ಡ್ರಗ್ ಕಳಂಕ ; ಸಚಿವರಿಂದ ರಾಜೀನಾಮೆಯ ಸವಾಲ್

ಬೆಂಗಳೂರು: ರಾಜ್ಯದಲ್ಲಿ ಡ್ರ್ಯಾಗ್ ಮಾಫಿಯಾ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಇನ್ನೊಂದೆಡೆ ಈ ವಿಚಾರದಲ್ಲಿ ರಾಜಕೀಯ ನಾಯಕರ ವಾಕ್ಸಮರ ಸಾಗಿದೆ. ಡ್ರಗ್ ಮಾಫಿಯಾ ಹಣ ಬಿಜೆಪಿ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ. ಆದರೆ ನೀವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸವಾಲೆಸೆದಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ‘ನಾನು ಯಾವ ಮುಂಬೈಗೂ ಹೋಗಿಲ್ಲ. ಮಾಜಿ ಮುಖ್ಯಮಂತ್ರಿಗಳಾಗಿ ಇಂತಹ ಗಂಭೀರ ಆರೋಪ ಮಾಡಬಾರದು. ಆರೋಪ ಮಾಡಿದರೆ ಅದಕ್ಕೆ ಪುರಾವೆಯನ್ನೂ ನೀಡಬೇಕು. ಬಿಜೆಪಿ ಅಂತಹ ಅನೈತಿಕ ಕೆಲಸವನ್ನೂ ಎಂದೂ ಮಾಡಿಲ್ಲ. ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ. ತಾವು ತಲೆ ಕೆಡಿಸಿಕೊಳ್ಳುವ ಅಗತ್ಯವೇನಿದೆ?’ ಎಂದು ಪ್ರಶ್ನಿಸಿದ್ದಾರೆ. ‘ನಾನು ಮಾಜಿ ಮುಖ್ಯಮಂತ್ರಿ, ಪ್ರಧಾನಮಂತ್ರಿಯ ಮಗನಲ್ಲ.…

ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ; ಸಿಎಂಗೆ ನಟಿ ತಾರಾ ಮನವಿ

ಬೆಂಗಳೂರು: ಮಾದಕ ವಸ್ತು ನಿಯಂತ್ರಣ ಮತ್ತು ಡ್ರಗ್ಸ್ ಮಾರಟಜಾಲದ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯೆ, ಖ್ಯಾತ ಕನ್ನಡ ಚಲನಚಿತ್ರ ನಟಿ ತಾರ ಆನುರಾಧ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಾದಕ ವಸ್ತು ಜಾಲದ ಬಗ್ಗೆ ವ್ಯಸನಿಗಳ ಬಗ್ಗೆ ಚಲನಚಿತ್ರ ರಂಗದಲ್ಲಿ ಹರುಡುತ್ತಿರುವ ಸುದ್ದಿ ನೋಡಿದರೆ ಅತಂಕವಾಗುತ್ತದೆ . ನಾನು ಚಲನಚಿತ್ರ ರಂಗದಲ್ಲಿ ಮೂರು ದಶಕಗಳಿಂದ ನೋಡಿದ್ದೇನೆ ಅದರೆ ಇಂತಹ ಘಟನೆ ನಾನು ನೋಡಿಲ್ಲ ಎಂದವರು ಹೇಳಿದ್ದಾರೆ. ಚಲನಚಿತ್ರ ರಂಗವನ್ನು ಸಾರ್ವಜನಿಕರು ಹತ್ತಿರದಿಂದ ನೋಡುತ್ತಾರೆ. ಚಲನಚಿತ್ರರಂಗದಲ್ಲಿ ಒಳ್ಳೆಯರು, ಕೆಟ್ಟವರು ಇದ್ದಾರೆ. ಮಾದಕ ವಸ್ತುವಿನಿಂದ ಶಾಲ ಮಕ್ಕಳು ,ಕಾಲೇಜು ವಿದ್ಯಾರ್ಥಿ , ವಿದ್ಯಾರ್ಥಿನಿಯರು ವ್ಯಸನಿಗಳೂಗುತ್ತಿದ್ದಾರೆ. ಮೂರು ತಿಂಗಳಿಗೆ ಒಮ್ಮೆ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಬೇಕು. ಮಕ್ಕಳ ಚಲನವಲನದ ಬಗ್ಗೆ ಪೋಷಕರು ಜಾಗೃತಿ ವಹಿಸಬೇಕು. ಮಾದಕ ವ್ಯಸನಿಗಳು ಕಣ್ಣಿನ ಔಷಧಿ ಬಳಕೆ ಮಾಡುತ್ತಾರೆ ಕಣ್ಣಿನ ಔಷಧಿ…

ಆಮ್ ಆದ್ಮಿ ಪಕ್ಷದ ‘ಆಕ್ಸಿ ಮಿತ್ರ’ ನೂತನ ಅಭಿಯಾನ

ಬೆಂಗಳೂರು: ಆಗಸ್ಟ್ ತಿಂಗಳ 6 ನೇ ತಾರೀಕಿನಂದು ಆಮ್ ಆದ್ಮಿ ಪಕ್ಷ “ಆಪ್ ಕೇರ್” ಎನ್ನುವ ವಿನೂತನ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಅಭಿಯಾನ ಮೂಲಕ ಸಾರ್ವಜನಿಕರ ದೇಹದ ಉಷ್ಣತೆ ಹಾಗೂ ಆಮ್ಲಜನಕ ಮಟ್ಟವನ್ನು ಪರೀಕ್ಷಿಸಲಾಲಾಗಿದೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ವಿವರ ಒದಗಿಸಿರುವ ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಅಧ್ಯಕ್ಷಮೋಹನ್ ದಾಸರಿ, ಇದುವರೆಗೂ ಸುಮಾರು 1.27 ಲಕ್ಷ ಜನರನ್ನು ಭೇಟಿ ಮಾಡಿ ತಪಾಸಣೆಗೆ ಒಳಪಡಿಸಿದ್ದೇವೆ. 1 ಕೋಟಿಗೂ ಅಧಿಕ ಜನಸಂಖ್ಯೆ ಇರುವ ಬೆಂಗಳೂರಿನ ಜನರಲ್ಲಿ ನಾವು ತಲುಪಿರುವುದು ಕೇವಲ ಶೇ 1 ರಷ್ಟು ಮಾತ್ರ ಆದ ಕಾರಣ “ಆಕ್ಸಿ ಮಿತ್ರ” ದೇಹದ ಆಮ್ಲಜನಕ ಪ್ರಮಾಣ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ ಎಂದು ತಿಳಿಸಿದರು. ನಾವು ಬೆಂಗಳೂರಿನಾದ್ಯಂತದ ಜನರನ್ನು “ಆಕ್ಸಿಮಿತ್ರ ಅಭಿಯಾನ” ಕ್ಕೆ ಸ್ವಯಂಸೇವಕರಾಗಲು ಮತ್ತು ನಮ್ಮ ನಗರದ ಸಾವಿರಾರು ಜನರ ಜೀವ ಉಳಿಸಲು ಕೈಜೋಡಿಸುವ ಆಸಕ್ತಿ…

ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

ದೆಹಲಿ: ಕೊರೋನಾ ಸೋಂಕಿನಿಂದ ಎದುರಾಗಿರುವ ಸಂಕಟ ಪರಿಸ್ಥಿತಿಯಿಂದ ಈವರೆಗೂ ಬ್ಯಾಂಕ್ ಸಾಲ ಮರುಪಾವತಿಗೆ ವಿನಾಯಿತಿ ನೀಡಲಾಗಿತ್ತು. ಆ ವಿನಾಯಿತಿ ಇನ್ನಿಲ್ಲ. ದೇಶಾದ್ಯಂತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ 6 ತಿಂಗಳ ಕಾಲ ಮುಂದೂಡಲಾಗಿದ್ದ ಸಾಲದ ಮೇಲಿನ ಇಎಂಐ ಪಾವತಿ ಶುರುವಾಗಲಿದೆ ಎಂದು ಆರ್ ಬಿಐ ಹೇಳಿದೆ. ಸೆಪ್ಟೆಂಬರ್ 1 ರಿಂದ ಸಾಲ ಮರುಪಾವತಿ ವಿನಾಯಿತಿ ಮುಂದುವರಿಸುವುದಿಲ್ಲ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಮಾರ್ಚ್ ನಿಂದ ಆಗಸ್ಟ್ ವರೆಗೆ 6 ತಿಂಗಳು ಕಂತು ಕಟ್ಟಲು ವಿನಾಯಿತಿ ನೀಡಿ, ಇಎಂಐ ಪಾವತಿ ಮುಂದೂಡಿಕೆಗೆ ಅವಕಾಶ ನೀಡಲಾಗಿತ್ತು.ಎಂದಿರುವ ಅವರು, ಸಾಲ ಪಾವತಿ ಮುಂದೂಡುವುದು ತಾತ್ಕಾಲಿಕ ಪರಿಹಾರ, ಇದರಿಂದ ಬ್ಯಾಂಕ್ ಗಳಿಗೆ ಭಾರಿ ಸಮಸ್ಯೆಯಾಗಲಿದೆ. ಇದರಿಂದ ಸಾಲ ಮರುಪಾವತಿದಾರರಿಗೂ ಪರಿಹಾರ ಸಿಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನಂತ ಚತುರ್ದಶಿ ವ್ರತ; ಕೊಂಚಾಡಿ ಕಾಶೀ ಮಠದಲ್ಲಿ ವಿಶೇಷ ಕೈಂಕರ್ಯ

ಮಂಗಳೂರು : ಕಡಲ ತಡಿ ಮಂಗಳೂರಿನ ಪುಣ್ಯ ಕ್ಷೇತ್ರ ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಗಮನ ಸೆಳೆಯುತ್ತಿವೆ. ಶ್ರೀ ಅನಂತ ಚತುರ್ದಶಿ (ನೋಪಿ) ವ್ರತ ಪ್ರಯುಕ್ತ ಕೊಂಚಾಡಿ ಶ್ರೀ ಕಾಶೀ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಸಹಿತ ಹಲವರು ಭಾಗಿಯಾದರು. ಚಾತುರ್ಮಾಸ ವ್ರತ ಆಚರಿಸುತ್ತಿರುವ ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ಸಂಸ್ಥಾನದ ದೇವರ ಸಮ್ಮುಖದಲ್ಲಿ ವಿಶೇಷವಾಗಿ ಅನಂತ ಚತುರ್ದಶಿ ಕಲಶ ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿತು. ದೇವರಿಗೆ ವಿಶೇಷವಾಗಿ ತಯಾರಿಸಲ್ಪಟ್ಟ ನೈವೇದ್ಯ ಸಮರ್ಪಿಸಲಾಯಿತು. ಇದನ್ನೂ ಓದಿ.. ಕೊಂಚಾಡಿ ಕಾಶೀ ಮಠದಲ್ಲಿ ದಶಮಸ್ಕಂದ ಹವನ; ಬುಧವಾರ ಸೀಮೋಲಂಘನ ಕೈಂಕರ್ಯ  

ಸಚಿವ ಈಶ್ವರಪ್ಪಗೆ ಕೊರೋನಾ ಪಾಸಿಟಿವ್; ಆಸ್ಪತ್ರೆಗೆ ದಾಖಲು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೋನಾ ಸೋಂಕು ಕಂಡುಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದವರು ಹೇಳಿದ್ದಾರೆ. ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ. — K S Eshwarappa (Modi Ka Parivar) (@ikseshwarappa) September 1, 2020 ಇದೇ ವೇಳೆ, ಹಿರಿಯ ನಾಯಕರು, ಗ್ರಾಮೀಣಾಭಿವೃದ್ಧಿ ಮತ್ತು…

ಸಚಿವ ಸಿ.ಟಿ.ರವಿ ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ; ಹೆಚ್ಡಿಕೆ ಆಕ್ರೋಶ

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸಚಿವ ಸಿ.ಟಿ.ರವಿ ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿನ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಎಂದಿದ್ದಾರೆ. ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು.1/8 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 1, 2020 ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ…

ಕೊಂಚಾಡಿ ಕಾಶೀ ಮಠದಲ್ಲಿ ದಶಮಸ್ಕಂದ ಹವನ; ಬುಧವಾರ ಸೀಮೋಲಂಘನ ಕೈಂಕರ್ಯ

ಮಂಗಳೂರು : ಗೌಡ ಸಾರಸ್ವತ ಸಮಾಜದ ಪರಮ ಪೂಜ್ಯ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತವು ಸೆಪ್ಟೆಂಬರ್ 2ರಂದು ಸಮಾಪನಗೊಳ್ಳಲಿದೆ. ಈ ಪ್ರಯುಕ್ತ ಶ್ರೀಗಳವರ ಚಾತುರ್ಮಾಸ ವ್ರತದ ಸೀಮೋಲಂಘನ ಕಾರ್ಯಕ್ರಮ ಜರುಗಲಿದೆ. ಸಂಜೆ 5:30 ಕ್ಕೆ ಶ್ರೀ ವೆಂಕರಮಣ ದೇವಳಕ್ಕೆ ಭೇಟಿ ನೀಡಿ ವೀರ ವೆಂಕಟೇಶ ದೇವರ ದರ್ಶನ ಪಡೆಯಲಿದ್ದು ಬಳಿಕ ಸಮಸ್ತ ಸಮಾಜ ದ ಪರವಾಗಿ ಶ್ರೀ ದೇವಳದ ಆಡಳಿತ ಮಂಡಳಿ ವತಿಯಿಂದ ಶ್ರೀಗಳವರ ಪಾದ ಪೂಜೆ ನೆರವೇರಲಿದೆ. ಬಳಿಕ ದೇವಳದಲ್ಲಿ ಆಶೀರ್ವಚನ ಕಾರ್ಯಕ್ರಮ ನೆರವೇರಲಿದೆ. ಕೊರೋನಾ ಮಹಾಮಾರಿಯನ್ನು ತಡೆಗಟ್ಟು ವ ಹಿನ್ನೆಲೆಯಲ್ಲಿ ಸರಕಾರದ ಆದೇಶ ಹಾಗೂ ನಿಯಮ ಪ್ರಕಾರ ದೇವಳದ ಒಳಗಡೆ 50 ಜನರಿಗಿಂತ ಹೆಚ್ಚು ಜನರು ಪಾಲ್ಗೊಳ್ಳುವ ಅವಕಾಶ ಇಲ್ಲ. ಹಾಗಾಗಿ ದೇವಳದ ಆಡಳಿತ ಮಂಡಳಿ ಮತ್ತು ಅರ್ಚಕರಿಗೆ ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ದೇವಳದ ಒಳಗಡೆ ಪ್ರವೇಶಿಸುವ…

ಪ್ರಣಬ್ ಮುಖರ್ಜಿ ನಿಧನಕ್ಕೆ ಬಂಡೆಪ್ಪ ಖಾಶೆಂಪುರ ಶೋಕ

ಪ್ರಣಬ್ ಮುಖರ್ಜಿ ನಿಧನಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ ಶೋಕ ವ್ಯಕ್ತಪಡಿಸಿದ್ದಾರೆ. ಮಾಜಿ ರಾಷ್ಟ್ರಪತಿಗಳು, ಹಿರಿಯ ಮುತ್ಸದ್ದಿಗಳು ಆಗಿದ್ದ ಪ್ರಣಬ್ ಮುಖರ್ಜಿಯವರು ನಮ್ಮನ್ನು ಅಗಲಿರುವುದು ದುರ್ದೈವ ಎಂದವರು ಹೇಳಿದ್ದಾರೆ. ಶ್ರೀಯುತರ ಅಗಲಿಕೆಯಿಂದಾಗಿ ನಾವೆಲ್ಲಾ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ. ರಾಷ್ಟ್ರದ ಹಿತ ಕಾಯುವ ಸಂದರ್ಭದಲ್ಲಿ ಅತ್ಯಂತ ಗಟ್ಟಿ ನಿಲುವನ್ನು ತೆಗೆದುಕೊಳ್ಳುತ್ತಿದ್ದ ಪ್ರಣಬ್ ಮುಖರ್ಜಿಯವರು, ಯಾವುದೇ ಸಂದರ್ಭದಲ್ಲಿಯೂ ತತ್ವನಿಷ್ಠ ಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿರಲಿಲ್ಲ. ಅವರು ಕೇಂದ್ರ ಸಚಿವರಾಗಿದ್ದಾಗ ಭಾರತದ ಹಿರಿಮೆ ಗರಿಮೆಗಳನ್ನು ಹಲವು ಸಂದರ್ಭಗಳಲ್ಲಿ ಅಂತರಾಷ್ಟ್ರೀಯ ಮಟ್ಟಗಳಲ್ಲಿ ಎತ್ತಿಹಿಡಿದ ಶ್ರೇಯಸ್ಸು ಅವರಿಗೆ ಸೇರಿದೆ ಎಂದು ಬಂಡೆಪ್ಪ ಖಾಶೆಂಪುರ ಹೇಳಿದ್ದಾರೆ.

ತಣ್ಣೀರುಬಾವಿ ಬೀಚ್ ಅಭಿವೃದ್ಧಿಗೆ ಕ್ರಮ; ಜಿಲ್ಲಾಧಿಕಾರಿಯಿಂದ ಸ್ಥಳ ಪರಿಶೀಲನೆ

ಮಂಗಳೂರು: ಅನ್ಲಾಕ್ ಪ್ರಕ್ರಿಯೆ ಚುರುಕಾಗುತ್ತಿರುವಂತೆಯೇ ಕಡಲತಡಿಯ ನಗರಿ ಮಂಗಳೂರಿನಲ್ಲಿ ಪ್ರವಾಸೋದ್ಯಮ ಉತ್ತೇಜನ ಕಸರತ್ತು ಬಿರುಸುಗೊಂಡಿದೆ. ತಣ್ಣೀರುಬಾವಿ ಬೀಚ್ ಅಭಿವೃದ್ಧಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು ಈ ಸಂಬಂಧ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಸ್ಥಳ ಪರಿಶೀಲನೆ ನಡೆಸಿದರು. dc visit ಶಾಸಕ ಡಾ.‌ಭರತ್ ಶೆಟ್ಟಿ ಅವರೊಂದಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬೀಚ್ ನಲ್ಲಿ ಪ್ರವಾಸಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿ, ಪ್ರವಾಸಿಗರನ್ನು ಆಕರ್ಷಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಸ್ತ್ರತ ಯೋಜನಾ ವರದಿ ತಯಾರಿಸಿ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗುವುದು ಎಂದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಕಡಲ ಕಿನಾರೆ ಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಅವರು ಬೀಚ್ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದರು.