ಸಿಬಿಎಸ್ಇ ಪರೀಕ್ಷಾ ವೇಳಾಪಟ್ಟಿ ಡಿ.31ರಂದು ಪ್ರಕಟ

ದೆಹಲಿ: ಸಿಬಿಎಸ್ಇ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ರಂದು ಪ್ರಕಟವಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು, ಸಿಬಿಎಸ್‌ಇ ಬೋರ್ಡ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಡಿ.31ರಂದು ಸಂಜೆ ಆರು ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ‘2021ನೇ ಸಾಲಿನಲ್ಲಿ ಸಿಬಿಎಸ್‌ಇ ಬೋರ್ಡ್‌ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಯಾವಾಗಿನಿಂದ ಪರೀಕ್ಷೆ ಆರಂಭವಾಗುವುದು ಎನ್ನುವುದನ್ನು ಡಿ.31ರಂದು ಘೋಷಿಸಲಿದ್ದೇನೆ’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. 📢Major announcements for students & parents! I will announce the date when the exams will commence for students appearing for #CBSE board exams in 2021. Stay tuned. pic.twitter.com/Lvp9Lf0qsT — Dr. Ramesh Pokhriyal Nishank ( Modi Ka Parivar) (@DrRPNishank) December 26, 2020

‘ರಾಜತಂತ್ರ’ದಲ್ಲಿ ರಾಘವೇಂದ್ರ ಖಡಕ್ ಲುಕ್; ಟ್ರೈಲರ್’ಗೂ ಸಕತ್ ಲೈಕ್

ರಾಘವೇಂದ್ರ ರಾಜಕುಮಾರ್ ನಟನೆಯ ‘ರಾಜತಂತ್ರ’ ಚಿತ್ರದ ಟ್ರೈಲರ್ ಭಾರೀ ಸದ್ದು ಮಾಡುತ್ತಿದೆ. ಪಿವಿಆರ್ ಸ್ವಾಮಿ ನಿರ್ದೇಶಿಸಿರುವ ಈ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು ಚಿತ್ರಕ್ಕೆ ಅಂತಿಮ ಸ್ಪರ್ಶ ಸಿಗುತ್ತಿದೆ. ಈ ಟ್ರೈಲರ್’ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ ಸಿಗುತ್ತಿದೆ.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ; ಶಿಕ್ಷಣ ಕ್ರಾಂತಿಯ ಸಂಕಲ್ಪ

ಮಂಗಳೂರು: ಭಾರತೀಯ ಸಂಸ್ಕೃತಿ, ಪರಂಪರೆಯ ರಾಯಭಾರಿಗಳನ್ನು ರೂಪಿಸುವ ಕಲ್ಲಡ್ಕದ ಈ ಗುರುಕುಲದಲ್ಲಿ ಇದು ಅನನ್ಯ ಕಾರ್ಯಕ್ರಮ. ದೇಶದ ಭವಿಷ್ಯದ ಮೇಧಾವಿಗಳನ್ನು ರೂಪಿಸುವ ದಕ್ಷಿಣಕನ್ನಡ ಜಿಲ್ಲೆ ಕಲ್ಲಡ್ಕ ಶ್ರೀರಾಮ ಶಿಕ್ಷಣ ಸಂಸ್ಥೆಗೆ ಇದೀಗ ಭೀಮಬಲ. ಆರೆಸ್ಸೆಸ್ ಹಿರಿಯ ನಾಯಕ ಡಾ.ಪ್ರಭಾಕರ ಭಟ್ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಈ ಶಿಕ್ಷಣ ಸಂಸ್ಥೆಯಲ್ಲಿ ವಾರಾಂತ್ಯ ದಿನವಾದ ಶನಿವಾರ ಅನನ್ಯ ಕಾರ್ಯಕ್ರಮ ಗಮನಸೆಳೆಯಿತು. ಈ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸವಲತ್ತು ಕಲ್ಪಿಸುವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ವೈಭವ ಮೇಳೈಸಿತು. ವೈಧಿಕ ಸಂಪ್ರದಾಯ ನಿತ್ಯವೂ ಪ್ರತಿಬಿಂಭಿಸುತ್ತಿರುವ ಈ ಶ್ರೀರಾಮ ಹೈಸ್ಕೂಲ್ ಪರಿಪೂರ್ಣ ಡಿಜಿಟಲೀಕರಣಕ್ಕೆ ಮುನ್ನುಡಿ ಬರೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಸಹಿತ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಈ ಸಮಾರಂಭದಲ್ಲಿ IFFCO ಮತ್ತು ಸದಾಸ್ಮಿತ ಫೌಂಡೇಶನ್ ಬೆಂಗಳೂರು ಇದರ ಜಂಟಿ ಆಶ್ರಯದಲ್ಲಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿಧ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಯಿತು. ಸುಮಾರು…

ಐಪಿಎಸ್ ಅಧಿಕಾರಿಗಳ ತಿಕ್ಕಾಟ; ಸರ್ಕಾರದ ವೈಖರಿ ಬಗ್ಗೆ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ರಾಜ್ಯದ ಇಬ್ಬರು IPS ಅಧಿಕಾರಿಗಳ ತಿಕ್ಕಾಟ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯ ಆಗಿದ್ದು ಅಡಳಿತ ಯಂತ್ರದ ಕುಸಿತಕ್ಕೆ ಸಾಕ್ಷಿಯಾಗಿದೆ. ನಿವೃತ್ತಿ ಅಂಚಿನಲ್ಲಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ IPS ಅಧಿಕಾರಿಗಳ ತಿಕ್ಕಾಟವನ್ನು ನಿರ್ವಹಿಸಲು ವಿಫಲವಾಗಿದ್ದು ರಾಜ್ಯದ ಜನತೆಗೆ ಮನರಂಜನೆ ಒದಗಿಸಿದ್ದಾರೆ. ರಾಜ್ಯ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಕಾಟು ಟೀಕೆ ಮಾಡಿರುವ ಮಾಜಿ ಶಾಸಕರೂ ಆಗಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಲೋಕಾಯುಕ್ತ ಪ್ರಕರಣದಲ್ಲಿ FIR ರದ್ದುಗೊಳಿಸಲು ನಿರಾಕರಿಸಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದೆ. ತಮ್ಮ ಸ್ಥಾನ ಉಳಿಸಿಕೊಳ್ಳಲು ಹೈಕಮಾಂಡ್ ಕೃಪೆ ಅನಿವಾರ್ಯವಾಗಿದ್ದು ಇವರು ರಾಜ್ಯದ ಆಡಳಿತ ಯಂತ್ರದ ಮೇಲೆ ಹಿಡಿತ ಕಳೆದುಕೊಂಡು ಹಿರಿಯ IPS ಮತ್ತು IAS ಅಧಿಕಾರಿಗಳು ಬಹಿರಂಗ ಹೇಳಿಕೆಗಳ ಮೂಲಕ ಬೀದಿ ಜಗಳ ಮಾಡಲು ಅವಕಾಶ ನೀಡಿದ್ದಾರೆ ಎಂದು ಅರ್ಪಿಸಿದ್ದಾರೆ. ಭ್ರಷ್ಟಾಚಾರ ಆರೋಪದ…

ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು: ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ರೂಪಿಸಬೇಕಿದೆ. ಇದಕ್ಕಾಗಿ ಗೃಹ ಇಲಾಖೆಯ ಜೊತೆ ಸಭೆ ನಡೆಸಿ ಹೊಸ ಬಗೆಯ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ರೂಪಿಸಲಾಗುವುದು ಎಂದರು. ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಈ ಲಸಿಕೆಯನ್ನು ಪ್ರಾಯೋಗಿಕವಾಗಿ ಪಡೆಯಬಹುದು. ಕೊರೊನಾ ವಾರಿಯರ್ ಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಈ ಲಸಿಕೆಯನ್ನು ಪಡೆದು ಪ್ರಯೋಗದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದ್ದೇನೆ. ಕ್ಲಿನಿಕಲ್ ಟ್ರಯಲ್ ನಲ್ಲಿ ಪಾಲ್ಗೊಂಡು ಸಹಾಯ ಮಾಡಬಹುದು ಎಂದರು. ಯು.ಕೆ.ಯಿಂದ ಬಂದ 2,500 ಜನ ಪೈಕಿ, 1,638 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 14 ಜನರಿಗೆ ಪಾಸಿಟಿವ್ ಆಗಿದೆ. ಇವರ…

Uncategorized

ಕಡಲತಡಿಯಲ್ಲಿ ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ; ಶಾಸಕರಿಂದ ಸ್ಥಳ ಪರಿಶೀಲನೆ

ಉಡುಪಿ: ಪಡುಕೆರೆ ಭಾಗದಲ್ಲಿ ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪನೆಯಾಗಲಿದೆ. ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪನೆ ಸಂಬಂಧ ಪ್ರಕ್ರಿಯೆಗಳು ಸಾಗಿದ್ದು ಶಾಸಕ ಕೆ. ರಘುಪತಿ ಭಟ್ ಅವರು ಸ್ಥಳ ಪರಿಶೀಲನೆ ನಡೆಸಿದರು. ಪಡುಕೆರೆ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ಶಾಸಕರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಮೋದ್ ಕೆ ಸಾಲ್ಯಾನ್, ಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಟೀಕಾಕಾರರ ಬಗ್ಗೆ ದೇವೇಗೌಡ ಗರಂ; ಕೈ ನಾಯಕರ ವಿರುದ್ಧವೂ ವಾಗ್ದಾಳಿ

ಬೆಂಗಳೂರು: ಯಾರು ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರು ತಮ್ಮ ವಿರುದ್ದದ ಟೀಕಾಕಾರರಿಗೆ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ, ಕುಮಾರಸ್ವಾಮಿಯ ಹೊರತಾಗಿಯೂ ಪಕ್ಷದಲ್ಲಿ ಸಾಕಷ್ಟು ನಾಯಕರಿದ್ದಾರೆ. ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ ಎಂದರು.  ಪಕ್ಷದ ಬಗ್ಗೆ ಹಲವಾರು ರೀತಿ ವ್ಯಾಖ್ಯಾನ ನಡೆಯುತ್ತಿದ್ದು, ಅದನ್ನು ಮನರಂಜನೆ ಕಾರ್ಯಕ್ರಮ ಎಂದು ಹೇಳಬಹುದು ಎಂದ ಅವರು ಬಿಜೆಪಿ-ಜೆಡಿಎಸ್ ವಿಲೀನ ಸುದ್ದಿಯನ್ನು ತಳ್ಳಿಹಾಕಿದರು. ಪ್ರಾದೇಶಿಕ ಪಕ್ಷ ಉಳಿಸಿಕೊಳ್ಳಲು ಎಷ್ಟು ಕಷ್ಟ ಎನ್ನುವುದು ಆ ಪಕ್ಷದ ಮುಖ್ಯಸ್ಥರಿಗೆ ಗೊತ್ತಿರುತ್ತದೆ ಎಂದ ದೇವೇಗೌಡರು, ಜೆಡಿಎಸ್ ಪಕ್ಷಕ್ಕೆ ಹಾನಿ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದ ಅವರು, ಹಾಲು, ಅಕ್ಕಿ ಭಾಗ್ಯದ ಮೇಲೆ ಭಾಗ್ಯ ಕೊಟ್ಟವರು ಏನಾದರು? 130 ಸೀಟು ಇದ್ದದ್ದು 78ಕ್ಕೆ ಏಕೆ ಬಂತು? ಹಾಸನದಲ್ಲಿ ಈಗ ಕಾಂಗ್ರೆಸ್ ಏನಾಗಿದೆ? ಒಂದು…

ಯುವರತ್ನ ಚಿತ್ರದ ಮೆಲೋಡಿ ವಿಡಿಯೋ ಸಾಂಗ್.. ನೀವು ನೋಡಲೇಬೇಕು

ಪುನೀತ್ ರಾಜಕುಮಾರ್ ಅವರ ಈ ವಿಡಿಯೋ ಸಾಂಗ್ ನೀವು ಕೇಳಲೇಬೇಕು. ಪುನೀತ್ ಮತ್ತು ಆಯೇಶಾ ಅಭಿನಯದ ಯುವರತ್ನ ಚಿತ್ರದ ಮೆಲೋಡಿ ವಿಡಿಯೋ ಸಾಂಗ್ ಇದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸೊಗಸಾದ ಸಾಂಗ್’ಗೆ ಸಕತ್ ಲೈಕ್ ಸಿಕ್ಕಿದ್ದು, ಸಿಕ್ಕಾಪಟ್ಟೆ ಶೇರ್ ಆಗುತ್ತಿದೆ. ಯುವಜನರ ಚಿತ್ತ ಸೆಳೆಯುವಲ್ಲಿ ಇದು ಯಶಸ್ಸಾಗಿದೆ.

ಮಂಗಳೂರು ವೆಂಕಟರಮಣ ದೇವಳದಲ್ಲಿ ‘ಮುಕ್ಕೋಟಿ ದ್ವಾದಶಿ’ ಸಂಭ್ರಮ

ಮಂಗಳೂರು : ಕರಾವಳಿಯ ಪುಣ್ಯಕ್ಷೇತ್ರಗಳಲ್ಲೊಂದಾದ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ‘ಮುಕ್ಕೋಟಿ ದ್ವಾದಶಿ’ ಉತ್ಸವ ಗಮನಸೆಳೆಯಿತು. ಶುಕ್ರವಾರ ವೈಕುಂಠ ಏಕಾದಶಿ ವೈಭವದ ನಂತರ ಶನಿವಾರ ಈ ಕೈಂಕರ್ಯ ನೆರವೇರಿತು. ಇಂದು ಪ್ರಾತಃಕಾಲ ಶ್ರೀನಿವಾಸ ದೇವರ ಪಲ್ಲಕಿ ಉತ್ಸವವು ಭಕ್ತಸಮೂಹದ ಕಣ್ಮನ ಸೆಳೆಯಿತು. ಶ್ರೀ ದೇವಳದಿಂದ ಟ್ಯಾಂಕ್ ಕಾಲೋನಿಯಲ್ಲಿರುವ ಶ್ರೀ ದೇವರ ಕೆರೆಯಲ್ಲಿ ತೀರ್ಥ ಸ್ನಾನ ಬಳಿಕ ಶ್ರೀ ದೇವರ ಸ್ವಯಂಸೇವಕರ ಭುಜ ಸೇವೆಯೊಂದಿಗೆ, ಶ್ರೀ ವೀರ ವೆಂಕಟೇಶ್ ಭಜನಾ ಮಂಡಳಿಯ ಸೇವಕರು ಭಜನಾ ಸೇವೆಯೊಂದಿಗೆ  ಹಗಲು ಪೇಟೆ ಉತ್ಸವ ಜರಗಿತು . ದೇವಳದ ಆಡಳಿತ ಮಂಡಳಿಯ ಸಿ .ಎಲ್ ಶೆಣೈ, ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ ಉಪಸ್ಥಿತರಿದ್ದರು .

ರಣಬೀರ್’ಗೆ ಮದುವೆಯಂತೆ.. ಲಕ್ಕಿ ವಧು ಯಾರು ಗೊತ್ತಾ?

ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಸದ್ಯದಲ್ಲೇ ಮದುವೆಯಾಗಲಿದ್ದಾರೇ. ಮುಂಬರುವ ವರ್ಷ ೨೦೨೧ ಇವರ ಪಾಲಿಗೆ ಒಳ್ಳೆಯ ವರ್ಷವಾಗಲಿದ್ದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರಂತೆ. ಹಾಗಾದರೆ ರಣಬೀರ್ ಕಪೂರ್ ಅವರ ಕೈ ಹಿಡಿಯಲಿರುವ ಲಕ್ಕಿ ವಧು ಯಾರು ಗೊತ್ತಾ? ರಂಬೀರ್ ಅವರ ಮನದನ್ನೆ ಆಲಿಯಾ ಭಟ್. ತಾವಿಬ್ಬರೂ ಬಹು ಕಾಲದಿಂದಲೂ ಪ್ರೇಮಿಸುತ್ತಿದ್ದು ಮುಂದಿನ ವರ್ಷದಲ್ಲಿ ವಿವಾಹವಾಗುವುದಾಗಿ ರಣಬೀರ್ ಹೇಳಿಕೊಂಡಿದ್ದಾರೆ. ಬಾಲಿವುಡ್ ಸ್ಟಾರ್’ಗಳಾದ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ನಡುವಿನ ಪ್ರೇಮ ಕಥಾನಕ ಬಗ್ಗೆ ಸಾರ್ವಜನಿಕವಲಯದಲ್ಲಿ ಸುದ್ದಿಗಳು ಹರಿದಾಡುತ್ತಿತ್ತಾದರೂ ಈ ಪ್ರೇಮ ಪಕ್ಷಿಗಳು ಅದನ್ನು ಬಹಿರಂಗಪಡಿಸಿರಲಿಲ್ಲ. ಇದೀಗ ತಾವು ಪ್ರೇಮಿಗಳು ಎಂದು ಈ ಜೋಡಿ ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಪತ್ರಕರ್ತರು ನಡೆಸಿದ ಸಂದರ್ಶನವೊಂದರಲ್ಲಿ ರಣಬೀರ್ ಕಪೂರ್ ತಮ್ಮ ಪ್ರೀತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಸದ್ಯದಲ್ಲಿಯೇ ಮದುವೆಯಾಗುವುದಾಗಿಯೂ ಹೇಳಿಕೊಂಡಿದ್ದಾರೆ.

Uncategorized