ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ವೇಗ ಹೆಚ್ಚಿದ್ದು ಶನಿವಾರ ಬರೋಬ್ಬರಿ 9,746 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆವರೆಗಿನ ಅಂಕಿ ಅಂಶಗಳನ್ನೊಳಗೊಂಡ ಹೆಲ್ತ್ ಬುಲೆಟಿನ್ ಈ ಸಂಗತಿಯನ್ನು ಅನಾವರಣ ಮಾಡಿದೆ. ಆರೋಗ್ಯ ಇಲಾಖೆಯ ಈ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3093 ಹೊಸ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು 9746 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ ರಾಜ್ಯದಲ್ಲಿ ಶನಿವಾರ 128 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6298ಕ್ಕೆ ಏರಿಕೆಯಾಗಿದೆ. ಇಂದಿನ 05/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn…
Year: 2020
ಶಿಕ್ಷಕರ ದಿನಾಚರಣೆ; ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸಮ್ಮಾನ
ದಾವಣಗೆರೆ: ಶಿಕ್ಷಕರ ದಿನಾಚರಣೆಯನ್ನು ದಾವಣಗೆರೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ದಾವಣಗೆರೆ ಜಿಲ್ಲೆಯಲ್ಲಿ ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿದವರನ್ನು ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎ.ಬಸವರಾಜ ಅವರು ಸರ್ಕಾರ ಹಾಗೂ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿದರು. ದಾವಣಗೆರೆ ಸಂಸದರಾದ ಶ್ರೀ ಜಿ.ಎಂ.ಸಿದ್ದೇಶ್, ಶಾಸಕರಾದ ಶ್ರೀ ಲಿಂಗಣ್ಣ, ಜಿಲ್ಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಡ್ರಗ್ ಮಾಫಿಯಾ; ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಚಿವ ಬಿ.ಸಿ.ಪಾಟೀಲ್
ಕೋಲಾರ: ಮಾದಕ ಸೇವನೆ ಯಾರೇ ಮಾಡಿದರೂ ತಪ್ಪೇ. ಚಿತ್ರರಂಗವಿರಲೀ, ಅಥವಾ ಇನ್ನಲ್ಲೇ ಇರಲೀ ಜಾಲದಲ್ಲಿರುವ ಕಬ್ಬಿಣದ ಕೈಗಳನ್ನು ಸರ್ಕಾರ ತುಂಡರಿಸುವ ಕೆಲಸ ಮಾಡಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡ್ರಗ್ ಮಾಫಿಯಾ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಚಿತ್ರನಟಿ ರಾಗಿಣಿಯಾಗಲೀ ಯಾರೇ ಆಗಲೀ ಉಪ್ಪು ತಿಂದವರು ನೀರು ಕುಡಿಯಲೇಬೇಕು. ಯಾರೂ ಕೂಡ ಮಾದಕ ದ್ರವ್ಯಗಳಿಗೆ ವ್ಯಸನಿಗಳಾಗಬಾರದು ಎಂದರು. ನಮ್ಮ ಕಾಲಕ್ಕೂ ನಮ್ಮ ಮಕ್ಕಳ ಕಾಲಕ್ಕೂ ಜನರೇಷನ್ ಬದಲಾಗುತ್ತಿದೆ. ಚಿತ್ರರಂಗವೂ ಬದಲಾಗಿದೆ ಅಂದಮಾತ್ರಕ್ಕೆ ದುಶ್ಚಟಕ್ಕೆ ಬಲಿಯಾಗುವುದಾಗಲೀ ವ್ಯಸನಿಗಳಾಗುವುದಾಗಲೀ ಮಾಡಬಾರದು. ತಪ್ಪು ಯಾರೂ ಮಾಡಿದ್ದಾರೆ ಎನ್ನುವುದು ಜನರಿಗೆ ತನಿಖೆಯಿಂದ ಗೊತ್ತಾಗಲಿದೆ. ತನಿಖೆಗೂ ಮುನ್ನ ಸುಕಾಸುಮ್ಮನೆ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಬೆಳೆಗಾರರ ಸಮಸ್ಯೆ ಆಲಿಸಿದಸಚಿವೆ ನಿರ್ಮಲಾ
ಚಿಕ್ಕಮಗಳೂರೂ: ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಪ್ರದೇಶಗಳಲ್ಲಿ ಅತಿವೃಷ್ಠಿಯಿಂದಾಗಿ ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿವೆ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಆಯೋಜಿಸಿದ್ದ ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಬೆಳೆಗಾರರ ಸಮಸ್ಯೆ ಕುರಿತಾದ ಆನ್‌ಲೈನ್ ವಿಡಿಯೋ ಸಂವಾದದಲ್ಲಿ ಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದರು. ಜಿಲ್ಲೆಯು ಪರಿಸರ ಸೇರಿದಂತೆ ಹಲವು ವೈವಿದ್ಯತೆಯಿಂದ ಕೂಡಿದ್ದು, 2015ರಿಂದ 17ರ ವರೆಗೆ ಮಳೆಯ ಕೊರತೆಯಿಂದಾಗಿ ತೀವ್ರ ಬರಗಾಲದ ಸಮಸ್ಯೆಯಿಂದಾಗಿ ಹಾಗೂ 2018ರಿಂದ 19ರಲ್ಲಿ ಸುರಿದ ಭಾರಿ ಮಳೆಯ ಅತಿವೃಷ್ಠಿಯಿಂದ ಹಾಗೂ ಈ ಬಾರಿ ಕೋವಿಡ್-19 ಕಾರಣದಿಂದ ಕಾಫಿ, ಮೆಣಸು, ಅಡಿಕೆ ಬೆಳಗಾರರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ ಈ ವಿಷಯವಾಗಿ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು…
ಗೇಮಿಂಗ್, ಅನಿಮೇಶನ್ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕದಲ್ಲಿ ವಿಪುಲ ಅವಕಾಶ; ಶೆಟ್ಟರ್
ಬೆಂಗಳೂರು: : ಗೇಮಿಂಗ್ ಮತ್ತು ಅನಿಮೇಶನ್ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶವಿದೆ. ಇದಕ್ಕೆ ಪೂರಕವಾದ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ. ಸಿಐಐ ಇಂದು ಏರ್ಪಡಿಸಿದ್ದ ಜಾಗತಿಕ ಅನಿಮೇಷನ್, ವಿಎಫ್ಎಕ್ಸ್, ಗೇಮಿಂಗ್ & ಕಾಮಿಕ್ಸ್ ಕುರಿತಾದ ವೆಬಿನಾರ್ ನಲ್ಲಿ ಪಾಲ್ಗೊಂಡು ಅವರು. ಕರ್ನಾಟಕದಲ್ಲಿ ಎವಿಜಿಸಿ ಕ್ಷೇತ್ರದ ಅವಕಾಶಗಳ ಅನ್ವೇಷಣೆ ಕುರಿತಾಗಿ ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಅನಿಮೇಷನ್ ಉದ್ಯಮ ಸ್ಥಿರವಾದ ಬೆಳವಣಿಗೆಯನ್ನು ಕಾಣುತ್ತಿದೆ ಮತ್ತು ಅತ್ಯಂತ ಹೆಚ್ಚು ಅವಕಾಶ ಹೊಂದಿರುವ ಕ್ಷೇತ್ರವಾಗಿದೆ. ಇದರ ಪರಿಣಾಮ ಭಾರತಕ್ಕೆ ಅನಿಮೇಷನ್ ತಂತ್ರಜ್ಞಾನದ ಅರಿವು ನಿರಂತರವಾಗಿ ಸಾಗಿದೆ ಎಂದು ಅಭಿಪ್ರಾಯಪಟ್ಟರು. ಕರ್ನಾಟಕವು ಹೈಟೆಕ್ ಉದ್ಯಮ ಕ್ಷೇತ್ರಕ್ಕೆ ಹೆಸರುವಾಸಿಯಾಗಿರುವ ರಾಜ್ಯವಾಗಿದೆ. ಇದು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಬಾಹ್ಯಾಂತರಿಕ್ಷ ಮತ್ತು ಇತರೆ ತಂತ್ರಜ್ಞಾನ ಆಧಾರಿತ…
ಡ್ರಗ್ಸ್ ಬಗ್ಗೆ ಸುಳ್ಳು ಸುದ್ದಿ; ನಟಿ ಶರ್ಮಿಳಾ ಮಾಂಡ್ರೆ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿನ ಡ್ರಗ್ ಮಾಫಿಯಾ ವಿಚಾರ ಭಾರೀ ಸುದ್ದಿಯಾಗುತ್ತಿರುವಾಗಲೇ ಕೆಲ ಸುದ್ದಿಗಳ ಬಗ್ಗೆ ನಟಿ ಶರ್ಮಿಳಾ ಮಾಂಡ್ರೆ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವನಟಿ ಶರ್ಮಿಳಾ ಮಾಂಡ್ರೆ, ಕೆಲವು ಸುದ್ದಿ ವಾಹಿನಿಗಳಲ್ಲಿ ನನ್ನ ವಿರುದ್ಧ ಬಂದಿರುವ ಸುಳ್ಳು ಮತ್ತು ತಮಾಷೆಯ ಆರೋಪಗಳಿಂದ ನನಗೆ ಬಹಳ ನೋವಾಗಿದೆ. ಡ್ರಗ್ ದಂಧೆ ಆರೋಪದಲ್ಲಿ ನನ್ನ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಾನು ಹಿಂಜರಿಯುವುದಿಲ್ಲ ಎಂದು ಶರ್ಮಿಳಾ ಮಾಂಡ್ರೆ ಎಚ್ಚರಿಕೆ ನೀಡಿದ್ದಾರೆ. https://twitter.com/sharmilamandre/status/1301740826226118656
ಡ್ರಗ್ಸ್ ಮಾಫಿಯಾ ಬಗ್ಗೆ ಸಮಗ್ರ ತನಿಖೆಯಾಗಲಿ; ಸುಮಲತಾ ಆಗ್ರಹ
ಬೆಂಗಳೂರು: ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ ಬಗ್ಗೆ ನಟಿ, ಸಂಸದೆ ಸುಮಲತಾ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಡ್ರಗ್ಸ್ ಜಾಲ ಅಥವಾ ಮಾದಕ ಪದಾರ್ಥದ ಅಭ್ಯಾಸ ಚಿತ್ರರಂಗ ಮಾತ್ರವಲ್ಲದೆ ಎಲ್ಲೆಡೆ ವ್ಯಾಪಿಸಿದೆ ಎಂದು ಹೇಳಿದ್ದಾರೆ. ಯಾರು ಇದರಲ್ಲಿ ಪಾಲ್ಗೊಂಡಿದ್ದಾರೋ ಅವರನ್ನು ತನಿಖೆ ಮಾಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಡ್ರಗ್ ಪ್ರಕರಣ; ಬಂಧಿತ ನಟಿ ನಟಿ ರಾಗಿಣಿ 3 ದಿನ ಪೊಲೀಸ್ ವಶಕ್ಕೆ
ಬೆಂಗಳೂರು: ಡ್ರಗ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಶುಕ್ರವಾರ ರಾತ್ರಿ ಪೊಲೀಸರು ನಟಿ ರಾಗಿಣಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ನ್ಯಾಯಾಧೀಶರು ರಾಗಿಣಿಗೆ 3 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಆದೇಶಿಸಿದ್ದಾರೆ.
ಕರುನಾಡಲ್ಲಿ ಕೊರೋನಾ ಆರ್ಭಟ; ಒಂದೇ ದಿನ 9058 ಮಂದಿಯಲ್ಲಿ ಸೋಂಕು
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಹೆಮ್ಮಾರಿಯ ಆರ್ಭಟ ಜೋರಾಗಿದೆ. ಮಂಗಳವಾರ ಬರೋಬ್ಬರಿ 9058 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರವೊಂದರಲ್ಲೇ 2967 ಹೊಸ ಪ್ರಕರಣಗಳು ವರದಿಯಾಗಿದೆ. ಆರೋಗ್ಯ ಇಲಾಖೆ ಹೊರಡಿಸಿರುವ ಪ್ರಕಟಣೆ ಈ ಕುರಿತ ಮಾಹಿತಿಯನ್ನು ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,51481ಕ್ಕೆ ಏರಿಕೆಯಾಗಿದೆ. ಈ ನಡುವೆ, ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೆ ರಾಜ್ಯದಲ್ಲಿ 135 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5837ಕ್ಕೆ ಏರಿಕೆಯಾಗಿದೆ. ಇಂದಿನ 01/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommai https://t.co/TXLqStAde8 pic.twitter.com/lpgf55xF4W — K'taka Health Dept (@DHFWKA) September 1, 2020
ಪ್ರಣಬ್ ಮುಖರ್ಜಿ ನಿಧನಕ್ಕೆ ಸಚಿವ ಸಿ.ಟಿ.ರವಿ ಕಂಬನಿ
ಬೆಂಗಳೂರು: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ, ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ಹಿರಿಯ ರಾಜಕಾರಣಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ದೇಶ ಕಂಡ ಅಪ್ರತಿಮ ಸಂಸದೀಯ ಪಟು. ಅವರು ಭಾರತ ರತ್ನ ಪ್ರಶಸ್ತಿ ಪುರಸ್ಕೃತರು , ರಕ್ಷಣಾ, ವಿದೇಶಾಂಗ , ಹಣಕಾಸು ಸಚಿವರಾಗಿದ್ದಲ್ಲದೆ, ಸರ್ಕಾರದ ಹಲವು ಸಮಿತಿಗಳ ಮುಖ್ಯಸ್ಥರಾಗಿ, ಲೋಕಸಭಾ ನಾಯಕರಾಗಿಯೂ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅಪರೂಪದ ಸಂಸದೀಯ ಪಟು ಎಂದು ಸಚಿವ ಸಿ.ಟಿ.ರವಿ ಗುಣಗಾನ ಮಾಡಿದ್ದಾರೆ. ರಾಷ್ಟ್ರಪತಿಗಳಾಗಿ ಪ್ರಣಬ್ ಮುಖರ್ಜಿಯವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು.ಇಂತಹ ಮಹನೀಯರ ಸೇವೆಯನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ‘ಭಾರತರತ್ನ’ ಪ್ರಶಸ್ತಿ ನೀಡಿ ಗೌರವಿಸಿತ್ತು. ದೂರದೃಷ್ಟಿಯುಳ್ಳವರಾಗಿದ್ದ ಅವರು ಭಾರತ ಕಂಡ ಅತ್ಯುತ್ತಮ ಸಂಸದ ಹಾಗೂ ಸಮರ್ಥ ರಾಜಕಾರಣಿ ದೇಶದ…
