ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರನ್ನು ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ಕರೆದೊಯ್ಯಲು ರಾಜ್ಯ ಸರ್ಕಾರ 665 ಆಂಬುಲೆನ್ಸ್ ಗಳನ್ನು ವ್ಯವಸ್ಥೆಗೊಳಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ, 665 ಆಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ. ಕೊರೊನಾ ಸೋಂಕಿಗೊಳಗಾದ ಮತ್ತು ಇತರೆ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಕೇಂದ್ರಕ್ಕೆ ಕೊಂಡೊಯ್ಯಲು ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. ಎಲ್ಲೆಲ್ಲಿ ಎಷ್ಟೆಷ್ಟು ಆಂಬ್ಯುಲೆನ್ಸ್? ಬಿಬಿಎಂಪಿಯ ಪೂರ್ವ ವಲಯದಲ್ಲಿ 127 ಪಶ್ಚಿಮ ವಲಯದಲ್ಲಿ 141, ದಕ್ಷಿಣದಲ್ಲಿ 110, ರಾಜರಾಜೇಶ್ವರಿ ನಗರದಲ್ಲಿ 40, ಬೊಮ್ಮನಹಳ್ಳಿಯಲ್ಲಿ 43, ಮಹದೇವಪುರದಲ್ಲಿ 52, ದಾಸರಹಳ್ಳಿಯಲ್ಲಿ 24, ಯಲಹಂಕದಲ್ಲಿ 33 ಪೊಲೀಸ್ ಇಲಾಖೆಯಿಂದ 11 ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 84 ಆಂಬ್ಯುಲೆನ್ಸ್ ಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Year: 2020
ಆಲಮಟ್ಟಿ ಅಣೆಕಟ್ಟಿಗೆ ವರ್ಣ ಚಿತ್ತಾರ ; ಜನರ ಚಿತ್ತ ಸೆಳೆದ ಜಲಾಶಯ
ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ ಕೃಷ್ಣಾ ನದಿಯಲ್ಲಿ ಪ್ರವಾಹ ಹೆಚ್ಚಾಗಿದೆ. ಆಲಮಟ್ಟಿ ಅಣೆಕಟ್ಟೆಗೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಅಣೆಕಟ್ಟೆಯಿಂದ ಹೊರಹರಿವನ್ನೂ ಹೆಚ್ಚಿಸಲಾಗಿದೆ. ಈ ನಡುವೆ ಆಲಮಟ್ಟಿ ಹೊರಹರಿವು ಹೆಚ್ಚಿದ ಸಂದರ್ಭದಲ್ಲಿ ವರ್ಣ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಆ ಸಂದರ್ಭದ ಚಿತ್ರಣ ಎಲ್ಲರ ಗಮನ ಸೆಳೆಯುತ್ತದೆ.
ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ‘ರೊಜ್‌ಗಾರ್ ದೊ’ ಅಭಿಯಾನ
ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಟೀಕಾಸ್ತ್ರ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ ಇದೀಗ ಮೋದಿ ಸರ್ಕಾರದ ವಿರುದ್ಧ ಅಭಿಯಾನ ಆರಂಭಿಸಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ವರ್ಷ 2 ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ದೂರಿರುವ ರಾಹುಲ್ ಗಾಂಧೀ, ದೇಶದ ಕೋಟ್ಯಾಂತರ ಯುವ ಜನರು ನಿರುದ್ಯೋಗಿಗಳಾಗಿದ್ದಾರೆ.ದೇಶದ ಆರ್ಥಿಕ ರಚನೆಯನ್ನೇ ಬಿಜೆಪಿ ಸರ್ಕಾರ ನಾಶಪಡಿಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಲ್ಲದೆ, 90 ಸೆಕೆಂಡ್ ವಿಡಿಯೋ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ “ರೊಜ್‌ಗಾರ್ ದೊ” (ಉದ್ಯೋಗವನ್ನು ಒದಗಿಸಿ) ಅಭಿಯಾನವನ್ನು ಆರಂಭಿಸಿದ್ದಾರೆ. ಉದ್ಯೋಗವಿಲ್ಲದ ಯುವಜನರು ಮತ್ತು ಇತರರು ದನಿ ಎತ್ತಿ ಸರ್ಕಾರವನ್ನು ಜಾಗೃತಗೊಳಿಸಬೇಕು ಎಂದು ಅವರು ಕರೆ ನೀಡಿದ್ದಾರೆ. देश के युवाओं के मन की बात:रोज़गार दो, मोदी सरकार! आप भी अपनी आवाज़ युवा कॉंग्रेस…
ಇನ್ನೂ ಕೆಲ ದಿನ ಭಾರೀ ಮಳೆ; ಜಿಲ್ಲೆಗಳಲ್ಲಿ ಕಟ್ಟೆಚ್ಚರ
ಬೆಂಗಳೂರು: ರಾಜ್ಯದ ಹಲವೆಡೆ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಇನ್ನೂ ಕೆಲ ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇದು ಆ.13ರವರೆಗೂ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.
ಮಾರ್ಗಸೂಚಿಗಳಿಗೆ ಜೋತು ಬೀಳದೆ ತಕ್ಷಣವೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಿ
ಬೆಂಗಳೂರು: ಭಾರೀ ಮಳೆಯಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದು ಅವರಿಗೆ ತಕ್ಷಣದ ಪರಿಹಾರ ನೀಡಬೇಕೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಂಗಾರು ಮಳೆಯಿಂದ ತತ್ತರಿಸಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಾಗ ರಾಷ್ಟ್ರೀಯ ಮತ್ತು ರಾಜ್ಯ ಪ್ರಕೃತಿ ವಿಕೋಪ ನಿಧಿಯ ಮಾರ್ಗಸೂಚಿಗಳಿಗೆ ಜೋತುಬೀಳದೆ ಸರ್ಕಾರ ರೈತರಿಗೆ ಹೆಚ್ಚಿನ ಪರಿಹಾರ ತಕ್ಷಣವೇ ನೀಡಬೇಕು ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಮುಂಗಾರು ಮಳೆಯಿಂದ ತತ್ತರಿಸಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಾಗ ರಾಷ್ಟ್ರೀಯ ಮತ್ತು ರಾಜ್ಯ ಪ್ರಕೃತಿ ವಿಕೋಪ ನಿಧಿಯ ಮಾರ್ಗಸೂಚಿಗಳಿಗೆ ಜೋತುಬೀಳದೆ ಸರ್ಕಾರ ರೈತರಿಗೆ ಹೆಚ್ಚಿನ ಪರಿಹಾರ ತಕ್ಷಣವೇ ನೀಡಬೇಕು.1/7 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2020 ಸರಣಿ ಟ್ವೀಟ್ ಮಾಡಿರುವ ಅವರು, ಸತತ ಮೂರನೇ ವರ್ಷ ಅತಿವೃಷ್ಟಿಗೆ ಸಿಲುಕಿರುವ ರಾಜ್ಯದ ರೈತರು ಈ ಬಾರಿಯೂ ಮಳೆಯ ಅನಾಹುತ ತಡೆದುಕೊಳ್ಳುವ ಶಕ್ತಿ ಇಲ್ಲದೆ ಬಸವಳಿದಿದ್ದಾರೆ.…
ಕರುಣಾದಲ್ಲಿ ಕೊರೋನಾ ತಲ್ಲಣ; ಹೆಚ್ಚುತ್ತಿರುವ ಸಾವಿನ ಸಂಖ್ಯೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿದ್ದು ಸೋಂಕಿತರ ಸಾವಿನ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಭಾನುವಾರ 5,985 ಪ್ರಕರಣಗಳು ಪತ್ತೆಯಾಗಿದ್ದು ಒಂದೇ ದಿನದಲ್ಲಿ ಕೊರೋನಾ ಸೋಂಕಿಗೆ 107 ಮಂದಿ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಕೊರೋನಾ ಸೋಂಕಿನಿಂದಾಗಿ ಆವನ್ನಪ್ಪಿದವರ ಸಂಖ್ಯೆ 3,198ಕ್ಕೆ ಏರಿಕೆಯಾಗಿದೆ. ಈ ನಡುವೆ ರಾಜ್ಯದಲ್ಲಿ 5,985 ಕೊರೋನಾ ಸೋಂಕು ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 1,948 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,78,087ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು; ಪಾತಕ ಲೋಕಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ ಖಡಕ್ ಅಧಿಕಾರಿ ಡಿಸಿಪಿ ಗಾವಂಕರ್
ಬೆಂಗಳೂರು: ಬಂದರು ನಗರಿಯಲ್ಲಿ ಪಾತಕ ಲೋಕದ ಮಂದಿಗೆ ಅಂಕುಶ ಹಾಕಲು ಪೊಲೀಸ್ ಪಡೆ ಸಜ್ಜಾಗಿದೆ. ಮಂಗಳೂರು ಮಹಾನಗರದ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ವಿನಯ್ ಗಾವಂಕರ್ ಅಧಿಕಾರ ವಹಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಎಸ್‌ಪಿ’ಯಾಗಿ ಪದೋನ್ನತಿ ಪಡೆದಿರುವ ವಿನಯ್ ಗಾವಂಕರ್ ಅವರನ್ನು ರಾಜ್ಯ ಸರ್ಕಾರ ಮಂಗಳೂರು ನಗರದ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಿತ್ತು. ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ ಅವರು ರೌಡಿ ನಿಗ್ರಹ ಹಾಗೂ ಅಪರಾಧ ಪತ್ತೆ ದಳ ವಿಭಾಗದಲ್ಲಿನ ಪೊಲೀಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣರಾದರು. ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಯಿಂದ ಹಿಡಿದು ಇನ್‌ಸ್ಪೆಕ್ಟರ್, ಡಿವೈಎಸ್‌ಪಿ, ಎಸಿಪಿ ಸಹಿತ ವಿವಿಧ ಹುದ್ದೆಗಳನ್ನು ಕರಾವಳಿಯಲ್ಲ್ಲೇ ನಿರ್ವಹಿಸಿದ್ದ ವಿನಯ್ ಗಾವಂಕರ್, ಹಲವಾರು ವರ್ಷಗಳ ಕಾಲ ರೌಡಿ ನಿಗ್ರಹ ದಳದಲ್ಲೇ ಕರ್ತವ್ಯ ನಿರ್ವಹಿಸಿದ್ದರು. ದಶಕಗಳ ಹಿಂದಿನ ಸುರತ್ಕಲ್ ಎನ್‌ಕೌಂಟರ್ ಸಹಿತ ಕೆಲವು ಘಟನೆಗಳು ಈ ಅಧಿಕಾರಿ ಬಗ್ಗೆ ಪಾತಕ ಲೋಕದಲ್ಲಿ…
ಚಿಕ್ಕಮಗಳೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಸಚಿವ ಸಿ.ಟಿ.ರವಿ ಚಾಲನೆ
ಚಿಕ್ಕಮಗಳೂರು: ಮಲೆನಾಡಿನಲ್ಲಿ ಅಭಿವೃದ್ದಿ ಕಾಮಗಾರಿಗಳು ವೇಗ ಪಡೆದುಕೊಂಡಿವೆ. ಇದೇ ಸಂದರ್ಭದಲ್ಲಿ ವಿವಿಧ ಮೂಲಸೌಲಭ್ಯ ಕಾಮಗಾರಿಗಳಿಗೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಚಾಲನೆ ನೀಡಿದ್ದಾರೆ. ಮಳೆ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿನ ಪರಿಹಾರ ಕಾರ್ಯಾಚರಣೆಯ ನಡುವೆ ಇಂದು ಸಚಿವರು ಕುರುವಂಗಿಯಲ್ಲಿನ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು. ಇದೇ ವೇಳೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುವಂಗಿಯಿಂದ ರಂಗನಾಥ ಸ್ವಾಮಿ ದೇವಸ್ಥಾನವರೆಗಿನ ರಸ್ತೆ ಡಾಂಬರೀಕರಣ ಹಾಗೂ ಅಭಿವೃದ್ದಿ ಕಾಮಗಾರಿಗಳಿಗೂ ಸಚಿವ ಸಿ.ಟಿ.ರವಿ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ.. ಮಲೆನಾಡಿನ ಅಯ್ಯನ ಕೆರೆಯಲ್ಲಿ ಸಾಹಸ ಕ್ರೀಡಾ ತರಬೇತಿ; ಸಚಿವ ಸಿ.ಟಿ.ರವಿ ಚಾಲನೆ ಜೊತೆಗೆ, ಬೈಪಾಸ್ ರಸ್ತೆಯಿಂದ ಕುರವಂಗಿ ಮೂಲಕ ನೆಟ್ಟಕೆರೆಹಳ್ಳಿ ಶಂಕರದೇವರಮಠ ರಸ್ರೆ ವರೆಗಿನ ಸುಮಾರು 5 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೂ ಅವರು ಚಾಲನೆ ನೀಡಿದರು. ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಕಾರ್ಯಕ್ರಮಗಳಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ..…
ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮತ್ತೊಮ್ಮೆ ಮ್ಯಾಜಿಕ್
ತಿರುವನಂತಪುರ: ಪಡ್ಡೆ ಹುಡುಗರ ನೆಚ್ಚಿನ ತಾರೆ, ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಸದಾ ಒಂದಿಲ್ಲೊಂದು ವಿಚಾರಗಳಿಂದಾಗಿ ಸುದ್ದಿಯ ಕೇಂದ್ರಬಿಂದುವಾಗುತ್ತಿದ್ದಾರೆ. ವಿಂಕಿಂಗ್ ಸ್ಟಾರ್ ಪ್ರಿಯಾ ಪ್ರಕಾಶ್ ವಾರಿಯರ್ ಓರು ಆಡಾರ್ ಲವ್ ಚಿತ್ರದಲ್ಲಿ ಮಾಡಿದ ಒಂದು ಕಣ್ಸನ್ನೆ, ಅವರನ್ನು ರಾಷ್ಟ್ರೀಯ ಮಟ್ಟದಲ್ಲಿ ಮನೆಮಾಡುವಂತೆ ಮಾಡಿತು. ಇದೀಗ ಮತ್ತೆ ಕಣ್ಸನ್ನೆ ಮೂಲಕ ಈ ವಿಂಕಿಂಗ್ ಸ್ಟಾರ್ಸುದ್ದಿಗೆ ಗ್ರಾಸವಾಗಿದ್ದಾರೆ. ಬ್ಯೂಟಿ ಪಾರ್ಲರ್’ನಲ್ಲಿ ಕುಳಿತು ಸೆಲ್ಫಿ ಮಿರರ್ ವಿಡಿಯೋದಲ್ಲಿ ಕಣ್ಸನ್ನೆ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ವೀಡಿಯೊ ಇದೀಗ ಸಕತ್ ವೈರಲ್ ಆಗುತ್ತಿದೆ. https://www.instagram.com/reel/CDjGsZBApuV/?utm_source=ig_embed
ಸೈಬರ್ ಕಳ್ಳರ ಬೆನ್ನತ್ತಿದ ಪೊಲೀಸ್; ವಿದೇಶಿಯರ ಅಡ್ಡೆಗಳ ಮೇಲೆ ದಾಳಿ; ವಿದೇಶಿ ನಕಲಿ ನೋಟುಗಳು ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗಿವೆ. ಅದರಲ್ಲೂ ಸೈಬರ್ ಕಳ್ಳರು ಬ್ಯಾಂಕ್ ಅಕೌಂಟ್’ಗಳಿಗೆ ಕಣ್ಣ ಹಾಕುತ್ತಿದ್ದು ಇಂತಹ ಸರಣಿ ದೂರುಗಳ ಬಗ್ಗೆ ಬೆಂಗಳೂರಿನ ನೂತನ ಪೊಲೀಸ್ ಆಯುಕ್ತ ಕಮಲ್ ಪಂತ್ ಗಂಭೀರವಾಗಿ ಪರಿಗಣಿಸಿದ್ದಾರೆ. ಇಂತಹಾ ಅಪರಾಧ ಪ್ರಕರಣಗಳ ತಡೆ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಕಾರ್ಯತಂತ್ರ ರೂಪಿಸಿರುವ ಅವರು, ಸೈಬರ್ ಕಳ್ಳರ ಬೆನ್ನತ್ತುವಂತೆ ಸೂಚಿಸಿದ್ದಾರೆ. ಈ ನಡುವೆ ಬಂಗಳೂರಿನ ಹೆಣ್ಣೂರು, ಬಾಗಲೂರು, ಮತ್ತು ಕೊತ್ತನೂರು ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ವಾಸವಿದ್ದ ವಿದೇಶಿಯರ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರ ತಂಡ, ಹಲವರನ್ನು ಖೆಡ್ಡಾಕ್ಕೆ ಕೆಡವಿದೆ. ಸುಮಾರು 120 ಅಧಿಕಾರಿಗಳೊಂದಿಗೆ ಶನಿವಾರ ವಿಶೇಷ ಕಾರ್ಯಾಚರಣೆ ಕೈಗೊಂಡು ಸುಮಾರು 85 ವಿದೇಶಿಯರನ್ನು ವಿಚಾರಣೆ ನಡೆಸಿದ್ದಾರೆ. ಸುಮಾರು 20 ಮಂದಿ ಆಫ್ರಿಕಾ ಪ್ರಜೆಗಳು ಮಾನ್ಯತೆಯಿಲ್ಲದ ಪಾಸ್’ಪೋರ್ಟ್, ವೀಸಾ ಹೊಂದಿರುವುದು ಬೆಳಕಿಗೆ ಬಂದಿದೆ. ಇವರಲ್ಲಿ ಭಾರತ, ಅಮೇರಿಕ, ಮತ್ತು ಯುಕೆ ದೇಶಗಳ ನಕಲಿ…
