ಕಿರುತೆರೆ ಧಾರಾವಾಹಿ ಮೂಲಕ ಮನೆಮಾತಾಗಿರುವ ನಟ ವಿಜಯ್ ಸೂರ್ಯ ಅಭಿನಯದ ವೀರಪುತ್ರ ಚಿತ್ರ ಇದೀಗ ಎಲ್ಲರ ಕುತೂಹಲದ ಕೇಂದ್ರಬಿಂದು. ಈ ಸಿನಿಮಾದ ಪ್ರೊಮೋ ಬಿಡುಗಡೆಯಾಗಿದೆ. ದೇವರಾಜ್ ಎಸ್ ನಿರ್ದೇಶಿಸಿರುವ ವೀರಪುತ್ರ ಸಿನಿಮಾದ ಪ್ರೊಮೊ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ ಗಿಟ್ಟಿಸಿಕೊಂಡಿದೆ. https://www.youtube.com/watch?v=XIuakNOZrjQ&feature=emb_title
Year: 2020
ರಾಜ್ಯದಲ್ಲಿ ಕೊರೋನಾ ತಲ್ಲಣ; ಹೆಚ್ಚುತ್ತಿರುವ ಸೋಂಕಿನ ಪ್ರಮಾಣ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ವಿಸ್ತಾರವಾಗುತ್ತಿದ್ದು, ನಿತ್ಯದ ಸೋಂಕಿನ ಪ್ರಮಾಣ ೧೦ ಸಾವಿರಕ್ಕೆ ಸಮೀಪಿಸುತ್ತಿದೆ. ಬುಧವಾರ ಬರೋಬ್ಬರಿ 9540 ಮನದಿಯ ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,21,730ಕ್ಕೆ ಏರಿಕೆಯಾಗಿದೆ. ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯ ನಡುವಿನ ಅಂಕಿ ಅಂಶಗಳನ್ನಾಧರಿಸಿ ಆರೋಗ್ಯ ಇಲಾಖೆ ಈ ಮಾಹಿತಿಯನ್ನು ನೀಡಿದೆ. ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3419 ಹೊಸ ಪ್ರಕರಣಗಳು ವರದಿಯಾಗಿದೆ. ಇದೇ ವೇಳೆ, ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯ ನಡುವೆ ರಾಜ್ಯದಲ್ಲಿ 128 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6808ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಪಡಿತರ ಅಕ್ರಮ ಜಾಗೃತ ದಳ ರಚನೆ; ಸರ್ಕಾರದ ಚಿಂತನೆ
ಹಾಸನ: ಪಡಿತರ ಅಕ್ರಮ ತಡೆಯುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಜಾಗೃತ ದಳ ರಚನೆ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಗೋಪಾಲಯ್ಯ, ರಾಜ್ಯದಲ್ಲಿ ಪಡಿತರ ಅಕ್ರಮ ದಾಸ್ತಾನು ಮಾರಾಟ ಮಾಡುತ್ತಿರುವ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಾಯಿಂಟ್ ಡೈರೆಕ್ಟರ್ ನೇತೃತ್ವದಲ್ಲಿ ಜಾಗೃತದಳ ರಚನೆಗೆ ಚಿಂತನೆ ನಡೆಸಲಾಗಿದೆ ಈ ಮೂಲಕ ಅಕ್ರಮ ತಡೆಗೆ ಕಠಿಣ ಕ್ರಮವಹಿಸಲಾಗಿದೆ ಎಂದರು. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ೮೦೦ ಚೀಲ ರಾಗಿ ಅಕ್ರಮ ಸಾಗಾಣೆ ಬಗ್ಗೆ ಮಾಹಿತಿ ಪಡೆಯಲಾಗಿದೆ ಅಲ್ಲದೆ ಜಿಲ್ಲಾ ಆಹಾರ ಉಪ ನಿರ್ದೇಶಕರೊಂದಿಗೆ ಮಾತನಾಡಿದ್ದು ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದು ಸಚಿವ ಕೆ.ಗೋಪಾಲಯ್ಯ ವಿವರಿಸಿದರು. ರಾಜ್ಯದಲ್ಲಿ ಎಲ್ಲೆ ಅಕ್ರಮ ಪಡಿತರ ಮಾರಾಟ ದಾಸ್ತಾನು ಮಾಡಿದವರ ವಿರುದ್ಧ…
ವಿಧಾನಸಭೆ ಕಲಾಪದ ಅವಧಿ ವಿಸ್ತರಣೆಗೆ ಸಿದ್ದರಾಮಯ್ಯ ಸಲಹೆ
ಬೆಂಗಳೂರು : ಹಲವಾರು ಮಹತ್ವದ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯುವ ಅಗತ್ಯವಿರುವುದರಿಂದ ಈ ತಿಂಗಳ 21ರಿಂದ ನಡೆಸಲು ಉದ್ದೇಶಿಸಿರುವ ವಿಧಾನಸಭೆ ಕಲಾಪದ ಅವಧಿಯನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಪತ್ರದ ವಿವರ ಹೀಗಿದೆ : ಅಧಿವೇಶನದ ಅವಧಿಯನ್ನು ಅಗತಸೆಪ್ಟೆಂಬರ್ 21 ರಿಂದ 30 ರವರೆಗೆ 15ನೇ ವಿಧಾನಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳನ್ನು ನಡೆಸಲು ಪ್ರಕಟಣೆ ಹೊರಡಿಸಲಾಗಿದೆ. ಈ ಪ್ರಕಟಣೆಯಂತೆ 21, 22, 23, 24, 25, 28, 29 ಮತ್ತು 30 ರವರೆಗೆ ಅಧಿವೇಶನವನ್ನು ನಡೆಸಲು ಉದ್ದೇಶಿಸಲಾಗಿದೆ. ಸದರಿ ಅಧಿವೇಶನದಲ್ಲಿ ಸುಮಾರು 20 ಕ್ಕಿಂತ ಹೆಚ್ಚು ಸುಗ್ರಿವಾಜ್ಞೆಗಳನ್ನು ಒಳಗೊಂಡಂತೆ 35 ಕ್ಕಿಂತ ಹೆಚ್ಚು ಮಸೂದೆಗಳನ್ನು ಮಂಡಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಕರ್ನಾಟಕ ರಾಜ್ಯದ ಜನರು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.…
ಯುವ ಕಾಂಗ್ರೆಸ್ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ
ಬೆಂಗಳೂರು: ಯುವ ಕಾಂಗ್ರೆಸ್ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ಸಿಕ್ಕಿದೆ. ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಅವರು ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯುವ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಸುಭಧ್ರ ರಾಷ್ಟ್ರ ಹಾಗೂ ಜ್ಯಾತ್ಯಾತೀತ ಸಮಾಜ ನಿರ್ಮಾಣ ಯುವಕರಿಂದ ಮಾತ್ರ ಸಾಧ್ಯ ಎಂದರು. 60 ವರ್ಷಗಳ ಇತಿಹಾಸವಿರುವ ಯುವ ಕಾಂಗ್ರೆಸ್ ಪ್ರಪಂಚದ ಅತಿದೊಡ್ಡ ಬಲಿಷ್ಠ ಯುವ ಸಂಘಟನೆಯಾಗಿದೆ. ದೇಶದ ಅಭಿವೃದ್ಧಿ ಗೆ ಅಪಾರ ಕೊಡುಗೆ ನೀಡಿದೆ ಎಂದವರು ಹೇಳಿದರು. ಮುಂದಿನ ದಿನಗಳಲ್ಲಿ ಕೆಪಿಸಿಸಿ ವತಿಯಿಂದ ಯುವಕಾಂಗ್ರೆಸ್ ಗೆ ಪ್ರತ್ಯೇಕ ತರಬೇತಿ ನೀಡುವುದರ ಜೊತೆಗೆ each booth 5 Youth ಎಂಬ ವಿನೂತ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಸಲೀಂ ಅಹಮದ್ ತಿಳಿಸಿದರು. ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರನ್ನು ಸುಳ್ಳಿನ ಸರದಾರ ಎಂದು ಬಣ್ಣಿಸಿದ ಅವರು, ಪ್ರತಿವರ್ಷ…
ಹುಬ್ಬಳ್ಳಿ ರೈಲು ನಿಲ್ದಾಣ ಇನ್ನು ‘ಶ್ರೀ ಸಿದ್ಧಾರೂಢ ಸ್ವಾಮೀಜಿ’ ನಿಲ್ದಾಣ
ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದ ಕೇಂದ್ರ ಸ್ಥಾನ ಹುಬ್ಬಳ್ಳಿಯ ರೈಲು ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಹೆಸರಿಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣವನ್ನು “ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣ-ಹುಬ್ಬಳ್ಳಿ” ಎಂದು ನಾಮಕರಣ ಮಾಡುವ ಮುಖಾಂತರ ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಕೇಂದ್ರ ಸರ್ಕಾರದ ಈ ಕ್ರಮವನ್ನು ಹುಬ್ಬಳ್ಳಿಯ ಜನತೆ ಸ್ವಾಗತಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರಿಗೆ, ಗೃಹ ಸಚಿವರಾದ ಅಮಿತ್ ಶಾ ರವರಿಗೆ, ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಹಾಗೂ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಚಿತ್ರಮಂದಿರಗಳ ತೆರೆಯಲು ಅನುಮತಿ ನೀಡಿ; ಸರ್ಕಾರಕ್ಕೆ ತಾರೆಯರ ಮನವಿ
ಬೆಂಗಳೂರು: ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರೋದ್ಯಮವು ಇದೀಗ ಸರ್ಕಾರದ ನೆರವನ್ನು ಯಾಚಿಸಿದೆ. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಡಿ.ಆರ್.ಜೈರಾಜ್ ಮತ್ತು ನಟ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಬುಧವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚಿತ್ರೋದ್ಯಮದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿಕೊಂಡಿತು. ಚಿತ್ರೋದ್ಯಮದ ಮಂದಿಗೆ ನೆರವು ನೀಡಲು ವಿಶೇಷ ಪ್ಯಾಕೇಜ್ ನೀಡಬೇಕು, ವಾರ್ಷಿಕ ತೆರೆಗೆ ಮನ್ನಾ ಮಾಡಬೇಕು. ಚಿತ್ರಮಂದಿರಗಳ ವಿದ್ಯುತ್ ಬಿಲ್ ಮನ್ನಾ ಮಾಡಬೇಕು, 2018 ಹಾಗೂ 2019ನೇ ಚಿತ್ರಗಳ ಸಬ್ಸಿಡಿ ಬಿಡುಗಡೆ ಮಾಡಬೇಕು ಇತ್ಯಾದಿ ಬೇಡಿಕೆಗಳನ್ನು ಈ ಚಿತ್ರೋದ್ಯಮದ ಗಣ್ಯರು ಸರ್ಕಾರದ ಮುಂದಿಟ್ಟರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ನೇತೃತ್ವದ ನಿಯೋಗ ಭೇಟಿ ಮಾಡಿ ಹಲವು ಬೇಡಿಕೆಗಳ ಮನವಿ ಸಲ್ಲಿಸಿತು. ಈ ವಿಚಾರಗಳ ಕುರಿತಾಗಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ @BSYBJP ಅವರೊಂದಿಗೆ ಪಾಲ್ಗೊಂಡೆ. @NimmaShivanna, ತಾರಾ…
ಜರ್ಮನಿಯ ನೂತನ ಕೌನ್ಸಲ್ ಜನರಲ್ ಅಚಿಂ ಬುರ್ಕಾರ್ಟ್ ಸಿಎಂ ಭೇಟಿ
ಬೆಂಗಳೂರು: ಬೆಂಗಳೂರಿನಲ್ಲಿರುವ ಜರ್ಮನಿಯ ಕಾನ್ಸುಲೇಟ್ ಕಚೇರಿಯ ನೂತನ ಕೌನ್ಸಲ್ ಜನರಲ್ ಅಚಿಂ ಬುರ್ಕಾರ್ಟ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿ ಯಾದರು. ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಈ.ವಿ.ರಮಣರೆಡ್ಡಿ, ಕಾರ್ಯದರ್ಶಿ ಸೆಲ್ವಕುಮಾರ್, ಸಲಹೆಗಾರ ಎಂ.ಲಕ್ಷ್ಮಿನಾರಾಯಣ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಎಡನೀರು ಮಠಾಧೀಶ ಕೇಶವಾನಂದ ಭಾರತೀ ಸ್ವಾಮೀಜಿ ವಿಧಿವಶ
ಕಾಸರಗೋಡು: ನಾಡಿನ ಹಿರಿಯ ಯತಿ, ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ವಿಧಿವಶರಾಗಿದ್ದಾರೆ. ಕಳೆದ ವಾರವಷ್ಟೇ ಚಾತುರ್ಮಾಸ್ಯವನ್ನು ಪೂರೈಸಿದ್ದ ಶ್ರೀಗಳು ಕಳೆದ ಕೆಲವು ದಿನಗಳಿಂದ ಅಲ್ಪ ಅಸೌಖ್ಯದಲ್ಲಿದ್ದರು. ಶನಿವಾರ ತಡರಾತ್ರಿ ಸುಮಾರು 12.45ರ ಸುಮಾರಿಗೆ ಶ್ರೀಗಳು ವಿಧಿವಶರಾದರು. ಅವರಿಗೆ 79ವರ್ಷ ವಯಸ್ಸಾಗಿತ್ತು. ಯಕ್ಷಗಾನ ಬಗ್ಗೆ ಅತೀವ ಆಸಕ್ತಿ ಹೊಂದಿದ್ದ ಸ್ವಾಮೀಜಿ ಯಕ್ಷಗಾನ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು. ಪ್ರತೀ ವರ್ಷ ಯಕ್ಷಗಾನ ಸಪ್ತಾಹ, ತಾಳಮದ್ದಳೆ ಕೂಟಗಳನ್ನು ನಡೆಸುತ್ತಿದ್ದರು. ಇದನ್ನೂ ಓದಿ.. ನಟಿ ರಾಗಿಣಿ ನಂಟು; ಸಚಿವ ರವಿ ಸ್ಪಷ್ಟನೆ ಏನು ಗೊತ್ತಾ?
ನಟಿ ರಾಗಿಣಿ ನಂಟು; ಸಚಿವ ರವಿ ಸ್ಪಷ್ಟನೆ ಏನು ಗೊತ್ತಾ?
ಚಿಕ್ಕಮಗಳೂರು: ಡ್ರಗ್ಸ್ ದಂಧೆ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನಕ್ಕೊಳಗಾಗುತ್ತಿದ್ದಂತೆಯೇ ಈ ನಟಿ ಬಿಜೆಪಿ ನಾಯಕರೊಂದಿಗಿರುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಹಿಂದೆ ಉಪ ಚುನಾವಣೆ ವೇಳೆ ನಟಿ ರಾಗಿಣಿ ಬಿಜೆಪಿ ಪರ ಪ್ರಚಾರ ಕೈಗೊಂಡಿದ್ದರು. ಆ ಕುರಿತ ಫೋಟೋ ಹಾಗೂ ವೀಡಿಯೋಗಳನ್ನು ಬೊಟ್ಟು ಮಾಡಿ ರಾಗಿಣಿಯನ್ನು ಬಿಜೆಪಿ ಪಕ್ಷದವರೆಂಬಂತೆ ಬಿಂಬಿಸಲಾಗುತ್ತಿದೆ. ಈ ಬಗ್ಗೆ ಸ್ಪಷ್ಟಪಡಿಸಿರುವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ತಮ್ಮ ಪಕ್ಷ ಬಿಜೆಪಿಗೂ ನಟಿ ರಾಗಿಣಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡ್ರಗ್ಸ್ ದಂಧೆಯ ಪ್ರಕರಣದಲಿ ಬಂಧಿತರಾಗಿರುವ ನಟಿ ರಾಗಿಣಿ ಈ ಹಿಂದೆ ಉಪ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ವೀಡಿಯೋಗಳು ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ನಟಿ ರಾಗಿಣಿಯವರಿಗೆ ನೇರವಾಗಿ ಪಕ್ಷದ ಯಾವ ಜವಾಬ್ದಾರಿ ಇಲ್ಲ. ನಟಿಯಾಗಿ ಅವರಿಗೆ ಅವರದೇ ಸ್ಥಾನವಿದೆ.ಬಿಜೆಪಿಗೂ ಅವರಿಗೂ ಯಾವ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮದು ಕಾಂಪ್ರಮೈಸ್,…
