ಬೆಂಗಳೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಏನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ನಡೆದಿದೆ. ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದ ಎರಡನೆಯ ಮಹಡಿಯಲ್ಲಿ ನಿದ್ರೆ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ತಕ್ಷಣ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ ಪ್ರಾಣಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.
Year: 2020
‘ಪೊಗರು’ ಬಿಡುಗಡೆಗೆ ದಿನಾಂಕ ಫಿಕ್ಸ್
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪೊಗರು’ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಈ ಚಿತ್ರವನ್ನು ಬಿಡುಗಡೆ ಮಾಡಲು ನಿರ್ದೇಶಕ ನಂದಾ ಕಿಶೋರ್ ಎರಡು ದಿನಾಂಕಗಳನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ. ಡಿಸೆಂಬರ್ 25 ಅಥವಾ ಜನವರಿ 14ರಂದು ಬಿಡುಗಡೆ ಮಾಡಲು ಉದ್ದೇಶಿಸಿದ್ದೇನೆ ಎಂದು ನಂದಾ ಕಿಶೋರ್ ತಿಳಿಸಿದ್ದಾರೆ. ಬಿ.ಕೆ.ಗಂಗಾಧರ್ ನಿರ್ಮಿಸಿರುವ ಪೊಗರು’ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ.
‘ದುರ್ಗಮತಿ ದಿ ಮೈತ್’ ಕುತೂಹಲ
ಬಾಲಿವುಡ್’ನಲ್ಲಿ ಹೊಸ ಸಿನಿಮಾಗಳಿಗೆ ಚೈತನ್ಯ ಸಿಕ್ಕಿದೆ. ಅದರಲ್ಲೂ ಭೂಮಿ ಪೆಡ್ನೆಕರ್ ಮತ್ತು ಅರ್ಷದ್ ವಾರ್ಸಿ ಅಭಿನಯದ ‘ದುರ್ಗಮತಿ ದಿ ಮೈತ್’ ಚಿತ್ರ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಅಶೋಕ್ ನಿರ್ದೇಶಿಸಿರುವ ‘ದುರ್ಗಮತಿ ದಿ ಮೈತ್’ ದ ಟ್ರೈಲರ್ ಬಿಡುಗಡೆಯಾಗಿದ್ದು ಸಿನಿಮಾ ಪ್ರೇಮಿಗಳ ಮೆಚ್ಚುಗೆ ಗಳಿಸುವಲ್ಲೂ ಯಾಹ್ಯಾಸ್ವಿಯಾಗಿದೆ.
ಶಿವಣ್ಣ ಪುತ್ರಿ ನಿವೇದಿತ ಅವರಿಗೆ ‘ಹನಿಮೂನ್’ ವಿಸ್ವಾಸ
ಕನ್ನಡ ಚಿತ್ರರಂಗದಲ್ಲೀಗ ಚೇತರಿಕೆ ಕಂಡುಬಂದಿದೆ. ರಾಜ್ ಕುಟುಂಬದ ಕುವರಿ ನಿವೇದಿತಾ ಹೆಸರೂ ಇದೀಗ ಸುದ್ದಿಯಲ್ಲಿದೆ. ಡಾ. ಶಿವರಾಜ್ ಕುಮಾರ್ ರವರ ಪುತ್ರಿ ನಿವೇದಿತ ಶಿವರಾಜ್ ಕುಮಾರ್ ಹಾಗೂ ಸಕ್ಕತ್ ಸ್ಟುಡಿಯೊ ಸಹನಿರ್ಮಾಣದ ವೆಬ್ ಸರಣಿ ಹನಿಮೂನ್ ಟ್ರೈಲರ್ ಬಿಡುಗಡೆಯಾಗಿದೆ.ಈ ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಸಕತ್ ಲೈಕ್ ಗಿಟ್ಟಿಸಿಕೊಳ್ಳುತ್ತಿದೆ.
ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ; ಐವರ ಸಾವು
ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ಐವರು ಸಾವನ್ನಪ್ಪಿದ ಘಟನೆ ಕಳೆದ ಮಧ್ಯ ರಾತ್ರಿ ರಾಜ್ ಕೋಟ್ ಬಳಿ ಸಂಭವಿಸಿದೆ. ಗುಜರಾತ್ ನ ರಾಜ್ ಕೋಟ್ ಜಿಲ್ಲೆಯ ಉದಯ್ ಶಿವಾನಂದ್ ಕೋವಿಡ್ಆಸ್ಪತ್ರೆಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಮುಖ್ಯಮಂತ್ರಿ ವಿಜಯ್ ರೂಪಾಣಿ ತನಿಖೆಗೆ ಆದೇಶಿಸಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎನ್‍ಟಿಎಸ್ ಸ್ಕಾಲರ್‍ಶಿಪ್ ಪರೀಕ್ಷೆ: ಸುರೇಶ್ ಕುಮಾರ್
ಬೆಂಗಳೂರು: ಎನ್‍ಸಿಇಆರ್‍ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕ್ಯು.ಎಸ್.ಕ್ಯು.ಎ..ಎ.ಸಿ. ವತಿಯಿಂದ ನಡೆಸಲಾಗುವ ಎನ್‍ಟಿಎಸ್ ಮೊದಲನೇ ಹಂತದ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ವರ್ಷದಲ್ಲಿ 10ನೇ ತರಗತಿಯಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ತೆಗೆದುಕೊಳ್ಳಬಹುದಾಗಿದ್ದು, ಪರೀಕ್ಷೆ 2021ನೇ ಜನವರಿ 24ರಂದು ನಡೆಯಲಿದೆ. ವಿದ್ಯಾರ್ಥಿವೇತನ ಪಡೆಯುವ ಹಿನ್ನೆಲೆಯಲ್ಲಿ ನಡೆಯುವ ಈ ಪರೀಕ್ಷೆಯನ್ನು ಹೆಚ್ಚಿನ ವಿದ್ಯಾರ್ಥಿಗಳು ತೆಗೆದುಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೆಯೇ ದೂರಶಿಕ್ಷಣದಲ್ಲಿ ಅಭ್ಯಸಿಸುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಈ ಕುರಿತು ಪರೀಕ್ಷೆ ಕುರಿತು ಯಾವುದೇ ಗೊಂದಲವಿಲ್ಲದೇ ಪರೀಕ್ಷೆ ಅರ್ಜಿ ಭರ್ತಿ ಮಾಡಲು ಕೆಎಸ್‍ಇಇಬಿ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ ಶಾಲೆಗಳ ಮುಖ್ಯೋಪಾಧ್ಯಾಯರು kseeb.kar.nic.in ವೆಬ್‍ಸೈಟ್ ಮೂಲಕ ಲಾಗಿನ್ ಆಗಿ ಎನ್‍ಟಿಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು…
ಅಹಮದ್ ಪಟೇಲ್ಸಂಸ್ಕಾರದಲ್ಲಿ ಡಿ.ಕೆ.ಶಿ, ಯು.ಟಿ.ಖಾದರ್ ಭಾಗಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಜರಾತ್ ನ ಭರೂಚ ಜಿಲ್ಲೆಯ ಪಿರಮಾಣ್ ಗ್ರಾಮದಲ್ಲಿ ಹಿರಿಯ ಕಾಂಗ್ರೆಸ್ ಮಖಂಡ ದಿವಂಗತ ಅಹಮದ್ ಪಟೇಲ್ ಅವರ ಪಾರ್ಥೀವ ಶರೀರದ ಮೆರವಣಿಗೆ ಹಾಗೂ ಅಂತಿಮ ಸಂಸ್ಕಾರದಲ್ಲಿ ಗುರುವಾರ ಪಾಲ್ಗೊಂಡರು. ಇದಕ್ಕೂ ಮೊದಲು ಅಹಮದ್ ಪಟೇಲ್ ಅವರ ನಿವಾಸಕ್ಕೆ ಭೇಟಿ ನೀಡಿ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಎಐಸಿಸಿ ಮುಖಂಡ ರಾಹುಲ್ ಗಾಂಧಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವ ಯು.ಟಿ. ಖಾದರ್ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.
ಅಹಮದ್ ಪಟೇಲ್ ಅವರ ಕುಟುಂಬದ ಸದಸ್ಯರಿಗೆ ರಾಹುಲ್, ಡಿಕೆಶಿ
ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಜರಾತ್ ನ ಭರೂಚ ಜಿಲ್ಲೆಯ ಪಿರಮಾಣ್ ಗ್ರಾಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ, ದಿವಂಗತ ಅಹಮದ್ ಪಟೇಲ್ ಅವರ ನಿವಾಸಕ್ಕೆ ಗುರುವಾರ ತೆರಳಿ, ಅಹಮದ್ ಪಟೇಲ್ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಅರ್ಕಾವತಿ, ಕೆಂಪೇಗೌಡ ಬಡಾವಣೆ; ಶೀಘ್ರ ನಿವೇಶನ ಹಂಚಿಕೆ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ ನೀಡುವುದಾಗಿ ಬಿಡಿಎ ನೂತನ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ. ಗುರುವಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಕೆಲವು ಭ್ರಷ್ಟ ಅಧಿಕಾರಿಗಳಿಂದ ಸಂಸ್ಥೆಗೆ ಕಪ್ಪು ಚುಕ್ಕೆ ಬಂದಿದೆ. ಇದನ್ನು ತೊಡೆದು ಹಾಕುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನಗೆ ನೀಡಿದ್ದಾರೆ ಎಂದರು. ಈ ನಿಟ್ಟಿನಲ್ಲಿ ಸಂಸ್ಥೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ಜನಸ್ನೇಹಿಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು. ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗದೇ ಏನಾದರೂ ಸಮಸ್ಯೆಗಳಿದ್ದರೆ ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು ಎಂದರು. ಈಗಾಗಲೇ ಹಣ ನೀಡಿರುವ ಸಾರ್ವಜನಿಕರಿಗೆ ಅರ್ಕಾವತಿ ಮತ್ತು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು. ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ದಿಸೆಯಲ್ಲಿ ರೈತರ ಮನವೊಲಿಸಿ ಭೂಸ್ವಾಧೀನ ಮಾಡಿಕೊಳ್ಳಲಾಗುವುದು ಎಂದರು. ನಗರದ ಸಂಚಾರ…
ಬಳ್ಳಾರಿ ಗಣಿಬಾಧಿತ ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರು
ಬೆಂಗಳೂರು, ನವೆಂಬರ್ 26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಳ್ಳಾರಿ ಜಿಲ್ಲೆಯ ಪಾಪಿನಾಯಕನಹಳ್ಳಿ ಮತ್ತು ಇತರೆ ಗಣಿಬಾಧಿತ 10 ಗ್ರಾಮಗಳಿಗೆ ತುಂಗ ಭದ್ರಾ ನದಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸುವ ಮತ್ತು 23 ಕೆರೆಗಳನ್ನು ತುಂಬಿಸುವ ಯೋಜನೆಯ ವರ್ಚುಯಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಂಕುಸ್ಥಾಪನೆ ನೆರೆವೇರಿಸಿದರು.
