಹಾಗಾಗಿ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿ ಕರೆದೊಯ್ಯಲಾಗಿದೆ ಎನ್ನಲಾದ…