ಕೆಲವೇ ದಿನಗಳಲ್ಲಿ ಬೆಳೆ ವಿಮೆ ಸಂಪೂರ್ಣ ಬಿಡುಗಡೆ: ಕೃಷಿ ಸಚಿವರ ಭರವಸೆ

ಧಾರವಾಡ: ಬೆಳೆ ವಿಮೆ 2019-20ರವರೆಗೆ ಬಿಡುಗಡೆಯಾಗಿದೆ. ಕೆಲವು ಕಡೆ ಅಕೌಂಟ್ ನಂಬರ್ ತಾಳೆಯಾಗದೆ ಮಿಸ್ ಮ್ಯಾಚಿಂಗ್ ತಾಂತ್ರಿಕಕಾರಣದಿಂದ ವಿಳಂಬವಾಗಿದೆ. ಇನ್ನು ಕೆಲವು ದಿನಗಳಲ್ಲಿಯೇ 2015-16 ರಿಂದ ಸಂಪೂರ್ಣವಾಗಿ ಎಲ್ಲವೂ ಬಿಡುಗಡೆಯಾಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳೆ ವಿಮೆ ಪರಿಪೂರ್ಣ ಬಿಡುಗಡೆಯ ಭರವಸೆ ನೀಡಿದರು. ಆರ್ಥಿಕ ಮಟ್ಟ ಸುಧಾರಿಸಿದ ಬಳಿಕ ಕೃಷಿ ವಿಶ್ವವಿದ್ಯಾಲಯದಲ್ಲಿ ಬಾಕಿ ಇರುವ ಹುದ್ದೆಗಳನ್ನು ಸದ್ಯದಲ್ಲಿಯೇ ತುಂಬಲು ಕ್ರಮಕೈಗೊಳ್ಳಲಾಗುವುದು ಎಂದೂ ಬಿ.ಸಿ.ಪಾಟೀಲ್ ತಿಳಿಸಿದರು

ಬಿಜೆಪಿ ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ: ಡಿ.ಕೆ.ಶಿ.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರಿಗೆ ಯಾರ ನಿಯಂತ್ರಣವೂ ಇಲ್ಲದಂತಾಗಿದ್ದು, ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಮನಸ್ಥಿತಿಗೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ. ಬಾಗಲಕೋಟೆ ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಸಂದರ್ಭದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರು ಪುರಸಭೆ ಕಾಂಗ್ರೆಸ್ ಸದಸ್ಯೆ ಸವಿತಾ ಹುರಕಡ್ಲಿ ಅವರ ಮೇಲೆ ಹಲ್ಲೆ ನಡೆಸಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ‘ಇದು ಬಿಜೆಪಿಯ ಸಂಸ್ಕೃತಿ. ಬಿಜೆಪಿ ನಾಯಕರು ಯಾರಿಗೆ ಏನು ಬೇಕಾದರೂ ಮಾಡಬಹುದು ಎಂಬ ಹವ್ಯಾಸ ಹಾಗೂ ಅಭ್ಯಾಸ ಬೆಳೆಯುತ್ತಿದೆ. ಬಿಜೆಪಿಯ ಯಾವುದೇ ಶಾಸಕರು, ನಾಯಕರಿಗೆ ನಿಯಂತ್ರಣವೇ ಇಲ್ಲದಂತಾಗಿದೆ. ಕಾರ್ಪೊರೇಟರ್ ನಿಂದ ಕೌನ್ಸಲರ್ ವರೆಗೂ ಎಲ್ಲೆಡೆ ಇಂತಹ ಘಟನೆ ನಡೆಯುತ್ತಿದೆ. ಬೇರೆ ಸಮಯದಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸುತ್ತಾರೆ.…

ಜಾತಿ ರಾಜಕಾರಣ ಮಾಡುವವರಿಗೆ ಉಪಚುನಾವಣೆ ಒಳ್ಳೆಯ ಪಾಠ; ಬಿ.ಸಿ.ಪಾಟೀಲ್

ಧಾರವಾಡ: ಬೆಂಗಳೂರಿನಲ್ಲಿ ಜಾತಿ ರಾಜಕಾರಣ ಮಾಡುವವರಿಗೆ ಈ ಉಪಚುನಾವಣೆ ದೊಡ್ಡ ಪಾಠ. ಪ್ರಜಾಪ್ರಭುತ್ವದಲ್ಲಿ ಜಾತಿ ರಾಜಕಾರಣ ನಡೆಯುವುದಿಲ್ಲ ಎಂಬುದಕ್ಕೆ ಶಿರಾ ಹಾಗೂ ಆರ್.ಆರ್.ನಗರ ಫಲಿತಾಂಶ ತಕ್ಕ ಉದಾಹರಣೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಯಡಿಯೂರಪ್ಪ ನೇತೃತ್ವದ ಸರ್ಕಾರದ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳು ಈ ಉಪಚುನಾವಣೆಯಲ್ಲಿ ಗೆಲುವು ತಂದಿವೆ.ಮತದಾರ ಅಭಿವೃದ್ಧಿಯನ್ನು ಕೈ ಹಿಡಿಯುತ್ತಾನೆ ಎನ್ನುವುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದರು.

ಟೈಗರ್ ಶ್ರಾಫ್ ಅಭಿನಯದ ‘ಗಣಪತ್’ ಟೀಸರ್ ಅಬ್ಬರ

ಕೊರೋನಾ ಲಾಕ್’ಡೌನ್ ನಂತರ ಸ್ತಬ್ಧವಾಗಿದ್ದ ಚಿತ್ರೋದ್ಯಮದ ಚಟುವಟಿಕೆಗಳು ಇದೀಗ ಬಿರುಸುಗೊಂಡಿವೆ. ಚಿತ್ರ ಪ್ರದರ್ಶನ ಕಷ್ಟಸಾಧ್ಯವಾದರೂ ನಿರ್ಮಾಣ ಕಾರ್ಯ ನಿರಾತಂಕವಾಗಿ ಸಾಗಿವೆ. ಇದೀಗ ಒಂದೊಂದೇ ಟೀಸರ್, ಟ್ರೇಲರ್’ಗಳು ಬಿಡುಗಡೆಯಾಗುತ್ತಿದ್ದು ಸಿನಿ ರಸಿಕರಲ್ಲೂ ನಿರೀಕ್ಷೆ ಹುಟ್ಟಿಸಿದೆ. ಈ ನಡುವೆ, ಬಾಲಿವುಡ್ ನಟ ಟೈಗರ್ ಶ್ರಾಫ್ ಅಭಿನಯದ ಗಣಪತ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ವಿಕಾಸ್ ಬಾಲ್ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ ಗಿಟ್ಟಿಸಿಕೊಳ್ಳುತ್ತಿದೆ.

ನ.17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜುಗಳ ಆರಂಭ

ಬೆಂಗಳೂರು: ಕೋವಿಡ್‌-19 ಪಿಡುಗಿನ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಆರಂಭಿಸುವ ಬಗ್ಗೆ ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ ಎಸ್‌ಒಪಿ (ಪ್ರಮಾಣಿತ ಕಾರ್ಯಚರಣಾ ವಿಧಾನ) ಯನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಫ್‌ಲೈನ್‌ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ. ಈ ಎಸ್‌ಒಪಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸೂಚನೆಗಳಿದ್ದು, ಅವುಗಳ ಪ್ರಕಾರವೇ ತರಗತಿಗಳು ನಡೆಯುತ್ತವೆ. ಹಾಗೆಯೇ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ನಿಗದಿತ ಸೂಚನೆಗಳಿವೆ ಎಂದು ಡಿಸಿಎಂ ತಿಳಿಸಿದ್ದಾರೆ.

ನಟ ಚಿರಂಜೀವಿಗೆ ಕೊರೋನಾ ಪಾಸಿಟಿವ್

ಹೈದರಾಬಾದ್: ತೆಲುಗಿನ ಖ್ಯಾತ ನಟ ಚಿರಂಜೀವಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕೊರೋನಾ ವೈರಾಣು ಸೋಂಕಿಗೊಳಗಾಗಿರುವ ಬಗ್ಗೆ ಅವರೇ ಟ್ವೀಟ್ ಮೂಲಕ ಮಾಡಿ ಹೇಳಿಕೊಂಡಿದ್ದಾರೆ. ‘ಆಚಾರ್ಯ’ಚಿತ್ರದ ಶೂಟಿಂಗ್’ನಲ್ಲಿ ಬ್ಯುಲಿಯಾಗಿರುವ ಚಿರಂಜೀವಿ ಸೋಮವಾರ ಚಿತ್ರೀಕರಣಕ್ಕೆ ತೆರಳುವ ಮುನ್ನ ಶಿಷ್ಟಾಚಾರದಂತೆ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಆ ವೇಳೆ ಪಾಸಿಟಿವ್ ಬಂದಿದ್ದು ಕ್ವಾರಂಟೈನ್ ಗೊಳಗಾಗಿದ್ದಾರೆ.

ಬೆಂಗಳೂರು ಟೆಕ್‌ ಸಮ್ಮಿಟ್‌ನಲ್ಲಿ 12 ಒಪ್ಪಂದಗಳಿಗೆ ಅಂಕಿತ

ಬೆಂಗಳೂರು: ನವೆಂಬರ್‌ 19ರಿಂದ ನಡೆಯಲಿರುವ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ (ಬಿಟಿಎಸ್)ಯಲ್ಲಿ ಮಹತ್ವದ 12 ಒಪ್ಪಂದಗಳಿಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ (GIA) ಪಾಲುದಾರ ದೇಶಗಳ ಜತೆ ಸಹಿ ಹಾಕಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ತಂತ್ರಜ್ಞಾನ ಶೃಂಗಸಭೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸೋಮವಾರ ವಿವಿಧ ದೇಶಗಳ ಉನ್ನತ ರಾಜತಾಂತ್ರಿಕ ಅಧಿಕಾರಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ನಡುವೆಯೂ ನಡೆಯುತ್ತಿರುವ ಅತಿದೊಡ್ಡ ಪ್ರಮಾಣದ ಈ ಶೃಂಗದಲ್ಲಿ ಸುಮಾರು 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗುತ್ತಿದ್ದು, ತಂತ್ರಜ್ಞಾನದ ಅನೇಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಪ್ಪಂದಗಳು ಆಗಲಿವೆ. ಈ ಪೈಕಿ ಏಳು ಒಪ್ಪಂದಗಳು ಸಹಿಗೂ ಸಿದ್ಧವಾಗಿವೆ ಎಂದರು. ಈ ಹಿಂದೆ ಮಾಡಿಕೊಂಡಿರುವ ಒಪ್ಪಂದಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ನೀಡಲಾಗುವುದು. ಜತೆಗೆ, ಹೊಸ ಒಪ್ಪಂದಗಳನ್ನು ಕಾಲಮಿತಿಯೊಳಗೆ, ಪೂರ್ವ ನಿಗದಿಯಂತೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುವುದು. ಒಪ್ಪಂದಗಳ ಫಲಶ್ರುತಿ ಬೇಗ ಸಿಗುವ ಗುರಿಯೊಂದಿಗೆ ಪಾಲುದಾರ ದೇಶಗಳ ಜತೆ…

ಸ್ಮಾರ್ಟ್ ಕಾಮಗಾರಿ ಅವಾಂತರ; ಸಾರ್ವಜನಿಕರ ಆಕ್ರೋಶ ತಣಿಸಲು ಶಾಸಕರ ಹರಸಾಹಸ

ಮಂಗಳೂರು ನಗರದಲ್ಲಿ ಸ್ಮಾರ್ಟ್ ಯೋಜನೆಯ ಕಾಮಗಾರಿ ನಡೆಯುತ್ತಿರುವ‌ ಹಿನ್ನೆಲೆಯಲ್ಲಿ ಉಂಟಾದ ಟ್ರಾಫಿಕ್ ಜಾಮ್ ಸಮಸ್ಯೆ ಉಲ್ಬಣಗೊಂಡಿದ್ದು ಈ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ತಮ್ಮ ಸಿಟ್ಟು ಹೊರಹಾಕುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಗಳೂರು‌ ಶಾಸಕ‌ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಸ್ಮಾರ್ಟ್ ಸಿಟಿ ಅಧಿಕಾರಿಗಳು, ಪೋಲಿಸ್ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು, ಕೆಯುಡಿಎಫ್ಸಿ ಇಲಾಖೆಯ ಅಧಿಕಾರಿಗಳು ಹಾಗೂ ಬಸ್ ಮಾಲಕರ ಸಂಘದ ಅದ್ಯಕ್ಷರು ಈ ಸಭೆಯಲ್ಲಿ ಭಾಗವಹಿದ್ದರು. ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಶಾಸಕ‌ ವೇದವ್ಯಾಸ್ ಕಾಮತ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಿವಿಎಸ್ ಜಂಕ್ಷನ್ ನಿಂದ ನೇರವಾಗಿ ಕೆ.ಎಸ್ ರಾವ್ ರಸ್ತೆಗೆ ತೆರಳಲು ಅವಕಾಶ ಕಲ್ಪಿಸಿ ಕೊಡಬೇಕು. ಕೆ.ಎಸ್ ರಾವ್ ರಸ್ತೆಯಿಂದ ಹಳೆಯ ಸರ್ವಿಸ್ ಬಸ್ ಸ್ಟಾಂಡ್, ಮುಲ್ಕಿ ಸುಂದರ್ ರಾಮ್…

ತೆರೆಯ ಮೇಲೆ ಕ್ಯಾಪ್ಟನ್ ಗೋಪಿನಾಥ್ ಬದುಕು

ಕ್ಯಾಪ್ಟನ್ ಗೋಪಿನಾಥ್ ಕನ್ನಡ ಉದ್ಯಮ ಜಗತ್ತಿನ ಚಿರಪರಿಚಿತ ವ್ಯಕ್ತಿ. ಭಾರತೀಯ ವೈಮಾನಿಕ ಕ್ಷೇತ್ರದಲ್ಲಿ ಕನ್ನಡಿಗರ ಪಾರುಪತ್ಯಕ್ಕೆ ಮುನ್ನುಡಿ ಬರೆದಿದ್ದ ಕನ್ನಡಿಗ ಕ್ಯಾಪ್ಟನ್ ಜಿಆರ್ ಗೋಪಿನಾಥ್ ಜೀವನ ಇದೀಗ ಸಿನಿಮಾ ಆಗಿ ಗಮನಸೆಳೆಯಲಿದೆ. ಅದರಲ್ಲೂ ಕನ್ನಡಿಗನ ಜೀವನಗಾಥೆ ಕನ್ನಡ ಹಾಗೂ ತಮಿಳಿನಲ್ಲಿ ಸಿನಿಮಾ ಆಗಿ ತೆರೆಗೆ ಬರುತ್ತಿರುವುದು ವಿಶೇಷ. ನಟ ಸೂರ್ಯ ಈ ಚಿತ್ರದ್ಲಲಿ ನಟಿಸುತ್ತಿದ್ದಾರೆ. ಈ ಚಿತ್ರದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು ಮಾಡುತ್ತಿದೆ.

ಬಸವಣ್ಣ ಪ್ರತಿಮೆ ಭಗ್ನ ಪ್ರಕರಣ; ಶಾಸಕ ಯತೀಂದ್ರ ಖಂಡನೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಬಸವಣ್ಣ ಪ್ರತಿಮೆ ಭಗ್ನ ಪ್ರಕರಣವನ್ನು ಶಾಸಕ ಯತೀಂದ್ರ ಖಂಡಿಸಿದ್ದಾರೆ. ಜಗಜ್ಯೋತಿ ಬಸವಣ್ಣನವರ ಪ್ರತಿಮೆಯನ್ನು ಭಗ್ನ ಮಾಡಿರುವುದು ಅತ್ಯಂತ ಅಕ್ಷಮ್ಯ ಎಂದು ಅವರು ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕೂಡಲೆ ತನಿಖೆಗೆ ಆದೇಶಿಸಿ ಇಂತಹ ಕೃತ್ಯವೆಸಗಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣನವರ ಪ್ರತಿಮೆಯನ್ನು ಭಗ್ನ ಮಾಡಿರುವುದು ಅತ್ಯಂತ ಅಕ್ಷಮ್ಯ.@CMofKarnataka ಬಿ.ಎಸ್ ಯಡಿಯೂರಪ್ಪನವರು ಕೂಡಲೆ ತನಿಖೆಗೆ ಆದೇಶಿಸಿ ಇಂತಹ ಕೃತ್ಯವೆಸಗಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸುತ್ತೇನೆ.@BSYBJP pic.twitter.com/tEOevW6VPt — Dr Yathindra Siddaramaiah (@Dr_Yathindra_S) November 9, 2020