ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಾವೇರಿಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Year: 2020
ಡಿನೋಟಿಫಿಕೇಷನ್ ಫಜೀತಿ; ಯಡಿಯೂರಪ್ಪ ರಾಜೀನಾಮೆಗೆ ಹೆಚ್ಚಿದ ಒತ್ತಡ
ಬೆಂಗಳೂರು: ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣಕ್ಕೆ ಮರು ಜೀವ ಸಿಗುತ್ತಿದ್ದಂತೆಯೇ ಬಿಜೆಪಿ ಪಾಲಯದಲ್ಲೂ ಸಂಚಲನ ಉಂಟಾಗಿದೆ. ಒಂದೆಡೆ ಸಂಪುಟ ಪುನಾರಚನೆಗೆ ಕಸರತ್ತು ನಡೆದರೆ ಇನ್ನೊಂದೆಡೆ ಡಿನೋಟಿಫಿಕೇಷನ್ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಲೇಬೇಕೆಂದು ಪ್ರತಿಪಕ್ಷಗಳು ಒತ್ತಡ ಹಾಕುತ್ತಿವೆ. ಆದರೆ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾತ್ರ ನಿಗೂಢವಾಗಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾರಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಕಾನೂನುಬಾಹಿರವಾಗಿ ಜಮೀನನ್ನು ಡಿನೋಟಿಫೈ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು Cognizable offence ಆಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಡಿಸೆಂಬರ್ 22ರ ಆದೇಶದಲ್ಲಿ ಹೈಕೋರ್ಟ್ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದಿರುವ ಸಿದ್ದರಾಮಯ್ಯ, ಕೆಐಎಡಿಬಿ…
ಕಟೀಲು ಶ್ರೀ ದೇವಿಗೆ ಧನುರ್ಮಾಸದ ಬೆಳಿಗ್ಗಿನ ಮಹಾಪೂಜೆ.. ಇಲ್ಲಿದೆ ವಿಶೇಷ ಕೈಂಕರ್ಯದ ವೀಡಿಯೊ..
ಮಂಗಳೂರು: ವೈಕುಂಠ ಏಕಾದಶಿ ದಿನವಾದ ಇಂದು ಕರಾವಳಿಯ ದೇವಸ್ಥಾನಗಳಲ್ಲಿ ವಿಶೇಶ ಉತ್ಸವಗಳು ಗಮನಸೆಳೆದಿವೆ. ಕೃಷ್ಣನ ನಾಡು ಉಡುಪಿಯ ಮಠಕ್ಕೆ ಭಕ್ತಸಾಗರವೇ ಹರಿದುಬಂದಿದೆ. ಇದೇ ವೇಳೆ, ಪ್ರತೀ ಹಬ್ಬಗಳಂದು ವಿಶೇಷ ಉತ್ಸವಗಳಿಗೆ ಸಾಕ್ಷಿಯಾಗುತ್ತಿರುವ, ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರ ಸಹಿತ ಕರಾವಳಿಯ ದೇಗುಲಗಳಲ್ಲಿ ವಿಶೇಷ ಪೂಜೆಗಳಲ್ಲಿ ಆಸ್ತಿಕರು ಭಾಗವಹಿಸಿ ಪುನೀತರಾದರು. ಈ ನಡುವೆ ಕಟೀಲು ಶ್ರೀ ದೇವಳದಲ್ಲಿ ಶ್ರೀ ದೇವಿಗೆ ಧನುರ್ಮಾಸದ ಬೆಳಿಗ್ಗಿನ ಮಹಾಪೂಜೆ ನೆರವೇರಿತು. ಭಾರೀ ಸಂಖ್ಯೆಯಲ್ಲಿ ಭಕ್ತರು ಈ ಪೂಜಾ ಕ್ಷಣಕ್ಕೆ ಸಾಕ್ಷಿಯಾದರು. https://youtu.be/rZpCWCLR3fM
ವೈಕುಂಠ ಏಕಾದಶಿ.. ಎಲ್ಲೆಲ್ಲೂ ಗೋವಿಂದನ ಸ್ಮರಣೆ
ವೈಕುಂಠ ಏಕಾದಶಿ. ಬದುಕಿನ ಸಕಲ ಕಷ್ಟಗಳನ್ನೂ ತೊಲಗಿಸಿ ಬಾಳು ಬಂಗಾರವಾಗಿಸು ಎಂದು ದೇವರಲ್ಲಿ ಪ್ರಾರ್ಥಿಸುವ ಕ್ಷಣ. ವೈಕುಂಠದ ಬಾಗಿಲು ತೆರೆದಿದೆ ಎಂಬ ನಂಬಿಕೆಯೂ ಆಸ್ಥಿಕರದ್ದು. ಹಾಗಾಗಿಯೇ ನಾಡಿನ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಮಹೋತ್ಸವಗಳೇ ನೆರವೇರುತ್ತಿದೆ. ಬೆಂಗಳೂರಿನ ಇಸ್ಕಾನ್ ದೇಗುಲ, ವೈಯ್ಯಾಲಿಕಾಲ್ ಬಳಿಯ ತಿರುಮಲ ದೇವಾಲಯ ಸಹಿತ ಬಹುತೇಕ ಎಲ್ಲಾ ದೇವಾಲಯಗಳಲ್ಲೂ ವಿಶೇಷ ಉತ್ಸವಗಳು ಭಕ್ತರ ಗಮನಸೆಳೆದಿದೆ. ವೈಕುಂಠ ಕಥಾಸಾರ ಹೀಗಿದೆ. ಪದ್ಮ ಪುರಾಣದಲ್ಲಿ ಹೇಳಲಾದ ಕಥೆಯಇಲ್ಲಿ ಗಮನಾರ್ಹ. ಮುರನೆಂಬ ರಾಕ್ಷಸನು ದೇವತೆಗಳಿಗೆ ತುಂಬಾ ಉಪಟಳ ಕೋಡುತ್ತಿದ್ದನಂತೆ. ಆಗ ವಿಷ್ಣುನೇ ಆ ರಾಕ್ಷಸನ ಸಂಹಾರಕ್ಕೆ ಮುಂದಾಗುತ್ತಾನಂತೆ.. ವಿಷ್ಣುವಿನ ಅಂಶದಿಂದ ಪ್ರಕಟಗೊಂಡ ‘ಹೈನಮತಿ’ ಎಂಬ ಸ್ತ್ರೀ ದೇವತೆ ಆ ರಾಕ್ಷಸನನ್ನು ಸಂಹರಿಸುತ್ತಾಳೆ. ಆಗ ವಿಷ್ಣುವು ಸಂಪ್ರಿತಗೊಂಡು ಏನಾದರೂ ವರವನ್ನು ಕೇಳು ಎಂದು ಆ ದೇವತೆಗೆ ಹೇಳುತ್ತಾನೆ. ಆಗ ಅವಳು ‘ಯಾರು ಈ ವೈಕುಂಠ ಏಕಾದಶಿ ದಿನದಂದು ವ್ರತವನ್ನು…
ಪ್ರೌಢಶಾಲಾ ಮಕ್ಕಳಿಗೆ ಉಚಿತ ಟ್ಯಾಬ್; ಡಿಸಿಎಂ ಅಶ್ವತ್ಥನಾರಾಯಣ ಫೌಂಡೇಶನ್ ನೆರವು
ಬೆಂಗಳೂರು: ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ 8, 9 ಮತ್ತು 10ನೇ ತರತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ 1,000 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‌ಗಳನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ವಿತರಿಸಿದರು. ಕೋವಿಡ್ ಕಾರಣದಿಂದ ಎಲ್ಲೆಡೆ ಡಿಜಿಟಲ್ ಕಲಿಕೆ ಅನಿವಾರ್ಯವಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಬೋಧನೆ ಮತ್ತು ಕಲಿಕೆಯಲ್ಲಿ ಸರಕಾರಿ ಶಾಲೆಗಳ ಮಕ್ಕಳು ಹಿಂದೆ ಬಿದ್ದಿದ್ದಾರೆಂಬ ಮಾತಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳು ಶಿಕ್ಷಣದಿಂದಲೇ ವಂಚಿತವಾಗುವ ಅಪಾಯವೂ ಎದುರಾಗಿತ್ತು. ಇದನ್ನು ಗಮನಿಸಿದ ಉಪ ಮುಖ್ಯಮಂತ್ರಿಗಳು, ಮಲ್ಲೇಶ್ವರ ಕ್ಷೇತ್ರದಲ್ಲಿರುವ ಏಳು ಪ್ರೌಢಶಾಲೆಗಳೂ ಸೇರಿ ಒಟ್ಟು 21 ಸರಕಾರಿಗಳ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ತರಿಸಿಕೊಂಡು, ʼಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ʼ, ʼಆರ್.ವಿ.ಶಿಕ್ಷಣ ತರಬೇತಿ ಸಂಸ್ಥೆ ಮತ್ತು ಶಿಕ್ಷಣ ಫೌಂಡೇಷನ್ʼ ನೆರವಿನೊಂದಿಗೆ ಎಲ್ಲ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗಾಗಿ ಒಟ್ಟು 1,000 ಉತ್ಕೃಷ್ಟ ಗುಣಮಟ್ಟದ ಟ್ಯಾಬ್‌ಗಳನ್ನು ನೀಡಿದರು. ಖಾಸಗಿ ಮತ್ತು ಸರಕಾರಿ…
ಕರ್ನಾಟಕವನ್ನು ದೇಶದಲ್ಲೇ ಉತ್ತಮ ಆರೋಗ್ಯ ಸೌಲಭ್ಯದ ರಾಜ್ಯವಾಗಿಸುವ ಗುರಿ
ಬೆಂಗಳೂರು: ಪ್ರತಿ ಕನ್ನಡಿಗನಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವ ಗುರಿಯೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. . ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸಮುದಾಯ ಆರೋಗ್ಯ ಸೇವೆ ಉತ್ತಮವಾಗಿದೆ ಎಂದು ಜನರು ಮಾತನಾಡುತ್ತಾರೆ. ಆದರೆ ಇಡೀ ದೇಶದಲ್ಲಿ ಕರ್ನಾಟಕದ ಆರೋಗ್ಯ ಸೇವೆ ಉತ್ತಮ ಹಾಗೂ ಮಾದರಿಯಾಗಿರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕನಸು ಕಂಡಿದ್ದಾರೆ. ಈ ಕನಸಿಗೆ ಪೂರಕವಾಗಿ ಯೋಜನೆ ರೂಪಿಸಲಾಗಿದೆ ಎಂದರು. ರಾಜ್ಯದಲ್ಲಿ 2,380 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇದೆ. ಇದರಲ್ಲಿ ಅಸಮತೋಲನವಿದ್ದರೆ…
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹೆಚ್ಚು ವಿದ್ಯಾರ್ಥಿವೇತನ- ಕಟೀಲ್ ಮೆಚ್ಚುಗೆ
ಬೆಂಗಳೂರು: ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 59,048 ಕೋಟಿ ರೂಪಾಯಿ ನೀಡಲು ಕೇಂದ್ರ ಸರಕಾರ ಒಪ್ಪಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೂರದೃಷ್ಟಿ ಇರುವ ರಾಷ್ಟç ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಈ ನಿರ್ಣಯದಿಂದ ಸಾಮಾಜಿಕ ಸಮಾನತೆಯ ಕನಸು ನನಸಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಅಧಿಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸನ್ಮಾನ್ಯ ಪ್ರಧಾನಿನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಈ ಯೋಜನೆಯಡಿ 59,048 ಕೋಟಿ ರೂಪಾಯಿಗಳನ್ನು ಮುಂದಿನ 5 ಶೈಕ್ಷಣಿಕ ವರ್ಷಗಳಲ್ಲಿ ನೀಡಲಿದ್ದು,…
ರಾತ್ರಿ ಕರ್ಫ್ಯೂ ಇದ್ದರೂ ಕ್ರಿಸ್ ಮಸ್ ಹಬ್ಬ ಆಚರಣೆಗೆ ಅಡ್ಡಿಯಿಲ್ಲ
ಬೆಂಗಳೂರು: ಕೊರೋನಾ ವೈರಾಣು ಸೋಂಕು ತಡೆಯುವ ಉದ್ದೇಶದಿಂದ ರಾತ್ರಿ ಕರ್ಫ್ಯೂ ಜಾರಿಯಾಗಿದ್ದರೂ ಕ್ರಿಸ್ ಮಸ್ ಹಬ್ಬ ಆಚರಣೆಗೆ ಅಡ್ಡಿಯಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದಿದ್ದಾರೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು. (2/2) — CM of Karnataka (@CMofKarnataka) December 23, 2020
ಕೊರೋನಾ ರೂಪಾಂತರ ಹಿನ್ನೆಲೆ; ವಿದೇಶದಿಂದ ಬಂದವರಿಗೆ ಕ್ವಾರಂಟೈನ್ ಅಗತ್ಯ
ಬೆಂಗಳೂರು: ಕೊರೋನಾ ರೂಪಾಂತರಗೊಂಡಿದ್ದು ಈ ವೈರ್ಸ್ ರಾಜ್ಯಕ್ಕೂ ಕಾಲಿಟ್ಟಿರಬಹುದೆಂಬ ಶಂಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ಆಗಮಿಸುವವರನ್ನು ಕ್ವಾರಂಟೈನ್’ಗೊಳಪಡಿಸಲು ರಾಜ್ಯಸರ್ಕಾರ ಕ್ರಮಕೈಗೊಂಡಿದೆ. ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ರಾಜ್ಯಕ್ಕೆ ಯು.ಕೆ.ಯಿಂದ ಬಂದವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸಲಿದ್ದಾರೆ. ಯು.ಕೆ.ಯಿಂದ ಬಂದವರು ಕಡ್ಡಾಯವಾಗಿ 28 ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಲೇಬೇಕಿದೆ. ಮೊದಲ 14 ದಿನಗಳ ಕಾಲ ಅವರ ಮೇಲೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಗಾ ಇರಿಸುತ್ತಾರೆ. ನಂತರದ 14 ದಿನ ಅವರೇ ಸ್ವತಃ ನಿಗಾ ಇರಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ನವೆಂಬರ್ 25 ರಿಂದ ಡಿಸೆಂಬರ್ 22 ರವರೆಗೆ ಯು.ಕೆ.ಯಿಂದ ರಾಜ್ಯಕ್ಕೆ 2,500 ಜನರು ಬಂದಿದ್ದಾರೆ. ಪ್ರತಿ ದಿನ ಯು.ಕೆ.ಯಿಂದ ಎರಡೇ ವಿಮಾನ ಬಂದಿದೆ. ಯಾವ ವಿಮಾನದಲ್ಲಿ ಎಷ್ಟು ಜನ ಬಂದಿದ್ದಾರೆ ಎಂಬ…
ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ನೈಟ್ ಕರ್ಫ್ಯೂ ಜಾರಿ: ಸರ್ಕಾರ ಸ್ಪಷ್ಟನೆ
ಬೆಂಗಳೂರು: ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿದ ಬಳಿಕ ನೈಟ್ ಕರ್ಫ್ಯೂ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಹಬ್ಬದ ಸಮಾರಂಭ, ಹೊಸ ವರ್ಷದ ಸಮಾರಂಭ, ಆಚರಣೆ ಎಂದು ಅನವಶ್ಯಕವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ತುರ್ತು ಸೇವೆಗಳು ಹೇಗಿರಬೇಕು, ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ ಎಂಬುದರ ಬಗ್ಗೆ ಮಾರ್ಗಸೂಚಿಯಲ್ಲಿ ವಿವರವಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
