ಬೆಂಗಳೂರು: ಜನವರಿ ಒಂದರಿಂದ ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಸರ್ಕಾರ ಮಕ್ಕಳು ಮತ್ತು ಶಾಲೆ ವಿಚಾರದಲ್ಲಿ ಪ್ರತಿ ನಿಮಿಷವೂ ಗೊಂದಲದಲ್ಲಿದೆ. ನಮ್ಮ ಶಿಕ್ಷಣ ಸಚಿವರು ಸಿಎಂ, ಶಾಲೆ ಆಡಳಿತ ಮಂಡಳಿ, ಪೋಷಕರ ಜತೆ ಮಾತನಾಡುವುದಾಗಿ ಹೇಳುತ್ತಾರೆ. ಸರ್ಕಾರ ಮೊದಲು ಗೊಂದಲ ನಿವಾರಣೆ ಮಾಡಬೇಕು. ಇಷ್ಟು ದಿನ ಸಂಸ್ಥೆಗಳು ನಡೆಯುತ್ತಿರಲಿಲ್ಲ. ಶಿಕ್ಷಕರಿಗೂ ಸಂಬಳ ನೀಡಬೇಕು. ಇಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎಂದರು. ಶಾಲೆ ತೆರೆಯಬೇಕೋ ಬೇಡವೋ ಎಂಬುದರ ಬಗ್ಗೆ ತಜ್ಞರ ಜತೆ ಚರ್ಚೆ ಮಾಡಬೇಕು. ರಾಜಕಾರಣಿಗಳು ಏನೇ ಅಭಿಪ್ರಾಯ ಹೇಳಿದರೂ ಅಂತಿಮವಾಗಿ ವಿದ್ಯಾರ್ಥಿಗಳು, ಶಾಲೆಗಳು ಹಾಗೂ ಶಿಕ್ಷಕರ ಹಿತ ಹಾಗೂ ಭವಿಷ್ಯ ಕಾಯಬೇಕು. ನಾವು ರಾಜಕೀಯ ಪಕ್ಷವಾಗಿ ನಮ್ಮ ಅಭಿಪ್ರಾಯ ಹೇಳುವುದಕ್ಕಿಂತ ಸರ್ಕಾರ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಹಾಗೂ ಆ ತೀರ್ಮಾನದಲ್ಲಿ ಸ್ಪಷ್ಟತೆ ಇರಬೇಕು…
Year: 2020
ಕೊರೋನಾ ರೂಪಾಂತರ ; ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಸೂಚನೆ.
ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹಾ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲೇಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಕಳಕಳಿಯ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಮಾರುಕಟ್ಟೆಗಳಲ್ಲಿ ಸೋಂಕು ಹರಡುವಿಕೆ ತಡೆಗೆ ವ್ಯವಸ್ಥಿತ ಮುನ್ನೆಚ್ಚರಿಕೆ ವಹಿಸಿಕೊಳ್ಳಬೇಕು. ಮಳಿಗೆಗಳಲ್ಲಿ ಕಡ್ಡಾಯ 6 ಅಡಿ ಅಂತರ ಕಾಪಾಡಿಕೊಳ್ಳುವಂತೆ ಗ್ರಾಹಕರಿಗೆ ಸೂಚಿಸಬೇಕು. ಪ್ರತಿದಿನ ಮಳಿಗೆಗಳನ್ನು ಸ್ಯಾನಿಟೈಸ್ ಮಾಡಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಚಿವ ರಮೇಶ್ ಜಾರಕಿಹೊಳಿ ನಿರ್ದೇಶನ ನೀಡಿದ್ದಾರೆ. ಜನವರಿ 1ರಿಂದ ಶಾಲಾ ಕಾಲೇಜುಗಳು ಪ್ರಾರಂಭವಾಗಲಿದ್ದು ವಿದ್ಯಾರ್ಥಿಗಳ…
ರೈತ ದಿನದಂದು ಶುಭಕೋರಿ ಕೃಷಿ ಕಾಯ್ದೆಗಳ ಕುರಿತ ಅನುಮಾನ ತಿಳಿಸಿಗೊಳಿಸಿದ ಡಾ.ಅಶ್ವತ್ಥನಾರಾಯಣ
ಬೆಂಗಳೂರು: ಅನ್ನದಾತನ ಮನೆ ಬಾಗಿಲಿಗೇ ತೆರಳಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ರೈತ ದಿನದ ಶುಭಾಶಯ ಕೋರಿ ಅಭಿವಂದನೆ ಸಲ್ಲಿಸಿದರಲ್ಲದೆ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಬಗ್ಗೆ ರೈತರಲ್ಲಿರುವ ಅನುಮಾನಗಳನ್ನು ನಿವಾರಿಸಿದರು. ಮಾಗಡಿ ತಾಲ್ಲೂಕಿನ ಉಕ್ಕಡ-ಗುಡ್ಡಹಳ್ಳಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ ಡಿಸಿಎಂ, ಅಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರಲ್ಲಿಗೆ ತೆರಳಿ ಶುಭಾಶಯ ಕೋರಿ ಶಿರಬಾಗಿ ನಮಿಸಿ ಅಭಿವಂದನೆ ಸಲ್ಲಿಸಿದರು. ರೈತರಾದ ನಾರಾಯಣಪ್ಪ, ನಾಗರಾಜ ಮತ್ತು ನರಸಿಂಹಯ್ಯ ಅವರಿಗೆ ಹೂವಿನ ಹಾರ ಹಾಕಿ ಗೌರವಿಸಿದರು. ಯಾವ ಮುನ್ಸೂಚನೆಯೂ ಇಲ್ಲದೆ ಸ್ವತಃ ಉಪ ಮುಖ್ಯಮಂತ್ರಿಗಳೇ ರಸ್ತೆಯಲ್ಲಿ ಕಾರು ನಿಲ್ಲಿಸಿ ನಡೆದುಬಂದು ಹೂಮಾಲೆ ಹಾಕಿ ಶುಭ ಕೋರಿದ್ದನ್ನು ಕಂಡು ರೈತರು, ಆ ಊರಿನ ಜನರೆಲ್ಲರೂ ಚಕಿತರಾದರು. ಕ್ಷಣ ಮಾತ್ರದಲ್ಲಿ ಇಡೀ ಊರಿನ ರೈತಾಪಿ ಜನರು, ಹಿರಿಯರು, ಮಹಿಳೆಯರು, ಯುವಕರು ಅಲ್ಲಿ ಸೇರಿಕೊಂಡರಲ್ಲದೆ, ಡಿಸಿಎಂ ಸರಳತೆ ಬಗ್ಗೆ…
ಜಮ್ಮು ಕಾಶ್ಮೀರದ ಡಿಡಿಸಿ ಫಲಿತಾಂಶದಿಂದ ಬಿಜೆಪಿ ಅಲೆ ಸಾಬೀತು
ಬೆಂಗಳೂರು: ಜಮ್ಮು -ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಯ (ಡಿಡಿಸಿ) ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಅತಿ ಹೆಚ್ಚು ಸ್ಥಾನ ಗೆದ್ದ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ. ಈ ಗೆಲುವಿನಿಂದ ದೇಶದಲ್ಲಿ ರೈತಪರ ಮತ್ತು ಅಭಿವೃದ್ಧಿ ಪರ ಇರುವ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಮತ್ತು ಬಿಜೆಪಿ ಅಲೆ ಇರುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‌ಕುಮಾರ್ ಕಟೀಲ್ ವಿಶ್ಲೇಷಿಸಿದ್ದಾರೆ. ಜಮ್ಮು -ಕಾಶ್ಮೀರದ ವಿಶೇ಼ಷ ಸ್ಥಾನಮಾನಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಕ್ರಮವನ್ನು ಅಲ್ಲಿನ ಜನರು ಸಮರ್ಥಿಸಿದ್ದಾರೆ ಎಂಬುದಕ್ಕೆ ಬಿಜೆಪಿ 75 ಸ್ಥಾನ ಗೆದ್ದುಕೊಂಡಿರುವುದೇ ಸಾಕ್ಷಿ ಎಂದು ಅವರು ಹೇಳಿದ್ದಾರೆ. ಪಕ್ಷವು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಜನಪ್ರಿಯತೆ ಪಡೆದಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ ಎಂದಿರುವ ಅವರು, ಮುಂಬರುವ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲೂ ಅತಿ ಹೆಚ್ಚು…
ಇಸ್ಕಾನ್ ನ ನವೀನ್ ಕೃಷ್ಣ ದಾಸ್ ಅವರಿಂದ ಡಿಕೆಶಿ ಭೇಟಿ
ಬೆಂಗಳೂರು ಇಸ್ಕಾನ್ ನ ನವೀನ್ ಕೃಷ್ಣ ದಾಸ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಪ್ರಸಾದ ನೀಡಿದರು
ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಒಗ್ಗಟ್ಟಿನ ಹೋರಾಟದಿಂದ ಮಾತ್ರ ಖಾಸಗೀಕರಣ ತಡೆಯಲು ಸಾಧ್ಯ
ಬೆಂಗಳೂರು: ಕೇಂದ್ರ ಸರಕಾರದ ಖಾಸಗೀಕರಣದ ನೀತಿಯನ್ನು ತಡೆಯಲು ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಒಗ್ಗಟ್ಟಿನ ಹೋರಾಟದ ಅಗತ್ಯವಿದ್ದು, ದೇಶಾದ್ಯಂತ ಸಂಘಟಿತ ಹೋರಾಟಕ್ಕೆ ಸಜ್ಜಾಗಬೇಕಾಗಿದೆ ಎಂದು ಆಲ್ ಇಂಡಿಯಾ ಫೆಡರೇಷನ್ ಪವರ್ ಇಂಜಿನೀಯರ್ಸ್ ಫೆಡರೇಷನ್ ಅಧ್ಯಕ್ಷ ಶೈಲೇಂದ್ರ ದುಬೆ ಹೇಳಿದ್ದಾರೆ. ಭಾರತೀಯ ವಿದ್ಯುತ್ ಕಾಯ್ದೆ -2003 ಕ್ಕೆ ತಿದ್ದುಪಡಿ ಹಾಗೂ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆಯನ್ನು ವಿರೋಧಿಸುವ ಬಗ್ಗೆ ಇಂದು ಬೆಂಗಳೂರಿನ ಕೆಇಬಿ ಇಂಜಿನೀಯರ್ಸ್ ಅಸೋಷಿಯೇಷನ್ ರಜತ ಮಹೋತ್ಸವ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಮಂಡಳಿ ನೌಕರರ ಸಂಘಗಳ ಒಕ್ಕೂಟ ಆಯೋಜಿಸಿದ್ದ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಕೇಂದ್ರ ಸರಕಾರ ಸರಕಾರಿ ಸೌಮ್ಯದ ಬಹುತೇಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಲಾಭ ಮಾಡುತ್ತಿರುವ ವಿದ್ಯುತ್ ಕಂಪನಿಗಳನ್ನೂ ಕೂಡಾ ಖಾಸಗೀಯರವ ಪಾಲು ಮಾಡಲು ಕಾಯ್ದೆಗೆ ತಿದ್ದುಪಡಿ ತರುತ್ತಿದೆ. ದೇಶದ ಜನರ ತೆರಿಗೆ ಹಣದಿಂದ ನಿರ್ಮಿಸಿರುವ ಮೂಲಭೂತ ಸೌಲಭ್ಯಗಳನ್ನು…
ಜೆಕೆ ಮತ್ತು ‘ಐರಾವನ್’; ಭಾರೀ ಸದ್ದು ಮಾಡುತ್ತಿರುವ ವೀಡಿಯೋ
ಜೆಕೆ ಅಭಿನಯದ ‘ಐರಾವನ್’ ಚಿತ್ರ ಇನ್ನೇನು ಕೆಲವೇ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದ್ವಿತಿ ಶೆಟ್ಟಿ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದು; ಐರಾವನ್’ ಟೀಸರ್ ಬಿಡುಗಡೆಯಾಗಿದೆ. ರಾಮ್ಸ್ ರಂಗಾ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.
ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ
ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವೈದ್ಯರಿಗೆ ತ್ವರಿತವಾಗಿ ಸ್ಪಂದಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020 ರ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಪರಿಸ್ಕರಿಸಲು ಅಂಕಿತ ಹಾಕಿದ್ದಾರೆ. ಈ ಹಿಂದೆ 2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು. 0-6 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್/ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21,000 ರೂ.ನಿಂದ 30,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ…
ಸರ್ವೋದಯ ದಿನದ ಅಂಗವಾಗಿ ರಾಜ್ಯಮಟ್ಟದ ಗಾಂಧೀ ಲೇಖನ ಸ್ಪರ್ಧೆ
ಬೆಂಗಳೂರು: ಕರ್ನಾಟಕ ಸರ್ವೋದಯ ಮಂಡಲವು ಮುಂಬರುವ 2021 ಜನವರಿ 30 ಸರ್ವೋದಯ ದಿನದ ಸಂದರ್ಭದಲ್ಲಿ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ. ‘ಸರ್ವೋದಯ ಸಮಾಜ ಸೃಷ್ಟಿಯ ಸಾಧ್ಯತೆಗಳು–ಒಂದು ವಿಶ್ಲೇಷಣೆ’ ಲೇಖನದ ವಸ್ತುವಾಗಿದ್ದು, ಗಾಂಧಿ ಚಿಂತನೆ ಹಾಗೂ ಇಂದಿನ ಪರಿಸ್ಥಿತಿ ಮತ್ತು ಸವಾಲುಗಳನ್ನು ಕುರಿತು ‘ಗಾಂಧಿಗೆ ಒಂದು ಪತ್ರ’ ಈ ಎರಡು ಕನ್ನಡ ಲೇಖನ ಸ್ಪರ್ಧೆಗಳಲ್ಲಿ 15-30 ವಯೋಮಿತಿಯ ಯುವಜನರು ಮಾತ್ರ ಭಾಗವಹಿಸಬಹುದು. ಈ ಹುರಿತು ಮಧ್ಯಮ ಹೇಳಿಕೆ ಮೂಲಕ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ಸರ್ವೋದಯ ಮಂಡಲ, ಪತ್ರ ಲೇಖನದಲ್ಲಿ ಭಾಗವಹಿಸುವ ಸ್ಪರ್ಧಿಗಳು ಕಡ್ಡಾಯವಾಗಿ ಅಂಚೆ ಕಚೇರಿಯಲ್ಲಿ ದೊರಕುವ ಅಂತರ್ದೇಶೀಯ ಪತ್ರ (ಇನ್‍ಲ್ಯಾಂಡ್ ಲೆಟರ್)ದಲ್ಲಿ ತಮ್ಮ ಸ್ವಂತ ಕೈ ಬರಹದಲ್ಲಿ ಬರೆಯಬೇಕು.ಲೇಖನ ಸ್ಪರ್ಧಿಗಳು ಎ4 ಅಳತೆಯ ಮೂರು ಪುಟಗಳಿಗೆ ಮೀರದಂತೆ ತಮ್ಮ ಬರಹಗಳನ್ನು ಸೀಮಿತಗೊಳಿಸಬೇಕು. ಗಾಂಧಿ ವಿಚಾರಕ್ಕೆ ಮೀಸಲಾದ ಕನ್ನಡ-ಇಂಗ್ಲಿಷ್ ದ್ವೈಮಾಸಿಕ ‘ಅಮರ ಬಾಪು ಚಿಂತನ’ ಸಹಯೋಗದಲ್ಲಿ ಈ…
ವಿಜಯಪುರದ ವಿಮಾನ ನಿಲ್ದಾಣಕ್ಕೆ ಕೆಲವೇ ದಿನಗಳಲ್ಲಿ ಭೂಮಿ ಪೂಜೆ
ಧಾರವಾಡ: ವಿಜಯಪುರದ ವಿಮಾನ ನಿಲ್ದಾಣಕ್ಕೆ ಕೆಲವೇ ದಿನಗಳಲ್ಲಿ ಭೂಮಿ ಪೂಜೆ ನೆರವೇರಲಿದೆ. ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಮುಕ್ತಾಯವಾದ ಕೂಡಲೇ ಭೂಮಿಪೂಜೆ ನೆರವೇರಿಸಲು ಸರ್ಕಾರ ತೀರ್ಮಾನಿಸಿದೆ. ವಿಜಯಪುರ ನಗರದ ಹೊರ ವಲಯದಲ್ಲಿ ಸುಮಾರು 220 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಈ ಕುರಿತು ಮಾಹಿತಿ ಹಂಚಿಕೊಂಡ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆ ಮುಕ್ತಾಯವಾದ ಕೂಡಲೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಈ ವಿಮಾನ ನಿಲ್ದಾಣ ಅಭಿವೃದ್ಧಿಯಿಂದ ಉತ್ತರ ಕರ್ನಾಟಕದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಹಾಗೂ ವಿಜಯಪುರ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಹೇಳಿದರು
