ಕೊರೋನಾಗೆ ಬಲಿಯಾಗುತ್ತಿರುವ ಪ್ರಮಾಣ; 3ನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 7,067ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 130 ಮಂದಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದ ಸಾವಿನ ಪ್ರಮಾಣದ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವು 3ನೇ ಸ್ಥಾನ ತಲುಪಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ಈ ವರೆಗೂ 28,724 ಮಂದಿ ಬಲಿಯಾಗಿದ್ದರೆ, ತಮಿಳುನಾಡಿನಲ್ಲಿ 8,231 ಮಂದಿ ಸಾವನ್ನಪ್ಪಿದ್ದಾರೆ. ಇ

ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

ದೆಹಲಿ: ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ‘ರಣದೀಪ್ ಸಿಂಗ್ ಸುರ್ಜೇವಾಲ’ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂ ನಬಿ ಅಜಾದ್ ಕೈಬಿಡಲಾಗಿದೆ. ಮಹಾರಾಷ್ಟ್ರ ಉಸ್ತುವಾರಿಯಾಗಿ ಹೆಚ್ ಕೆ ಪಾಟೀಲ್ ನೇಮಕಗೊಂಡಿದ್ದರೆ, ತಮಿಳುನಾಡು, ಪುದುಚೇರಿ ಉಸ್ತುವಾರಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.  

ರಾಷ್ಟ್ರೀಯ ಕಾಂಗ್ರೆಸ್‌ನ ಸಂಘಟನಾ ಸಮಿತಿಗಳ ಪುನಾರಚನೆ

ದೆಹಲಿ: ರಾಷ್ಟ್ರೀಯ ಕಾಂಗ್ರೆಸ್‌ನ ಸಂಘಟನಾ ಸಮಿತಿಗಳನ್ನು ಶುಕ್ರವಾರ ಪುನಾರಚಿಸಲಾಗಿದೆ. ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರಾಗಿ ಮುಂದುವರಿದಿದ್ದಾರೆ. ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಅವರನ್ನೂ ಸಿಡಬ್ಲ್ಯುಸಿ ಕಾಯಂ ಆಹ್ವಾನಿತರಾಗಿ ಮುಂದುವರಿದಿದ್ದಾರೆ. ಇವರ ಜೊತೆಗೆ ಕೆಪಿಸಿಸಿಯ ನಿಕಟಪೂರ್ವ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಮಾಜಿ ಸಚಿವ ಎಚ್‌.ಕೆ. ಪಾಟೀಲ್‌ ಅವರನ್ನು ಸಿಡಬ್ಲ್ಯುಸಿ ಕಾಯಂ ಆಹ್ವಾನಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆ ಮಾಡಿದೆ.

ರಾಜ್ಯದಲ್ಲಿ ಈಸ್‌ ಆಫ್‌ ಡೂಯಿಂಗ್‌ ಬ್ಯೂಸಿನೆಸ್‌ ಉಪಕ್ರಮಗಳ ಅನುಷ್ಠಾನದತ್ತ ಹೆಚ್ಚಿನ ಗಮನ: ಸಚಿವ ಶೆಟ್ಟರ್‌

  ಬೆಂಗಳೂರು : ರಾಜ್ಯದಲ್ಲಿ ಈಸ್‌ ಆಫ್‌ ಡೂಯಿಂಗ್‌ ಬ್ಯೂಸಿನೆಸ್‌ ಉಪಕ್ರಮಗಳ ಅನುಷ್ಠಾನಕ್ಕೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಅಲ್ಲದೆ, ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯದಲ್ಲಿ ಕ್ರಾಂತಿಕಾರಿ ನೀತಿಗಳನ್ನು ಜಾರಿಗೊಳಿಸಲಾಗಿದ್ದು, ಒಟ್ಟಾರೆಯಾಗಿ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕೈಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಬಿಲ್ಡಿಂಗ್‌ ದ ಫ್ಯೂಚರ್‌ – ಇಂಟರ್‌ ಆಕ್ಟಿವ್‌ ಸೆಸ್‌ನ್‌ ಆನ್‌ ಎನ್‌ಕರೇಜಿಂಗ್‌ ಡೊಮೆಸ್ಟಿಕ್‌ ಸ್ಕೇಲ್‌ ಅಪ್‌ ಆಫ್‌ ಇಂಡಿಯನ್‌ ಕನ್ಸ್ಟ್ರಕ್ಷನ್‌ ಇಕ್ಯೂಫ್‌ಮೆಂಟ್‌ ಎಕೋಸಿಸ್ಟಮ್‌ ವೆಬಿನಾರ್‌ ನಲ್ಲಿ ಭಾಗವಹಿಸಿ ʼಕೈಗಾರಿಕೆ ಮತ್ತು ಆರ್ಥಿಕಾಭಿವೃದ್ದಿಯತ್ತ ಕರ್ನಾಟಕ ರಾಜ್ಯದ ದೃಷ್ಟಿಯʼ ಬಗ್ಗೆ ಮಾಹಿತಿಯನ್ನು ನೀಡಿದರು. ಕರ್ನಾಟಕ ರಾಜ್ಯವನ್ನು ಹೂಡಿಕೆ ಸ್ನೇಹೀ ರಾಜ್ಯವನ್ನಾಗಿಸುವತ್ತ ಸರಕಾರ ಕ್ರಾಂತಿಕಾರಿ ಕ್ರಮಗಳನ್ನ ಕೈಗೊಂಡಿದೆ. ಇದರಿಂದಾಗಿ ಕರ್ನಾಟಕ ರಾಜ್ಯದ ಜಿಎಸ್‌ಡಿಪಿ [GSDP] 201 ಬಿಲಿಯನ್‌ ನಷ್ಟಿದೆ. ಅಲ್ಲದೆ, ರಾಜ್ಯ ರಫ್ತಿನ…

ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

ದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿನ ಕಹಿ ಅನುಭವದ ನಂತರ ಇದೀಗ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಭಾರೀ ಬದಲಾವಣೆಗೆ ಮುನ್ನುಡಿ ಬರೆಯಲಾಗಿದೆ. ಇದೆ ಸಂದರ್ಭದಲ್ಲಿ ದಕ್ಷಿಣದ ರಾಜ್ಯಗಳ ಉಸ್ತುವಾರಿಯನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ವಹಿಸಿದೆ. ತಮಿಳುನಾಡು, ಪುದುಚೇರಿ, ಗೋವಾ ರಾಜ್ಯಗಳಿಗೆ ಉಸ್ತುವಾರಿಯನ್ನಾಗಿ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ನೇಮಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಪಕ್ಷವನ್ನು ಕಟ್ಟುವ ಜವಾಬ್ದಾರಿಯನ್ನು ನನ್ನ ಹೆಗಲಿಗೆ ವಹಿಸಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ನನ್ನ ಮೇಲಿಟ್ಟಿರುವ ನಂಬಿಕೆಗೆ ಅಭಾರಿಯಾಗಿದ್ದೇನೆ ಎಂದಿದ್ದಾರೆ. @INCIndia ಬಲವರ್ಧನೆಗೆ ಸಂಬಂಧಪಟ್ಟಂತೆ ಪಕ್ಷದೊಳಗೆ ಆಡಳಿತಾತ್ಮಕ ಬದಲಾವಣೆಯಾಗಿದೆ. ತಮಿಳುನಾಡು, ಪುದುಚೇರಿ, ಗೋವಾ ರಾಜ್ಯಗಳಿಗೆ ಉಸ್ತುವಾರಿಯನ್ನಾಗಿ ನೇಮಿಸುವ ಮೂಲಕ ಪಕ್ಷವನ್ನು ಕಟ್ಟುವ ಜವಾಬ್ದಾರಿಯನ್ನು ನನ್ನ ಹೆಗಲಿಗೆ ವಹಿಸಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿ ಹಾಗೂ @RahulGandhi ನನ್ನ ಮೇಲಿಟ್ಟಿರುವ ನಂಬಿಕೆಗೆ ಅಭಾರಿಯಾಗಿದ್ದೇನೆ. — Dinesh…

ಮಾವಿನ ಕೆರೆ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭ

ರಾಯಚೂರು: ಮಾವಿನ ಕೆರೆ ಬಳಿ ನೂತನವಾಗಿ ನಿರ್ಮಿಸಿದ 10 ದಶಲಕ್ಷ ಲೀಟರ್ ನಷ್ಟು ತ್ಯಾಜ್ಯ ನೀರು ಶುದ್ಧೀಕರಣ ಘಟಕವನ್ನು ನಗರಾಭಿವೃದ್ಧಿ ಸಚಿವಬಿ.ಎ.ಬಸವರಾಜ ಉದ್ಘಾಟಿಸಿದ್ದಾರೆ. ಕೇಂದ್ರ ಪುರಸ್ಕೃತ ಅಮೃತ ಯೋಜನೆ ಅಡಿಯಲ್ಲಿ ರಾಯಚೂರು ನಗರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ನಗರಸಭೆ ವತಿಯಿಂದ ತ್ಯಾಜ್ಯ ನೀರು ಶುದ್ಧೀಕರಣ ಘಟಕವನ್ನು ನಿರ್ಮಿಸಲಾಗಿದೆ. ಮಾತನಾಡಿದ ಸಚಿವ ಬಸವರಾಜ್, ಮಾವಿನ ಕೆರೆ ಯನ್ನು ಶುದ್ಧೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ನಗರಾಭಿವೃದ್ಧಿ ಇಲಾಖೆಯ ವತಿಯಿಂದ 10 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಘೋಷಿಸಿದರು. ಶಾಸಕರಾದ ಡಾ.ಶಿವರಾಜ್ ಪಾಟೀಲ ಹಾಗೂ ನಗರಸಭೆಯ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.  

ಅಪೌಷ್ಟಿಕತೆ ನಿವಾರಣೆಗೆ ಆಹಾರ ಭದ್ರತೆಯ ಜೊತೆಗೆ ಪೋಷಕಾಂಶ ಭದ್ರತೆಯೂ ಅಗತ್ಯ

ಬೆಂಗಳೂರು: ನಾವು ಆಹಾರ ಉತ್ಪಾದನೆಯಲ್ಲಿ ಹೆಚ್ಚಳ ಸಾಧಿಸಿ ಆಹಾರ ಭದ್ರತೆ ಸಾಧಿಸಿದ್ದೇವೆ. ಆದರೆ ಪೌಷ್ಟಿಕಾಂಶ ಭದ್ರತೆಯಲ್ಲಿ ಹಿಂದುಳಿದಿದ್ದೇವೆ. ಭಾರತ ಈಗಲೂ ಅಪೌಷ್ಟಿಕತೆ ನಿವಾರಣೆಯಲ್ಲಿ ಇನ್ನೂ ಹಿಂದೆ ಬಿದ್ದಿದೆ ಎಂದು ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಡಾ. ಉಷಾ ರವೀಂದ್ರ ಹೇಳಿದರು. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರಿನ ವಾರ್ತಾಶಾಖೆ –ಪ್ರೆಸ್ ಇನ್ಫರ್ಮೇಷನ್ ಬ್ಯೂರೋ ಆಯೋಜಿಸಿದ್ದ ‘ಪೌಷ್ಟಿಕ ಸಸಿವನ’ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೈತೋಟ, ತಾರಸೀ ತೋಟ, ಹಾಗು ಸ್ವಲ್ಪ ಜಾಗದಲ್ಲಿ ಮಣ್ಣಿದ್ದರೆ ಸೊಪ್ಪುಗಳನ್ನು ಬೆಳೆಸಿ ನಮ್ಮ ಶರೀರಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಪಡೆಯಬಹುದು ಎಂದರು. ನಗರಗಳಲ್ಲಿ ವಾಸಮಾಡುವವರು ಮನೆಯ ಬಳಿ ಮಣ್ಣಿಲ್ಲ ಎಂದು ಕೊರಗುವ ಅಗತ್ಯವಿಲ್ಲ. ಸುಲಭವಾಗಿ ಸಿಗುವ ಸಣ್ಣ ಪ್ಲಾಸ್ಟಿಕ್ ಡಬ್ಬಿಗಳಲ್ಲೂ ಕೊತ್ತಂಬರಿ, ಬಸಳೆ, ಚಕ್ರಮುನಿ ಮೊದಲಾದ ಸೊಪ್ಪುಗಳನ್ನು ಬೆಳೆದು ಪೋಷಕಾಂಶದ ಅಗತ್ಯವನ್ನು ಪೂರೈಸಿಕೊಳ್ಳಬಹುದು ಎಂದರು. ಡಾ. ಸಂಜೀವ ಕುಲಕರ್ಣಿ ಮಾತನಾಡಿ, ಪೌಷ್ಟಿಕ…

ದಕ್ಷಿಣಕನ್ನಡ ಜಿಲ್ಲೆ ಸಜಿಪದಲ್ಲಿ ಅಮ್ರಾ ಪ್ಲೋರ್ & ಆಯಿಲ್ ಮಿಲ್ ಅಸ್ತಿತ್ವಕ್ಕೆ

ಮಂಗಳೂರು: ರೈತರನ್ನು ಉತ್ತೇಜಿಸಲು ಹಾಗೂ ಉದ್ಯೋಗ ಸೃಷ್ಟಿಯ ಮಹತ್ವಾಕಾಂಕ್ಷೆಯೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಸಜಿಪದಲ್ಲಿ ಅಮ್ರಾ ಪ್ಲೋರ್ & ಆಯಿಲ್ ಮಿಲ್ ಅಸ್ತಿತ್ವಕ್ಕೆ ಬಂದಿದೆ. ಬಂಟ್ವಾಳ ಸಜೀಪದಲ್ಲಿ ಸ್ಥಾಪನೆಯಾಗಿರುವ ಅಮ್ರಾ ಪ್ಲೋರ್ & ಆಯಿಲ್ ಮಿಲ್’ನ್ನು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್’ರವರು ಉದ್ಘಾಟಿಸಿದರು. ಕಂಪೆನಿಯ ಮಾಲಕರಾದ ರಹ್ಮತುಲ್ಲಾ ರವರು ಹಾಗೂ ದಾರುನ್ನೂರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಹಾಜಿ, ಕೋಶಾಧಿಕಾರಿ ಮುಹಮ್ಮದ್ ಹನೀಫ್ ಹಾಜಿ, ಕಾರ್ಯದರ್ಶಿಗಳಾದ ಸಮದ್ ಹಾಜಿ, ಅದ್ದು ಹಾಜಿ,ಹುಸೈನಬ್ಬ ಸಹಿತ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಾಯುಪಡೆ ಬತ್ತಳಿಕೆಗೆ ರಫೇಲ್ ಸೇರ್ಪಡೆ; ಭಾರತದ ರಕ್ಷಣಾ ಕ್ಷೇತ್ರಕ್ಕೆ ಭೀಮ ಬಲ

ದೆಹಲಿ: ದೇಶದ ರಕ್ಷಣಾ ಕ್ಷೇತ್ರಕ್ಕೆ ಭೀಮ ಬಲ ಬಂದಿದೆ. ಮಹತ್ವಾಕಾಂಕ್ಸೆಯ ರಫೇಲ್ ಯುದ್ಧ ವಿಮಾನ ಗುರುವಾರ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ. ಹರ್ಯಾಣ ಬಳಿಯ ಅಂಬಾಲಾ ವಾಯುನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಯುದ್ಧ ವಿಮಾನವನ್ನು ಅಧಿಕೃತವಾಗಿ ಸೇರ್ಪಡೆಗೊಳಿಸಲಾಗಿದೆ. ಕಳೆದ ಜುಲೈ 27ರಂದು ಫ್ರಾನ್ಸ್ ನಿಂದ 5 ರಫೇಲ್ ಯುದ್ಧ ವಿಮಾನ ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿದಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಫ್ರಾನ್ಸ್ ನ ಸೇನಾಪಡೆ ಸಚಿವ ಫ್ಲೋರೆನ್ಸ್ ಪರ್ಲಿ ಸಮ್ಮುಖದಲ್ಲಿ ಇದನ್ನು ವಾಯುಪಡೆಯ ಬತ್ತಳಿಕೆಗೆ ಸೇರಿಸಲಾಯಿತು. ಫ್ರಾನ್ಸ್ ನಲ್ಲಿ ತಯಾರಾದ ರಫೇಲ್ ಯುದ್ಧ ವಿಮಾನ ಇನ್ನು ಮುಂದೆ ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆರ್ರೋಸ್ ನ ಭಾಗವಾಗಲಿದೆ.

‘ವಿ’ ಸಿನಿಮಾ ಟ್ರೇಲರ್ ಸೃಷ್ಟಿಸಿದ ಕುತೂಹಲ

ಟಾಲಿವುಡ್’ನಲ್ಲಿ ‘ವಿ’ ಸಿನಿಮಾ ತೀವ್ರ ಕುತೂಹಲ ಸೃಷ್ಟಿಸಿದೆ. ತೆಲುಗು ನಟ ನಾನಿ ಮತ್ತು ನಿವೇತಾ ಅಭಿನಯದ ‘ವಿ’ ಕನ್ನಡ ಆವೃತ್ತಿಯಲ್ಲೂ ತೆರೆ ಕಾಣಲಿದೆ. ‘ವಿ’ ಚಿತ್ರದ ಕನ್ನಡ ಆವೃತ್ತಿಯ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಿನಿಮಾ ಪ್ರೇಮಿಗಳ ಮೆಚ್ಚುಗೆ ಗಳಿಸಿದೆ. ಚಿತ್ರವನ್ನು ಮನೋಹನ್ ಕೃಷ್ಣ ಇಂದ್ರಗಂಟಿ ನಿರ್ದೇಶಿಸಿದ್ದಾರೆ.