ರೈತರ ಅನುಮಾನ ದೂರಮಾಡಿ; ಕೇಂದ್ರಕ್ಕೆ ಹೆಚ್ಡಿಕೆ ಸಲಹೆ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರಸ್ವರೂಪ ಪಡೆಯುತ್ತಿದೆ. ಇದೇ ವೇಳೆ, ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡುವುದು ಸೂಕ್ತ. ಇಲ್ಲವಾದರೆ, ರೈತರು, ಜನರ ಅನುಮಾನಗಳು ಬೆಳೆಯುತ್ತಾ ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಕೇಂದ್ರ ಸರ್ಕಾರಕ್ಕೆ ಅವರು ಸಲಹೆ ನೀಡಿದ್ದಾರೆ. ರೈತರ ಸಮಸ್ಯೆ ಆಲಿಸಬೇಕಿದ್ದರೆ ಬುರಾಡಿ ಉದ್ಯಾನಕ್ಕೆ ಬರಬೇಕು ಎಂದು ಕೇಂದ್ರ ರೈತರಲ್ಲಿ ಮನವಿ ಮಾಡಿದೆ. ಇದನ್ನು ರೈತರು ಒಪ್ಪಿಲ್ಲ. ಇದು ತಮಗೆ ಒಡ್ಡಿರುವ ಷರತ್ತು ಎಂದು ರೈತರು ಭಾವಿಸಿದ್ದಾರೆ. ಅದ್ದರಿಂದ ಈ ಷರತ್ತು ಹಿಂದಕ್ಕೆ ಪಡೆಯುವುದೇ ಸೂಕ್ತ. ರೈತರು ಇರುವಲ್ಲಿಯೇ, ಅವರು ಇಚ್ಛಿಸಿದಲ್ಲಿಯೇ ಸಮಸ್ಯೆಗಳನ್ನು ಆಲಿಸಿ ಎಂಬುದು ನನ್ನ ಸಲಹೆ ಎಂದವರು ಹೇಳಿದ್ದಾರೆ. ಹಲವು ದಿನಗಳಿಂದ ರೈತರು ಸಿಂಗು…

ಬಿಡಿಎ ಆಸ್ತಿಯ ವಿವರಗಳನ್ನು ಮುಚ್ಚಿಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ಬಿಡಿಎ ಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಿರುವ ಬಡಾವಣೆಗಳಿಗೆ ಭೂಮಿ ನೀಡಿ ಪರಿಹಾರ ಪಡೆದು ಮತ್ತು ಅದೇ ದಾಖಲೆ ಆಧಾರದಲ್ಲಿ ಮತ್ತೊಮ್ಮೆ ಪರಿಹಾರ ತೆಗೆದುಕೊಂಡು ವಂಚನೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪರಿಹಾರ ವಿಚಾರದಲ್ಲಿ ವಂಚನೆ ಮಾಡುವವರಿಗೆ ಸಹಕಾರ ನೀಡುವ ಬಿಡಿಎ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಿ ಶಿಸ್ತುಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದರು. ಇದೇ ವೇಳೆ, ಬದಲಿ ನಿವೇಶನಗಳು, ಖಾಲಿ ಇರುವ ನಿವೇಶನಗಳು ಮತ್ತು ಬಿಡಿಎ ಆಸ್ತಿಯ ವಿವರಗಳನ್ನು ಮುಚ್ಚಿಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಅಲ್ಲದೇ, ಬಿಡಿಎ ಸ್ವಾಧೀನಕ್ಕೆ ಒಳಪಟ್ಟ ಬಡಾವಣೆಗಳಲ್ಲಿ ಅಕ್ರಮವಾಗಿ ಮನೆ ಅಥವಾ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕೊಡುವ ಅಥವಾ ನೋಂದಣಿ ಮಾಡಿಕೊಡುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಶಿಕ್ಷೆಗೆ ಗುರಿಪಡಿಸಲಾಗುತ್ತದೆ…

ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜ್ಯ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ಘೋಷಿಸಿದೆ. ರಾಜ್ಯದ 30 ಜಿಲ್ಲೆಗಳ 5762 ಗ್ರಾಮ ಪಂಚಾಯತಿಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ಡಿಸೆಂಬರ್ 22ರಂದು ಹಾಗೂ ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. ಚುನಾವಣೆ ನಡೆಯಲಿದೆ. ಚುನಾವಣೆ ನಡೆಯಲಿದೆ. ಒಟ್ಟು 92,121 ಸದಸ್ಯರ ಆಯ್ಕೆ ನಡೆಯಲಿದೆ. ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದ್ದು, ಕೋವಿಡ್ ಪಾಸಿಟಿವ್ ಇರುವ ರೋಗಿಗಳಿಗೆ ಮತ ಹಾಕಲು ಕೊನೆಯ ಒಂದು ಗಂಟೆಗೆ ಅವಕಾಶ ಕೊಡಲಾಗುವುದು. ಮತಗಳ ಎಣಿಕೆ ಡಿಸೆಂಬರ್ 30ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಡಿಸೆಂಬರ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೊದಲ ಹಂತದಲ್ಲಿ 113 ತಾಲೂಕುಗಳ…

ಮಂತ್ರಿ ಸ್ಥಾನ; ವಿಶ್ವನಾಥ್ ಕನಸಿಗೆ ತಣ್ಣೀರು, ಶಂಕರ್, ಎಂಟಿಬಿ ನಿರಾಳ

ಬೆಂಗಳೂರು: ಆಪರೇಷನ್ ಕಮಲಕ್ಕೆ ತುತ್ತಾಗಿದ್ದ ಮಾಜಿ ಸಚಿವ ಎಚ್.ವಿಶ್ವನಾಥ್ ಅವರು 2021ರವರೆಗೆ ಮಂತ್ರಿಯಾಗುವುದು ಅನುಮಾನ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಹಳ್ಳಿಹಕ್ಕಿ ಎಚ್.ವಿಶ್ವನಾಥ್ 2021ರವರೆಗೆ ಸಚಿವರಾಗಲು ಅನರ್ಹರು ಎಂದು ಹೈಕೋರ್ಟ್ ಹೇಳಿದೆ. ಎಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನದ ಅವಕಾಶ ನೀಡದಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗಿಯ ಪೀಠ, ಹೆಚ್ ವಿಶ್ವನಾಥ್ ಅವರ ಅನರ್ಹತೆ ಮುಂದುವರಿದಿರುವುದರಿಂದ ಅವರು ಸಚಿವರಾಗಲು ಅನರ್ಹರಾಗಿದ್ದಾರೆ ಎಂದಿದೆ. ವಿಶ್ವನಾಥ್ ಅವರು ವಿಧಾನಸಭಾ ಸದ್ಸ್ಯತ್ವದಿಂದ ಅನರ್ಹರಾಗಿದ್ದಾರೆ. ಅವರು ಒಂದು ವೇಳೆ ಮತ್ತೊಮ್ಮೆ ಚುನಾಯಿತರಾದರೆ ಮಾತ್ರ ಅನರ್ಹತೆಯ ಕಳಂಕದಿಂದ ದೂರವಾಗುತ್ತಾರೆ. ಆದರೆ ಇದೀಗ ಅವರು ವಿಧಾನ ಪರಿಷತ್’ಗೆ ನೇಮಕವಾಗಿದ್ದು ಚುನಾಯಿತ ಸದಸ್ಯರಲ್ಲ. ಹಾಗಾಗಿ ಅವರ ಅನರ್ಹತೆ ಮುಂದುವರಿದಿದೆ ಎಂಬುದು ಅರ್ಜಿದಾರರ ವಾದ. ಈ ವಾದವನ್ನು ಕೋರ್ಟ್ ಪುರಸ್ಕರಿಸಿದೆ. ಆದರೆ ಮೇಲ್ಮನೆ ಸದಸ್ಯರಾಗಿ ಚುನಾಯಿತರಾಗಿರುವ ಆರ್.…

‘ಪೂವರಿ’ ಸಂಸ್ಥಾಪಕ ಸಂಪಾದಕ ವಿಜಯಕುಮಾರ್ ಹೆಬ್ಬಾರಬೈಲ್’ಗೆ ತುಳುವರ ಸೆಲ್ಯೂಟ್

ಮಂಗಳೂರು: ಏಕೈಕ ತುಳು ಮಾಸ ಪತ್ರಿಕೆ ‘ಪೂವರಿ’ಯ ಸಂಸ್ಥಾಪಕ ಹೆಬ್ಬಾರಬೈಲ್ ವಿಜಯಕುಮಾರ್ ಭಂಡಾರಿ ಅವರ ಸನ್ಮಾನ ಸಮಾರಂಭ ಮಂಗಳೂರಿನಲ್ಲಿ ನಡೆಯಿತು. ‘ಪೂವರಿ’ಗೆ ತುಳುವರ ಸೆಲ್ಯೂಟ್ ತುಳುನಾಡಿನ ಜನರ ಅಭಿರುಚಿಯತ್ತ ಬೆಳಕು ಚೆಲ್ಲುವ, ತುಳು ನಾಡು-ನುಡಿಯ ವೈಭವ ಬಗ್ಗೆ ಬೆಳಕು ಚೆಲ್ಲುವ ಸಂಘಟನಾತ್ಮಕ ಶಕ್ತಿಗೆ ವೇದಿಕೆಯಾಗಿ ‘ಪೂವರಿ’ ತುಳು ಪತ್ರಿಕೆಯನ್ನು  ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲ್ ಪ್ರಾರಂಭಿಸಿದ್ದರು. ಇವರ ತುಳು ನಾಡು-ನುಡಿಯ ಕೈಂಕರ್ಯವನ್ನು ಗೌರವಿಸಿ ದಕ್ಷಿಣ ಕನ್ನಡ ಗ್ಯಾರೇಜ್ ಮಾಲೀಕರ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾಹಿತ್ಯ ಕ್ಷೇತ್ರದ ದಿಗ್ಗಜರು, ಹೆಬ್ಬಾರಬೈಲ್ ವಿಜಯಕುಮಾರ್ ಭಂಡಾರಿ ಅವರ ಸಾಹಿತ್ಯ ಕೃಷಿ ಬಗ್ಗೆ ಗುಣಗಾನ ಮಾಡಿದರು. ಹೆಬ್ಬಾರಬೈಲ್ ವಿಜಯಕುಮಾರ್ ಭಂಡಾರಿ ಅವರು ಸಾಹಿತ್ಯ, ಕಲಾ ಸಂಸ್ಕೃತಿಯ ಪ್ರಸಾರಕ. ಅಕ್ಷರ ಮಂತ್ರದ ಮೂಲಕ ತುಳು ಭಾಷಿಗರನ್ನು ಸಂಘಟಿಸುವ ಮಹಾ ಮಾಂತ್ರಿಕ ಎಂದು ಅತಿಥಿಗಳು ಕೊಂಡಾಡಿದರು. ತುಳು ಭಾಷಿಗರ ಪ್ರಾಬಲ್ಯವಿರುವ ದಕ್ಷಿಣಕನ್ನಡ,…

ಕೇಡಿಗಳ ಜೊತೆ ಹೆಣ್ಣಿನ ಸೆಣಸಾಟ; ನಟಿಯ ಸಕತ್ ಫೈಟಿಂಗ್

ಕೇಡಿಗಳ ಜೊತೆ ಹೆಣ್ಣೊಬ್ಬಳು ಯಾವ ರೀತಿ ಫೈಟ್ ಮಾಡಿ ಜಯಿಸಬಹುದು? ಇಲ್ಲಿದೆ ನೋಡಿ ನಟಿಯ ಚಮತ್ಕಾರ. ರಾಮಗೋಪಾಲ ವರ್ಮಾ ನಿರ್ದೇಶನದ ‘ಲಡಕಿ’ ಚಿತ್ರದಲ್ಲಿ ಪೂಜಾ ಬಾಲೆಕರ್ ಫೈಟಿಂಗ್ ಗಮನ ಸೆಳೆದಿದೆ. ಈ ಸಿನಿಮಾದ ವೀಡಿಯೋ ಸಾಂಗ್ ಬಿಡುಗಡೆಯಾಗಿದ್ದು ಹೊಡೆದಾಟದ ದೃಶ್ಯಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದಲ್ಲಿ ಇನ್ನೂ ದೂರವಾಗಿಲ್ಲ ಕೊರೋನಾ ಆತಂಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕಿನ ಪ್ರಮಾಣ ಕಡಿಮೆಯಾದಂತಿಲ್ಲ. ಶನಿವಾರ ರಾಜ್ಯದಲ್ಲಿ 1522 ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರವೊಂದರಲ್ಲೇ ೭೧೯ ಪಾಸಿಟಿವ್ ಕೇಸುಗಳು ಶನಿವಾರ ದೃಢಪಟ್ಟಿದೆ.  ಈ ನಡುವೆ ಒಟ್ಟು 24757 ಸಕ್ರಿಯ ಪ್ರಕರಣಗಳಿದ್ದು, 2133 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ವೇಳೆ, ಸೋಂಕಿನಿಂದ ಶನಿವಾರ 12 ಮಂದಿ ಮೃತಪಟ್ಟಿದ್ದಾರೆ. ಇಂದಿನವರೆಗೆ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 11750. ಕೋವಿಡ್-19 ಖಚಿತ ಪ್ರಕರಣಗಳ ಸಂಖ್ಯೆ 882608. ಸೋಂಕಿನ ಶೇಕಡಾವಾರು ಪ್ರಮಾಣ ಶೇ. 1. 37 ಆದರೆ ಸೋಂಕಿನಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ. 0.78. ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಆ.ಸುಧಾಕರ್, ರಾಜ್ಯದಲ್ಲಿ ಶನಿವಾರ 1,522 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 2,133 ಜನ ಗುಣಮುಖ ಹೊಂದಿದ್ದಾರೆ. ಶನಿವಾರ 1,10,724 ಟೆಸ್ಟ್ ನಡೆಸಲಾಗಿದ್ದು, ಅವುಗಳಲ್ಲಿ 97,724 (83.74%) RT-PCR ಟೆಸ್ಟ್ ಆಗಿವೆ. ಈವರೆಗೂ…

ಡಿ.14, 15ರಂದು ವಿಧಾನಸಭೆಯಲ್ಲಿ ‘ಒಂದು ರಾಷ್ಟ್ರ-ಒಂದು ಚುನಾವಣೆ’ ಚರ್ಚೆ

ಬೆಂಗಳೂರು: ಒಂದು ರಾಷ್ಟ್ರ-ಒಂದು ಚುನಾವಣೆ ವಿಷಯ ಕುರಿತು ಎರಡು ದಿನಗಳ ಕಾಲ ವಿಧಾನಸಭೆಯಲ್ಲಿ ವಿಶೇಷ ಚರ್ಚೆ ನಡೆಯಲಿದೆ. ಡಿಸೆಂಬರ್ 14 ಮತ್ತು 15ರಂದು ರಾಜ್ಯ ವಿಧಾನಸಭೆಯಲ್ಲಿ ಈ ಚರ್ಚೆ ನಡೆಯಲಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇರಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದ್ದಾರೆ. ಡಿಸೆಂಬರ್ 07 ರಿಂದ 15 ರ ವರೆಗೆ ನಡೆಯಲಿರುವ 15 ನೇ ವಿಧಾನಸಭೆಯ ಎಂಟನೇ ಅಧಿವೇಶನದ ಮುಖ್ಯಾಂಶಗಳ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರ ಒದಗಿಸಿದ ಅವರು, ನವೆಂಬರ್ 25 ಮತ್ತು 26 ರಂದು ಗುಜರಾತ್ ನ ಕೆವಾಡಿಯಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 80ನೇ ಅಖಿಲ ಭಾರತ ಪೀಠಾಸೀನ ಅಧಿಕಾರಿಗಳ ಸಮ್ಮೇಳನದಲ್ಲಿ ಪ್ರಸ್ತಾಪಿಸಿದ ಒಂದು ರಾಷ್ಟ್ರ-ಒಂದು ಚುನಾವಣೆ ಕುರಿತ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಭಾರತದಲ್ಲೇ ಪ್ರಪಥಮವಾಗಿ ಈ ವಿಷಯವನ್ನು ಸದನದಲ್ಲಿ ಸಮಗ್ರವಾಗಿ ಚರ್ಚಿಸಿ ಚಿಂತನ-ಮಂಥನ ನಡೆಸಲು ತೀರ್ಮಾನಿಸಲಾಗಿದೆ ಎಂದರು. ಒಂದು ರಾಷ್ಟ್ರ-ಒಂದು ಚುನಾವಣೆ ಕುರಿತ ಎಲ್ಲಾ…

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಘಟಿಕೋತ್ವವ

ಬೆಂಗಳೂರು: ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕವೂ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕಾರಣವಾಗಬೇಕು. ಇದು ಅತೀ ಜರೂರಿನ ಕಾರ್ಯ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಕರೆ ನೀಡಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಶನಿವಾರ ನಡೆದ 54ನೇ ಘಟಿಕೋತ್ವವದಲ್ಲಿ ಪದವಿದಧರು, ಸ್ನಾತಕೋತ್ತರ ಪದವಿಧರರು, ಪಿ.ಎಚ್.ಡಿ. ಪಡೆದವರಿಗೆ ಪದವಿಗಳನ್ನು ಪ್ರದಾನ ಮಾಡಿದ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿಯೂ ಆಗಿರುವ ಸಚಿವ ಬಿ.ಸಿ. ಪಾಟೀಲ್, ರಾಜ್ಯದಲ್ಲಿ ಆರು ಕೃಷಿ ವಿಶ್ವವಿದ್ಯಾಲಯಗಳಿವೆ. ಇವುಗಳು ಪ್ರತಿವರ್ಷ ತಲಾ ನಾಲ್ಕು ಹಳ್ಳಿಗಳನ್ನು ದತ್ತು ಪಡೆದುಕೊಂಡು ಅಲ್ಲಿಯ ಕೃಷಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಬೇಕಿದೆ ಎಂದರು. ಕಳೆದ ಇಪ್ಪತ್ತು ವರ್ಷಗಳಿಂದ ರಾಜ್ಯದ ಕೃಷಿ ಇಲಾಖೆಯ ವೃಂದ – ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿಯಾಗಿರಲಿಲ್ಲ. ನಾನು ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದರ ಬಗ್ಗೆ ಆಸಕ್ತಿ ವಹಿಸಿದೆ. ಅದು ಇತ್ತೀಚೆಗೆ ತಿದ್ದುಪಡಿಯಾಗಿದೆ. ಆಹಾರ ಮತ್ತು…

Uncategorized

ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯ ನೀಡದಿದ್ದಲ್ಲಿ ಉಗ್ರ ಹೋರಾಟ; ಕಾಗಿನೆಲೆ ಶ್ರೀ

ಬೆಳಗಾವಿ : ಕುರುಬ ಸಮುದಾಯಕ್ಕೆ ಎಸ್‍ಟಿ ಸೌಲಭ್ಯ ನೀಡದಿದ್ದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂಬ ಸ್ಪಸಂದೇಶವನ್ನು ಪರೋಕ್ಷವಾಗಿ ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ರವಾನಿಸಿದ್ದಾರೆ. ಬೆಳಗಾವಿಯಲ್ಲಿ ಹಾಲುಮತ ಸಮಾಜದ ಮೂಲ ಗುರುಮಠಗಳ, ಗುರು ಪೀಠಗಳಲ್ಲಿರುವ ಒಡೆಯರ್’ಗಳ, ಗುರುವಿನವರ, ತಾತಗಳ ಮಹತ್ವದ ಸಭೆ ಶನಿವಾರ ನಡೆಯಿತು. ಈ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು. ಸಭೆಯಲ್ಲಿ ಮಾತನಾಡಿದ ಕಾಗಿನೆಲೆಯ ನಿರಂಜನಾನಂದಪುರಿ ಸ್ವಾಮೀಜಿ, ಈಗಾಗಲೇ ಸಮಾಜದ ಮುಖಂಡರ ನೇತೃತ್ವದಲ್ಲಿ ಕೇಂದ್ರ ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೇವೆ. ಜೊತೆಗೆ ಬೇಡಿಕೆ ಈಡೇರಿಕೆಗಾಗಿ ಹಂತ ಹಂತವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು. ಜನವರಿ 15ರಂದು ಸೂರ್ಯ ತನ್ನ ದಿಕ್ಕನ್ನು ಬದಲಾಯಿಸುವ ಸಂಕ್ರಮಣ ದಿನ, ಆ ದಿನವೇ ಕುರುಬರ ದಿಕ್ಕನ್ನು ಬದಲಾಯಿಸಲಿ ಎಂಬ ಆಲೋಚನೆ ಇಟ್ಟುಕೊಂಡು ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಸುಮಾರು 340 ಕಿ.ಮಿ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು…