ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ಮಾದರಿ ಪಾರಂಪರಿಕ ಗ್ರಾಮವನ್ನು ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಉಪಸ್ಥಿತರಿದ್ದರು.
Year: 2020
ಎಲ್ಲರ ಗಮನ ಕೇಂದ್ರೀಕರಿಸುತ್ತಿರುವ ‘ಗಮನಂ’
ಬಹುಭಾಷಾ ಚಿತ್ರ “ಗಮನಂ” ಕನ್ನಡ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು ಮಾಡುತ್ತಿದೆ. ಶ್ರೀಯಾ ಶರಣ್ ಹಾಗೂ ನಿತ್ಯಾ ಮೆನನ್ ಅಭಿನಯದ “ಗಮನಂ” ಕನ್ನಡ ಟ್ರೇಲರನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡಿದ್ದರು. ಸುಜನಾ ರಾವ್ ನಿರ್ದೇಶಿಸಿರುವ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಇಳಯರಾಜ ಅವರ ಹಿನ್ನೆಲೆ ಸಂಗೀತದ ಥಳುಕು ಎಲ್ಲರ ಗಮನ ಕೇಂದ್ರೀಕರಿಸುವಂತೆ ಮಾಡಿದೆ.
ರಾಜ್ಯದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ಮಂಜೂರಾತಿ
ಹಾವೇರಿ: ಉತ್ತಮ ಆರೋಗ್ಯ ಸೇವೆ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದ್ದು, ಹಾವೇರಿಯಲ್ಲಿ ‘ಆರೋಗ್ಯ ನಗರ’ವನ್ನು ನಿರ್ಮಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಹಾವೇರಿಯಲ್ಲಿ 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡದ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೀಡಿಯೋ ಮೂಲಕ ಚಾಲನೆ ನೀಡಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, “ರಾಜ್ಯದಲ್ಲಿ ಇದೇ ವರ್ಷ 4 ಮೆಡಿಕಲ್ ಕಾಲೇಜುಗಳನ್ನು ಮಂಜೂರು ಮಾಡಲಾಗಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಯಾದಗಿರಿ, ಹಾವೇರಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳ ನಿರ್ಮಾಣ ಪ್ರಕ್ರಿಯೆ ಶುರುವಾಗಿದೆ. ಹಾವೇರಿಯಲ್ಲಿ ಹೊಸ ಕಾಲೇಜು ಆವರಣದಲ್ಲಿ ಎಲ್ಲ ಬಗೆಯ ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದ್ದು, ಹೆಚ್ಚು ಸಂಖ್ಯೆಯ ವೈದ್ಯರು ಆರೋಗ್ಯ ಕ್ಷೇತ್ರಕ್ಕೆ ಸಿಗಲಿದ್ದಾರೆ. ಇದರಿಂದ ಹಾವೇರಿಯಲ್ಲಿ ಆರೋಗ್ಯ ನಗರ ನಿರ್ಮಾಣವಾಗಲಿದೆ” ಎಂದರು. “ಕಳೆದ 6 ವರ್ಷಗಳ ಪ್ರಧಾನಿ ನರೇಂದ್ರ…
ಗುಲ್ಬರ್ಗಾ ವಿವಿಗೆ ಅಗಸರ ಸಾರಥ್ಯ?
ಬೆಂಗಳೂರು: ಗುಲ್ಬರ್ಗ ವಿಶ್ವವಿದ್ಯಾಲಯ ಕುಲಪತಿ ಆಯ್ಕೆ ವಿಚಾರ ಶೈಕ್ಷಣಿಕ ಕ್ಷೇತ್ರದಲ್ಲಷ್ಟೇ ಅಲ್ಲ ರಾಜಕೀಯ ವಲಯದಲ್ಲೂ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ. ಈ ಪ್ರತಿಷ್ಠಿತ ಸ್ಥಾನಕ್ಕೆ ಶಿಕ್ಷಣ ತಜ್ಞರಾದ ಪೊ.ಮೈಲಾರಪ್ಪ ಹಾಗೂ ಪ್ರೊ.ದಯಾನಂದ ಅಗಸರ ಹೆಸರುಗಳು ಮುಂಚೂಣಿಯಲ್ಲಿದ್ದು ಈ ಪೈಕಿ ಅಗಸರ ಹೆಸರಿನತ್ತ ಕೇಸರಿ ದಿಗ್ಗಜರ ಒಲವು ವ್ಯಕ್ತವಾಗಿದೆ. ಏನಿದು ಲೆಕ್ಕಾಚಾರ? ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಗೋಮತಿ, ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಪ್ರೊ.ಬಿ.ಸಿ.ಮೈಲಾರಪ್ಪ ಹಾಗೂ ಪ್ರೊ.ದಯಾನಂದ್ ಅಗಸ್ ಹೆಸರನ್ನೊಳಗೊಂಡ ಪಟ್ಟಿಯನ್ನು ರಾಜ್ಯ ಸರ್ಕಾರ ರಾಜ್ಯಪಾಲರ ಅಂಕಿತಕ್ಜಾಗಿ ಕಳುಹಿಸಿಕೊಟ್ಟಿದೆ. ಆದರೆ ಈ ಪೈಕಿ ಕುಲಪತಿಯಾಗಿ ಯಾರು ಆಯ್ಕೆಯಾಗುವರೆಂಬುದೇ ಕುತೂಹಲ. ವಿವಿ ಕುಲಪತಿ ಆಯ್ಕೆ ಸಂಬಂಧದ ಶೂಧನಾ ಸಮಿತಿಯು ಈ ಮೂವರ ಹೆಸರುಗಳನ್ನು ಶಿಫಾರಸು ಮಾಡಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಮೈಲಾರಪ್ಪ ಅವರ ಪರ ಬ್ಯಾಟಿಂಗ್ ಮಾಡುತ್ತಿದ್ದರು. ಅದರೆ ಆರೆಸ್ಸೆಸ್ ಹಿರಿಯ…
ರವಿ ಬೆಳಗರೆ ನಿಧನಕ್ಕೆ ಡಿಸಿಎಂ ಸಂತಾಪ
ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆಯವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ. ಉಪಮುಖ್ಯಮಂತ್ರಿ ಅಶ್ಬತ್ಥನಾರಾಯಣ ಅವರೂ ಕಂಬನಿ ಮಿಡಿದಿದ್ದಾರೆ. ಟ್ವೀಟ್ ಮಾಡಿರುವ ಅಶ್ವತ್ಥನಾರಾಯಣ, ರವಿ ಬೆಳಗರೆಯವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬ-ಹಿತೈಷಿವರ್ಗಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. https://t.co/4ikySLXMp3 https://twitter.com/drashwathcn/status/1327086998415306753?s=20
ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಬಾವ ಕಂಬನಿ
ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ಗಣ್ಯಣತಿಗಣ್ಯರು ಕಂಬನಿ ಮಿಡಿದಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ನಿಷ್ಟುರ ವರದಿಗಾರಿಕೆ ಮೂಲಕ ತಮ್ಮದೇ ಆದ ಖ್ಯಾತಿ ಹಾಗೂ ಪ್ರತಿಷ್ಠೆ ಉಳಿಸಿಕೊಂಡವರು ರವಿಬೆಳಗೆರೆ. ಪತ್ತರಕರ್ತರಾಗಿ ಹಲವಾರು ಪ್ರಕರಣಗಳತ್ತ ಬೆಳಕು ಚೆಲ್ಲಿರುವ ರವಿ ಬೆಳಗೆರೆ ಅವರ ಬರಹಗಳು ಪೊಲೀಸ್ ತನಿಖೆಗೂ ವರದಾನವಾಗುತ್ತಿತ್ತು ಎಂದು ನಿವೃತ್ತ ಎಸ್ಪಿ ಜಿ.ಎ.ಬಾವ ನೆನಪಿಸಿಕೊಂಡಿದ್ದಾರೆ. ಪತ್ರಿಕೋದ್ಯಮಿಯಾಗಿದ್ದರೂ ರವಿ ಬೆಳಗೆರೆಯವರು ಸಾಮಾಜಿಕ ಕಾರ್ಯದಲ್ಲೂ ಮುಂಚೂಣಿಯಲ್ಲಿದ್ದರು. ಇದಕ್ಕೆ ಅವರ ಶಿಕ್ಷಣ ಸಂಸ್ಥೆ ಸಾಕ್ಷಿಯಾಗಿದೆ ಎಂದು ಜಿ.ಎ.ಬಾವಾ ಹೇಳಿದ್ದಾರೆ. ಪತ್ರಕರ್ತರಾಗಿ, ಲೇಖಕರಾಗಿ, ಕಥೆಗಾರರಾಗಿ, ಸಿನಿಮಾ ನಟರಾಗಿಯೂ ಜನಮಾನಸಕ್ಕೆ ಚಿರಪರಿಚಿತರಾಗಿರುವ ರವಿ ಬೆಳಗೆರೆಯವರ ನಿಧನದಿಂದ ರಾಜ್ಯದ ಜನ ಅಪೂರ್ವ ಮಾಣಿಕ್ಯವನ್ನು ಕಳೆದುಕೊಂಡಂತಾಗಿದೆ ಎಂದು ಬಾವಾ ಕಂಬನಿ ಮಿಡಿದ್ದಾರೆ.
ಪತ್ರಕರ್ತ ರವಿ ಬೆಳಗೆರೆ ವಿಧಿವಶ
ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆ ವಿಧಿವಶರಾಗಿದ್ದಾರೆ. ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅವರು ಕೊನೆಯುಸಿರೆಳೆದಿದ್ದಾರೆ. ಹಲವು ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ರವಿ ಬೆಳಗೆರೆ ತಮ್ಮ ವೃತ್ತಿ ಜೀವನದುದ್ದಕ್ಕೂ ಹಲವಾರು ಸವಾಲುಗಳನ್ನು ಮೆಟ್ಟಿ ಸಾಗಿ ಬಂದವರು. ಕ್ರಯಾಶೀಲ ಪತ್ರಕರ್ತರಲ್ಲೊಬ್ಬರಾಗಿದ್ದ ಅವರು ಯುವ ಪತ್ರಕರ್ತರಿಗೆ ಮಾದರಿ ಶಿಕ್ಷಕರಂತಿದ್ದರು. ರವಿ ಬೆಳಗೆರೆ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಗಣ್ಯಣತಿಗಣ್ಯರು ಕಂಬನಿ ಮಿಡಿದಿದ್ದಾರೆ.
ನೂರು ವರ್ಷ ಪೂರೈಸುತ್ತಿರುವ ದೊಡ್ಡಾಸ್ಪತ್ರೆ ಕಟ್ಟಡಗಳ ನವೀಕರಣಕ್ಕೆ ಹಸಿರು ನಿಶಾನೆ
ಮೈಸೂರು : ಮೈಸೂರು ಮೆಡಿಕಲ್ ಕಾಲೇಜು ಆಡಳಿತದಲ್ಲಿ ಕಂಡುಬಂದ ನ್ಯೂನತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಂಸ್ಥೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೊರಗುತ್ತಿಗೆ ವಿಷಯದಲ್ಲಿ ಲೋಪಗಳನ್ನು ಸರಿಪಡಿಸಲು ಮೆಡಿಕಲ್ ಕಾಲೇಜು, ಕೆಆರ್ ಆಸ್ಪತ್ರೆ, ಚೆಲುವಾಂಬ ಮತ್ತು ಪಿಕೆ ಸ್ಯಾನಿಟೋರಿಯಂಗಳಿಗೆ ಒಂದೇ ಗುತ್ತಿಗೆ ನೀಡಬೇಕು, ಪ್ರತ್ಯೇಕವಾಗಿ ನೀಡಿರುವುದನ್ನು ತಕ್ಷಣ ರದ್ದುಮಾಡಬೇಕು ಎಂದು ಆದೇಶಿಸಿದರು. ಗುಣಮಟ್ಟ ಹಾಗೂ ಪಾರದರ್ಶಕತೆಗೆ ಒತ್ತು ನೀಡಬೇಕು. ಒಂದು ವೇಳೆ ಕಾನೂನಿನ ತೊಡಕು ಎದುರಾದರೆ ಸರ್ಕಾರಕ್ಕೆ ವರದಿ ಸಲ್ಲಿಸಿ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಬುಧವಾರ ಕಾಲೇಜಿಗೆ ಭೇಟಿ ನೀಡಿ ಶೈಕ್ಷಣಿಕ ಹಾಗೂ ಆಡಳಿತದ ಪ್ರಗತಿ ಪರಿಶೀಲನೆ ನಡೆಸಿ ಸೂಚನೆ ನೀಡಿದರು. ಸಂಶೋಧನೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಕಟವಾದ ಸಂಶೋಧನಾ ಲೇಖನಗಳ ಮಾಹಿತಿ ನೀಡಲು ಪರದಾಡಿದ ಡೀನ್ ನಾಗರಾಜು ಅವರನ್ನು ತರಾಟೆಗೆ ತೆಗೆದುಕೊಂಡರು. ಜವಾಬ್ದಾರಿ ಹುದ್ದೆಯಲ್ಲಿ ಇರುವವರು ಸಮರ್ಥವಾಗಿ ನಿಭಾಯಿಸಲು…
‘ರೆಸಿಲಿಯಂಟ್ ಕರ್ನಾಟಕ’ ಚಿತ್ರ ಬಿಡುಗಡೆ
ಬೆಂಗಳೂರು: ರಾಷ್ಟ್ರವ್ಯಾಪಿ ಲಾಕ್ಕ್‌ಡೌನ್ ಘೋಷಣೆ ಆಗಿದ್ದ ಸಂದರ್ಭದಲ್ಲಿ ಕೈಗಾರಿಕಾ ಚಟುವಟಿಕೆಗಳ ಸುಗಮ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತ ಚಿತ್ರ ‘ರೆಸಿಲಿಯಂಟ್ ಕರ್ನಾಟಕ’ ವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಬುಧವಾರ ಬಿಡುಗಡೆ ಮಾಡಿದರು. “ಕಳೆದ 8 ತಿಂಗಳಿಂದೀಚೆಗೆ ಇಡೀ ಜಗತ್ತು ಬದಲಾಗಿದೆ. ಕೊವಿಡ್ ವಿರುದ್ಧದ ಹೋರಾಟದ ಜತೆಗೆ, ಆರ್ಥಿಕತೆಗೆ ಹೊಡೆತ ಬೀಳದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಕೊವಿಡ್ ಸಮಯದಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಕೊರತೆ ಆಗದಂತೆ ಎಚ್ಚರವಹಿಸಲಾಗಿತ್ತು. ಈ ಎಲ್ಲ ವಿಷಯಗಳನ್ನು ಚಿತ್ರ ಒಳಗೊಂಡಿದೆ,”ಎಂದು ಸಚಿವರು ತಿಳಿಸಿದರು. “ಲಾಕ್‌ಡೌನ್ ಇದ್ದಾಗಲೂ ಉತ್ಪಾದನೆಗೆ ತೊಡಕಗಾದಂತೆ ಉದ್ಯಮಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗಿತ್ತು. ಜನಜೀವನ ಹಾಗೂ ಆರ್ಥಿಕತೆ ನಡುವೆ ಸಮತೋಲನ ಕಾಯ್ದುಕೊಂಡಿದ್ದೇವೆ. ಹಾಗಾಗಿಯೇ ಕರ್ನಾಟಕ ಈಗಲೂ ಹೂಡಿಕೆದಾರರ ಮೆಚ್ಚಿನ ತಾಣ. ಕೈಗಾರಿಕಾ ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ಮಾಡಿರುವ ರಾಜ್ಯ…
ಕೆಮಿಕಲ್ ಫ್ಯಾಕ್ಟರಿ ಬೆಂಕಿ ಅನಾಹುತ; ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ
ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಬಂಧ ತನಿಖೆ ಬಿರುಸುಗೊಂಡಿದೆ. ಈ ನಡುವೆ ಬೆಕಿ ಅನಾಹುತ ಸಂಭವಿಸಿದ ರೇಖಾ ಕೆಮಿಕಲ್ ಫ್ಯಾಕ್ಟರಿ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
