ಭೂ ಸುಧಾರಣಾ ಕಾಯ್ದೆ ವಿಚಾರ; ಕಾಂಗ್ರೆಸ್ ನಡೆ ಬಗ್ಗೆ ರಾಘವೇಂದ್ರ ಗರಂ

ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,ರೈತ ಸಂಘದ ಕೆಲ ಕಾರ್ಯಕರ್ತರು ಹಾಗೂ ಕೆಲ ಸಂಘಟನೆಗಳ ಮೂಲಕ ಕಾಂಗ್ರೆಸ್ ನಾಯಕರು ತಪ್ಪು ಮಾಹಿತಿ ರವಾನಿಸುತ್ತಿದ್ದರೆ ಎಂದು ದೂರಿದರು. ಕೃಷಿ ಮಸೂದೆ ಹಾಗೂ ಭೂಸುಧಾರಣಾ‌ಕಾಯ್ದೆ ರೈತರ ಪರವಾಗಿದೆ. ಈ ಮಸೂದೆಯಿಂದ ಎಸ್ ಸಿ, ಎಸ್ ಟಿಗೆ ಸೆರಿದ ರೈತರಿಗೆ ಅನ್ಯಾಯವಾಗದು ಎಂದವರು ಸ್ಪಷ್ಟಪಡಿಸಿದರು.

ಸತ್ಯ ಘಟನೆಯ ‘ದಿಶಾ’ ಎನ್ ಕೌಂಟರ್ ಚಿತ್ರ; ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು

ಸತ್ಯ ಘಟನೆಯನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ ‘ದಿಶಾ’ ಎನ್ ಕೌಂಟರ್ ಚಿತ್ರ ಇದೀಗ ಎಲ್ಲರ ಕುತೂಹಲದ ಕೇಂದ್ರಬಿಂದು. ಈ ಸಿನಿಮಾದ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸದ್ದು ಮಾಡುತ್ತಿದೆ. ಇಡೀ ಆಂಧ್ರ ಪ್ರದೇಶವನ್ನು ಬೆಚ್ಚಿ ಬೀಳಿಸಿದ್ದ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಈ ‘ದಿಶಾ’ ಎನ್ ಕೌಂಟರ್ ಚಿತ್ರದಲ್ಲಿ ಪ್ರತಿಬಿಂಬಿಸಿದೆ ಎಂದೇ ಹೇಳಲಾಗುತ್ತಿದೆ.

ಜಗತ್ತಿನ ಅತ್ಯಂತ ಉದ್ದದ ಅಟಲ್ ಸುರಂಗ ಮಾರ್ಗ ಲೋಕಾರ್ಪಣೆ

ದೆಹಲಿ: ಹಿಮಾಚಲಪ್ರದೇಶದ ರೋಹ್ಟಂಗ್​ನಲ್ಲಿ ನಿರ್ಮಾಣವಾಗಿರುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಯೋಜನೆ ಇದಾಗಿದೆ. 2002ರಲ್ಲಿ ಆರಂಭಿಸಲಾಗಿದ್ದ ಈ ಸುರಂಗ ಮಾರ್ಗ ಇಂದು ಲೋಕಾರ್ಪಣೆಗೊಂಡಿದೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದಾಗಿ 4ರಿಂದ 5 ಗಂಟೆ ಸಮಯವೂ ಉಳಿತಾಯವಾಗಲಿದೆ.

ಜಗತ್ತಿನ ಅತ್ಯಂತ ಉದ್ದದ ಅಟಲ್ ಸುರಂಗ ಮಾರ್ಗದ ವೈಶಿಷ್ಟ್ಯ.. ವೀಡಿಯೋ ನೋಡಿ

ಹಿಮಾಚಲಪ್ರದೇಶದ ರೋಹ್ಟಂಗ್​ನಲ್ಲಿ ನಿರ್ಮಾಣವಾಗಿರುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗ ಹಲವು ವೈಶಿಷ್ಟ್ಯವನ್ನು ಹೊಂದಿದೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದಾಗಿ 4ರಿಂದ 5 ಗಂಟೆ ಸಮಯವೂ ಉಳಿತಾಯವಾಗಲಿದೆ.    

ಬೆಳಗಾವಿಗಾಗಿ ಡಿ‌.ಕೆ.ಶಿ. ರಣತಂತ್ರ

ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ. ಮುಂಬರುವ ಉಪಚುನಾವಣೆಯಲ್ಲಿ ಸುರೇಶ ಅಂಗಡಿಯವರ ಪತ್ನಿಗೆ ಟಿಕೆಟ್ ನೀಡಬೆಂಬ ಒತ್ತಡ ಬಿಜೆಪಿ ನಾಯಕರಿಂದ ಸಾಗಿದೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ಕೂಡಾ ಈ ಬಾರಿ ವರ್ಚಸ್ವೀ ನಾಯನನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ‌.ಕೆ. ಶಿವಕುಮಾರ್ ಅವರ ಬೆಳಗಾವಿ ಭೇಟಿ ಕುತೂಹಲದ ಕೇಂದ್ರಬಿಂದುವಾಯಿತು. ಈ ನಡುವೆ, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಡಿ‌.ಕೆ.ಶಿವಕುಮಾರ್ ಶುಕ್ರವಾರ ಉದ್ಘಾಟಿಸಿದರು. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಹಿರಿಯ ನಾಯಕ ವೀರಣ್ಣ ಮತ್ತಿಕಟ್ಟಿ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.…

ಸುರೇಶ್ ಅಂಗಡಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಭೇಟಿ

ಬೆಳಗಾವಿ: ಇತ್ತೀಚೆಗೆ ಕೊರೋನಾ ಸೋಂಕಿನಿಂದ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಬೆಳಗಾವಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಬೆಳಗಾವಿ ಪ್ರವಾಸದ ಸಂದರ್ಭದಲ್ಲಿ ಅಂಗಡಿ ನಿವಾಸಕ್ಕೆ ತೆರಳಿದ ಅವರು ಮಾಜಿ ಸಚಿವ ಸುರೇಶ ಅಂಗಡಿಯವರ ಭಾವಚಿತ್ರಕ್ಕೆ ನಮಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಚ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

ಮೈಸೂರು ಅರಮನೆಗೆ ಆಗಮಿಸಿದ ಗಜಪಡೆ; ಸಾಂಪ್ರದಾಯಿಕ ಸ್ವಾಗತ

ಮೈಸೂರು: ಅರಮನೆಯ ಪೂರ್ವದಿಕ್ಕಿನ ಜಯಮಾರ್ತಾಂಡ ಮಹಾದ್ವಾರದಲ್ಲಿ ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾರ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಳಿಕ ಪೊಲೀಸ್ ಇಲಾಖೆ ವತಿಯಿಂದ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳಿಗೆ ಗಾರ್ಡ್ ಆಫ್ ಆನರ್ ಸಲ್ಲಿಸಲಾಯಿತು. ಅಲ್ಲಿಂದ ಮಧ್ಯಾಹ್ನ 12.45 ರ ಸುಮಾರಿಗೆ ನಾದಸ್ವರ ಹಾಗೂ ಪೂರ್ಣಕುಂಭದ ಮೂಲಕ ಅರಮನೆಯ ಆನೆ ಬಾಗಿಲಿಗೆ ಗಜೆಪಡೆಗಳನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ಅಲ್ಲಿ ಗಜಪಡೆಗಳಿಗೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಪುಷ್ಪನಮನ ಸಲ್ಲಿಸಿದರು.  

ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಸರ್ಕಾರದಿಂದ ಉಚಿತ ಹೆಲ್ತ್ ಕಾರ್ಡ್

ಬೆಂಗಳೂರು: ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ವಾರ್ತಾ ಇಲಾಖೆಯಿಂದ ನೀಡಲಾಗುವ ಉಚಿತ ಹೆಲ್ತ್ ಕಾರ್ಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರಿನಲ್ಲಿಂದು ಗಾಂಧೀ ಜಯಂತಿ ಕಾರ್ಯಕ್ರಮ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲ್ತ್ ಕಾರ್ಡನ್ನು ಸಾಂಕೇತಿಕವಾಗಿ ವಿತರಿಸಿದರು. ವಿಧಾನಸೌಧ ಆವರಣದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ದಿ.ಲಾಲ್ ಬಹದ್ದೂರ್ ಶಾಸ್ತ್ರಿ 116ನೇ ಜನ್ಮದಿನ ಅಂಗವಾಗಿ ಅವರ ಪ್ರತಿಮೆ ಬಳಿಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151 ನೇ ಜನ್ಮ ದಿನದದ ಅಂಗವಾಗಿ ಅವರ ಪ್ರತಿಮೆ ಬಳಿಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಈ ವೇಳೆ, ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ವಾರ್ತಾ ಇಲಾಖೆಯಿಂದ ನೀಡಲಾಗುವ ಉಚಿತ ಹೆಲ್ತ್ ಕಾರ್ಡ್’ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು IFWJ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಅವರಿಗೆ ನೀಡುವ ಮೂಲಕ ಚಾಲನೆ…

Uncategorized

ಪ್ರವಾಹ ಪರಿಹಾರ; ಅನ್ಯಾಯಕ್ಕೆ ಮತದಾರನೇ ಉತ್ತರ ಕೊಡಬೇಕು: ಡಿ.ಕೆಶಿ

ಬೆಳಗಾವಿ: ಬೆಳಗಾವಿ ಹಾಗೂ ಉತ್ತರ ಕರ್ನಾಟಕದಲ್ಲಿ ಅನೇಕ ಮಂತ್ರಿಗಳು, ಶಾಸಕರು, ಸಂಸದರು ಇದ್ದರೂ ಪ್ರವಾಹದಿಂದ ನೊಂದಿರುವ ಜನರಿಗೆ ನೆರವಾಗಲು ಸಾಧ್ಯವಾಗಲಿಲ್ಲ ಎಂದರೆ, ಇದಕ್ಕೆ ಮತದಾರನೇ ಉತ್ತರ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ಪ್ರವಾಹದಿಂದ ಈ ಭಾಗದ ಜನರ ಜೀವನ ಬೀದಿಗೆ ಬಿದ್ದಿದೆ. ತಮ್ಮದೇ ಸರ್ಕಾರ, ಇಷ್ಟು ಜನ ಸಂಸದರು, ಮಂತ್ರಿಗಳು, ಶಾಸಕರು ಇದ್ದರೂ ಇಲ್ಲಿನ ಜನರಿಗೆ ಪರಿಹಾರ ಹಾಗೂ ನ್ಯಾಯ ಕೊಡಿಸಲು ಅವರು ವಿಫಲರಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. ಅಭ್ಯರ್ಥಿ ಕುರಿತು ಸಭೆ ನಡೆಸಿ ತೀರ್ಮಾನ: ಮುಂಬರುವ ಉಪಚುನಾವಣೆಗಳಿಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಚರ್ಚಿಸಲು ನಮ್ಮ ಎಲ್ಲ ನಾಯಕರು, ಶಾಸಕರು, ಜಿಲ್ಲಾ ಅಧ್ಯಕ್ಷರು, ಚುನಾವಣೆಯಲ್ಲಿ ಸ್ಪರ್ಧೆ ಮಾಡಿದವರ ಸಭೆ ಕರೆದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಂತರ ತೀರ್ಮಾನ ಮಾಡಲಾಗುವುದು ಎಂದು ಡಿ.ಕೆ…

ಗಾಂಧಿ ಜಯಂತಿ ಅಂಗವಾಗಿ ಶಾಂತಿಗಾಗಿ ಸೈಕಲ್ ಜಾಥಾ

ಬೆಂಗಳೂರು: ಗಾಂಧಿ ಜಯಂತಿ ಅಂಗವಾಗಿ ಪಾಲಿಕೆ ಸಹಯೋಗದಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ವಿಧಾನಸೌಧದಿಂದ ಮಹಾತ್ಮಗಾಂಧಿ ರಸ್ತೆ ಕಬ್ಬನ್ ಪಾರ್ಕ್ ವರೆಗೆ ಶಾಂತಿಗಾಗಿ ಸೈಕಲ್ ಜಾಥಾ ನಡೆಸಲಾಯಿತು. ಪರಿಸರ ಸ್ನೇಹಿ ಸಂಚಾರ ಮತ್ತು ಸುರಕ್ಷತೆಗಾಗಿ ಸೈಕಲ್ ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಪಾಲಿಕೆ, ಬೆಂಗಳೂರು ಸ್ಮಾರ್ಟ್ ಸಿಟಿ ಮತ್ತು ಡಲ್ಟ್ ಸಹಯೋಗದಲ್ಲಿ ಮುಂಬರುವ ನವೆಂಬರ್ 1, 2020 ರ ವೇಳೆಗೆ 5 ಕಿಮಿ ಸೈಕಲ್ ಪಥ ನಿರ್ಮಾಣವಾಗಲಿದೆ. ಈ ವರ್ಷಾಂತ್ಯಕ್ಕೆ ಸೈಕಲ್ ಪಥವನ್ನು 25ಕಿಮಿ ವರೆಗೆ ವಿಸ್ತರಿಸುವ ಯೋಜನೆಯಿದೆ. ಸೈಕಲ್ ಬಳಕೆಯ ಮೂಲಕ ಕಸಮುಕ್ತ ರಸ್ತೆ, ಸಾರ್ವಜನಿಕ ಸ್ಥಳಗಳ ಸ್ವಚ್ಚತೆ, ಶಾಂತಿ-ಸೌಹಾರ್ಧ ಜಾಗೃತಿ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸುವುದು ಸೈಕಲ್ ಜಾಥ ಉದ್ದೇಶವಾಗಿದೆ.