ಕೊರೋನಾ ಸೋಂಕು; ಜನಾರ್ಧನ ಪೂಜಾರಿ ಚೇತರಿಕೆ

ಮಂಗಳೂರು: ಬಂದರು ನಗರಿ ಮಂಗಳೂರು ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಗಳನ್ನೂ ಸೋಂಕು ಅಪ್ಪಿಕೊಂಡಿದ್ದು, ಶಾಸಕ ಭಾರತ್ ಶೆಟ್ಟಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ ಸೇರಿದಂತೆ ಅನೇಕರು ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್’ನ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರೂ ಕೋವಿಡ್-19 ಸೋಂಕಿಗೊಳಗಾಗಿದ್ದಾರೆ. ಜನಾರ್ಧನ ಪೂಜಾರಿಯವರು ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಅವರ ಪುತ್ರ ಸಂತೋಷ್ ಸಂತೋಷ್ ತಿಳಿಸಿದ್ದಾರೆ.

ಗುರುಪುರ ಬಾಂಗ್ಲಗುಡ್ಡ ಕುಸಿತ ಪ್ರಕರಣ; ಮೃತ ಬಾಲಕರ ಕುಟುಂಬದವರಿಗೆ ಪರಿಹಾರ

ಮಂಗಳೂರು: ಮಂಗಳೂರು ಹೊರವಲಯದ ಗುರುಪುರ ಬಳಿ ಬಾಂಗ್ಲಗುಡ್ಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಭಾನುವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು ಗುಡ್ಡ ಕುಸಿತ ಪ್ರಕರಣದಲ್ಲಿ ಮಣ್ಣಿನ ಅಡಿಯಲ್ಲಿ ಸಿಲುಕಿದ್ದ ಬಾಲಕರಿಬ್ಬರನ್ನು ಸುದೀರ್ಘ ಕಾರ್ಯಾಚರಣೆ ನಂತರ ಪತ್ತೆ ಮಾಡಲಾಗಿತ್ತು. ಆದರೆ ಬಾಲಕರ ಜೀವ ಉಳಿಸಲು ಸಾಧ್ಯವಾಗಿಲ್ಲ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಬಾಲಕರ ಕುಟುಂಬದವರಿಗೆ ಸರ್ಕಾರ ತಲಾ 5 ಲಕ್ಷ ರೂ ಪರಿಹಾರ ಪ್ರಕಟಿಸಿದೆ. ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಮಂಗಳೂರಿನ ಗುರುಪುರದಲ್ಲಿ ಗುಡ್ಡಕುಸಿದು, ದುರಂತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಅಪಾರ ನೋವು ತಂದಿದೆ. ಇಂತಹ ಘಟನೆ ನಡೆಯಬಾರದಿತ್ತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತಾ,ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ ತಲಾ…

ಲಡಾಖ್ ಸಂಘರ್ಷ; ಒಂದು ಹೆಜ್ಜೆ ಹಿಂದಿಟ್ಟ ಚೀನಾ ಸೇನೆ

ದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ಲಡಾಖ್ ಗಡಿಭಾಗದ ಗಲ್ವಾನ್ ಕಣಿವೆ ಪ್ರದೇಶದಿಂದ ಚೀನಾ ಸೇನೆ ಒಂದು ಹೆಜ್ಜೆ ಹಿಂದಿತ್ತಿದೆ. ಗಲ್ವಾನ್ ಕಣಿವೆ ಸಂಘರ್ಷದ ಬಳಿಕ ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. 20ಕ್ಕೂ ಹೆಚ್ಚು ಯೋಧರ ಸಾವಿನ ನಂತರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಗಡಿ ಭಾಗದಲ್ಲಿ ಸೇನೆಯನ್ನು ಬಲಗೊಳಿಸಿದೆ. ಜೊತೆಗೆ ಜಾಗತಿಕ ಸಮುದಾಯವೂ ಭಾರತದ ಪಾಲಿಗೆ ಸಹಾನುಭೂತಿ ವ್ಯಕ್ತಪಡಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೇ ಮೊದಲ ಬಾರಿಗೆ ಚೀನಾ ಸೇನೆ ವಿವಾದಿತ ಸ್ಥಳದಿಂದ ಕಾಲ್ಕಿತ್ತಿದೆ. ಗಲ್ವಾನ್ ಕಣಿವೆಯಲ್ಲಿ ಮೊಕ್ಕಾಂ ಹೂಡಿದ್ದ ಚೀನಾ ಸೇನೆ ಇದೀಗ ವಿವಾದಿತ ಪ್ರದೇಶದಿಂದ ಸುಮಾರು 1 ರಿಂದ 2 ಕಿ.ಮೀ ನಷ್ಚು ಹಿಂದಕ್ಕೆ ಹೋಗಿದೆ ಎಂದು ಮೂಲಗಳು ಹೇಳಿವೆ.

ಕೊರೋನಾ ಹಾವಳಿ; ಮತ್ತಷ್ಟು ಸಂಕಟ ಸ್ಥಿತಿಯಲ್ಲಿ ಭಾರತ

ದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲಿದ್ದು ಭಾನುವಾರದ ಬೆಳವಣಿಗೆ ಮತ್ತೆ ಆತಂಕ ಉಂಟುಮಾಡಿದೆ. ಶನಿವಾರ ರಾತ್ರಿ ನಂತರ 24 ಗಂಟೆಗಳಲ್ಲಿ 24 ಸಾವಿರದ 248 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6,97,413ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಒಂದೇ ದಿನದಲ್ಲಿ ವಿವಿಧ ರಾಜ್ಯಗಳಲ್ಲಿ 425 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು ಈ ವೈರಾಣು ಹಾವಳಿಗೆ ಬಲಿಯಾದವರ ಸಂಖ್ಯೆ 19 ಸಾವಿರದ 693 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. ಈ ನಡುವೆ ಕೊರೋನಾ ಸೋಂಕಿನ ವಿಚಾರದಲ್ಲಿ ರಷ್ಯಾವನ್ನು ಹಿಂದಿಕ್ಕಿರುವ ಭಾರತ ಅತೀ ಹೆಚ್ಚು ಸೋಂಕಿತರಿರುವ ದೇಶಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಫುಡ್ ಪಾರ್ಕ್ ಗಳ ನಿರ್ಮಾಣದ ಉದ್ದೇಶ ಈಡೇರಲೇಬೇಕು : ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ 4 ಫುಡ್ ಪಾರ್ಕ್’ಗಳಿದ್ದು, ಅವುಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಹೆಚ್ಚಾಗಬೇಕು. ಅಭಿವೃದ್ಧಿಯೇ ನಮ್ಮ ಮೊದಲ ಗುರಿ. ಫುಡ್ ಪಾರ್ಕ್’ಗಳ ಅಭಿವೃದ್ಧಿ ಹಾಗೂ ಉದ್ದೇಶಗಳ ಈಡೇರಿಕೆಗೆ ಸರ್ಕಾರ ಫುಡ್ ಪಾರ್ಕ್’ಗಳ ಹಿಂದೆ ಶಕ್ತಿಯಾಗಿ ಬೆಂಬಲಿಸಲಿದೆ ಎಂದು ಫುಡ್ ಕರ್ನಾಟಕ ಲಿಮಿಟೆಡ್ ಅಧ್ಯಕ್ಷರೂ ಆಗಿರುವ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಫುಡ್ ಕರ್ನಾಟಕ ಲಿಮಿಟೆಡ್ ಸಂಸ್ಥೆಯ ಬಲವರ್ಧನೆಗೆ ರೂಪಿತಗೊಂಡಿರುವ ‘ಫುಡ್ ಕರ್ನಾಟಕ ಲಿಮಿಟೆಡ್’ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಜ್ಯದ ನಾಲ್ಕು ಫುಡ್ ಪಾರ್ಕ್ ಗಳ ಪ್ರಗತಿ ಪರಿಶೀಲನಾ ಸಭೆಯನ್ನು ಬಿ.ಸಿ.ಪಾಟೀಲ್ ನಡೆಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರದ ಆತ್ಮನಿರ್ಭರ್ ಯೋಜನೆಯಲ್ಲಿ ‘ಫುಡ್ ಪಾರ್ಕ್’ಗೆ 4 ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಅನುದಾನದ ಉದ್ದೇಶ ಸಫಲವಾಗಬೇಕು ಎಂದರು. ಲಾಕ್ಡೌನ್ ಸಂದರ್ಭದಲ್ಲಿ ರೈತರ ಆರ್ಥಿಕ ಪರಿಸ್ಥಿತಿ ನಿಭಾಯಿಸಲು ಆಹಾರ ಉತ್ಪಾದನಾ ಘಟಕ’ಗಳು…

ಜುಲೈ ಮೂರನೇ ವಾರದಲ್ಲಿ ಪಿಯುಸಿ, ಆಗಸ್ಟ್ ಮೊದಲ ವಾರದಲ್ಲಿ ಎಸ್ಸೆಸೆಲ್ಸಿ ಫಲಿತಾಂಶ

ಬೆಂಗಳೂರು: ಕೊರೋನಾ ಆತಂಕದ ನಡುವೆಯೇ ಎಸ್ಸೆಸೆಲ್ಸಿ ಪರೀಕ್ಷೆ ನಡೆದಿದೆ. ಈ ಸಂಕಟ ಪರಿಸ್ಥಿತಿಯಲ್ಲಿ ಯಾವ ವಿದ್ಯಾರ್ಥಿಗೂ ತೊಂದರೆಯಾಗಬಾರದೆಂಬ ಉದ್ದೇಶದಿಂದ ಸೂಕ್ತ ಎಚ್ಚರಿಕೆಯ ಕ್ರಮಕ್ಕೆ ಸೂಚಿಸಿರುವ ಶಿಕ್ಷಣ ಸಚಿವ ಸುರೇಶ ಕುಮಾರ್ ತಾವೇ ಖುದ್ದಾಗಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಇಂದು ಸಚಿವರು ಆನೇಕಲ್ ತಾಲೂಕಿನ ಅತ್ತಿಬೆಲೆ, ದೊಮ್ಮಸಂದ್ರ ಚಂದಾಪುರ, ಸರ್ಜಾಪುರ ಮೊದಲಾದೆಡೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ಮೂರನೇ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದರು. ಆಗಸ್ಟ್ ಮೊದಲ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಪ್ರಸ್ತುತ ಪರೀಕ್ಷೆಯಿಂದ ಹೊರಗುಳಿದಿದ್ದ ಕೆಲವು ಮಕ್ಕಳಿಗೆ ಆಗಸ್ಟ್ ತಿಂಗಳ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದು ಅವರು ಭರವಸೆ ಬೇಡಿದರು.

ಶಹಬ್ಬಾಶ್ ಮೋದಿ.. ಸಮರ ಸಜ್ಜಾಗಿರುವ ಯೋಧರಿಗೆ ಧೈರ್ಯ ತುಂಬಿದ ಪ್ರಧಾನಿ

ದೆಹಲಿ: ಭಾರತ ಚೀನಾ ಸಂಘರ್ಷದ ಆತಂಕದಲ್ಲಿರುವ ಲಡಾಖ್ ಕಣಿವೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದಾರೆ. ಗಲ್ವಾನ್ ಕಣಿವೆ ಪ್ರದೇಶದಲ್ಲಿ ಚೀನಾ- ಭಾರತೀಯ ಸೇನಾ ಸಂಘರ್ಷದ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿಯವರ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಇಂದು ಬೆಳ್ಳಂಬೆಳಿಗ್ಗೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಭಾರತೀಯ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರಾವಣೆ ಜೊತೆ ಗಡಿ ಪ್ರದೇಶಕ್ಕೆ ತೆರಳಿದ ಮೋದಿ ಅಲ್ಲಿನ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದರು. ಲೆಹ್ ಸಮೀಪದ ‘ನಿಮೂ’ ಎಂಬಲ್ಲಿಗೂ ತೆರಳಿಯಾದ ಪ್ರಧಾನಿಯವರು ಅಲ್ಲಿ ಬಹ್ರಾತೆ ಕೈಗೊಂಡಿರುವ ಯೋಧರೊಂದಿಗೆ ಮಾತುಕತೆ ನಡೆಸಿ ಧೈರ್ಯ ತುಂಬಿದರು. ಇದನ್ನೂ ಓದಿ.. ಖ್ಯಾತ ಬಾಲಿವುಡ್ ಕೊರಿಯೋಗ್ರಾಫರ್ ಸರೋಜ್ ಖಾನ್ ವಿಧಿವಶ  

ಯೋಗಿಯ ನಾಡಲ್ಲಿ ಭೀಕರ ನರಮೇಧ; ರೌಡಿಯ ಬೇಟೆಗಿಳಿದ ೮ ಪೊಲೀಸರ ಹತ್ಯೆ

ಕಾನ್ಪುರ: ಯೋಗಿಯ ನಾಡು ಉತ್ತರ ಪ್ರದೇಶದಲ್ಲಿ ರಓದಿಗಳು ಅಟ್ಟಹಾಸ ಮೆರೆದಿದ್ದಾರೆ. ಸಿನಿಮಾದಲ್ಲಿನ ರೀತಿಯಲ್ಲೇ ರೋಡಿ ಪದೇ ಪೈಶಾಚಿಕತೆ ಮೆರೆದಿದ್ದು 8 ಮಂದಿ ಪೊಲೀಸ್ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದಾರೆ. ಕಾನ್ಪುರದಲ್ಲಿ ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಪೊಲೀಸ್ ತಂಡದ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾನ್ಪುರದ ಚೌಬೆಪುರ್ ನ ಬಿತೂರ್ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಈ ಹತ್ಯಾಕಾಂಡದಲ್ಲಿ ಅಧಿಕಾರಿಗಳು ಸೇರಿದಂತೆ 8 ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ. 7 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಹುತಾತ್ಮ ಪೊಲೀಸರನ್ನು ದೇವೇಂದ್ರ ಕುಮಾರ್ ಮಿಶ್ರಾ, ಮಹೇಶ್ ಯಾದವ್, ಅನೂಪ್ ಕುಮಾರ್, ನೆಬುಲಾಲ್, ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಬ್ಲು ಎಂದು ಗುರುತಿಸಲಾಗಿದೆ.

Uncategorized

ಭಾರತದಲ್ಲಿ ಒಂದೇ ದಿನ 20,903 ಮಂದಿಯಲ್ಲಿ ಸೋಂಕು; 379 ಮಂದಿ ಬಲಿ

ದೆಹಲಿ: ಭಾರತದಲ್ಲಿ ಕೊರೋನಾ ವೈರಾಣು ಅಟ್ಟಹಾಸ ಮುಂದುವರಿದಿದೆ. ಗುರುವಾರದಿಂದೀಚೆಗೆ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ 20,903 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದು ಕೊರೋನಾ ಸಂಕಟಕಾಲದಲ್ಲಿನ ದಾಖಲೆಯ ಸಂಖ್ಯೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಂಕಿ ಅಂಶ ಒದಗಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ದೇಶದಲ್ಲಿಸೋಂಕಿತರ ಸಂಖ್ಯೆ 6,25,544ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಜೊತೆಗೆ ಒಂದೇ ದಿನ 379 ಮಂದಿ ಮಹಾಮಾರಿ ವೈರಸ್’ಗೆ ಬಲಿಯಾಗಿದ್ದು, ಕೊರೋನಾ ಸೋಂಕಿಗೊಳಗಾಗಿ ಸಾವನ್ನಪ್ಪಿದವರ ಸಂಖ್ಯೆ 18213ಕ್ಕೆ ತಲುಪಿದೆ ಎಂದು ಇಲಾಖೆ ಹೇಳಿದೆ. ಮಹಾರಾಷ್ಟ್ರದಲ್ಲಿ ನಿನ್ನೆ 125 ಮಂದಿ ಬಲಿಯಾಗಿದ್ದಾರೆ. ತಮಿಳುನಾಡಿನಲ್ಲಿ 57, ದೆಹಲಿಯಲ್ಲಿ 61, ಕರ್ನಾಟಕದಲ್ಲಿ 19 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 16, ಜಮ್ಮು ಮತ್ತು ಕಾಶ್ಮೀರದಲ್ಲಿ 10, ಮಧ್ಯಪ್ರದೇಶದಲ್ಲಿ 8 ಮಂದಿ ಸೋಂಕಿತರು ಬಲಿಯಾಗಿದ್ದಾರೆ.

‘ನಾವಿಬ್ಬರೂ ಒಂದೇ ನಾಣ್ಯದ ಎರಡು ಮುಖ’; ಗಣೇಶ್ ಬಗ್ಗೆ ಜಗ್ಗೇಶ್ ಟ್ವೀಟ್

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್‍ 40ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕನ್ನಡ ಸಿನಿಮಾ ರಂಗದ ಪ್ರಮುಖರು, ಅಭಿಮಾನಿಗಳು ನಟ ಗಣೇಶ್’ಗೆ ಶುಭ ಹಾರೈಸಿದ್ದಾರೆ. ಹಲವಾರು ನಟ ನಟಿಯರು ಸಾಮಾಜಿಕ ಜಾಲತಾಣಗಳಲಿಲಿ ತಮ್ಮದೇ ಶೈಲಿಯಲ್ಲಿ ಶುಭಾಶಯಗಳನ್ನು ಹರಿಯಬಿಟ್ಟಿದ್ದಾರೆ. ಈ ಪೈಕಿ ನಟ ಜಗ್ಗೇಶ್ ಮಾಡಿರುವ ಟ್ವೀಟ್ ಗಮನಸೆಳೆದಿದೆ. ‘ನಾವಿಬ್ಬರೂ ಒಂದೇ ನಾಣ್ಯದ ಎರಡು ಮುಖ’ ಎಂದಿರುವ ಜಗ್ಗೇಶ್, ನಮಗಿಬ್ಬರಿಗೂ ಪ್ರತಿಭೆಯೇ ಗಾಡ್ ಫಾದರ್! ನನ್ನಂತೆ ಇವನಿಗೂ ಜೋತಿಷ್ಯಾಸ್ತ್ರ ಇಷ್ಟದ ವಿಷಯ! ನನ್ನಂತೆ ಅಳೆದು ತೂಗಿ ಜನಸೇರುತ್ತಾನೆ! ನನ್ನಂತೆ ಮೇಲೆ ನಗು ಒಳಗೆ ಒಬ್ಬನೆ ಜೀವಿಸುತ್ತಾನೆ! ನಮ್ಮಿಬ್ಬರನ್ನು ಅನ್ಯರು ಯಾಮಾರಿಸಲು ಸ್ವಲ್ಪಕಷ್ಟ! ಕಾರಣ ರಸ್ತೆಯಿಂದ ಬಂದವರು! ಎಂದು ಟ್ವೀಟ್ ಮಾಡಿದ್ದಾರೆ. ನಾವಿಬ್ಬರು ನಾಣ್ಯದ ಎರಡುಮುಖ!ಇವನು ಅಡಕಮಾರನಹಳ್ಳಿ ನಾನು ಜಡೆಮಾಯಸಂದ್ರ!ಇಬ್ಬರಿಗು ಪ್ರತಿಭೆಯೇgodfather!ನನ್ನಂತೆ ಇವನಿಗು ಜೋತಿಷ್ಯಾಸ್ತ್ರ ಇಷ್ಟದವಿಷಯ!ನನ್ನಂತೆ ಅಳೆದುತೂಗಿ ಜನಸೇರುತ್ತಾನೆ!ನನ್ನಂತೆ ಮೇಲೆ ನಗು ಒಳಗೆ ಒಬ್ಬನೆ ಜೀವಿಸುತ್ತಾನೆ!ನಮ್ಮಿಬ್ಬರನ್ನು ಅನ್ಯರು ಯಾಮಾರಿಸಲು ಸ್ವಲ್ಪಕಷ್ಟ!ಕಾರಣ ರಸ್ತೆಯಿಂದ…