ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸೋಂಕು; 500 ದಾಟಿದ ಕಂಟೈನ್ಮೆಂಟ್ ಪ್ರದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು ಹಾವಳಿ ಹೆಚ್ಚಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಸುಮಾರು 43 ವಾರ್ಡ್ ಗಳಲ್ಲಿ ಕಂಟೈನ್ ಮೆಂಟ್ ವಲಯಗಳನ್ನು ಗುರುತಿಸಲಾಗಿದೆ. ಇದೀಗ ಕಂಟೈನ್ಮೆಂಟ್ ಪ್ರದೇಶಗಳ ಸಂಖ್ಯೆ 500 ದಾಟಿದೆ. ಚಾಮರಾಜಪೇಟೆ, ಕೆ.ಆರ್ ಮಾರುಕಟ್ಟೆ, ಛಲವಾದಿಪಾಳ್ಯ, ಪಾದರಾಯನಪುರ, ಧರ್ಮರಾಯಸ್ವಾಮಿ ದೇವಸ್ಥಾನ, ಬಾಪುಜಿ ನಗರ ಮಂಗನಪಾಳ್ಯ ಕೆಂಗೇರಿ, ಸಿಂಗಸಂದ್ರ, ಹೊಂಗಸಂದ್ರ, ಸಿದ್ದಾಪುರ, ವಿಶ್ವೇಶಪುರಂ, ಆಜಾದ್ ನಗರ, ರಾಯಪುರಂ, ಸಂಪಂಗಿರಾಮನಗರ. ಭಾರತಿ ನಗರ, ವಸಂತ್ ನಗರ, ಗಾಂಧಿ ನಗರ, ಸುಭಾಷ್ ನಗರ, ಓಕಳಿಪುರಂ, ಅಗ್ರಹಾರ ದಾಸರಹಳ್ಳಿ, ಶಾಂತಲ ನಗರ, ಸುಧಾಮ ನಗರ, ಕಾಟನ್‌ಪೇಟ್, ಬಿನ್ನಿಪೇಟೆ, ಹೊಂಬೇಗೌಡ ನಗರ, ಲಕ್ಕಸಂದ್ರ, ಬೆಳ್ಳಂದೂರು, ಕೋರಮಂಗಲ, ಬಸವನಗುಡಿ, ಜಯನಗರ, ಶ್ರೀನಗರ, ರಾಜರಾಜೇಶ್ವರಿ ನಗರ, ಹೊಸಕೆರೆಹಳ್ಳಿ, ಗಿರಿನಗರ, ಕತ್ರಿಗುಪ್ಪೆ, ಬೈರಸಂದ್ರ, ಮಡಿವಾಳ, ಬೊಮ್ಮನಹಳ್ಳಿ, ಸಹಿತ ಹಲವೆಡೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಂಡುಬಂದಿದ್ದು ಈ…

ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾ ಸೋಂಕಿತರಿಕೆ ಉಚಿತ ಚಿಕಿತ್ಸೆ ನೀಡಿ; ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲೂ ಕೊರೋನಾ ಸೋಂಕಿತರಿಕೆ ಉಚಿತ ಚಿಕಿತ್ಸೆ ನೀಡಬೇಕೆಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊರೊನಾ ರೋಗಿಗಳಿಗೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಸರ್ಕಾರ ಈ ಕೂಡಲೇ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೊಕಾಲ್ ಜಾರಿಗೆ ತರುವ ಜೊತೆಗೆ ಅದರ ಜಾರಿ ಬಗ್ಗೆ ನಿಗಾ ವಹಿಸಲು ಸಮಿತಿಯೊಂದನ್ನು ರಚನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನಾ ರೋಗಿಗಳಿಗೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಸರ್ಕಾರ ಈ ಕೂಡಲೇ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೊಕಾಲ್ ಜಾರಿಗೆ ತರುವ ಜೊತೆಗೆ ಅದರ ಜಾರಿ ಬಗ್ಗೆ ನಿಗಾ ವಹಿಸಲು ಸಮಿತಿಯೊಂದನ್ನು ರಚನೆ ಮಾಡಬೇಕು. 5/9#COVID__19 — Siddaramaiah (@siddaramaiah) June 23, 2020 ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕದ ಬಗ್ಗೆಯೂ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೆಚ್ಚದ…

ದೇಶದಲ್ಲಿ ಒಂದೇ ದಿನ 15,968 ಮಂದಿಯಲ್ಲಿ ಸೋಂಕು; 465 ಮಂದಿ ಬಲಿ

ದೆಹಲಿ: ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಭಾರತದಲ್ಲಂತೂ ಆತಂಕದ ಪರಿಸ್ಥಿತಿಯನ್ನು ತಂದೊಡ್ಡಿದೆ. ಮಂಗಳವಾರ ಒಂದೇ ದಿನ 15,968 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜೊತೆಗೆ 465 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 456183ಕ್ಕೆ ಏರಿಕೆಯಾಗಿದೆ . ಸಾವಿನ ಸಂಖ್ಯೆ ಕೂಡ 14476ಕ್ಕೆ ತಲುಪಿದೆ. ಅದರಲ್ಲೂ ಮಹಾರಾಷ್ಟ್ರದ ಬೆಳವಣಿಗೆ ಆತಂಕ ಉಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 3214 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಅಷ್ಟೇ ಅಲ್ಲ 248 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿರುವ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1,39,010ಕ್ಕೆ ಏರಿಕೆಯಾಗಿದೆ. ಜೊತೆಗೆ ವೈರಸ್ ಗೆ ಬಲಿಯಾದವರ ಸಂಖ್ಯೆ 6531ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 3214 ಸೋಂಕು; 248 ಸೋಂಕಿತರು ಮಂದಿ ಸಾವು

ಮುಂಬೈ: ದೇಶಾದ್ಯಂತ ಕೊರೋನಾ ವೈರಾಣು ಸವಾರಿ ತೀವ್ರಗೊಂಡಿದ್ದು ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇವೆ. ಅದರಲ್ಲೂ ಮಹಾರಾಷ್ಟ್ರದ ಬೆಳವಣಿಗೆ ಆತಂಕ ಉಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 3214 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಅಷ್ಟೇ ಅಲ್ಲ 248 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿರುವ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1,39,010ಕ್ಕೆ ಏರಿಕೆಯಾಗಿದೆ. ಜೊತೆಗೆ ವೈರಸ್ ಗೆ ಬಲಿಯಾದವರ ಸಂಖ್ಯೆ 6531ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. 3214 new #COVID19 positive cases, 248 deaths (75 in last 48 hours and 173 in the previous period) and 1925 discharged in Maharashtra today. Total positive cases in the state rises to 1,39,010 including 69,631 recovered patients & 6531 deaths:…

ಕೊರೋನಾ ವೈರಸ್’ಗೆ ತೃಣಮೂಲ ಕಾಂಗ್ರೆಸ್ ಬಲಿ

ಕೋಲ್ಕತಾ: ದೇಶಾದ್ಯಂತ ಕೊರೋನಾ ವೈರಸ್’ಗೆ ಸರಣಿ ಸಾವು ಪ್ರಕರಣಗಳು ಸಂಭವಿಸುತ್ತಿದ್ದು ಪಶ್ಚಿಮ ಬಂಗಾಳದ ಶಾಸಕರೊಬ್ಬರು ಬಲಿಯಾಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ತಮೋನಾಶ್ ಘೋಷ್ (60) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸುಮಾರು ಒಂದು ತಿಂಗಳಿನಿಂದ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಘೋಷ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘೋಷ್ ಅವರ ಸಾವಿಗೆ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ಘೋಷ್ಅವರ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ ಎಂದಿದ್ದಾರೆ.

‘ಪ್ರತಿಜ್ಞಾ’ ಯಶಸ್ಸಿಗೆ ಡಿಕೆಶಿ ಪಣ; ಕೈನಾಯಕರ ಜೊತೆ ಕಾರ್ಯತಂತ್ರ

ಬೆಂಗಳೂರು: ಕೊರೋನಾ ಸಂಕಟದ ನಡುವೆಯೇ ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಪಕ್ಷದ ಸಾರಥ್ಯ ವಹಿಸಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರಾದರೂ ಪದಗ್ರಹಣ ಮಾಡಿಲ್ಲ. ಅವರ ಈ ಕಾರ್ಯಕ್ರಮಕ್ಕೆ ಕೊರೋನಾ ಪರಿಸ್ಥಿತಿ ಅಡ್ಡಿಯಾಗುತ್ತಲೇ ಇವೆ. ಈ ಮಧ್ಯೆ ಜುಲೈ 2 ರಂದು ಪ್ರತಿಜ್ಞಾ ಕಾರ್ಯಕ್ರಮ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಈ ಪ್ರತಿಜ್ಞಾ ಯಶಸ್ವಿಗೊಳಿಸಲು ಕೈ ಟೊಂಕ ಕಟ್ಟಿ ನಿಂತಿದ್ದಾರೆ. ಈ ನಡುವೆ, ಪ್ರತಿಜ್ಞಾ ದಿನದ ಪೂರ್ವಭಾವಿ ತಯಾರಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಪ್ರಮುಖರ ಜೊತೆ ಇಂದು ಸಮಾಲೋಚನೆ ನಡೆಸಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರಮುಖರು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಉಸ್ತುವಾರಿ…

ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಎಂಎ ಹಗರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವಿಜಯ್ ಶಂಕರ್ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಐಎಂಎ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಇವರ ಮೇಲಿದೆ. ಈ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಜುಲೈನಲ್ಲಿ ಎಸ್‍ಐಟಿ ಅಧಿಕಾರಿಗಳು ವಿಜಯ್ ಶಂಕರ್ ಅವರನ್ನು ಬಂಧಿಸಿದ್ದರು. ಬಳಿಕ ಅವರು ಜಾಮೀನು ಪಡೆದ ವಿಜಯ್ ಶಂಕರ್ ಹೊರ ಬಂದಿದ್ದರು. ಮಂಗಳವಾರ ಅವರು ಬೆಂಗಳೂರಿನ ಜಯನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವತಿಯ ಜೀವ ಉಳಿಸಿದ ಬಾಲಕಿ; ಎಲ್ಲೆಲ್ಲೂ ಜೀರಕ್ಷಕಿಯ ಗುಣಗಾನ

ಉಡುಪಿ: ಎಂತಹಾ ಕಠಿಣ ಪರಿಸ್ಥಿತಿಯಲ್ಲೂ ಸಮಯ ಪ್ರಜ್ಞೆಯು ಬಡ ಜೀವವನ್ನೂ ಉಳಿಸಬಹುದು ಎಂಬುದಕ್ಕೆ ಈ ಬಾಲಕಿ ಸಾಕ್ಷಿ. ಯಮನ ಮನೆಯ ಕದ ತಟ್ಟಿದ್ದ ಯುವತಿಯನ್ನು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬದುಕುಳಿಸಿದ ಅಪರೂಪದ ಘಟನೆ ಉಡುಪಿ ಸಮೀಪದ ಬಾರ್ಕೂರು ಬಳಿ ನಡೆಸಿದೆ. ಯುವತಿಯ ಪ್ರಾಣ ರಕ್ಷಿಸಿದ ಬಾಲಕಿ ಇದೀಗ ಹೀರೋಯಿನ್.. ಘಟನೆ ನಡೆದದ್ದಿಷ್ಟು. ಉಡುಪಿ ಜಿಲ್ಲೆ ಬಾರಕೂರು ಬಳಿ ಕಾರು ಅಪಘಾತಕ್ಕೀಡಾಗಿತ್ತು. ಚೌಳಿಕೆರೆಗೆ ಉದ್ಯಮಿ ಸಂತೋಷ್‌ ಶೆಟ್ಟಿ ಅವರಿದ್ದ ಕಾರು ಉರುಳಿ ಬಿದ್ದು ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ ಸಂತೋಷ್ ಶೆಟ್ಟಿ ಸಾವನ್ನಪ್ಪಿದರಾದರೂ ಅವರ ಸಂಸ್ಥೆಯ ಉದ್ಯೋಗಿ ಶ್ವೇತಾ ಎಂಬವರು ಅಸ್ವಸ್ಥರಾಗಿದ್ದರು. ಜೀವನ್ಮರಣ ಸ್ಥಿತಿಯಲ್ಲಿದ್ದಾಗ ಬಾಲಕಿ ನಮನಾ ಎಂಬ ಬಾಲೆ,  ಸೇನಾನಿಯಂತೆ ನೆರವಿಗೆ ಧಾವಿಸಿದ್ದಾಳೆ. ಸ್ಥಳದಲ್ಲಿದ್ದ ಯುವಕರು ಗಾಯಾಳುಗಳನ್ನು ಕೆರೆಯಿಂದ ಮೇಲೆತ್ತಿ ಕರೆತರುತ್ತಿದ್ದಂತೆಯೇ ಅಲ್ಲೇ ಸಮೀಪದಲ್ಲಿದ್ದ ಬಾಲಕಿ ನಮನಾ ಪ್ರಥಮ ಚಿಕಿತ್ಸೆ ನೀಡಿ ಯುವತಿಯೊಬ್ಬಳ ಪಾಲಿಗೆ ಜೀವ ಸಂಜೀವಿನಿಯಾದಳು.  …

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ನಿ ಹಾಗೂ ಮಗಳಿಗೂ ಕೊರೊನಾ ಸೋಂಕು

ಬೆಂಗಳೂರು: ಜಗತ್ತಿನಾದ್ಯಂತ ಕೊರೋನಾ ಆತಂಕದ ಪರಿಸ್ಥಿತಿಯನ್ನು ತಂದೊಡ್ಡಿದೆ. ಭಾರತ ಇದೀಗ ಸೋಂಕಿತ ರಾಷ್ಟ್ರಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ಇತ್ತ ರಾಜ್ಯದಲ್ಲೂ ಸೋಂಕು ತೀವ್ರಗತಿಯಲ್ಲಿ ಹರಡಿದೆ. ಇದೇ ಸಂದರ್ಭದಲ್ಲಿ, ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರ ಕುಟುಂಬ ಸದಸ್ಯರಿರೂ ಸೋಂಕು ಅಂಟಿಕೊಂಡಿದೆ. ಸಚಿವರ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಪರೀಕ್ಷೆಗೊಳಪಡಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಷ್ಟೇ ಅಲ್ಲ ಸಚಿವ ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್‌‌ ಸೋಂಕು ಇರುವುದು ದೃಢಪಟ್ಟಿದೆ ಎಂದು ಸ್ವತಃ ಸಚಿವರೇ ಟ್ವೀಟ್ ಮಾಡಿದ್ದಾರೆ. ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ…

20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ; ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಆತಂಕಕಾರಿ ಸನ್ನಿವೇಶವನ್ನು ಸೃಷ್ಟಿಸುತ್ತಿದೆ. ನಿಯಂತ್ರಣಕ್ಕೆ ಬಾರದಿರುವುದರಿಂದಾಗಿ ಸರ್ಕಾರ ಕೂಡಾ ಸಂದಿಗ್ಧ ಸ್ಥಿತಿಯಲ್ಲಿದೆ. ಈ ನಡುವೆ, ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಲಿದ್ದು, ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು ಚಾಮರಾಜಪೇಟೆ ಏರಿಯಾಗಳನ್ನು ಜೂನ್ 30ರವರೆಗೆ ಸೀಲ್ ಡೌನ್ ಮಾಡಲು ಸರ್ಕಾರ ಮುಂದಾಗಿದೆ. ಇದೇ ವೇಳೆ ಕೆಲವೊಂದು ಕಡೆ ಮಾತ್ರವಲ್ಲ ಇಡೀ ಬೆಂಗಳೂರನ್ನು ಸೀಲ್’ಡೌನ್ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ. ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ. ಜನರ ಪ್ರಾಣದ…