ಬೆಂಗಳೂರು: ಕೊರೋನದಿಂದ ಗುಣಮುಖರಾದವರಲ್ಲಿ ಮುಂದೆ ಎದುರಾಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್, ಕೋವಿಡ್ ರೋಗದಿಂದ ಗುಣಮುಖ ಹೊಂದಿದ ನಂತರ ಭವಿಷ್ಯದಲ್ಲಿ ಅದರಿಂದ ಪರಿಣಾಮ ಉಂಟಾಗಬಹುದೇ ಎಂಬ ಅನುಮಾನ ಉದ್ಭವಿಸಿದೆ. ಈ ನಿಟ್ಟಿನಲ್ಲಿ ಅಧ್ಯಯನದ ಅವಶ್ಯಕತೆ ಇದೆ. ಲಘು ಮತ್ತು ತೀವ್ರ ರೋಗಲಕ್ಷಣ ಹೊಂದಿರುವ ಮತ್ತು ಇತರೆ ಗಂಭೀರ ರೋಗಗಳಿಂದ ಬಳಲುತ್ತಿದ್ದವರ ಮೇಲೆ ಆಗಬಹುದಾದ ಪರಿಣಾಮಗಳ ಬಗ್ಗೆ ಅಧ್ಯಯನದಿಂದ ತಿಳಿದುಕೊಳ್ಳಬೇಕಿದೆ ಏನಿದ್ದಾರೆ. ಈ ಅಧ್ಯಯನದ ಆಧಾರದ ಮೇಲೆ ಕೋವಿಡ್-19 ರೋಗಿಗಳ ದೂರಗಾಮಿ ಆರೋಗ್ಯದ ದೃಷ್ಟಿಯಿಂದ ಸೂಕ್ತ ಚಿಕಿತ್ಸಾ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಟ್ವೀಟ್ ನಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ. ಕೋವಿಡ್ ಸೋಂಕಿನಿಂದ ಗುಣಮುಖ ಹೊಂದಿದವರಲ್ಲಿ ಉಂಟಾಗಬಹುದಾದ ದೂರಗಾಮಿ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ಒಂದು ವಿಶೇಷ ತಜ್ಞ ವೈದ್ಯರ…
Year: 2020
ದೇವೇಗೌಡರ ನಿಲುವು ರಾಜಕಾರಣಿಗಳಿಗೆ ಮಾದರಿ : ಎಚ್.ಎಂ. ರಮೇಶ್ ಗೌಡ
ಬೆಂಗಳೂರು:ರಾಜ್ಯಸಭೆಯಲ್ಲಿ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕನ್ನಡದ ಅಸ್ಮಿತೆಯನ್ನು ಪ್ರತಿಪಾದಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ಎಮ್. .ರಮೇಶ್ ಗೌಡ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರುದ್ಧ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹಿಂದಿ ಹೇರಿಕೆಗೆ ಗುದ್ದು ನೀಡಿದ್ದಾರೆ ಇಂದು ರಮೇಶ್ ಗೌಡ ಪ್ರತಿಪಾದಿಸಿದ್ದಾರೆ. ನಾಡು-ನುಡಿ ಗಡಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂಬುದನ್ನು ರುಜುವಾತು ಪಡಿಸಿದ ದೇವೇಗೌಡರ ನಿಲುವು ಎಲ್ಲ ರಾಜಕಾರಣಿಗಳಿಗೂ ಮಾದರಿ ಎಂದು ರಮೇಶ್ ಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸ್ವಾರ್ಥ ರಾಜಕಾರಣ; ಸಿದ್ದರಾಮಯ್ಯ ವಿರುದ್ಧ ಹೊರಟ್ಟಿ ಆಕ್ರೋಶ
ಬೆಂಗಳೂರು: ಜೆಡಿಎಸ್ ಬಗ್ಗೆ ಟೀಕೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಬಸವರಾಜ ಹೊರಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಅವಕಾಶವಾದಿತನ ಸ್ವಾರ್ಥ ರಾಜಕಾರಣದಿಂದ ಹೊರತಾಗದ ಆತ್ಮೀಯ ಸ್ನೇಹಿತರೂ ಆದ ಸಿದ್ದರಾಮಯ್ಯ ಅವರು ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯರೂ ಆದ ಬಸವರಾಜ್ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್’ನ ದಿಡ್ಡಿ ಬಾಗಿಲು ತೆಗೆಯಲು ಜೆಡಿಎಸ್ ನಲ್ಲಿ ಅವರಿಗೆ ಸಿಕ್ಕ ಸ್ಥಾನಮಾನ ಮನ್ನಣೆಗಳು ಕಾರಣ. ಇಲ್ಲದಿದ್ದರೆ ಪಕ್ಷಾಂತರ ಮಾಡಿದ ಪಕ್ಷದಲ್ಲಿ ಎಲ್ಲಿ ಕಳೆದು ಹೋಗುತ್ತಿದ್ದರೋ? ಎಂದು ಹೊರಟ್ಟಿ ಲೇವಡಿಮಾಡಿದ್ದಾರೆ. ಜೆಡಿಎಸ್ ವಿರುದ್ಧ ಮುಗಿಬೀಳುವ ಮುನ್ನ ತಾವು ರಾಜಕಾರಣದಲ್ಲಿ ಮಾಗಿದ್ದು ಎಲ್ಲಿ ಎಂಬುದನ್ನು ಆತ್ಮಸಾಕ್ಷಿಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿಕೊಳ್ಳಲಿ ಎಂದು ಹೊರಟ್ಟಿ ಕುಟುಕಿದ್ದಾರೆ.
ಚಿತ್ರರಂಗದಲ್ಲಿ ಡ್ರಗ್ ವಿಚಾರ ಬೇಸರದ ಸಂಗತಿ; ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು: ನಟರಾಗಲೀ, ನಟಿಯರಾಗಲೀ ಯಾರೂ ತಪ್ಪುಮಾಡಿದರೂ ಅದು ತಪ್ಪೇ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸಚಿವರು, ಡ್ರಗ್ಸ್ ದಂಧೆ ತನಿಖೆ ನಡೆಯುತ್ತಿದೆ.ಅಪರಾಧಿಗಳಾರು ಎಂಬುದು ತನಿಖೆಯಿಂದ ಪತ್ತೆಯಾಗಲಿದೆ ಎಂದರು. ಈ ಹಿಂದೆ ತಮ್ಮ ಅವಧಿಯಲ್ಲಿನ ಚಿತ್ರರಂಗದಲ್ಲಿ ಪರಿಶುದ್ಧ ವಾತಾವರಣವಿತ್ತು. ಶೂಟಿಂಗ್ ವೇಳೆಯಲ್ಲಿ ಸಣ್ಣತಪ್ಪಾದರೂ ಪಶ್ಚಾತ್ತಾಪ ಪಡುವಂತಹ ವಾತಾವರಣವಿತ್ತು. ಈಗ ಚಿತ್ರರಂಗದಲ್ಲಿ ಡ್ರಗ್ ವಿಚಾರ ಕೇಳಿಬಂದಿರುವುದು ಬೇಸರದ ಸಂಗತಿ ಎಂದವರು ಹೇಳಿದ್ದಾರೆ. ಈ ಹಾವಳಿ ಎಲ್ಲಾ ಎಂಗದಲ್ಲಿಯೂ ಇದೆ. ಚಿತ್ರರಂಗದಲ್ಲಾಗಿರುವುದು ಬಹಳ ಬೇಗ ಎದ್ದು ಕಾಣುತ್ತದೆ ಎಂದು ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಎಐಸಿಸಿ ಜವಾಬ್ಧಾರಿ; ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡಾಗೆ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು: ತಮಿಳುನಾಡು, ಪುದುಚೇರಿ, ಗೋವಾ ಉಸ್ತುವಾರಿಯಾಗಿ ಎಐಸಿಸಿ ವತಿಯಿಂದ ನೇಮಕವಾಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
ತಂತ್ರಜ್ಞಾನ ಆಧಾರಿತ ಕೃಷಿ; ರೈತರಿಗೆ ಡಿಸಿಎಂ ಸಲಹೆ
ದಾವಣಗೆರೆ: ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ವ್ಯವಸಾಯ ಮಾಡಿದರೆ ಅತ್ಯುತ್ತಮ ಲಾಭ ಗಳಿಸಬಹುದು. ಈ ನಿಟ್ಟಿನಲ್ಲಿ ರೈತರು ಯೋಚನೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಲಹೆ ಮಾಡಿದ್ದಾರೆ. ಹೊನ್ನಾಳಿ ವಿಧಾನಸಭೆ ಕ್ಷೇತ್ರದಲ್ಲಿ ಉಪ ಮುಖ್ಯಮುಂತ್ರಿ ಗೋವಿಂದ ಕಾರಜೋಳ ಅವರ ಜತೆಗೂಡಿ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದ ಅಶ್ವತ್ಥನಾರಾಯಣ, ಎಲ್ಲರಿಗೂ ಗೊತ್ತಿರುವಂತೆ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ತಂತ್ರಜ್ಞಾನ ಆಭಿವೃದ್ಧಿಯಾಗುತ್ತಿದೆ. ಈ ತಂತ್ರಜ್ಞಾನವನ್ನು ಕೃಷಿ ಉತ್ಪಾದನೆಗೆ ಅನ್ವಯ ಮಾಡಿಕೊಂಡರೆ ಉತ್ತಮ ಲಾಭ ಗಳಿಸಲು ಸಾಧ್ಯವಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಅಭಿವೃದ್ಧಿಯ ವೇಗ ಹೆಚ್ಚಾಗಿದ್ದು, ಹೊನ್ನಾಳಿ ಕ್ಷೇತ್ರದಲ್ಲಿಯೇ ಅದನ್ನು ಗಮನಿಸಬಹುದು ಎಂದ ಅವರು, ಇನ್ನು ಮುಂದೆ ಯಾವುದೇ ಯೋಜನೆ ತೆವಳುತ್ತಾ ಸಾಗುವುದಿಲ್ಲ. ಕಾಲಮಿತಿಯೊಳಗೆ ಎಲ್ಲವೂ ಕಾರ್ಯಗತವಾಗುತ್ತವೆ ಎಂದರು.
ಕೈಗಾರಿಕೋದ್ಯಮಿಗಳ ಅನುಕೂಲಕ್ಕಾಗಿ ಸದ್ಯದಲ್ಲೇ ಏಕಗವಾಕ್ಷಿ ವೆಬ್‌ಸೈಟ್
ಬೆಂಗಳೂರು: ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುವಂತಹ ಏಕಗವಾಕ್ಷಿ ವೆಬ್‌ಸೈಟನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೇಲ್ ನಲ್ಲಿ ಎಫ್‌ಸಿಐ ವತಿಯಿಂದ ಆಯೋಜಿಸಲಾಗಿದ್ದ ಫಾರಿನ್ ಇನ್‌ವೆಸ್ಟರ್ಸ್ ಕೌನ್ಸಿಲ್ ಕರ್ನಾಟಕ ಚಾಪ್ಟರ್ ನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಹಾಗೂ ಕೈಗಾರಿಕೆಗಳ ಸ್ಥಾಪನೆ ಆಗಬೇಕು ಎನ್ನುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಿದೆ. ಅಲ್ಲದೆ ಉದ್ಯಮ ಸ್ನೇಹಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವತ್ತ ಹೆಚ್ಚಿನ ಗಮನ ಹರಿಸುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹೊಸ ಕೈಗಾರಿಕಾ ನೀತಿ ಯನ್ನು ಜಾರಿಗೊಳಿಸಿದ್ದು ಹಾಗೂ ಕೈಗಾರಿಕಾ ಸೌಲಭ್ಯ ಅಧಿನಿಯಮದಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡಿರುವ ದೇಶದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆ ನಮ್ಮದಾಗಿದೆ ಎಂದರು. ಏಕಗವಾಕ್ಷಿ ಯೋಜನೆಯ ಮೂಲಕ ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುವ ನಿಟ್ಟಿನಲ್ಲಿ…
ಯಾರೋ ಮಾಡಿದ ತಪ್ಪಿಗೆ ರೈತರನ್ನು ದೂಷಿಸುವುದು ಸರಿಯಲ್ಲ: ಬಿ.ಸಿ.ಪಾಟೀಲ್
ಹಾವೇರಿ: ಯಾರೋ ಒಬ್ಬರು ಜಮೀನಿನಲ್ಲಿ ಗಾಂಜಾ ಬೆಳೆದು ತಪ್ಪು ಮಾಡಿದರು ಎಂದ ಮಾತ್ರಕ್ಕೆ ಅನ್ನಕೊಡುವ ಇಡೀ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ. ರೈತರು ನಾಡಿನ ಅನ್ನದಾತರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಆ್ಯಪ್ ಬೆಳೆ ಸಮೀಕ್ಷೆ ಪ್ರಾಯೋಗಿಕ ಹಂತದಲ್ಲಿಯೇ ಯಶಸ್ವಿಯಾಗುತ್ತಿರುವುದು ಹೆಮ್ಮೆಯ ವಿಚಾರ.2017ರಲ್ಲಿ ಬೆಳೆ ಸಮೀಕ್ಷೆ ಮಾಡಿದಾಗ ಸುಮಾರು 3 ಸಾವಿರ ರೈತರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು.ಆದರೀಗ ಆ್ಯಪ್ ಬೆಳೆ ಸಮೀಕ್ಷೆಯಲ್ಲಿ ಸೆ.11 ರ ಸಂಜೆವರೆಗೆ 76ಲಕ್ಷ ತಾಕುಗಳು ಸಮೀಕ್ಷೆಯಾಗಿರುವುದು ಹಮ್ಮೆಯ ವಿಚಾರ. ರೈತರು ಬಹಳ ಆಸಕ್ತಿಯಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ರೈತರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಆ್ಯಪ್ ಬೆಳೆ ಸಮೀಕ್ಷೆ ನಡೆಸುವುದು ಅತ್ಯವಶ್ಯಕ ಎಂದರು. ಕೆಲವೆಡೆ ನೆಟ್ ಪ್ರಾಬ್ಲಂನಿಂದಾಗಿ ತಡವಾಗಿದೆ.ಈಗ ಖಾಸಗಿ ನಿವಾಸಿಗಳ ಮೂಲಕವೂ ಸಮೀಕ್ಷೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಪಂಚಮಸಾಲಿ ಜಗದ್ಗುರು ಪೀಠಕ್ಕೆಸಚಿವರ ಬೇಟಿ ; ಶ್ರೀಗಳ ಜೊತೆ ಚರ್ಚೆ
ದಾವಣಗೆರೆ: ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವರಾದ ಶ್ರೀ ಗೋವಿಂದ ಕಾರಜೋಳರವರು, ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಐಟಿ ಮತ್ತು ಬಿಟಿ ಸಚಿವರಾದ ಶ್ರೀ ಅಶ್ವತ ನಾರಾಯಣರವರು, ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಬಸವರಾಜರವರು ಹಾಗೂ ದಾವಣಗೆರೆ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್ವರರವರು ಹರಿಹರ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಬೇಟಿ ನೀಡಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮಿಗಳವರ ದಿವ್ಯ ಆಶೀರ್ವಾದ ಪಡೆದರು. ಶ್ರೀ ವಚನಾನಂದ ಮಹಾಸ್ವಾಮಿಗಳವರಿಂದ ಆರೋಗ್ಯದ ಟಿಪ್ಸ್ ಗಳ ಮಾಹಿತಿಯನ್ನು ಪಡೆದುಕೊಂಡು ಶ್ರೀಪೀಠದಲ್ಲಿ ನಡೆಯುತ್ತಿರುವ ಅಭಿವೃದ್ಧಿಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು
ಸಮಸ್ತ ಕೇರಳ ಜಂಇ ಯ್ಯತುಲ್ ಉಲಮಾ ಕಾಸರಗೋಡು ಜಿಲ್ಲಾ ಸಮಸ್ತ ನಿಯೋಗ ದಾರುನ್ನೂರಿಗೆ ಭೇಟಿ
ಮಂಗಳೂರು: ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾಸರಗೋಡು ಜಿಲ್ಲಾ ಸಮಿತಿಯು ಸಿ. ಎಂ ಅಬ್ದುಲ್ಲಾ ಮುಸ್ಲಿಯಾರರ ಸ್ಮರಣಾರ್ಥವಾಗಿ ಕಾಸರಗೋಡು ಜಿಲ್ಲಾ ಸಮಸ್ತಾಲಯದ ಕಟ್ಟಡವನ್ನು ನಿರ್ಮಿಸಿ ಕೊಡುವಂತೆ ಶಹೀದ್ ಸಿ.ಎಂ ಅಬ್ದುಲ್ಲಾ ಮುಸ್ಲಿಯಾರ್ ಫೌಂಡೇಶನ್ ಸಮಿತಿಯನ್ನು ಕೋರಿದೆ. ಈ ಕಾರ್ಯ ನಿಮಿತ್ತ ಸಮಸ್ತ ಕೇರಳ ಮುಶಾವರ ಸದಸ್ಯರು ಶನಿವಾರ ಕಾಸರಗೋಡು ಜಿಲ್ಲಾ ಜಮೀಯ್ಯತ್ತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಹಾಗೂ ಪಳ್ಳಿಕೆರೆ- ನಿಲೇಶ್ವರ ಖಾಝಿಯವರಾದ ಇ ಕೆ ಮುಹಮ್ಮದ್ ಮುಸ್ಲಿಯಾರ್ ರವರು ಅಪೇಕ್ಷೆ ಪತ್ರವನ್ನು ದಾರುನ್ನೂರ್ ವಿದ್ಯಾ ಸಂಸ್ಥೆಗೆ ಆಗಮಿಸಿ ಸಂಸ್ಥೆಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲಾ ಸಮಸ್ತ ಕೇರಳ ಜಮೀಯ್ಯತ್ತುಲ್ ಉಲಮಾದ ವರ್ಕಿಂಗ್ ಕಾರ್ಯದರ್ಶಿ ಚೆಂಗಳ ಅಬ್ದುಲ್ಲಾ ಫೈಝಿ, ಕಾಸರಗೋಡು ಜಿಲ್ಲಾ ಮುಶಾವರ ಸದಸ್ಯರಾದ ಅಬ್ಬಾಸ್ ಫೈಝಿ ಪುತ್ತಿಗೆ, ದಾರುನ್ನೂರ್ ಎಜುಕೇಶನ್ ಸೆಂಟರ್ ನ…
