ಬೆಂಗಳೂರು: ಕರುನಾಡಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರಿದಿದೆ. ಈ ವೈರಾಣು ಸೋಂಕಿಗೆ ಸೋಮವಾರ 130 ಮಂದಿ ಬಲಿಯಾಗಿದ್ದು ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 4810ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 26 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ನಡುವೆ ಸೋಂಕಿನ ವೇಗವೂ ಕಡಿಮೆಯಾಗಿಲ್ಲ. ಭಾನುವಾರ ಸಂಜೆಯಿಂದ ಸೋಮವಾರ ಸಂಜೆಯವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 5851 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರು ನಗರವೊಂದರಲ್ಲೆ 1918 ಹೊಸ ಪ್ರಕರಣಗಳು ಸೋಮವಾರ ವರದಿಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,83,665ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Year: 2020
ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಥೆ ಮುಗಿಯದ ಅಧ್ಯಾಯವೇ? ಪರಿಸ್ಥಿಯನ್ನು ಅವಲೋಕಿಸಿದರೆ ನಿತ್ಯವೂ ಕೊರೋನಾ ಕರಾಳತೆಯ ದಿನಗಳೇ. ರಾಜ್ಯದಲ್ಲಿ ಇಂದು ಕೂಡಾ 5 ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ ಭಾನುವಾರ ಸಂಜೆಯವರೆಗೆ ಕಳೆದ 24 ತಾಸುಗಳಲ್ಲಿ ಹೊಸದಾಗಿ 5,938 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ವಧಿಯಲ್ಲಿ 68 ಮಂದಿ ಬಲಿಯಾಗಿದ್ದಾರೆ. ಈ ಕುರಿತಂತೆ ಅಂಕಿ ಅಂಶ ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,77,814ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ. ಬೆಂಗಳೂರಿನಲ್ಲಿಂದು 2,126 ಹೊಅ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದರೆ, ಬಳ್ಳಾರಿಯಲ್ಲಿ 406, ಹೊಸ ಕೇಸ್’ಗಳು ವರದಿಯಾಗಿವೆ. ಬೆಳಗಾವಿಯಲ್ಲಿ 136, ದಾವಣಗೆರೆಯಲ್ಲಿ 265, ಕೊಪ್ಪಳ 256, ಶಿವಮೊಗ್ಗ 246, ಕಲಬುರಗಿಯಲ್ಲಿ 203, ವಿಜಯಪುರದಲ್ಲಿ 134, ಹಾಸನದಲ್ಲಿ 196, ಧಾರವಾಡದಲ್ಲಿ 194, ಉಡುಪಿಯಲ್ಲಿ 117, ದಕ್ಷಿಣ ಕನ್ನಡದಲ್ಲಿ 193, ಗದಗ…
ಎಸ್ ಬಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿರ; ಹೆಲ್ತ್ ಬುಲೆಟಿನ್
ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿರುವ ಖ್ಯಾತ ಗಾಯಕ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರನ್ನು ಜೀವ ರಕ್ಷಕ ಸಾಧನಗಳ ನೆರವಿನಲ್ಲಿ ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಬುಲೆಟಿನ್ ನಲ್ಲಿ ಹೇಳಲಾಗಿದೆ. ಕೊರೋನಾವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರನ್ನು ಆಗಸ್ಟ್ 5 ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಜ್ವರ ಸ್ವಲ್ಪ ಕಡಿಮೆಯಾಗಿದೆ ಎನ್ನಲಾಗಿದೆ. ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರು ಬೇಗ ಗುಣಮುಖರಾಗಲಿ ಎಂದು ಸೆಲೆಬ್ರಿಟಿಗಳು, ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಕ್ರೇಜಿಸ್ಟಾರ್ ಪುತ್ರನ ‘ತ್ರಿವಿಕ್ರಮ’ ಟೀಸರ್
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮತ್ತೆ ಸುದ್ದಿಯಲ್ಲಿದ್ದಾರೆ. ಕ್ರೇಜಿಸ್ಟಾರ್ ಪುತ್ರ ವಿಕ್ರಮ್ ಅಭಿನಯದ ತ್ರಿವಿಕ್ರಮ ಚಿತ್ರ ತೀವ್ರ ಕುತೂಹಲ ಕೆರಳಿಸಿದ್ದು, ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ‘ತ್ರಿವಿಕ್ರಮ’ ಟೀಸರ್’ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ಸ್ ಸಿಗುತ್ತಿವೆ.
ಬೈಂದೂರು ಬಳಿ ಸಮುದ್ರದಲ್ಲಿ ದೋಣಿ ದುರಂತ
ಉಡುಪಿ: ಉಡುಪಿ ಜಿಲ್ಲೆ ಬೈಂದೂರಿನ ಅರಬೀ ಸಮುದ್ರದಲ್ಲಿ ಭೀಕರ ಅನಾಹುತ ಸಂಭವಿಸಿದೆ. ಬೈಂದೂರು ತಾಲ್ಲೂಕಿನ ಕೊಡೇರಿ ಬಳಿ ಸಮುದ್ರದ ಮಧ್ಯದಲ್ಲಿ ಮೀನುಗಾರಿಕಾ ದೋಣಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ. ಸಾಗರಶ್ರಿ ಎಂಬ ದೋಣಿಯಲ್ಲಿ ಸುಮಾರು 9 ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದ ವೇಳೆ ಈ ದುರಂತ ಸಂಭವಿಸಿದೆ. ಭಾನುವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಮೀನುಗಾರರು ಈ ದೋಣಿಯಲ್ಲಿ ತೆರಳಿದ್ದು ಮಧ್ಯಾಹ್ನದ ಹೊತ್ತಿಗೆ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ದೈತ್ಯ ಅಲೆಗಳ ಹೊಡೆತಕ್ಕೆ ತುತ್ತಾಗಿ ದೋಣಿ ಮಗುಚಿ ಬಿದ್ದು ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ.
ವಾಜಪೇಯಿ ಪುಣ್ಯತಿಥಿ; ರಾಷ್ಟ್ರಪತಿ, ಪ್ರಧಾನಿ ನಮನ
ದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಎರಡನೇ ವರ್ಷದ ಪುಣ್ಯತಿಥಿ ಯನ್ನು ಇಂದು ಆಚರಿಸಲಾಯಿತು. ಅಜಾತ ಶತ್ರು ಎಂದೇ ಜನಜನಿತರಾಗಿದ್ದ ವಾಜಪೇಯಿ ಅವರು ಭಾರತ ರತ್ನ ಪ್ರಶಸ್ತಿ ಪುರಸ್ಕೃತರು. ದೆಹಲಿಯಲ್ಲಿರುವ ಅಟಲ್ ಜಿ ಯವರ ಸ್ಮಾರಕ ‘ಸದೈವ್ ಅಟಲ್’ನಲ್ಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಗೌರವ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರೂ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ಸ್ಥಳಕ್ಕೆ ತೆರಳಿ ಗೌರವ ಸಮರ್ಪಿಸಿದರು.
ರಾಕಿಂಗ್ ಸ್ಟಾರ್ ಯಶ್ ಮತ್ತು ‘ವಿಲನ್’; ಇದು ಸಿನಿ ರಂಗದ ಅಚ್ಚರಿ.
ಬೆಂಗಳೂರು: ಕೆಜಿಎಫ್ ಮೂಲಕ ಸದಾ ಸುದ್ದಿಯಲ್ಲಿರುವ ರಾಕಿಂಗ್ ಸ್ಟಾರ್ ಯಶ್ ಇದೀಗ ‘ವಿಲನ್’ ಆಗಿ ಪ್ರತ್ಯಕ್ಷವಾಗಲಿದ್ದಾರೆಯೇ? ಈ ರೀತಿಯ ಕುತೂಹಲಕಾರಿ ಪ್ರಶ್ನೆಯೊಂದು ಕನ್ನಡ ಸಿನಿಮಾ ರಂಗದಲ್ಲಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಇನ್’ಸ್ಟಾಗ್ರಾಮ್’ನಲ್ಲಿ ಮಾಡಲಾಗಿರುವ ಪೋಸ್ಟ್. ಕೆಜಿಎಫ್ ಚಿತ್ರದ ಚಾಪ್ಟರ್-2 ವಿಚಾರದಲ್ಲಿ ಸಿನಿ ರಸಿಕರು ತೀವ್ರ ನಿರೀಕ್ಷೆಯಲ್ಲಿದ್ದಾರೆ. ಈ ಹೊತ್ತಿಗಾಗಲೇ ಯಶ್ ಅವರು ಇನ್’ಸ್ಟಾಗ್ರಾಮ್’ನಲ್ಲಿ ಪೊಷ್ಟೊಂದನ್ನು ಹರಿಬಿಟ್ಟಿದ್ದಾರೆ. ‘ವಿಲನ್’ ಈಸ್ ಕಮ್ಮಿಂಗ್’ ಎಂಬ ಈ ಪೋಸ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಕುರೂಹಾಳ ಆಗಸ್ಟ್ 17ರಂದು ತಣಿಯಲಿದೆ. View this post on Instagram A post shared by Yash (@thenameisyash)
ಅಂತಾರಾಷ್ಟ್ರೀಯ ಕ್ರಿಕೆಟ್ ಎಂಎಸ್ ಧೋನಿ ವಿದಾಯ; ಐಪಿಎಲ್ ನಲ್ಲಿ ಮಾತ್ರ ಆಟ
ದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ. ಈ ಹಿಂದೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದ ಧೋನಿ ಟಿ -20, ಏಕದಿನ ತಂಡಗಳಲ್ಲಿ ಆಡುತ್ತಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್’ ಗೂ ಅವರು ನಿವೃತ್ತಿ ಪ್ರಕಟಿಸಿ ಅವರು ಇಡೀ ಕ್ರೀಡಾ ಜಗತ್ತನ್ನು ಅಚ್ಚರಿಗೊಳಿಸಿದ್ದಾರೆ. ಈ ಕುರಿತಂತೆ ಅವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ವರೆಗೂ ತಮಗೆ ಬೆಂಬಲ ನೀಡಿದ ಅಭಿಮಾನಿಗಳು, ಕುಟುಂಬ ಸದಸ್ಯರು ಮತ್ತು ಸ್ನೇಹಿತರಿಗೆ ಧನ್ಯವಾದ ಸಲ್ಲಿಸಿದ್ದಾರೆ. View this post on Instagram A post shared by M S Dhoni (@mahi7781)
ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ
ಬೆಂಗಳೂರು: ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ರಾಜ್ಯವೇ ಮೊದಲು ಎಂಬ ಪ್ರಶಂಸೆಗೆ ಪಾತ್ರವಾಗಲು ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿದೆ. ಈ ಸಂಬಂಧ ಕಸರತ್ತಿನಲ್ಲಿ ತೊಡಗಿದ್ದು ಕೇಂದ್ರದ ಮಾರ್ಗಸೂಚಿ ಜಾರಿಗೊಳಿಸಲು ಅಧಿಕಾರಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಈ ಕುರಿತಂತೆ ರಾಮನಗರದಲ್ಲಿ ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು. ಹೊಸ ನೀತಿಯ ಕರಡು ಪ್ರತಿ ಸಿಕ್ಕಿದ ಕೂಡಲೇ ಸರಕಾರ ಇದಕ್ಕೆ ಸಂಬಂಧಿಸಿ ಕಾರ್ಯಪಡೆಯನ್ನು ರಚನೆ ಮಾಡಿತ್ತು. ನೀತಿಯ ಜಾರಿ ಸಂಬಂಧ ಈ ಕಾರ್ಯಪಡೆ ಆದಷ್ಟು ಬೇಗ ವರದಿ ನೀಡಲಿದೆ ಎಂದು ಅಶ್ವತ್ಥ ನಾರಾಯಣ್ ಹೇಳಿದರು.
ಕರ್ನಾಟಕದಲ್ಲೂ ಕೊರೋನಾ ಸೋಂಕಿತರ ಮರಣ ಪ್ರಮಾಣ ಹೆಚ್ಚಳ
ಬೆಂಗಳೂರು: ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಾಣು ಕರ್ನಾಟಕದ ಜನರನ್ನು ಆತಂಕಕ್ಕೀಡುಮಾಡಿದೆ. ಶನಿವಾರ ಒಂದೇ ದಿನ 114 ಮಂದಿ ಕೋವಿಡ್-19 ವೈರಾಣು ಸೋಂಕಿನಿಂದಾಗಿ ಬಲಿಯಾಗಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಕೊರೋನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚತ್ತಲೇ ಇದ್ದು ಶನಿವಾರದವರೆಗಿನ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 3,831ಕ್ಕೆ ಏರಿಕೆಯಾಗಿದೆ. ಈ ನಡುವೆ ರಾಜ್ಯದಲ್ಲಿ ಶನಿವಾರ 8,818 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 2,19,926ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
