ಬೆಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ಸೇವಾ ಖಾಯಮಾತಿಗಾಗಿ ಒತ್ತಾಯಿಸುತ್ತಿರುವ ಗುತ್ತಿಗೆ ವೈದ್ಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗುತ್ತಿಗೆ ವೈದ್ಯರನ್ನು ಖಾಯಂಗೊಳಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬೆಂಗಳೂರಿನಲ್ಲಿಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ವೈದ್ಯರ ಬೇಡಿಕೆ ಬಗ್ಗೆ ಚರ್ಚಿಸಲಾಯಿತು. ಗುತ್ತಿಗೆ ವೈದ್ಯರ ಬೇಡಿಕೆಗೆ ಸ್ಪಂದಿಸಲು ತೀರ್ಮಾನಿಸಿದ ಮಂತ್ರಿಮಂಡಲ, ಖಾಯಂಗೊಳಿಸುವ ವೇಳೆ ವೈದ್ಯರು ಸಲ್ಲಿಸಿರುವ ಸೇವಾ ಅವಧಿಯನ್ನು ಪರಿಗಣನೆ ಮಾಡಬೇಕೆಂಬ ನಿರ್ಧಾರಕ್ಕೂ ಬರಲಾಯಿತು. ಸಂಪುಟ ಸಭೆಯ ನಿರ್ಧಾರ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಪ್ರತಿ ಆರು ತಿಂಗಳು ಸೇವಾ ಅವಧಿಗೆ 2.5 ಗ್ರೇಸ್ ಮಾರ್ಕ್ ನೀಡಲು ನಿರ್ಧರಿಸಲಾಗಿದೆ. ಗರಿಷ್ಠ 30 ಅಂಕಗಳನ್ನು ನೀಡಲಾಗುವುದು ಎಂದು ತಿಳಿಸಿದರು.
Year: 2020
ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ
ಮಂಗಳೂರು: ಕೊರೋನಾ ಸಂಕಟ ಕಾಲದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರ ಮೇಲಿನ ದೌರ್ಜನ್ಯ ಪ್ರಕರಣ ಮುಂದುವರಿದಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹಾ ಪ್ರಕರಣಗಳು ಪುನರಾವರ್ತನೆಯಾಗಿದ್ದು, ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳದ ಚೆನ್ನೈತೋಡಿ ಎಂಬಲ್ಲಿ ಮಮತಾ ಗಟ್ಟಿ ಎಂಬ ಆಶಾ ಕಾರ್ಯಕರ್ತೆ ಮೇಲೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಆರೋಪಿಯನ್ನು ಕಾಂತಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿದ್ದು ಈ ಘಟನೆ ಕುರಿತಂತೆ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿರುವ ಪಂಜಾಲಕಟ್ಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಖಾಕಿಗೂ ಕೊರೋನಾ ಕಂಟಕ; ಪೊಲೀಸರ ಆರೋಗ್ಯ ಕಾಳಜಿಯ ಐಜಿಪಿ ವೀಡಿಯೊ ಬಗ್ಗೆ ಸಕತ್ ಲೈಕ್
ಬೆಂಗಳೂರು: ದೇಶಾದ್ಯಂತ ಕೊರೋನಾ ವೈರಾಣು ಹಾವಳಿ ಮುಂದುವರಿದಿದ್ದು ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲೂ ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ದೃಢಪಡುತ್ತಿದೆ. ಅದರಲ್ಲೂ ಬೆಂಗಳೂರು ಮತ್ತು ಸುತ್ತಮುತ್ತ ಅತಿಯಾದ ವೇಗದಲ್ಲಿ ಸೋಂಕು ಹರಡುತ್ತಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿತರಾಗಿರುವ ಪೊಲೀಸರಂತೂ ಕೊರೋನಾ ವೈರಸ್ ವಿಚಾರದಲ್ಲಿ ಸೇಫ್ ಅಲ್ಲ. ಈಗಾಗಲೇ ಕರ್ತವ್ಯ ನಿರತ ಪೊಲೀಸರನೇಕರು ಸೋಂಕಿಗೊಳಗಾಗಿ ಆಸ್ಪತ್ರೆಪಾಲಾಗಿದ್ದಾರೆ. ಅನೇಕ ಸಿಬ್ಬಂದಿ ಸೋಂಕಿಗೆ ಬಲಿಯಾದ ಪ್ರಕರಣಗಳೂ ವರದಿಯಾಗಿವೆ. ಈ ಕಾರಣದಿಂದಾಗಿ ಅನೇಕ ಪೊಲೀಸ್ ಠಾಣೆಗಳನ್ನೂ ಸೀಲ್’ಡೌನ್ ಮಾಡಲಾಗಿದ್ದು ಪೊಲೀಸರ ಕಾಯಕವೂ ದುಸ್ಸಾಹಸ ಎಂಬಂತಿದೆ. ಆದರೆ ಕೆಲಸ ಅನಿವಾರ್ಯವಾಗಿದೆ. ಇಂತಹಾ ಸಂಧಿಕಾಲದಲ್ಲಿ ಪೊಲೀಸರ ಸುರಕ್ಷೆ ಬಗ್ಗೆ ಕೇಂದ್ರ ವಲಯ ಪೊಲೀಸ್ ಮಹಾ ನಿರೀಕ್ಷಕ ಸೀಮಂತ್ ಕುಮಾರ್ ಸಿಂಗ್ ವಹಿಸಿರುವ ಕಾಳಜಿಯು ಇಡೀ ರಾಜ್ಯದ ಗಮನಸೆಳೆದಿದೆ. ಪ್ರತೀ ದಿನ ಅವರು ತಮ್ಮ ವಲಯ ವ್ಯಾಪ್ತಿಯ ಪೊಲೀಸ್ ಠಾಣೆಗಳಿಂದ…
ಹೈಸ್ಕೂಲ್ ಮಕ್ಕಳಿಗೆ ಸ್ಮಾರ್ಟ್ ಪೋನ್ ಒದಗಿಸಿಕೊಡಿ: ಸಿ.ಎಂಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ
ಬೀದರ್ : ಕೊರೊನಾ ವೈರಸ್ ನಿಂದಾಗಿ ಲಾಕ್ ಡೌನ್ ಉಂಟಾದ ಪರಿಣಾಮ ಶಾಲಾ – ಕಾಲೇಜುಗಳು ಬಂದ್ ಆಗಿದ್ದು, ಆನ್ ಲೈನ್ ಕ್ಲಾಸ್ ನಡೆಸಲು ಶಿಕ್ಷಣ ಸಂಸ್ಥೆಗಳು ಮುಂದಾಗಿವೆ. ಸರ್ಕಾರ ಇದಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಬೇಕಿದೆ. ಹಾಗಾಗಿ ಸರ್ಕಾರ ಕನಿಷ್ಟ ಪಕ್ಷ ಹೈಸ್ಕೂಲ್ ವಿದ್ಯಾರ್ಥಿಗಳಿಗಾದರೂ ಸ್ಮಾರ್ಟ್ ಫೋನ್ ಒದಗಿಸಿಕೊಡಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪುರ್ ರವರು ಸಿ.ಎಂ ಬಿಎಸ್ವೈಗೆ ಮನವಿ ಮಾಡಿದ್ದಾರೆ. ಸರ್ಕಾರ ಜಾರಿಗೊಳಿಸಿರುವ ಆನ್ ಲೈನ್ ಶಿಕ್ಷಣದ ಸಾಧಕ – ಭಾದಕಗಳ ಕುರಿತು ಬುಧವಾರ ಬೀದರ್ ಜಿಲ್ಲೆ ಕಮಠಾಣಾ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರೊಂದಿಗೆ ಸಭೆ ನಡೆಸಿದ ಶಾಸಕರು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಆನ್ ಲೈನ್ ಕ್ಲಾಸ್ ಜಾರಿಗೊಳಿಸಲು ಶಿಕ್ಷಣ ಇಲಾಖೆ ಯಾವ ರೀತಿ ಸಿದ್ದತೆ ಮಾಡಿಕೊಂಡಿದೆ. ಯಾವ ರೀತಿಯ ಸಿದ್ದತೆ ಮಾಡಿಕೊಳ್ಳಬೇಕಾಗಿದೆ ಎಂಬ…
ಈ ಬಾರಿ ಹೆಚ್ಚು ಯೂರಿಯಾ ರಸಗೊಬ್ಬರ ಪೂರೈಕೆ: ಕೃಷಿ ಸಚಿವರ ಭರವಸೆ
ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆಯಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ. ಯಾವುದೇ ಕೊರತೆಯಾಗದಂತೆ ಕ್ರಮವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. 2020-21 ನೇ ಸಾಲಿನ ಮುಂಗಾರು ಹಂಗಾಮಿನ ಏಪ್ರಿಲ್ 1 ರಿಂದ ಜುಲೈ 6 2020ರವರೆಗೆ ಯೂರಿಯಾ ರಸಗೊಬ್ಬರಕ್ಕೆ 4,98,000 ಮೆಟ್ರಿಕ್ ಟನ್ ಬೇಡಿಕೆ ಇದ್ದು, 4,35,700 ಮೆ.ಟನ್ ಸರಬರಾಜಾಗಿದ್ದು 2,06,750 ಮೆ.ಟನ್ ದಾಸ್ತಾನು ಇದ್ದು,ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಸುಮಾರು 1,55,468 ಮೆಟ್ರಿಕ್ ಟನ್ ಹೆಚ್ಚುವರಿ ಈ ಬಾರಿ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದೆ. ಎಲ್ಲಾ ಜಿಲ್ಲೆಗಳಲ್ಲಿಯೂ ಸುಮಾರು 2,06, 740 ಟನ್ ದಾಸ್ತಾನು ಇದೆ ಎಂದವರು ಹೇಳಿದ್ದಾರೆ. ಮೇ ಮತ್ತು…
ಮರ್ಕಜ್ ಧಾರ್ಮಿಕ ಸಭೆ; 122 ಮಲೇಷಿಯನ್ನರಿಗೆ ಜಾಮೀನು
ದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದ್ದು ಆತಂಕದ ಪರಿಸ್ಥಿತಿ ತಲೆದೋರಿದೆ. ಕೊರೋನಾ ಹಾವಳಿ ಆರಂಭದಲ್ಲಿ ನಡೆದಿದ್ದ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆ ವಿವಾದಗಳ ಕೇಂದ್ರ ಬಿಂದುವಾಗಿತ್ತು. ಆ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ ಮಂದಿ ಪಾಲ್ಗೊಂಡಿದ್ದು ನಿಯಮ ಉಲ್ಲಂಘಿಸಿ ನಡೆದ ಆ ಕಾರ್ಯಕ್ರಮ ಸೋಂಕು ಹರಡಲು ಕಾರಣವಾಗಿತ್ತು ಎಂದು ಆರೋಪಿಸಲಾಗಿತ್ತು. ಕೇಂದ್ರ ಸರ್ಕಾರ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 122 ಮಲೇಷಿಯನ್ನರಿಗೆ ಜಾಮೀನು ಮಂಜೂರಾಗಿದೆ. ದೆಹಲಿಯ ಚೀಫ್ ಮೆಟ್ರೋಪಾಲಿಟನ್ ನ್ಯಾಯಾಧೀಶರು ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಇದೇ ವೇಳೆ ತಮ್ಮಿಂದ ತಪ್ಪಾಗಿದ್ದು ಶಿಕ್ಷೆಯ ಅವಧಿ ಕಡಿಮೆ ಮಾಡಿಸಬೇಕೆಂದು ಆರೋಪಿಗಳು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂಬಂಧದ ವಿಚಾರಣೆಯನ್ನು ಕೋರ್ಟ್ ಬುಧವಾರ ನಡೆಸುವುದಾಗಿ ಹೇಳಿದೆ.
ಸುಶಾಂತ್ ಸಿಂಗ್ ಅಭಿನಯದ ‘ದಿಲ್ ಬೆಚಾರ’ ಚಿತ್ರದ ಟ್ರೇಲರ್ ಸಕತ್ ಸದ್ದು
ನಟ ಸುಶಾಂತ್ ಸಿಂಗ್ ರಜಪೂತ್ ನಿಧನದಿಂದಾಗಿ ಭಾರತದ ಸಿನಿಮಾ ಕ್ಷೇತ್ರದಲ್ಲಿ ಮೌನ ಆವರಿಸಿದೆ. ಅವರು ಅಭಿನಯಿಸಿರುವ ಹೊಸ ಚಿತ್ರಗಳು ಬಿಡುಗಡೆಗೆ ರೆಡಿಯಾಗಿದ್ದು ಸುಶಾಂತ್ ಸಿಂಗ್ ಜೊತೆ ದುಡಿಯುತ್ತಿದ್ದ ಮಂದಿ ಇನ್ನೂ ನೋವಿನಿಂದ ಹೊರಬಂದಿಲ್ಲ. ಆದರೆ ನಿಗದಿಯಂತೆ ಸಿನಿಮಾ ಬಿಡುಗಡೆಯ ಹೊಣೆ ಚಿತ್ರತಂಡದ್ದಾಗಿದೆ. ಈ ನಡುವೆ, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಕೊನೆಯ ಚಿತ್ರ ‘ದಿಲ್ ಬೆಚಾರ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೈಲರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ಸಡ್ಡು ಮಾಡುತ್ತಿದೆ. ನಟಿ ಸಂಜನಾ ಸಂಘಿಯವರ ಚೊಚ್ಚಲ ಚಿತ್ರ ಇದಾಗಿದ್ದು, ಮುಖೇಶ್ ಛಾಬ್ರಾ ಅವರು ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಇದನ್ನೂ ಓದಿ.. ಇಬ್ಬರು ಗೆಳತಿಯರ ನಡುವೆ ಭೋಜರಾಜ್ ಬ್ಯುಸಿ
ಮಂಗಳೂರು-ಕಾಸರಗೋಡು ಕನ್ನಡಿಗರ ಗೋಳು; ವ್ಯವಸ್ಥೆಯ ವಿರುದ್ಧ ಜನರ ಹಿಡಿಶಾಪ
ಮಂಗಳೂರು: ಇಡೀ ಜಗತ್ತಿಗೆ ಕೊರೋನಾ ವೈರಸ್ ಹಾವಳಿ ಎದುರಾಗಿದೆ. ಅದರಲ್ಲೂ ಭಾರತ ಇದೀಗ ಸಂಕಷ್ಟದ ಸುಳಿಯಲ್ಲಿದೆ. ದಕ್ಷಿಣದ ರಾಜ್ಯಗಳೂ ವೈರಾಣು ಹಾವಳಿಯಿಂದ ತತ್ತರಿಸಿದ್ದು ನಿತ್ಯವೂ ಹೆಚ್ಚುತ್ತಿರುವ ಸೋಂಕಿನ ಸಂಖ್ಯೆಗಳಿಂದಾಗಿ ಆತಂಕವೂ ದುಪ್ಪಟ್ಟಾಗಿದೆ. ನಡುವೆ ಕರ್ನಾಟಕ-ಕೇರಳ ಗಡಿಭಾಗದ ಜನ ಗೋಳನ್ನು ಯಾರೂ ಕೇಳುವವರಿಲ್ಲ. ದಕ್ಷಿಣ ಕನ್ನಡ ಜಿಲ್ಲಾಡಳಿತ ಜತೆ ಹೋರಾಟ ಮಾಡಿ ಕಾಸರಗೋಡು ಡೈಲಿ ಪಾಸ್ ಪಡೆದು ಗಡಿನಾಡ ಜನರು ನಿಟ್ಟುಸಿರು ಪಡೆಯುವ ವೇಳೆಗೆ ಈಗ ಕೇರಳ ಸರ್ಕಾರ ದೈನಂದಿನ ಪಾಸ್ ಮೇಲೆ ಸಂಚರಿಸುವವರನ್ನು ನಿರ್ಬಂಧಿಸಿದೆ. ಗಡಿ ದಾಟಿ ಕರ್ನಾಟಕಕ್ಕೆ ತೆರಳಿದರೆ 28 ದಿನ ವಾಪಾಸ್ ಬರುವಂತಿಲ್ಲ. ದಕ್ಷಿಣ ಕನ್ನಡದಲ್ಲಿ ವಿವಿಧೆಡೆ ಕೆಲಸ ಮಾಡುವ ಕಾಸರಗೋಡು ನಿವಾಸಿಗಳು ಎಂದಿನಂತೆ ಬೆಳಗ್ಗೆ ಪಾಸ್ ಜತೆಗೆ ತಲಪಾಡಿ ಗಡಿ ಬಳಿ ಬಂದರೆ ಕೇರಳ ಪೊಲೀಸರ ಎಚ್ಚರಿಕೆಯ ಮಾತನ್ನು ಕೇಳಿ ದಂಗಾಗಿಬಿಡುತ್ತಿದ್ದಾರೆ. ಕಾಸರಗೋಡು – ದಕ್ಷಿಣ ಕನ್ನಡ ಡೈಲಿ ಪಾಸ್ ಅನ್ನು ಕೇರಳ ಸರ್ಕಾರ…
ಕೊರೋನಾ ಸಂದರ್ಭದಲ್ಲೇ ವೈದ್ಯರ ಪ್ರತಿಭಟನೆ; ಸಮಸ್ಯೆ ಬಗೆಹರಿಸಲು ಸರ್ಕಾರ ಹರಸಾಹಸ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಸೋಂಕು ಉಲ್ಬಣಗೊಂಡಿರುವಾಗಲೇ ಗುತ್ತಿಗೆ ವೈದ್ಯರ ಪ್ರತಿಭಟನೆ ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಸಮಸ್ಯೆ ಬಗೆಹರಿಸಲು ಹರಸಾಹಸ ಪಡುತ್ತಿರುವ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಇಂದು ಮಹತ್ವದ ಸಭೆ ನಡೆಸಿದರು. ಗುತ್ತಿಗೆ ವೈದ್ಯರ ಸೇವೆ ಕಾಯಂಗೊಳಿಸುವ ಸಂಬಂಧ ವೈದ್ಯರ ಸಂಘದ ಪದಾಧಿಕಾರಿಗಳ ಜೊತೆ ನಡೆದ ಈ ಸಭೆ ಕುತೂಹಲದ ಕೇಂದ್ರಬಿಂದುವಾಯಿತು. ಗುತ್ತಿಗೆ ವೈದ್ಯರ ಸೇವೆ ಕಾಯಂಗೊಳಿಸುವ ಸಂಬಂಧ ವೈದ್ಯರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ @mla_sudhakar, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು. 1/2 pic.twitter.com/fvh9cX4jMM — B Sriramulu (Modi Ka Parivar) (@sriramulubjp) July 7, 2020 ಸಭೆಯಲ್ಲಿನ ಚರ್ಚೆ…
ರಾಜ್ಯದಲ್ಲಿ ಮತ್ತೆ 1498 ಮಂದಿಗೆ ಕೊರೋನಾ ಸೋಂಕು
ಬೆಂಗಳೂರು: ತಲ್ಲಣದ ತರಂಗ ಎಬ್ಬಿಸಿರುವ ಕೊರೋನಾ ವೈರಾಣು, ಭಾರತವನ್ನೂ ಸಂದಿಗ್ಧ ಸ್ಥಿತಿಯಲ್ಲಿ ನಿಲ್ಲಿಸಿದೆ. ಕರ್ನಾಟಕ ಕೂಡಾ ಆತಂಕದ ಸ್ಥಿತಿಯಲ್ಲಿದೆ. ಇದೀಗ ಪ್ರತಿದಿನವೂ ಸಾವಿರಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗುತ್ತಿದ್ದು, ಇಂದು ಮತ್ತೆ 1,498 ಪಾಸಿಟಿವ್ ಕೇಸ್’ಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿರುವ ಹೆಲ್ತ್ ಬುಲೆಟಿನ್ ಈ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ. ಇಂದು 15 ಮಂದಿ ಕೊರೋನಾ ಸೋಂಕಿಗೊಳಗಾಗಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿಗೊಳಗಾಗಿ ಸಾವನ್ನಪಿದವರ ಸಂಖ್ಯೆ 416ಕ್ಕೆ ಏರಿಕೆಯಾಗಿದೆ. ಜೊತೆಗೆ 1498 ಪಾಸಿಟಿವ್ ಕೇಸ್’ಗಳು ವರದಿಯಾಗಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 26,416ಕ್ಕೆ ಏರಿಕೆಯಾಗಿದೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ. ರಾಜಧಾನಿ ಬೆಂಗಳೂರಿನಲ್ಲಿ 800 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡದಲ್ಲಿ 83, ಧಾರವಾಡದಲ್ಲಿ 57, ಕಲಬುರಗಿ ಜಿಲ್ಲೆಯಲ್ಲಿ51, ಬೀದರ್ ಜಿಲ್ಲೆಯಲ್ಲೂ 51 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ. Today's…
