ಸುರೇಶ್‌ ಅಂಗಡಿ ನಿಧನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಕಂಬನಿ

ಬೆಂಗಳೂರು: ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರ ನಿಧನ ನನಗೆ ತೀವ್ರ ದಿಗ್ಬ್ರಮೆಯಾಗಿದೆ. ತೀವ್ರ ಆಘಾತವಾಗಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ದುಃಖ ತೋಡಿಕೊಂಡಿದ್ದಾರೆ. ನಮ್ಮ ಪಕ್ಷ ಓರ್ವ ಉನ್ನತ, ಉತ್ತಮ ನಾಯಕನ್ನು ಹಾಗೂ ಅತ್ಯಂತ ನಿಷ್ಟಾವಂತ ಕಟ್ಟಾಳುವನ್ನು ಕಳೆದುಕೊಂಡಿದೆ. ಬೆಳಗಾವಿ ಮಾತ್ರವಲ್ಲದೆ ಇಡೀ ನಾಡಿನ ನೆಚ್ಚಿನ ನಾಯಕರಾಗಿದ್ದರು, ನಮಗೆ ಹಿರಿಯರಾಗಿ ಮಾರ್ಗದರ್ಶನ ಮಾಡುತ್ತಿದ್ದರು. ರಾಜಕಾರಣದಲ್ಲಿ ಅಜಾತಶತ್ರುವಾಗಿದ್ದರು ಎಂದು ಅವರು ಬಣ್ಣಿಸಿದ್ದಾರೆ. ವೈಯಕ್ತಿಕ ಜೀವನದಲ್ಲೂ ಶಿಸ್ತುಬದ್ಧರಾಗಿದ್ದರು. ಪ್ರತಿಯೊಬ್ಬರಿಗೂ ಮಾದರಿ ಎನಿಸುವಂಥ ವ್ಯಕ್ತಿತ್ವ ಹೊಂದಿದ್ದರು. ಇಂತಹ ಅಂಗಡಿಯರ ನಿಧನ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆಯನ್ನು ಭರಿಸುವುದು ನಮಗಾಗಲಿ, ನಮ್ಮ ಪಕ್ಷಕ್ಕಾಗಲಿ ಭರಿಸುವುದು ಕಷ್ಟ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸುರೇಶ ಅಂಗಡಿ ನಿಧನಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

ಬೆಂಗಳೂರು: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ದುಃಖ ವ್ಯಕ್ತಪಡಿಸಿದ್ದಾರೆ. ಸತತವಾಗಿ ನಾಲ್ಕು ಬಾರಿ ಸಂಸದರಾಗಿದ್ದ, ನನ್ನ ಆತ್ಮೀಯ ಸ್ನೇಹಿತರೂ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಶ್ರೀ ಸುರೇಶ್ ಅಂಗಡಿಯವರ ನಿಧನದಿಂದ ನನ್ನ ಮನಸ್ಸಿಗೆ ತುಂಬಾ ‌ನೋವುಂಟಾಗಿದೆ ಎಂದವರು ಹೇಳಿದ್ದಾರೆ. ಕಾನೂನು ಪದವೀಧರರಾಗಿ, ರಾಜಕೀಯದಲ್ಲಿ ಪ್ರವರ್ಧಮಾನಕ್ಕೆ ಬಂದಿದ್ದ, ವಾಣಿಜ್ಯೋದ್ಯಮಿಯಾಗಿದ್ದ ಶ್ರೀಯುತರ ಅಗಲಿಕೆಯಿಂದ ರಾಜ್ಯ ಹಾಗೂ ದೇ‌ಶವು ದೂರದೃಷ್ಟಿಯುಳ್ಳ ಪ್ರಭಾವಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಇವರ ಆತ್ಮಕ್ಕೆ ಚಿರಶಾಂತಿ ದೊರಕಲೆಂದೂ ಹಾಗೂ ಇವರ ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಅವರು ಪ್ರಾರ್ಥಿಸಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿಗಳ ವೀಡಿಯೋ ಸಂವಾದ

ಬೆಂಗಳೂರು: ಕೋವಿಡ್ 19 ಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು  ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ನವದೆಹಲಿ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಒಟ್ಟು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ರಾಜ್ಯ ಖಾತೆ ಸಚಿವರಾದ ಅಶ್ವಿನಿಕುಮಾರ್ ಚೌಬೆ ಅವರು ಹಾಗೂ ಕೇಂದ್ರ ಆರೋಗ್ಯ ಮಂತ್ರಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಂವಾದದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಸೋಂಕಿತರು ಆಸ್ಪತ್ರೆಗೆ ದಾಖಲಾದ ನಂತರ ಅವರಿಗೆ ಅಗತ್ಯವಿರುವ ಚಿಕಿತ್ಸೆ, ಔಷಧಿಗಳು ಮತ್ತು ಆಕ್ಷಿಜನ್ ಲಭ್ಯತೆಯನ್ನು ಖಾತ್ರಿಪಡಿಸಲಾಗುತ್ತಿದೆ ಎಂದವರು ಕೇಂದ್ರದ ಗಮನಸೆಳೆದರು. ರಾಜ್ಯದಲ್ಲಿ ಪರೀಕ್ಷಾ ಸೌಲಭ್ಯಗಳನ್ನು ಸಾಕಷ್ಟು ಹೆಚ್ಚಿಸಲಾಗಿದೆ. ಪ್ರಸ್ತುತ ನಮ್ಮಲ್ಲಿ 136 ಪರೀಕ್ಷಾ ಪ್ರಯೋಗಾಲಯಗಳಿದ್ದು, ಪ್ರತಿ ದಿನದ ಪರೀಕ್ಷಾ ಸಾಮಥ್ರ್ಯವನ್ನು 70…

ಡ್ರಗ್ಸ್ ಕೇಸ್; ದೀಪಿಕಾ ಪಡುಕೋಣೆ ಸಹಿತ ಅನೇಕ ಬಾಲಿವುಡ್ ಬೆಡಗಿಯರಿಗೆ ಸಮನ್ಸ್

ಮುಂಬೈ: ಡ್ರಗ್ ನಶೆಯಲ್ಲಿರುವ ಚಿತ್ರರಂಗದ ಮತ್ತಷ್ಟು ತಾರೆಯರಿಗೆ ಸಂಕಷ್ಟ ಶುರುವಾಗಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್’ರನ್ನು ಎನ್‌ಸಿಬಿ ವಿಚಾರಣೆಗೆ ಗುರಿಪಡಿಸಲಿದೆ. ಈ ಸಂಬಂಧ ಈ ಬೆಡಗಿಯರಿಗೆ ಎನ್‌ಸಿಬಿ ಸಮನ್ಸ್ ನೀಡಿದೆ. ಇವರಷ್ಟೇ ಅಲ್ಲ, ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ಅಲಿ ಖಾನ್ ಗೆ ಎನ್‌ಸಿಬಿ ಸಮನ್ಸ್ ನೀಡಿದೆ. ಬಂಧಿತ ರಿಯಾ ಚಕ್ರವರ್ತಿ ಹೇಳಿಕೆಯನ್ನಾಧರಿಸಿ ನಟಿಯರಿಗೆ ಎನ್‌ಸಿಬಿ ಸಮನ್ಸ್ ನೀಡಿದೆ. ಸೆಪ್ಟೆಂಬರ್ 24ಕ್ಕೆ ಫ್ಯಾಶನ್ ಡಿಸೈನರ್ ಸಿಮೋನ್ ಖಂಬಟ್ಟಾ, ನಟಿ ರಕುಲ್ ಪ್ರೀತ್ ಸಿಂಗ್, ಸೆ. 25ರಂದು ದೀಪಿಕಾ ಪಡುಕೋಣೆ, ಹಾಗೂ ಸೆ. 26ಕ್ಕೆ ಶ್ರದ್ಧಾ ಕಪೂರ್ ಹಾಗೂ ಸಾರಾ ಅಲಿ ಖಾನ್ ವಿಚಾರಣೆಗೆ ಹಾಜರಾಗುವಂತೆ ಎನ್‌ಸಿಬಿ ಸಮನ್ಸ್ ನೀಡಿದೆ.

ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

ಬೆಳಗಾವಿ: ಕೇಂದ್ರ ಸಚಿವ ಸುರೇಶ ಅಂಗಡಿ ನಿಧನದಿಂದಾಗಿ ಬೆಳಗಾವಿಯಲ್ಲಿ ನೀರವ ಮೌನ ಆವರಿಸಿದೆ. ನಾಲ್ಕು ಬಾರಿ ಸಂಸದರಾಗಿರುವ ಸುರೇಶ ಅಂಗಡಿಯವರು ಜನಾನುರಾಗಿ ರಾಜಕಾರಣಿ. ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆ 1955 ಜೂನ್ 1 ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದಲ್ಲಿ ಜನಿಸಿದರು. ಅಂಗಡಿಗೆ ಮದುವೆಯಾಗಿ 2 ಹೆಣ್ಣು ಮಕ್ಕಳಿದ್ದಾರೆ. ಸುರೇಶ್ ಅಂಗಡಿ ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದಿದ್ದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದಿದ್ದರು. ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು.

ಕೇಂದ್ರ ಸಚಿವ ಸುರೇಶ್ ಚನ್ನಬಸಪ್ಪ ಅಂಗಡಿ ವಿಧಿವಶ

ದೆಹಲಿ: ಕೇಂದ್ರದಲ್ಲಿ ಸಚಿವ ಸುರೇಶ್ ಚನ್ನಬಸಪ್ಪ ಅಂಗಡಿ ಅವರು ವಿಧಿವಶರಾಗಿದ್ದಾರೆ. 65 ವರ್ಷದ ಸುರೇಶ್ ಅಂಗಡಿ 2 ವಾರಗಳ ಹಿಂದೆ ಕೊರೋನಾ ಸೋಂಕಿಗೊಳಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ . 2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಅವರು ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಚಿವ ಸುರೇಶ ಅಂಗಡಿ ನಿಧನಕ್ಕೆ ಪ್ರಧಾನಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಲೋಕಸಭೆಯಲ್ಲಿ ರಾಜ್ಯದ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ ಡಿ.ಕೆ ಸುರೇಶ್

ನವದೆಹಲಿ: ರೈತ ವಿರೋಧಿ ಕಾಯ್ದೆಗಳು, ಕೊರೋನಾ ನಿರ್ವಹಣೆ ವೈಫಲ್ಯ, ರಾಜ್ಯದ ಆರ್ಥಿಕ ದುಸ್ಥಿತಿ, ಸಾಲದ ಹೊರೆ, ರಸಗೊಬ್ಬರ ಕೊರತೆ, ಜಿಡಿಪಿ ಕುಸಿತ, ನಿರುದ್ಯೋಗ, ಖಾಸಗೀಕರಣ ಸೇರಿದಂತೆ ರಾಜ್ಯದ ಸಮಸ್ಯೆಗಳು ಹಾಗೂ ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದಾರೆ. 2020-21ನೇ ಸಾಲಿನ ಬಜೆಟ್ ಅನುದಾನದ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಂಸದ ಸುರೇಶ್ ಅವರು ರಾಜ್ಯದ ವಿಚಾರಗಳನ್ನು ಅವರು ಮಂಡಿಸಿದ್ದಾರೆ. ‘ಕೇಂದ್ರ ಸರ್ಕಾರ ದೇಶದ ಆರ್ಥಿಕತೆ ನಿರ್ವಹಣೆ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ಸಾಲದ ಹೊರೆ ಮತ್ತಷ್ಟು ಹೆಚ್ಚಿಸುವಂತಹ ನಿರ್ದೇಶನಗಳನ್ನು ನೀಡುತ್ತಿರುವುದನ್ನು ನಾವು ಗಮನಿಸಿದ್ದೇವೆ. ಅವೈಜ್ಞಾನಿಕ ಆರ್ಥಿಕ ನೀತಿ, ಕೋವಿಡ್, ನೆರೆ ನಿರ್ವಹಣೆ ವೈಫಲ್ಯ, ಜಿಡಿಪಿ ಶೇ. -23ಕ್ಕೆ ಕುಸಿದಿದೆ ಎಂದು ಬೊಟ್ಟು ಮಾಡಿದ್ದಾರೆ. ವರ್ಷದ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಶೇ.3ಕ್ಕೆ ಕುಸಿದಿದ್ದು, ಬಿಜೆಪಿ ಹೊಗಳುವಂತಹ ಸಾಧನೆ ಏನೂ…

ಮಠದೊಳಗಿನ‌ ಬೆಕ್ಕಿನ ಮುಖವಾಡ; ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕೆ ವ್ಯಂಗ್ಯ

ಬೆಂಗಳೂರು: ತಮ್ಮ ಪಕ್ಷದ ವಿರುದ್ಧ ಟೀಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹೆಚ್.ಡಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ, ಸ್ಥಾನ-ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ. ನಿಮ್ಮ ಸ್ವಾಭಿಮಾನದ ಪ್ರಲಾಪ ಮಠದೊಳಗಿನ‌ ಬೆಕ್ಕಿನ ಮುಖವಾಡದಂತಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ. ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು ‘ಜೆಡಿಎಸ್ ಅವಕಾಶವಾದಿ ಪಕ್ಷ’ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಸಿಟ್ಟು ಹೊರಹಾಕಿದ್ದಾರೆ. ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ…

ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ; ಸಾ.ರ.ಮಹೇಶ್ ಟೀಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿ ಸಮಾಜವಾದದ ಸೋಗನ್ನು ಕಳಚಿಕೊಂಡವರು ಎಂದು ಶಾಸಕ ಸಾ.ರ.ಮಹೇಶ್ ಟೀಕಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ. ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯೂ ಇಲ್ಲ ಎಂದಿದ್ದಾರೆ. ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡಿ ಸಮಾಜವಾದದ ಸೋಗನ್ನು ಕಳಚಿಕೊಂಡ ಸಿದ್ದರಾಮಯ್ಯನವರು ಹುಸಿ ಸ್ವಾಭಿಮಾನದ ಕಾಗೆ ಬಂಗಾರ. ಸ್ವಾರ್ಥ ರಾಜಕಾರಣಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿ ಸನ್ಯಾಸಿ ಆದವರಂತೆ ಮಾತನಾಡುತ್ತಿರುವ ಸಿದ್ದರಾಮಯ್ಯ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಕನಿಷ್ಠ ನೈತಿಕತೆಯೂ ಇಲ್ಲ. 1/2 — Sa Ra Mahesh…