ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಚಿತ್ರ ‘ಆಡಿಸಿದಾತ’

ರಾಜ್ ಪುತ್ರ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಚಿತ್ರ ‘ಆಡಿಸಿದಾತ’ ತೀವ್ರ ಕುತೂಹಲ ಕೆರಳಿಸಿದೆ. ‘ಆಡಿಸಿದಾತ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಪನೇಶ್ ಭಾರಧ್ವಜ್ ನಿರ್ದೇಶಿಸಿ ರುವ ‘ಆಡಿಸಿದಾತ’ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಸಡ್ಡು ಮಾಡುತ್ತಿದೆ.

ವಿಧಾನಸಭಾ ಸದಸ್ಯರ ಪರಿಚಯ ಪುಸ್ತಕ ಬಿಡುಗಡೆ

ಬೆಂಗಳೂರು: ಕರ್ನಾಟಕ ಶಾಸಕಾಂಗ ಪತ್ರಿಕೆ ಹಾಗೂ 15 ನೇ ವಿಧಾನಸಭಾ ಸದಸ್ಯರ ಪರಿಚಯ ಪುಸ್ತಕ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಕರ್ನಾಟಕ ವಿಧಾನಪರಿಷತ್ ಸಭಾಪತಿ ಶ್ರೀ ಕೆ.ಪ್ರತಾಪ ಚಂದ್ರ ಶೆಟ್ಟಿ ಹಾಗು ಕರ್ನಾಟಕ ವಿಧಾನಸಭೆ ಅಧ್ಯಕ್ಷರು ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಕರ್ನಾಟಕ ಶಾಸಕಾಂಗ ಪತ್ರಿಕೆ ಹಾಗೂ 15 ನೇ ವಿಧಾನ ಸಭೆಯ ಸದಸ್ಯರ ಪರಿಚಯ ಪುಸ್ತಕ ಬಿಡುಗಡೆ ಮಾಡಿದರು.

ಅನಾಮಧೇಯ ಬಿತ್ತನೆ ಬೀಜ, ರಸಗೊಬ್ಬರ ಖರೀದಿಸದಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಬೆಂಗಳೂರು: ಅನಾಮಧೇಯ ಕಂಪೆನಿ ಹೆಸರಿನಲ್ಲಿ ರಸಗೊಬ್ಬರವಾಗಲೀ ಬಿತ್ತನೆಬೀಜವಾಗಲೀ ಮನೆಬಾಗಿಲಿಗೆ ಬಂದರೆ ಅಥವಾ ಯಾರಾದರೂ ನೀಡಿದರೆ ರೈತರು ಅದನ್ನು ಖರೀದಿಸಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸಲಹೆ ಮಾಡಿದ್ದಾರೆ. ಕೆಲವು ಒಳಸಂಚುಗಳು ಅನಾಮಧೇಯ ಕಂಪೆನಿ ರೈತರ ಮನೆಬಾಗಿಲಿಗೆ ಬಿತ್ತನೆ ಬೀಜ ರಸಗೊಬ್ಬರ ಸರಬರಾಜು ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು, ಇಲಾಖೆ ಈ ಬಗ್ಗೆ ನಿಗಾ ಹಿಸಿದೆ.ರೈತರಿಗೆ ಅನ್ಯಾಯವಾಗುವಂತಹ ಯಾವುದೇ ಮೋಸವನ್ನಾಗಲೀ ನಕಲಿ ಜಾಲವನ್ನಾಗಲೀ ತಾವು ಎಂದಿಗೂ ಸಹಿಸುವುದಿಲ್ಲ. ಈ ಬಗ್ಗೆ ಸೂಕ್ತಕ್ರಮ ವಹಿಸಲಾಗುವುದು ಎಂದವರು ಹೇಳಿದ್ದಾರೆ. ರೈತರು ಆದಷ್ಟು ಅಧಿಕೃತ ಕಂಪೆನಿಗಳ ಇಲಾಖೆ ರೈತಸಂಪರ್ಕ ಕೇಂದ್ರ ಸೂಚಿಸಿದ ಬಿತ್ತನೆ ಬೀಜ ರಾಸಾಯನಿಕ ಗೊಬ್ಬರ ಔಷಧಿಗಳನ್ನೇ ಖರೀದಿಸಿ ಬಳಸಬೇಕು. ಇಂತಹ ಯಾವುದೇ ಅನಾಮಧೇಯ ಪ್ಯಾಕೆಟ್ ಬಂದಲ್ಲಿ ಅಥವಾ ಯಾರಾದರೂ ನೀಡಿದಲ್ಲಿ ಆ ಬಗ್ಗೆ ರೈತರು ಹಾಗೂ ಜನರು ಸಮೀಪದ ರೈತಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದು…

ಬಸ್ಸೇ ಸ್ತ್ರೀ ‌ಶೌಚಾಲಯ; ಇದು ಕೆಎಸ್ಸಾರ್ಟಿಸಿ ಟಾಯ್ಲೆಟ್ ಕಥೆ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯು ಅನುಪಯುಕ್ತ ಬಸ್ಸನ್ನು ಬಳಸಿಕೊಂಡು ನಿರ್ಮಾಣ ಮಾಡಿರುವ ಸುಸಜ್ಜಿತ ಸ್ತ್ರೀ ‌ಶೌಚಾಲಯ ನಾಡಿನ ಗಮನಸೆಳೆದಿದೆ. ಈ ಸ್ತ್ರೀ ‌ಶೌಚಾಲಯವನ್ನು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಲೋಕಾರ್ಪಣೆ ಮಾಡಿದ್ದಾರೆ. ಈ ಶೌಚಾಲಯ ಹಲವು ವಿಶೇಷತೆಗಳಿಂದ ಗಮನಸೆಳೆದಿವೆ. ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ‌ ನ್ಯಾಪಕಿನ್ ವೆಂಡಿಂಗ್ ಯಂತ್ರ, ಇನ್ಸಿನಿರೇಟರ್, ಮಗುವಿನ ಡೈಪರ್ ಬದಲಿಸುವ ಸ್ಥಳ, ಭಾರತೀಯ ಮತ್ತು ಪಾಶ್ಚಾತ್ಯ ಶೌಚಾಲಯಗಳು, ವಾಷ್ ಬೇಸಿನ್ ಗಳು, ‌ಸೆನ್ಸಾರ್ ದೀಪಗಳು, ಸಂಪೂರ್ಣ ಸೋಲಾರ್ ವಿದ್ಯುತ್ ಅಳವಡಿಸಲಾಗಿದೆ. ಶೌಚಾಲಯ ನಿರ್ಮಾಣಕ್ಕೆ 12 ಲಕ್ಷ ರೂಪಾಯಿ ವೆಚ್ಚ ತಗುಲಿದೆ. ದೇಶದ ರಸ್ತೆ ಸಾರಿಗೆ ನಿಗಮಗಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ‌ ಬಸ್ಸಿನಲ್ಲಿ ‌ನಿರ್ಮಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಪಾತಕ ಸಾಮ್ರಾಜ್ಯದ ವಿರುದ್ಧ ಯೋಗಿ ಸಮರ, ಶಾಸಕನ ಮನೆಯೇ ನೆಲಸಮ

ಲಖನೌ: ಪಾತಕ ಸಾಮ್ರಾಜ್ಯದ ವಿರುದ್ಧ ಸಮರ ಸಾರಿರುವ ಉತ್ತರ ಪ್ರದೇಶದ ಯೋಗಿ ಸರ್ಕಾರ ಇದೀಗ ಪಾತಕಿಗಳ ಅಡಿಗಳನ್ನೇ ಕೆಡವಲು ಆರಂಭಿಸಿದೆ. ಸಮಾಜಘಾತುಕ ಶಕ್ತಿಗಳ ದಮನ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಕಾರ್ಯಾಚರಣೆ ಗ್ಯಾಂಗ್ ಸ್ಟರ್ ಹಾಗೂ ಶಾಸಕ ಮುಖ್ತಾರ್ ಅನ್ಸಾರಿ ಸಹಚರರ ನಿದ್ದೆಗೆಡಿಸಿದೆ. ಅನ್ಸಾರಿಗೆ ಸೇರಿದ ಮನೆಯನ್ನು ಪೊಲೀಸರು ಜೆಸಿಬಿ ಮೂಲಕ ನೆಲಸಮ ಮಾಡಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಲಖೌನ್ ದ ದಾಲಿಭಾಗ್ ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಯನ್ನು ಜೆಸಿಬಿ ಬಳಿಸಿ ನೆಮಸಮ ಮಾಡಲಾಗಿದೆ. 2005ರ ನವೆಂಬರ್ 29ರಂದು ಬಿಜೆಪಿ ಶಾಸಕ ಕೃಷ್ಣಾನಂದ ರಾಯ್ ಹತ್ಯೆ ನಡೆದಿತ್ತು. ಈ ಕೃತ್ಯದಲ್ಲಿ ಮುಖ್ತಾರ್ ಅನ್ಸಾರಿ ಪ್ರಮುಖ ಆರೋಪಿಯಾಗಿದ್ದಾರೆ. NEW : UP Police demolishing building of gangster Mukhtar Ansari.pic.twitter.com/FTKx0Uobe8 — Harsh Shah (@_ShahHarsh) August…

ಉದ್ಯೋಗಿಗಳಿಗೆ ಲಾಕ್’ಡೌನ್ ಅವದಿಯ ಸಂಬಳ ಬಿಡುಗಡೆಮಾಡಿ; AIUTUC ಪ್ರತಿಭಟನೆ

ಬೆಂಗಳೂರು: ಕೊರೋನಾ ವೈರಾಣು ಸೋಂಕು ತಡೆಯುವ ಸಂಬಂಧ ಸರ್ಕಾರ ಜಾರಿಗೊಳಿಸಿದ್ದ ಲಾಕ್’ಡೌನ್ ಹಲವರ ಪಾಲಿಗೆ ಸಂಕಷ್ಟದ ಪರಿಸ್ಥಿತಿಯನ್ನು ತಂದೊಡ್ಡಿದೆ. ಈ ಅವಧಿಯಲ್ಲಿ ಅನೇಕ ಕಾರ್ಮಿಕರು ತೊಂದರೆಗೊಳಗಾಗಿದ್ದರೆ. ಅನೇಕ ಸಂಸ್ಥೆಗಳು ಕಾರ್ಮಿಕರಿಗೆ ವೇತನ ನೀಡದೆ ಸರ್ಕಾರದ ಆದೇಶ ಉಲ್ಲಂಘಿಸಿವೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ನಡುವೆ ಕಾರ್ಮಿಕರ ನೆರವಿಗೆ ಧಾವಿಸಿರುವ AIUTUC ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆ ಗಮನಸೆಳೆಯಿತು. AIUTUC ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ವತಿಯಿಂದ ವಸತಿ ನಿಲಯ ಕಾರ್ಮಿಕರಿಗೆ ಲಾಕ್ಡೌನ ಅವದಿಯ ಸಂಬಳ ಬಿಡುಗಡೆಮಾಡಿ, ಬಾಕಿ ವೇತನ ಪಾವತಿಸಿ, ESI-PF ಸೌಲಭ್ಯಗಳಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಯಿತು. ರಾಜ್ಯವ್ಯಾಪಿ ಪ್ರತಿಭಟನೆಯ ಅಂಗವಾಗಿ ಬೆಂಗಳೂರಿನ ಬಿಸಿಎಂ ಕಮಿಷನರ್ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಯಿತು. ಧಾರವಾಡ ಜಿಲ್ಲಾ ಕೇಂದ್ರದಲ್ಲೂ ಕಾರ್ಮಿಕರು ಪ್ರತಿಭಟನೆ ನಡೆಸಿ ತಮ್ಮ ವೇತನಕ್ಕಾಗಿ ಆಗ್ರಹಿಸಿದರು. ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ…

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್‌ಪಿಎಸ್‌ ಯೋಜನೆ ಜಾರಿ

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ಸರ್ಕಾರ‌ ಹಸಿರು ನಿಶಾನೆ ತೋರಿಸಿದೆ. ಸರ್ಕಾರಿ ವೈದ್ಯ, ದಂತ ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡಿರುವ ಬೋಧಕ ಆಸ್ಪತ್ರೆಗಳು ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಯೋಜನೆ ಲಾಭ ಪಡೆಯಲಿದ್ದಾರೆ. ಸಚಿವ ಸುಧಾಕರ್‌ ಅವರು ಅಧಿಕಾರವಹಿಸಿಕೊಂಡ ಬಳಿಕ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿದ್ದ ಇಲಾಖೆಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪಿಂಚಣಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದರು. ಮನವಿ ಸ್ವೀಕರಿಸಿದ್ದ ಸಚಿವರು ಕ್ರ ಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ‌ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಬೇಡಿಕೆಗೆ ಅನುಮೋದನೆ ನೀಡುವಂತೆ ಸಚಿವ ಸುಧಾಕರ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡುವಲ್ಲಿ…

ಪ್ರವಾಸೋದ್ಯಮ ಸಾಧನೆಯ ‘ಹೆಜ್ಜೆ ಗುರುತು’; ಪುಸ್ತಕ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹೊರತಂದಿರುವ ಒಂದು ವರ್ಷದ ಸಾಧನೆಯ ಪುಸ್ತಕ ‘ಹೆಜ್ಜೆ ಗುರುತು’ ಬಿಡುಗಡೆ ಮಾಡಿದರು. ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಕೆ.ಎಸ್.ಟಿ. ಡಿ.ಸಿ ಅಧಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Uncategorized

ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ

ಬೆಂಗಳೂರು: ನಾಲ್ಕು ತಿಂಗಳ ಪರಿಶ್ರಮದಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಇಲ್ಲದೆ ಕೋವಿಡ್ ರೋಗಿಗಳಿಗೆ ಸುಸಜ್ಜಿತ ಆಸ್ಪತ್ರೆ ಲಭ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ ಬಿಬಿಎಂಪಿಯಿಂದ ನಿರ್ಮಾಣವಾದ ‘ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, “ಬಿಬಿಎಂಪಿಯ ಕಟ್ಟಡ ನಾಲ್ಕು ವರ್ಷಗಳಿಂದ ಖಾಲಿ ಇತ್ತು. ಇಂತಹ ಸಂದರ್ಭದಲ್ಲಿ 20-25 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುವ ಆಲೋಚನೆ ಬಂದಿತ್ತು. ಆದರೆ ಕೋವಿಡ್ ಸಂಕಷ್ಟವಿದ್ದ ಹಿನ್ನೆಲೆಯಲ್ಲಿ, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರನ್ನು ಮನವಿ ಮಾಡಿದ್ದೆ. ಅವರು ತಕ್ಷಣ ಸ್ಪಂದಿಸಿ 11 ಕೋಟಿ ರೂ. ಮೌಲ್ಯದ ಉಪಕರಣಗಳನ್ನು ನೀಡಿದರು. ವಿಪ್ರೊ ಸಂಸ್ಥೆಯವರು ವೈದ್ಯ ಸಿಬ್ಬಂದಿಯನ್ನು ನಿಯೋಜಿಸಿದರು. ಈ ಸಂಸ್ಥೆಗಳ ನೆರವಿನಿಂದಾಗಿ ಸರ್ಕಾರದ ಮೇಲೆ ಹೊರೆ ಇಲ್ಲದೆ ಆಸ್ಪತ್ರೆ ನಿರ್ಮಾಣವಾಗಿದೆ. ಈ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ”…