ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆ ವತಿಯಾ ದ ವಿಶ್ವ ಪರಂಪರೆ ಸಪ್ತಾಹ ಅಂಗವಾಗಿ ಬೆಂಗಳೂರು ವಲಯದ ಸಂರಕ್ಷಿತ ಸ್ಮಾರಕಗಳ ವಿವರಣಾ ಪುಸ್ತಕ “ಕಲಾ ವೈಭವ” ವನ್ನು ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ದಲ್ಲಿ ಬಿಡುಗಡೆ ಮಾಡಿದರು. ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಮ್. ಪಿ.ರೇಣುಕಾಚಾರ್ಯ,ಶಂಕರ್ ಪಾಟೀಲ್, ಶಾಸಕರಾದ ಕುಮಾರ್ ಬಂಗಾರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Year: 2020
ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ.ಅಶ್ವತ್ಥನಾರಾಯಣ ಘೋಷಣೆ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್ ಸಮ್ಮಿಟ್ (ಬಿಟಿಎಸ್)-2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‌ವಷ್ಟು ಡಿಜಿಟಲ್ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದರು. ಪ್ರಧಾನಮಂತ್ರಿ ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್ ಡಿಜಿಟಲ್ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ…
ಸಾವಿರ ದಿನಗಳಲ್ಲಿ 6 ಲಕ್ಷ ಕಿ.ಮೀ. ಆಪ್ಟಿಕ್ ಫೈಬಲ್ ಜಾಲ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್
ಬೆಂಗಳೂರು: ಡಿಜಿಟಲ್ ತಾಂತ್ರಿಕತೆಯ ಬೆಳವಣಿಗೆಗೆ ಪೂರಕವಾಗಿ ಮೂಲಸೌಕರ್ಯ ಕಲ್ಪಿಸಲು ಒತ್ತು ನೀಡಿರುವ ಕೇಂದ್ರ ಸರ್ಕಾರವು 1000 ದಿನಗಳಲ್ಲಿ 6 ಲಕ್ಷ ಕಿ.ಮೀ. ಉದ್ದದಷ್ಟು ಆಪ್ಟಿಕ್ ಫೈಬರ್ ಕೇಬಲ್ ಜಾಲ ನಿರ್ಮಿಸಲು ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ಹೇಳಿದರು. ಮೂರು ದಿನಗಳ ಕಾಲ ನಡೆಯಲಿರುವ ದೇಶದ ಮಹತ್ವದ ತಾಂತ್ರಿಕ ಕಾರ್ಯಕ್ರಮವಾದ “ಬೆಂಗಳೂರು ತಂತ್ರಜ್ಞಾನ ಮೇಳ-2020’ ದ (23ನೇ ಆವೃತ್ತಿ) ಉದ್ಘಾಟನಾ ಕಾರ್ಯಕ್ರಮದಲ್ಲಿ ವರ್ಚ್ಯುಯಲ್ ಆಗಿ ಪಾಲ್ಗೊಂಡು ಅವರು ಮಾತನಾಡಿದರು. ಕೋವಿಡ್ ಸಂದರ್ಭವು ಒಂದೆಡೆ ನಮಗೆ ಸಂಕಷ್ಟವನ್ನು ತಂದೊಡ್ಡಿತು. ಮತ್ತೊಂದೆಡೆ, ಇಲ್ಲಿನ ಡಿಜಿಟಲ್ ತಂತ್ರಜ್ಞಾನ ಪರ್ಯಾವರಣವು ಹೊಸ ಅವಕಾಶಗಳನ್ನು ಸೃಷ್ಟಿಸಿತು. ಜಾಗತಿಕ ತಯಾರಿಕಾ ಕಂಪನಿಗಳು ಕೋವಿಡ್ ಸನ್ನಿವೇಶದಲ್ಲಿ ಭಾರತದೆಡೆಗೆ ಧಾವಿಸಿಬಂದಿವೆ. ಕೋವಿಡ್ ಅವಧಿಯಲ್ಲಿ ದೇಶದ ಮಾಹಿತಿ ತಂತ್ರಜ್ಞಾನ ವಲಯವು ಶೇ 7ರಷ್ಟು ಬೆಳವಣಿಗೆ ಕಂಡಿದೆ.…
ಭಾರತದ ತಂತ್ರಜ್ಞಾನ ಪರಿಹಾರಗಳನ್ನು ವಿದೇಶಗಳಿಗೆ ತಲುಪಿಸಲು ಇದು ಸಕಾಲ- ನರೇಂದ್ರ ಮೋದಿ
ಬೆಂಗಳೂರು: ಭಾರತದಲ್ಲಿ ಅಭಿವೃದ್ಧಿಪಡಿಸಲಾದ ತಂತ್ರಜ್ಞಾನ ಪರಿಹಾರಗಳನ್ನು ಜಗತ್ತಿನ ಬೇರೆ ದೇಶಗಳಿಗೆ ತಲುಪಿಸಲು ಇದು ಸೂಕ್ತ ಸಮಯವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಇದೇ ಮೊತ್ತಮೊದಲ ಬಾರಿಗೆ ವರ್ಚ್ಯುಯಲ್ ಆಗಿ ನಡೆಯಲಿರುವ ಮೂರು ದಿನಗಳ “ಬೆಂಗಳೂರು ತಂತ್ರಜ್ಞಾನ ಮೇಳ” (ಬಿಟಿಎಸ್-2020)ವನ್ನು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. “ಡಿಜಿಟಲ್ ಇಂಡಿಯಾ” ಎಂಬುದು ಈಗ ಕೇವಲ ಸರ್ಕಾರದ ಅಭಿಯಾನವಾಗಿ ಉಳಿದಿಲ್ಲ. ಇದು ಬದುಕಿನ ರೀತಿಯೇ ಆಗಿ ಹೋಗಿದೆ. ಡಿಜಿಟಲ್ ತಂತ್ರಜ್ಞಾನವು ಜನರಿಗೆ ಪಾರದರ್ಶಕ ರೀತಿಯಲ್ಲಿ ತ್ವರಿತವಾಗಿ ಸೇವೆಗಳನ್ನು ತಲುಪಿಸಲು ಅನುವು ಮಾಡಿಕೊಡುತ್ತಿದೆ. ವಿಶೇಷವಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ, ನಿರ್ಲಕ್ಷಿತ ಸಮುದಾಯಗಳಿಗೆ ಹಾಗೂ ಸರ್ಕಾರಗಳಿಗೆ ಹೆಚ್ಚಿನ ಅನುಕೂಲವಾಗಿದೆ. ಇದಕ್ಕಾಗಿ ನಾವು “ಡಿಜಿಟಲ್ ಇಂಡಿಯಾ”ಗೆ ಧನ್ಯವಾದ ಸಲ್ಲಿಸಬೇಕು ಎಂದು ಅಭಿಪ್ರಾಯಪಟ್ಟರು. ಕೋವಿಡ್ ಸೋಂಕಿನ ಸನ್ನಿವೇಶದಲ್ಲಿ ರೂಢಿಗೆ ಬಂದ “ಎಲ್ಲಿಂದಾದರೂ ಕೆಲಸ ಮಾಡಿ” ಎಂಬ ಪರಿಕಲ್ಪನೆಯು ಇನ್ನು ಮುಂದೆಯೂ ಉಳಿದುಕೊಳ್ಳಲಿದೆ.…
ಬಲವಂತದಿಂದ ಬಂದ್ ನಡೆಸಿದರೆ ಕಠಿಣ ಕ್ರಮ; ಸಿಎಂ ಖಡಕ್ ಎಚ್ಚರಿಕೆ
ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್’ಗೆ ಕರೆ ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಲವಂತದಿಂದ ಬಂದ್ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮರಾಠಿಗರು ಸಹ ನಮ್ಮ ರಾಜ್ಯದ ಕನ್ನಡಿಗರೇ ಎಂದು ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಮರಾಠಾ ಅಭಿವೃದ್ಧಿಗಾಗಿ ಮಾಡಿರುವ ಪ್ರಾಧಿಕಾರ. ಮರಾಠಿಗರು ಕೂಡ ಕಟ್ಟಾ ಹಿಂದುತ್ವ ವಾದಿಗಳು. ಬೆಳಗಾವಿಯ ವಿಶ್ವಸಮ್ಮೇಳನದಲ್ಲೂ ಅವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಎಂದ ಯಡಿಯೂರಪ್ಪ, ಸರ್ಕಾರ ಮರಾಠಾ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡುತ್ತಿದೆಯೇ ವಿನಃ ಬೇರೆ ಯಾವುದೋ ಕಾರಣಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಬಲವಂತದಿಂದ ಬಂದ್ ನಡೆಸಿದರೆ ಕಟ್ಟುನಿಟ್ಟಿನ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಏನೇ ಹೇಳು ಮಮ್ಮಿ ನಾನು ಆಗೋದೇ ಲವ್ ಮ್ಯಾರೇಜ್ ಮಮ್ಮಿ
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಟಿಸುತ್ತಿರುವ ತ್ರಿವಿಕ್ರಮ ಚಿತ್ರ ಇದೀಗ ಸ್ಸದ್ದಾಗುತ್ತಿದೆ. ಈ ಚಿತ್ರದ ‘ಮಮ್ಮಿ ಪ್ಲೀಸ್ ಮಮ್ಮಿ’ ಹಾಡು ಯುವಾ ಜನಾರನ್ನು ರಂಜಿಸುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡಿಗೆ ಸಕತ್ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್’ಗೆ ಮೋದಿ ಅಭಿನಂದನೆ
ದೆಹಲಿ: ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಳ್ಳಲಿರುವ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ತಾವು ಅಮೆರಿಕಾ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅವರಿಗೆ ಕರೆ ಮಾಡಿ ಶುಭ ಹಾರೈಸಿರುವುದಾಗಿ ಹೇಳಿಕೊಂಡಿದ್ದಾರೆ. ಕಮಲಾ ಹ್ಯಾರಿಸ್ಗೂ ಕೂಡ ಮೋದಿ ಶುಭಾಶಯ ತಿಳಿಸಿದ್ದಾರೆ. Spoke to US President-elect @JoeBiden on phone to congratulate him. We reiterated our firm commitment to the Indo-US strategic partnership and discussed our shared priorities and concerns – Covid-19 pandemic, climate change, and cooperation in the Indo-Pacific Region. — Narendra Modi (@narendramodi) November 17, 2020
ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಸಮರ; ಡಿ.5ರಂದು ಕರ್ನಾಟಕ ಬಂದ್?
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ರಾಜ್ಯ ಸರ್ಕಾರದ ವಿರುದ್ಧ ಕೆರಳಿರುವ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್’ಗೆ ಕರೆ ನೀಡುವ ಎಚ್ಚರಿಕೆ ನೀಡಿವೆ. ಮರಾಠರಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚಿಸಿ 50 ಕೋಟಿ ರೊಪಾಯಿ ಅನುದಾನ ಘೋಷಿಸಿರುವ ಸರ್ಕಾರದ ತೀರ್ಮಾನ ವಿರುದ್ಧ ಕನ್ನಡ ಪರ ಸಂಘಟನೆಗಳು ಕೆಲವು ದಿನಗಳಿಂದ ಪ್ರಟಿಭಟನೆ ನಡೆಸುತ್ತಿವೆ. ಇದೀಗ ಈ ತೀರ್ಮಾನವನ್ನು ಹಿಂಪಡೆಯಲು ನವೆಂಬರ್ 27ರ ಗಡುವು ನೀಡಿರುವ ಕನ್ನಡ ಸಂಘಟನೆಗಳು, ಸರ್ಕಾರ ನಿರ್ಧಾರ ಹಿಂಪಡೆಯದೇ ಹೋದರೆ ಡಿ.5ರಂದು ಕರ್ನಾಟಕ ಬಂದ್ ನಡೆಸುವ ಚಿಂತನೆ ನಡೆಸಿವೆ. ಈ ಬಗ್ಗೆ ಹೇಳಿಕೆ ನೀಡಿರುವ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಮರಾಠಿಗರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಲು ಮುಂದಾಗಿರುವುದು ಕನ್ನಡಿಗರ ಅಳಿವು ಉಳಿವಿನ ಪ್ರಶ್ನೆಯಾಗಿದೆ. ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಯಾದರೆ ಕನ್ನಡಿಗರಿಗೆ ಅಂತ್ಯ ಹಾಡಿದಂತೆ ಎಂದು ಹೇಳಿದ್ದಾರೆ. ನವೆಂಬರ್…
ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆ; ಸಿಎಂಗೆ ಸ್ವಾಮೀಜಿಗಳ ಅಭಿನಂದನೆ
ಬೆಳಗಾವಿ: ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆಯಾಗಬೇಕೆಂದು ಬಹುವರ್ಷಗಳ ಬೇಡಿಕೆಯಾಗಿತ್ತು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಐತಿಹಾಸಿಕ ನಿರ್ಣಯ ತೆಗೆದುಕೊಂಡಿರುವುದು ತುಂಬಾ ಸಂತಸ ತಂದಿದೆ ಎಂದು ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಈ ನಿಗಮ ಹೆಚ್ಚಿನ ಆಧ್ಯತೆ ನೀಡಿ ಅವರಿಗೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಲಿ ಎಂದು ಶ್ರೀಗಳು ಶುಭಹಾರೈಸಿದ್ದಾರೆ.
ಜಮೀನು ಅಕ್ರಮ ಮಂಜೂರು ಆರೋಪ; ತಹಸೀಲ್ದಾರ್ ವಿರುದ್ಧ ರೈತರ ಪ್ರತಿಭಟನೆ
ತುಮಕೂರು: ಕೊರಟಗೆರೆ ತಾಲ್ಲೂಕು ದಂಡಾಧಿಕಾರಿಯನ್ನು ಕೂಡಲೇ ವಜಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೊರಟಗೆರೆ ತಾಲ್ಲೂಕಿನ ತಹಸೀಲ್ದಾರರು ತಾಲೂಕಿನನಾದ್ಯಂತ ನೀಡಿರುವ ಅಕ್ರಮ ಸಾಗುವಳಿಗಳನ್ನು ಪತ್ತೆ ಮಾಡಿ ಕೂಡಲೆ ವಜಾ ಮಾಡಬೇಕೆಂದು ತಾಲ್ಲೂಕು ರೈತಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಆಗ್ರಹಿಸಿ ಈ ಪ್ರತಿಭಟನೆ ನಡೆಸಿದರು. ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ, ಅಕ್ಕಾಜಿಹಳ್ಳಿ ಸ. ನಂ 33ರ ಜಮೀನಿನಲ್ಲಿ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿರುವದನ್ನು ಖಂಡಿಸಿ ತಹಸೀಲ್ದಾರ್ ಹಾಗೂ ಕಂದಾಯ ನಿರೀಕ್ಷಕ ಹಾಗೂ ಗ್ರಾಮಲೆಕ್ಕಿಗರನ್ನು ಕೂಡಲೆ ಅಮಾನತು ಮಾಡಬೇಕು. ಮತ್ತು ಬೆಂಗಳೂರಿನಿಂದ ಬಂದ ಹೊರಗಡೆ ಜನರಿಗೆ ನೀಡಿರುವ ಸಾಗುವಳಿ ಪತ್ರ ವನ್ನು ಕೊಡಲೇ ರೈತರರಿಗೆ ಕೊಡಬೇಕು ಎಂದು ತಾಲ್ಲೂಕು ಅಧ್ಯಕ್ಷ ಸಿದ್ದರಾಜು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
