ಮಲೆನಾಡಿನ ಅಯ್ಯನ ಕೆರೆಯಲ್ಲಿ ಸಾಹಸ ಕ್ರೀಡಾ ತರಬೇತಿ; ಸಚಿವ ಸಿ.ಟಿ.ರವಿ ಚಾಲನೆ

ಚಿಕ್ಕಮಗಳೂರು: ಮಲೆನಾಡಿನ ಅಯ್ಯನ ಕೆರೆಯಲ್ಲಿ ಸಾಹಸ ಕ್ರೀಡಾ ತರಬೇತಿ ಚಟುವಟಿಕೆಗಳಿಗೆ ಚಾಲನೆ ನೀಡಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಈ ಸಾಹಸ ಕ್ರೀಡಾ ತರಬೇತಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜೇತನಾ, ಜಿಲ್ಲಾಡಳಿತ, ಪ್ರವಾಸೋದ್ಯಮ, ಅರಣ್ಯ ಇಲಾಖೆ, ಜೇತನಾ ಸಹಯೋಗದಲ್ಲಿ ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಅಯ್ಯನ ಕೆರೆ ಬಳಿ ಏರ್ಪಡಿಸಿದೆ. ಈ ವೇಳೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಕೆರೆಯಲ್ಲಿ ಸಾಹಸ ಕ್ರೀಡಾ ತರಬೇತಿ ಚಟುವಟಿಕೆ, ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಈ ಭಾಗದಲ್ಲಿ ವ್ಯಾಪಾರ ಸುಧಾರಣೆಯಾಗುತ್ತದೆ ಎಂದರು. ಪರಿಸರಕ್ಕೆ ಧಕ್ಕೆಯಾಗದಂತೆ ಪ್ರವಾಸೋದ್ಯಮ ಉತ್ತೇಜನ ನಿಟ್ಟಿನಲ್ಲಿ ಗಮನ ಹರಿಸಲಾಗುವುದು. ಇಲ್ಲಿ ಸೈಕ್ಲಿಂಗ್‌, ಕಾಯ್ಕಿಂಗ್ ಕೈಗೊಳ್ಳಲಾಗುತ್ತದೆ. ಕೆರೆಯಲ್ಲಿ ಡೀಸೆಲ್‌ ಯಂತ್ರ ಬಳಸಲು ಅವಕಾಶ ನೀಡಿಲ್ಲ ಎಂದರು. ಇದನ್ನೂ ಓದಿ.. ಮಲೆನಾಡಲ್ಲಿ ಮಳೆಹಾನಿ; ಸೇನಾನಿಯಂತೆ ಪರಿಹಾರ ಕಾರ್ಯಾಚರಣೆಗೆ ಧುಮುಕಿದ ಸಚಿವ ರವಿ  

ರಾಜ್ಯದಲ್ಲಿ ಕೊರೋನಾ ಸೋಂಕಿಗೊಳಗಾಗಿ ಸಾವನ್ನಪಿದವರ ಸಂಖ್ಯೆ 3,091ಕ್ಕೆ ಏರಿಕೆ

ಬೆಂಗಳೂರು: ಜಗತ್ತಿನಾದ್ಯಂತ ಸೋಂಕು ವಿಸ್ತರಿಸಿರುವ ಕೊರೋನಾ ವೈರಾಣು ಕರ್ನಾಟಕದಲ್ಲಿ ತಲ್ಲಣ ಸೃಷ್ಟಿಸಿದೆ. ಶನಿವಾರವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 90 ಕ್ಕೂ ಹೆಚ್ಚು ಮಂದಿ ಕೊರೊನಗೆ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆ ವರೆಗೆ ೯೩ ಮಂದಿ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿಗೊಳಗಾಗಿ ಸಾವನ್ನಪಿದವರ ಸಂಖ್ಯೆ 3,091ಕ್ಕೆ ಏರಿಕೆಯಾಗಿದೆ. ಈ ನಡುವೆ ಶುಕ್ರವಾರ ಸಂಜೆಯಿಂದ ಶನಿವಾರ ಸಂಜೆವರೆಗೆ ರಾಜ್ಯದಲ್ಲಿ 7,178 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗಿರುವುದು ಇದುವೇ ಮೊದಲು. ಈ ಮಧ್ಯೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,72,102ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 2665 ಮಂದಿ ಕೊರೋನಾ ಸೋಂಕಿಗೊಲ್ಗಾಗಿದ್ದು ಶನಿವಾರ 18 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆಂದು ಆರೋಗ್ಯ ಇಲಾಖೆ ತಿಳಿಸಿದೆ. ಇಂದಿನ 08/08/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ…

ಮಲೆನಾಡಲ್ಲಿ ಮಳೆಹಾನಿ; ಸೇನಾನಿಯಂತೆ ಕಾರ್ಯಾಚರಣೆಗೆ ಧುಮುಕಿದ ಸಚಿವ ರವಿ

ಚಿಕ್ಕಮಗಳೂರು: ಭಾರೀ ಮಳೆಯಿಂದಾಗಿ ಮಲೆನಾಡಿನಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಹಲವೆಡೆ ರಸ್ತೆಗಳು ಕುಸಿದಿದ್ದು ವಾಹನ ಸಂಚಾರವೂ ಏರುಪೇರಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಳೆ ಸಂತ್ರಸ್ಥ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಧಾವಿಸಿ ಪರಿಹಾರ ಕಾರ್ಯಾಚರಣೆಗೆ ಧುಮುಕಿದರು. ತಾವೇ ಸ್ಥಳದಲ್ಲಿ ನಿಂತು ಪರಿಹಾರ ಕಾರ್ಯದಲ್ಲಿ ತಲ್ಲೀನರಾದರು. ಶನಿವಾರ ಚಾರ್ಮಾಡಿ ಘಾಟ್’ನಲ್ಲಿನ ಭೂ ಕುಸಿತ ಪ್ರದೇಶದಲ್ಲಿ ಬೀಡು ಬಿಟ್ಟು ರಸ್ತೆ ದುರಸ್ತಿ ಮಾಡಿಸಿದರು. ದಕ್ಷಿಣಕನ್ನಡ-ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆ ಇದಾಗಿದೆ. ವ್ಯಾಪಕ ಮಳೆಯಿಂದಾಗಿ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದು, ಆ ಸ್ಥಳಗಳಿಗೆ ಸಚಿವ ಸಿ.ಟಿ.ರವಿ ಖುದ್ದು ಭೇಟಿ ನೀಡಿದರು. ಸಂತ್ರಸ್ತ ರೈತರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆಯನ್ನು ವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ನೀಡಿದರು. ಇದನ್ನೂ ಓದಿ.. ಯಗಚಿ ಜಲಾಶಯಕ್ಕೆ ಸಚಿವ ಸಿ.ಟಿ ರವಿ ಬಾಗಿನ  ಮಲೆನಾಡಿನ ಅಯ್ಯನ…

ಕೊರೋನಾದಿಂದ ಕಾರ್ಮಿಕರನ್ನು ರಕ್ಷಿಸಲು ಆದ್ಯತೆ ನೀಡಿ; ಕಂಪೆನಿಗಳಿಗೆ ಶೆಟ್ಟರ್ ಸಲಹೆ

ಬಿಡದಿ: ಕರೋನಾ ಪಿಡುಗಿನಿಂದ ಕಾರ್ಮಿಕರ ರಕ್ಷಣೆಗೆ ಹೆಚ್ಚಿನ ಒತ್ತು ನೀಡುವಂತೆ ಕಂಪೆನಿಗಳಿಗೆ ಬೃಹತ್‌ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಸೂಚಿಸಿದ್ದಾರೆ. ಬಿಡದಿಯ ಕೋಕೊ ಕೋಲಾ ಫ್ಯಾಕ್ಟರಿಗೆ ಭೇಟಿ ನೀಡಿದ ಜಗದೀಶ ಶೆಟ್ಟರ್‌, ಕೋಕೊ ಕೋಲಾ ಫ್ಯಾಕ್ಟರಿಯಲ್ಲಿ ಅಳವಡಿಸಿಕೊಂಡಿರುವ ಸುರಕ್ಷತೆಯ ಕ್ರಮಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರೋನಾ ಸಾಂಕ್ರಾಮಿಕ ರೋಗ ಎಲ್ಲಾ ಕ್ಷೇತ್ರ ಹಾಗೂ ಜನರನ್ನು ಸಂಕಷ್ಟಕ್ಕೀಡು ಮಾಡಿದೆ. ದೇಶ ಹಾಗೂ ರಾಜ್ಯದ ಆರ್ಥಿಕತೆಯ ಗಾಲಿ ಮುಂದೆ ಸಾಗಲು ಕೈಗಾರಿಕಾ ಕ್ಷೇತ್ರದ ತನ್ನ ಕಾರ್ಯ ಆರಂಭ ಮಾಡಬೇಕಾಗಿರುವುದು ಅನಿವಾರ್ಯ. ಇದನ್ನು ಮನಗೊಂಡು ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಲಾಕ್‌ ಡೌನ್‌ ಸಡಲಿಕೆ ಮಾಡಿದೆ. ಆದರೆ, ಕರೋನಾ ಮಹಾಮಾರಿಯ ತೊಂದರೆ ಇನ್ನು ತಪ್ಪಿಲ್ಲ. ಕರೋನಾ ಜೊತೆಯಲ್ಲಿಯೇ ಬದುಕಲು ನಾವು ಕಲಿತುಕೊಳ್ಳಬೇಕಾಗಿದೆ. ಸಾಮಾಜಿಕ ಅಂತರ, ಮಾಸ್ಕ್‌ ಹಾಗೂ ಸ್ಯಾನಿಟೈಸರ್‌ ಬಳಕೆಯನ್ನು ನಮ್ಮ ಬದುಕಿನ ಕರ್ತವ್ಯಗಳಾಗಿ ಸ್ವೀಕರಿಸಬೇಕು…

ಯಗಚಿ ಜಲಾಶಯಕ್ಕೆ ಸಚಿವ ಸಿ.ಟಿ ರವಿ ಬಾಗಿನ

ಬೆಂಗಳೂರು: ಕರಾವಳಿ ಮಲೆನಾಡಿನಲ್ಲಿ ಭಾರೀ ಮಳೆಯಾಗಿದ್ದು ಹಳ್ಳ ಕೋಲ್ಲ್ಗಳು ತುಂಬಿ ಹರಿಯುತ್ತಿವೆ. ಚಿಕ್ಕ ಮಗಳೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಿದ್ದು ಎಲ್ಲಾ ನದಿಗಳೂ ತುಂಬಿ ಹರಿಯುತ್ತಿವೆ. ಈ ಬಾರಿಯ ವರ್ಷಧಾರೆಯಿಂದಾಗಿ ಯಗಚಿ ಜಲಾಶ ಕೂಡಾ ಜಲ ಶ್ರೀಮಂತಿಕೆಯಿಂದ ಕಂಗೊಳಿಸುತ್ತಿದೆ.ಭರ್ತಿಯಾಗಿರುವ ಯಗಚಿ ಜಲಾಶಯಕ್ಕೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹಾಗೂ ಆಹಾರ, ನಾಗರೀಕ‌ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಗೋಪಾಲಯ್ಯ ಅವರು ಬಾಗಿನ ಸಮರ್ಪಿಸಿದರು. ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.  

ಕೋವಿಡ್ ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿ ಹೃದಯಾಘಾತದಿಂದ ಸಾವು

ಬೆಂಗಳೂರು, : ಕೋವಿಡ್ 19 ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿ ಹೆಚ್.ಗಂಗಾಧರಯ್ಯ ಹೃದಯಾಘಾತದಿಂದ ಮೃತಪಟ್ಟಿದ್ದು ಅವರ ನಿಧಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ ಕೋವಿಡ್ 19 ಕರ್ತವ್ಯದಲ್ಲಿದ್ದ ಹೆಚ್.ಗಂಗಾಧರಯ್ಯ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಬಗ್ಗೆ ಅತೀವ ನೋವು ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ. ಜೊತೆಗೆ ಗಂಗಾಧರಯ್ಯ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದಾರೆ.

ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು

ಮುಂಬೈ: ದೇಶದಲ್ಲಿ ಕೊರೋನಾ ವೈರಾಣು ಹಾವಳಿ ಮುಂದುವರಿದಿಡಿದು ಅನೇಕ ಗಣ್ಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಸಂದರ್ಭದಲ್ಲಿ ಬಾಲಿವುಡ್ ಖ್ಯಾತ ನಟ ನಟ ಸಂಜಯ್ ದತ್ ಕೂಡಾ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಾಲಾದ ಸಂಜಯ್ ದತ್ ಅವರನ್ನು ಕೋವಿಡ್ ಸೋಂಕಿನ ಬಗ್ಗೆ ಪರೀಕ್ಷೆ ನಡೆಸಲಾಗಿದೆ. ಕಡ್ಡಾಯ ಪ್ರೋಟೋಕಾಲ್ ನಂತೆ ಸಂಜಯ್ ದತ್ ಅವರಿಗೆ ಕೋವಿಡ್ -19 ಪರೀಕ್ಷೆ ನಡೆಸಲಾಗಿದ್ದು ವರದಿ ನೆಗೆಟಿವ್ ಬಂದಿದೆ. ಹೀಗಿದ್ದರೂ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. Just wanted to assure everyone that I’m doing well. I’m currently under medical observation & my COVID-19 report is negative. With the help & care of the doctors, nurses & staff at Lilavati…

ಕೋಯಿಕ್ಕೋಡ್ ವಿಮಾನ ದುರಂತ; ಸಾವನ್ನಪ್ಪಿದವರ ಸಂಖ್ಯೆ18ಕ್ಕೆ ಏರಿಕೆ

ಕೊಚ್ಚಿ: ಕೇರಳದ ಕೋಯಿಕ್ಕೋಡ್’ನಲ್ಲಿ ನಡೆದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಶುಕ್ರವಾರ ದುಬೈನಿಂದ ಕೋಯಿಕ್ಕೋಡ್’ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ರನ್‌ವೇಯಿಂದ ಜಾರಿ ಅಪಘಾತ ಸಂಭವಿಸಿತ್ತು. ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 174 ಪ್ರಯಾಣಿಕರು 10 ಮಕ್ಕಳು 5 ವಿಮಾನ ಸಿಬ್ಬಂದಿಗಳು, ಇಬ್ಬರು ಪೈಲಟ್ ಗಳು ಇದ್ದರು. ರನ್’ವೇಯಿಂದ ಪಕ್ಕಕ್ಕೆ ಜಾರಿದ ಪರಿಣಾಮ ವಿಮಾನ ಇಬ್ಭಾಗವಾಗಿದೆ. ಈ ಘಟನೆ ಸಂಬಂಧ ನಾಗರಿಕ ವಿಮಾನಯಾನದ ಪ್ರಧಾನ ನಿರ್ದೇಶನಾಲಯ ತನಿಖೆಗೆ ಆದೇಶಸಿದೆ.

ಮಳೆಹಾನಿ ಬಗ್ಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಹೆಚ್‌ಡಿಕೆ ಆಗ್ರಹ

ಬೆಂಗಳೂರು: ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ  ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಪ್ರಸ್ತುತ ಉದ್ಭವಿಸಿರುವ ಸಮಸ್ಯೆಗಳತ್ತ ಬೆಳಕು ಚೆಲ್ಲಿದ್ದಾರೆ. ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸುತ್ತೇನೆ.1/6 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 7, 2020 ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದವರು ಸರ್ಕಾರದ ಗಮನ ಸೆಳೆದಿದ್ದಾರೆ. ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು,…

ಭಾರತದಲ್ಲಿ 20 ಲಕ್ಷ ದಾಟಿದ ಕೊರೋನಾ ಕೇಸ್

ದೆಹಲಿ: ಭಾರತದಲ್ಲಿ ಕೊರೋನಾ ವೈರಾಣು ಹಾವಳಿಗೆ ಅಂಕುಶ ಬೀಳುತ್ತಿಲ್ಲ. ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದ್ದು, ಮಹಾರಾಷ್ಟ್ರದಲ್ಲಿ ಗುರುವಾರ 11 ಸಾವಿರದ 514 ಹೊಸ ಪಾಸಿಟಿವ್ ಕೇಸ್’ಗಳು ಪತ್ತೆಯಾಗಿವೆ. ಪಶ್ಚಿಮ ಬಂಗಾಳದಲ್ಲಿ 2 ಸಾವಿರದ 954, ಪಂಜಾಬ್ ನಲ್ಲಿ ಸಾವಿರದ 49, ದೆಹಲಿಯಲ್ಲಿ ಸಾವಿರದ 299, ಉತ್ತರ ಪ್ರದೇಶದಲ್ಲಿ 4 ಸಾವಿರದ 658 ಹೊಸ ಕೇಸುಗಳು ದಾಖಲಾಗಿವೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ. ಈ ಪೈಕಿ 13 ಲಕ್ಷದ 70 ಸಾವಿರ ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿವೆ.