ಬೆಂಗಳೂರು: ಪ್ರಮಾಣೀಕೃತ ಕಾರ್ಯಾಚರಣೆ ವಿಧಾನಗಳ (ಎಸ್.ಒ.ಪಿ) ಪರಿಣಾಮಕಾರಿ ಜಾರಿ ಮತ್ತು ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳನ್ನು ವ್ಯಾಪಕಗೊಳಿಸುವ ಮೂಲ️ಕ ಕೋವಿಡ್ 19 ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ️.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಲ️ಯವಾರು ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೊಡಿಸಲು ಮಧ್ಯವರ್ತಿಗಳು ಹಣ ಪಡೆಯುತ್ತಿರುವ ಬಗ್ಗೆ ಹಾಗೂ ಮನೆ ಆರೈಕೆಯಲ್ಲಿದ್ದು ಶುಶ್ರೂಷೆ ಪಡೆಯುತ್ತಿರುವುವರ ಹೆಸರಲ್ಲಿ ಆಸ್ಪತ್ರೆಯಲ್ಲಿರುವುದಾಗಿ ಸುಳ್ಳು ಬಿ️ಲ್ಲುಗಳನ್ನು ಸಲ್ಲಿಸುತ್ತಿರುವ ಬಗ್ಗೆಯೂ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ನಿಗಾ ವಹಿಸಿ ತಕ್ಷಣವೇ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಹೋಮ್ ಐಸೊಲೇಷನ್‍ನಲ್ಲಿ ಇರುವವರ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದರ ಮೂಲ️ಕ ಟೆಲಿಮಾನಿಟರಿಂಗ್ ಮೂಲ️ಕ ನಿರಂತರ ನಿಗಾ…
Year: 2020
ಶಿರಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ನಾಮಪತ್ರ
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಸಾಗಿದೆ. ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರು ಉಮೇದುವಾರಿಕೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ದುಮುಕಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಜೊತೆ ಡಾ. ರಾಜೇಶ್ ಗೌಡ ಅವರು ನಾಮಪತ್ರ ಸಲ್ಲಿಸಿದರು. ಸಂದರ್ಭದಲ್ಲಿ ಸಂಸದರಾದ ಶ್ರೀ ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಸುರೇಶ್ ಗೌಡ, ಮುಖಂಡರಾದ ಶ್ರೀ ಎಸ್.ಆರ್. ಗೌಡ, ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಶ್ರೀ ಹುಚ್ಚಯ್ಯ ಮತ್ತಿತರರು ಉಪಸ್ಥಿತರಿದ್ದರು.
ರಾಜರಾಜೇಶ್ವರಿ ನಗರ ಉಪಚುನಾವಣೆ; ಕೈ ಅಭ್ಯರ್ಥಿ ಕುಸುಮಾ ನಾಮಪತ್ರ
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ಆರ್.ಆರ್.ನಗರ ಬಿಬಿಎಂಪಿ ಕಚೇರಿಯಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.
ರಾಜರಾಜೇಶ್ವರಿ ನಗರ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ
ಬೆಂಗಳೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರತ್ನ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ರವರು ಹಾಗೂ ಕಂದಾಯ ಮಂತ್ರಿಆರ್ ಅಶೋಕ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜಿಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭ್ಯರ್ಥಿ ಮುನಿರತ್ನ ಅವರಿಗೆ ಬಿ.ಪಾರಂ ವಿತರಿಸಿದರು. ಬಳಿಕ ಮುನಿರತ್ನ ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ, ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ, ಡಾ.ಸುಧಾಕರ್ ಉಪಸ್ಥಿತರಿದ್ದರು.
‘ಕಾಲಚಕ್ರ’ ಚಿತ್ರ ಟೀಸರ್’ಗೆ ಭಾರೀ ಮೆಚ್ಚುಗೆ
ಸುಮಂತ್ ಕ್ರಾಂತಿ ನಿರ್ದೇಶನದ ‘ಕಾಲಚಕ್ರ’ ಇದೀಗ ಭಾರೀ ಸುದ್ದಿಯಾಗುತ್ತಿದೆ. ನಟ ವಸಿಷ್ಠಿ ಸಿಂಹ ಮತ್ತು ರಕ್ಷಾ ಅಭಿನಯದ ಕಾಲಚಕ್ರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಟೀಸರ್ ಭಾರೀ ಮೆಚ್ಚುಗೆ ಗಳಿಸಿದೆ.
ಆಸ್ತಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ದೆಹಲಿ: ಗ್ರಾಮೀಣ ಪ್ರದೇಶಗಳ ಜನರಿಗೆ ವರದಾನವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಟ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದ ಸ್ವಾಮಿತ್ವ ಯೋಜನೆ ಮೂಲಕ ಆಸ್ತಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳ ಮನೆಗಳು ಮತ್ತು ಹಳ್ಳಿ ಪ್ರದೇಶಗಳ ಆಸ್ತಿ ಹಕ್ಕುಪತ್ರಗಳ ಭೌತಿಕ ಪ್ರತಿ ಇದಾಗಿದೆ. ಏಪ್ರಿಲ್ ನಲ್ಲಿ ಆರಂಭಿಸಿದ ಸ್ವಾಮಿತ್ವ ಯೋಜನೆ ಗ್ರಾಮೀಣ ಜನರು ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಅವಕಾಶ ನೀಡಲಿದೆ. ಯೋಜನೆಯಿಂದ 6.62 ಲಕ್ಷ ಗ್ರಾಮಗಳಿಗೆ ಲಾಭವಾಗಲಿದ್ದು, ಯೋಜನೆಯಡಿಯಲ್ಲಿ ರೈತರ ಜಮೀನುಗಳು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ. A historic effort towards rural transformation. #SampatiSeSampanta https://t.co/VYNk6nTcg6 — Narendra Modi (@narendramodi) October 11, 2020
ಮಹದಾಯಿ ವಿಚಾರ: ಗೋವಾ ವಾದ ಸತ್ಯಕ್ಕೆ ದೂರವಾದುದು: ಜಾರಕಿಹೊಳಿ
ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ಕುರಿತು ಈಗಾಗಲೇ ನ್ಯಾಯಾಧಿಕರಣವು ಐತೀರ್ಪು ನೀಡಿದ್ದು, ಕೇಂದ್ರ ಸರ್ಕಾರವೂ ಸಹ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಿದೆ. ಈ ಸಂದರ್ಭದಲ್ಲಿ ಗೋವಾ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿರುವುದು ಹಸ್ಯಾಸ್ಪದವಾಗಿದೆ ಎಂದು ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಮಹದಾಯಿ ಯೋಜನೆಯ ಅನುಷ್ಠಾನದ ವಿಷಯವು ಈಗಾಗಲೇ ತಾರ್ಕಿಕವಾಗಿ ಅಂತ್ಯವಾಗಿದೆ. ಅರಣ್ಯ ಇಲಾಖೆ ಅನುಮೋದನೆ ಮಾತ್ರ ಬಾಕಿ ಇದ್ದು, ಇಂತಹ ಸಂದರ್ಭದಲ್ಲಿ ನೆರೆಯ ರಾಜ್ಯ ಗೋವಾ ಸುಖಾ ಸುಮ್ಮನೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ರಾಜ್ಯ ಸರ್ಕಾರವು ಇದನ್ನು ನ್ಯಾಯಾಲಯದಲ್ಲಿ ಸಮರ್ಥವಾಗಿ ಎದುರಿಸಲಿದೆ ಎಂದು ಭರವಸೆ ನೀಡಿದ್ದಾರೆ. ಮಹದಾಯಿ ನೀರು ಹಂಚಿಕೆಗೆ ಸಂಬಂಧಿಸಿ, ಗೋವಾ ಮುಖ್ಯಮಂತ್ರಿ ಬಿಡುಗಡೆ ಮಾಡಿರುವ ಛಾಯಾಚಿತ್ರ ಮತ್ತು ವಿಡೀಯೋಗಳು ಅವರೇ ಸೃಷ್ಟಿಸಿರುವ ದಾಖಲೆಗಳಷ್ಟೇ, ಮಹದಾಯಿ ಮತ್ತು…
ಮಹದಾಯಿ, ಕೃಷ್ಣಾ ವಿವಾದ: ಕೇಂದ್ರ ಸಚಿವರೊಂದಿಗೆ ಸಚಿವ ಜಾರಕಿಹೊಳಿ ಚರ್ಚೆ
ಬೆಂಗಳೂರು: ನೆರೆಯ ರಾಜ್ಯಗಳಾದ ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ಮತ್ತು ನ್ಯಾಯಬದ್ಧ ವಾದವನ್ನು ಮಂಡಿಸಲಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಭರವಸೆ ನೀಡಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ತೆಲಂಗಾಣ ಸರ್ಕಾರವು ಹೊಸ ತಗಾದೆ ತೆಗೆದಿದೆ. ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂಯೆ ನ್ಯಾಯಾಧಿಕರಣವು ಈಗಾಗಲೇ ಅಂತಿಮ ತೀರ್ಪನ್ನೂ ಸಹಾ ನೀಡಿದೆ. 2013ರಲ್ಲಿಯೇ ಕರ್ನಾಟಕ, ಮಹಾರಾಷ್ಟ್ರ ಮತ್ತು ಅಖಂಡ…
ಶಾಲಾಂಭರಕ್ಕೆ ಯತ್ನ; ಸರ್ಕಾರದ ವಿರುದ್ಧ ಹೆಚ್ಚಿಡಿಕೆ ಕಿಡಿ
ಬೆಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಮುಂದಾಗಿರುವ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಹೆಚ್ಡಿಕೆ, ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ, ಶಾಪಕ್ಕೆ ಗುರಿಯಾಗುತ್ತಿದೆ. ‘ಹರ ಮುನಿದರೂ ಗುರು ಕಾಯ್ವನು’ ಎಂಬುದನ್ನು ಸರಕಾರ ಮರೆಯಬಾರದು. ರಾಜ್ಯ ಸರ್ಕಾರ ಅಕ್ಟೋಬರ್ 1 ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ. ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ…
ನಂದಿ ಬೆಟ್ಟದಲ್ಲಿ ಜನ ಜಂಗುಳಿ; ಸಾಮಾಜಿಕ ಅಂತರ ಇಲ್ಲ
ಬೆಂಗಳೂರು: ಲಾಕ್’ಡೌನ್ ಕಾರಣದಿಂದ ಕಳೆದ ಹಲವು ತಿಂಗಳಿನಿಂದ ಪರಿಸ್ಥಿತಿ ತಂದೊಡ್ಡಿದ್ದ ಪಜೀತಿಯಲ್ಲಿ ಬಂಧಿಯಾಗಿದ್ದ ಜನ ಇದೀಗ ಪ್ರವಾಸಿ ತಾಣಗಳತ್ತ ಮನಸ್ಸು ಕೇಂದ್ರೀಕರಿಸಿದ್ದಾರೆ. ಅದರಲ್ಲೂ ಬೆಂಗಳೂರು ಸುತ್ತಮುತ್ತಲ ಜನರು ನಂದಿ ಬೆಟ್ಟದತ್ತ ಚಿತ್ತ ಹರಿಸಿದ್ದಾರೆ. ಕಳೆದೆರಡು ವಾರಗಳಲ್ಲಿ ನಂದಿಬೆಟ್ಟಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಿದೆ. ವಾರಾಂತ್ಯದ ದಿನಗಳಾದ ಶನಿವಾರ, ಭಾನುವಾರದಂದು ನಂದಿಬೆಟ್ಟದಲ್ಲಿ ಜನಜಾತ್ರೆಯ ಸನ್ನಿವೇಶ ಸೃಷ್ಟಿಯಾಗಿದೆ. ನಂದಿಬೆಟ್ಟದ ತಪ್ಪಲಲ್ಲಿ ಹಾಗೂ ವಾಹನ ನಿಲುಗಡೆ ಪ್ರದೇಶಗಳಲ್ಲಿ ಸಾವಿರಾರು ವಾಹನಗಳು ನಿಂತಿದ್ದ ದೃಶ್ಯ ಕಂಡುಬರುತ್ತಿತ್ತು. ಬಹುತೇಕ ಮಂದಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂಬ ಆರೋಪಗಳೂ ಕೇಳಿಬಂದಿವೆ. ಪರಿಸರವಾದಿಗಳ ಆತಂಕ: ನಮ್ಮ ಬಹುತೇಕ ಪರಿಸರ ಪ್ರವಾಸೋದ್ಯಮದ ಸ್ಥಳ ಗಳು ಇತ್ತೀಚೆಗೆ ಹೀಗೆ ಆಗುತ್ತಿವೆ. ಇಷ್ಟು ಪ್ರಮಾಣದ ವಾಹನಗಳು ಅರಣ್ಯ ಪ್ರದೇಶದ, ಪ್ರಕೃತಿ ತಾಣಗಳಿಗೆ ಒಮ್ಮೆಲೇ ಲಗ್ಗೆ ಇಟ್ಟರೆ ಆ ಪರಿಸರವನ್ನೆ ಏಕೈಕ ಆಶ್ರಯ ತಾಣವಾಗಿ ನಂಬಿದ , ಜನರ ಗದ್ದಲವನ್ನು ಸಹಿಸದ ವನ್ಯಜೀವಿಗಳ…
