ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಂಗಳವಾರ ರಾತ್ರಿಯಿಂದಲೇ ಲಾಕ್’ಡೌನ್ ಜಾರಿಯಾಗಲಿದ್ದು ಸರ್ಕಾರವಷ್ಟೇ ಅಲ್ಲ ಜನರೂ ಸಿದ್ದರಾಗಿದ್ದಾರೆ. ಮಂಗಳವಾರ ರಾತ್ರಿಯಿಂದ ಮುಂದಿನ 1 ವಾರಗಳ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್’ಡೌನ್ ಜಾರಿಗೊಳಿಸುತ್ತಿದೆ. ಕಳೆದ ಮಾರ್ಚ್ ತಿಂಗಳಲ್ಲೂ ರಾಜ್ಯಅದ್ಯಂತ ಲಾಕ್’ಡೌನ್ ಜಾರಿಯಾಗಿತ್ತಾದರೂ ಈ ಬಾರಿ ಹಿಂದಿಗಿಂತಲೂ ಕಠಿಣ ನಿಯಮವನ್ನು ಅನುಸರಿಸಲಾಗುತ್ತದೆ ಎಂದೂ ಹೇಳಲಾಗುತ್ತಿದೆ. ದಿನನಿತ್ಯದ ವಸ್ತುಗಳ ಖರೀದಿಗೂ ಸಮಯ ನಿಗದಿ ಮಾಡಿದ್ದು, ದಿನಪೂರ್ತಿ ತರಕಾರಿ, ದಿನಸಿ ಹೆಸರಿನಲ್ಲಿ ಹೊರಗೆ ಬರುವವರನ್ನು ನಿಯಂತ್ರಿಸಲು ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 12ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಹಾಗೂ ಇತರ ಇಲಾಖೆಗಳು ಸಜ್ಜಾಗಿವೆ. ಇದೇ ವೇಳೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಯುತ್ತಿರುವ ಜಿಲ್ಲೆಗಳಲ್ಲೂ ಮತ್ತೆ ಲಾಕ್’ಡೌನ್ ಜಾರಿಗೆ ಸರ್ಕಾರ ತೀರ್ಮಾನಿಸಿದೆ.…
Year: 2020
ಇದು ಒಂಬತ್ತನೇ ದಿಕ್ಕು; ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ
ಇದು ಒಂಬತ್ತನೇ ದಿಕ್ಕು. ಕನ್ನಡ ಸಿನಿ ಲೋಕದಲ್ಲಿ ಭರವಸೆ ಮೂಡಿಸಿರುವ ಈ ಒಂಬತ್ತನೇ ದಿಕ್ಕು ಟೀಸರ್ ರಿಲೀಸ್ ಆಗಿದೆ. ಲೂಸ್ ಮಾದ ಯೋಗಿ ಮತ್ತು ಅದಿತಿ ಅಭಿನಯದ ಒಂಬತ್ತನೇ ದಿಕ್ಕು ಚಿತ್ರದ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ಗಳಿಸುತ್ತಿದೆ. ಈ ಚಿತ್ರವನ್ನು ದಯಾಳ್ ಪದ್ಮನಾಭ ನಿರ್ದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ‘ಭಜರಂಗಿ 2’ ಅಬ್ಬರ
ದೇಶದ್ಲಲಿ ಒಂದೇ ದಿನ 28,498 ಹೊಸ ಕೊರೋನಾ ಕೇಸ್; 553 ಮಂದಿ ಬಳಿ
ದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹಾಗೂ ಸೋಂಕಿತರ ಮರಣದ ಪ್ರಮಾಣ ಹೆಚ್ಚುತ್ತಲೇ ಇವೆ. ಸೋಮವಾರ ಒಂದೇ ದಿನದಲ್ಲಿ ಅಂದರೆ ಮಂಗಳವಾರ ಬೆಳಗ್ಗಿನ ವರೆಗೆ 24 ತಾಸುಗಳಲ್ಲಿ ವಿವಿಧ ರಾಜ್ಯಗಳಲ್ಲಿ ಸುಮಾರು 28,498 ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ ದಾಟಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ದೇಶದಾದ್ಯಂತ 553 ಜನರು ಸಾವನ್ನಪ್ಪಿದ್ದಾರೆಂದು ಹೇಳಿದೆ. ಇದರೊಂದಿಗೆ ದೇಶದಲ್ಲಿ ಈ ವರೆಗೆ ಕೋವಿಡ್-೧೯ ಸೋಂಕಿಗೊಳಗಾಗಿ ಬಲಿಯಾದವರ ಸಂಖ್ಯೆ 23,727ಕ್ಕೆ ತಲುಪಿದೆ ಎಂದು ಹೇಳಿದೆ. ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಮತ್ತೆ 6497, ತಮಿಳುನಾಡಿನಲ್ಲಿ 4328, ಕರ್ನಾಟಕದಲ್ಲಿ 2738, ಆಂಧ್ರಪ್ರದೇಶದಲ್ಲಿ 1935, ಉತ್ತರಪ್ರದೇಶದಲ್ಲಿ 1654, ಪಶ್ಚಿಮ ಬಂಗಾಳದಲ್ಲಿ 1435 ಹಾಗೂ ದೆಹಲಿಯಲ್ಲಿ 1246 ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ಕರ್ನಾಟಕದಲ್ಲಿ 73, ತಮಿಳುನಾಡಿನಲ್ಲಿ…
ದ್ವಿತೀಯ ಪಿಯುಸಿ ಫಲಿತಾಂಶ ತಿಳಿಯಬೇಕೇ? ಇಲ್ಲಿದೆ ರಿಸಲ್ಟ್
ಬೆಂಗಳೂರು: ರಾಜ್ಯದ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಕೊರೋನಾ ಕಾರಣದಿಂದಾಗಿ ವಿಳಂಬವಾದರೂ ಉತ್ತಮ ಫಲಿತಾಂಶ ಬಂದಿದೆ. ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಈ ಬಾರಿ ವಿಶೇಷ ರೀತಿಯಲ್ಲಿ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಈ ವರ್ಷ ಶೇಕಡಾ 68.73ರಷ್ಟು ಫಲಿತಾಂಶ ಬಂದಿದೆ ಎಂದರು. ಈ ಬಾರಿಯೂ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ ಎಂದ ಅವರು, ರಾಜ್ಯದಲ್ಲಿ ಶೇಕಡಾ 54.77 ವಿದ್ಯಾಥಿಗಳು ತೇರ್ಗಡೆ ಹೊಂದಿದ್ದಾರೆ ಎಂದು ತಿಳಿಸಿದರು. ಫಲಿತಾಂಶದಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಮತ್ತು ಮೂರನೇ ಸ್ಥಾನ ಕೊಡಗು ಪಾಲಾಗಿದೆ. ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶ ಕಳುಹಿಸಲಾಗಿದ್ದು, ಇಲಾಖೆಯ ವೆಬ್ ಸೈಟ್ http://karresults.nic.in ನಲ್ಲೂ ಫಲಿತಾಂಶ ಲಭ್ಯವಿದೆ ಎಂದು ಇಲಾಖೆ ತಿಳಿಸಿದೆ.
ಲಾಕ್‌ಡೌನ್ ಹಿನ್ನೆಲೆ; ಸಿಲಿಕಾನ್ ಸಿಟಿಗೆ ಗುಡ್‌ಬೈ ಎನ್ನುತ್ತಿರುವ ಜನ
(ವರದಿ: ಪ್ರತಾಪ್ ರಾಜ್) ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ನಿಯಂತ್ರಿಸುವ ಸಂಬಂಧ ನಿಷ್ಟುರ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬುಧವಾರದಿಂದ ಲಾಕ್‌ಡೌನ್ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಮಂಗಳವಾರ ರಾತ್ರಿಯಿಂದಲೇ ಲಾಕ್‌ಡೌನ್ ಜಾರಿಯಾಗಲಿದ್ದು ಈ ಕಾರಣದಿಂದಾಗಿ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನೆಲೆಸಿದ್ದ ಜನರು ಇದೀಗ ತವರಿನತ್ತ ಮುಖ ಮಾಡಿದ್ದಾರೆ. ಈ ಬೆಳವಣಿಗೆಯಿಂದಾಗಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಇಂದು ಬೆಳಗ್ಗೆಯಿಂದಲೇ ವಿದ್ಯಮಾನಗಳ ಕೇಂದ್ರ ಬಿಂದುವಾಯಿತು. ಜನರು ಕುಟುಂಬ ಸಮೇತರಾಗಿ ಬಸ್‌ಗಳಲ್ಲಿ ತಮ್ಮ ತಮ್ಮ ಊರುಗಳಿಗೆ ಮರಳುತ್ತದ್ದ ದೃಶ್ಯ ಕಂಡುಬಂತು. ಬೆಂಗಳೂರಿನಿಂದ ಹೊರ ಜಿಲ್ಲೆಗಳನ್ನು ಸಂಪರ್ಕಿಸುವ ರಸ್ತೆಗಳು ಕೂಡಾ ವಾಹನ ಸಂಚಾರ ದಟ್ಟಣೆಗೆ ಸಾಕ್ಷಿಯಾದವು. ಬೆಂಗಳೂರು ಹೊರವಲಯದ ಟೋಲ್ ಕೇಂದ್ರಗಳಲ್ಲೂ ಹಿಂದೆಂದಿಗಿಂತಲೂ ಹೆಚ್ಚು ವಾಹನಗಳ ಸಾಲು ಕಂಡುಬರುತ್ತಿತ್ತು.
ಬೆಳಗಾವಿ ಜಿಲ್ಲೆಯಲ್ಲೂ ಕೊರಾನಾ ಸವಾಲು; ಗೋಕಾಕ್ ಮತ್ತು ಮೂಡಲಗಿ ತಾಲೂಕಿನಲ್ಲಿ ಲಾಕ್’ಡೌನ್
ಬೆಳಗಾವಿ: ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ಕೊರೋನಾ ವೈರಸ್ ಹಾವಳಿಯಿಂದ ಬೆಳಗಾವಿ ಜಿಲ್ಲೆಯೂ ತತ್ತರಿಸಿದೆ. ಕೊರೋನಾ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮುಂದಿನ 8 ದಿನಗಳ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೋಕಾಕ್ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಸಚಿವರು, ಸೋಮವಾರ ರಾತ್ರಿಯಿಂದ ಮುಂದಿನ 8 ದಿನಗಳ ಕಾಲ ಸ್ವಯಂಪ್ರೇರಿತ ಲಾಕ್ ಡೌನ್ ನಡೆಯಲಿದೆ ಎಂದು ತಿಳಿಸಿದರು. ಜೀವ ಇದ್ದರೆ ಮಾತ್ರ ಜೀವನ. ಹಾಗಾಗಿ ಈ ಕೊರೋನಾ ಸೋಂಕು ನಿವಾರಿಸಲು ಅನಿವಾರ್ಯವಾಗಿ ಲಾಕ್ ಡೌನ್ ಘೋಷಿಸಬೇಕಾಗಿದೆ. ತಾಲ್ಲೂಕಿನ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಲಹೆ ಪಡೆಯಲಾಗಿದೆ ಎಂದ ಸಚಿವರು, ಈ ಲಾಕ್’ಡೌನ್ ವಿಚಾರದಲ್ಲಿ ಜನರು ಸಹಕರಿಸಬೇಕೆಂದು ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿ ‘ಭಜರಂಗಿ 2’ ಅಬ್ಬರ
ಸೆಂಚುರಿ ಸ್ಟಾರ್ ಶಿವಣ್ಣ ಅಭಿನಯದ ‘ಭಜರಂಗಿ 2’ ಸಿನಿಮಾ ಕನ್ನಡ ಸಿನಿಮಾ ರಂಗದಲ್ಲಿ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈ ಚಿತ್ರದ ಟೀಸರ್ ಭಾನುವಾರ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. https://youtu.be/kwpkKA_M3lc ಶಿವರಾಜ್ ಕುಮಾರ್ ಹುಟ್ಟುಹಬ್ಬ ದಿನವಾದ ಭಾನುವಾರ ಶಿವಣ್ಣ ಅವರ ಮುಂದಿನ ಚಿತ್ರ ‘ಭಜರಂಗಿ 2’ ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಅಂದರೆ ಕೇವಲ 5 ತಾಸುಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಈ ಟೀಸರ್’ನ್ನು ವೀಕ್ಷಿಸಿ ದಾಖಲೆ ನಿರ್ಮಿಸಿದ್ದಾರೆ. ಎ.ಹರ್ಷ ನಿರ್ದೇಶನದ ಈ ಸಿನಿಮಾ ದಿಗ್ಗಜರ ಕಾಂಬಿನೇಷನ್’ನಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ.
ಹೈದರಾಬಾದ್ ಕರ್ನಾಟಕ ಭಾಗದಲ್ಲೂ ಕೊರೋನಾ ಸೋಂಕು; ಕೊಪ್ಪಳ ಮೆಡಿಕಲ್ ಕಾಲೇಜಿನಲ್ಲಿ ನಿತ್ಯ 1000 ಪರೀಕ್ಷೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಪರಿಸ್ಥಿಗೆ ಸವಾಲಾಗಿ ಪರಿಣಮಿಸಿದೆ. ಹೈದರಾಬಾದ್ ಕರ್ನಾಟಕ ಭಾಗದಲ್ಲೂ ಸೋಂಕು ವೇಗವಾಗಿ ಹಬ್ಬುತ್ತಿದೆ. ಈ ನಡುವೆ, ಕೊಪ್ಪಳ ಮೆಡಿಕಲ್ ಕಾಲೇಜು ಪ್ರತೀ ದಿನ 1000 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಕೊಪ್ಪಳ ಮೆಡಿಕಲ್ ಕಾಲೇಜು ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊಪ್ಪಳದ ಮೆಡಿಕಲ್ ಕಾಲೇಜು ಕೆಲ ಕುಂದು ಕೊರತೆಗಳ ಹೊರತಾಗಿಯೂ ದಿನಕ್ಕೆ 1000 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಅನುಕರಣೀಯ ಸಾಧನೆ ಹಿಂದಿರುವ ಎಲ್ಲಾ ಸಿಬ್ಬಂದಿಗಳಿಗೂ ನನ್ನ ಅಭಿನಂದನೆಗಳು. ನೆರೆಯ ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿಯೂ ಇದೇ ರೀತಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲು ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಸಚಿವ ಕೆ. ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಕೊಪ್ಪಳದ ಮೆಡಿಕಲ್ ಕಾಲೇಜು ಕೆಲ ಕುಂದು ಕೊರತೆಗಳ ಹೊರತಾಗಿಯೂ ದಿನಕ್ಕೆ 1000…
ಕೊರೋನಾ ಹೆಚ್ಚಿರುವ ಜಿಲ್ಲೆಗಳಲ್ಲೂ ಲಾಕ್’ಡೌನ್; ಸರ್ಕಾರದ ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿಯಿಂದಾಗಿ ಜನ ಭಯಭೀತರಾಗಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಇಯಂತ್ರಿಸಲು ಹರಸಾಹಸಪಡುತ್ತಿರುವ ಸರ್ಕಾರ ಬುಧವಾರದಿಂದ ಲಾಕ್‌ಡೌನ್ ಜಾರಿಗೆ ನಿರ್ಧರಿಸಿದೆ. ಈ ಲಾಕ್ ಡೌನ್ ಹಿನ್ನೆಲೆಯಲ್ಲಿ ಸೋಮವಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ 7 ದಿನ ಮಾತ್ರ ಲಾಕ್‌ಡೌನ್ ಜಾರಿಯಲ್ಲಿರುತ್ತದೆ. ಆದರೆ ಈ ಸಂದರ್ಭದಲ್ಲಿ ಜನರು ಅನಗತ್ಯವಾಗಿ ಮನೆಯಿಂದ ಹೊರಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ರಾಜ್ಯದ 12 ಜಿಲ್ಲೆಗಳಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲೂ ಲಾಕ್‌ಡೌನ್ ಜಾರಿ ಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದರು.
ಪರಪ್ಪನ ಅಗ್ರಹಾರ ಜೈಲಿನಲ್ಲೂ ಕೊರೋನಾ ತಾಂಡವ; ಮಂದಿಗೆ ಸೋಂಕು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಅತೀ ವೇಗದಲ್ಲಿ ಹರಡುತ್ತಿದ್ದು ಸಿಲಿಕಾನ್ ಸಿಟಿ ಜನರು ಬೆಚ್ಚಿ ಬಿದ್ದಿದ್ದಾರೆ. ಈಗಾಗಲೇ ಕರ್ನಾಟಕ ಪೊಲೀಸ್ ಇಲಾಖೆಯ 500ಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದು ಹಲವಾರು ಪೊಲೀಸ್ ಠಾಣೆಗಳು ಸೀಲ್’ಡೌನ್ ಆಗಿದೆ. ರಾಜ್ಯದಲ್ಲಿ ನಿನ್ನೆ ಬರೋಬ್ಬರಿ 2627 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 1525 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ನಡುವೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೂ ಕೊರೋನಾ ತಾಂಡವವಾಡುತ್ತಿದೆ. ಜೈಲಿನ ವಿಶೇಷ ಸೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದ ಮೂವತ್ತು ಮಂದಿಗೆ ಕೊರೋನಾ ದೃಢಪಟ್ಟಿದೆ. ಸೋಂಕಿತ ಕೈದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
