ಧಾರವಾಡ : ಲೋಕೋಪಯೋಗಿ ಇಲಾಖೆಯಲ್ಲಿ ಕಿರಿಯ ಇಂಜಿನೀಯರ್‍ಗಳು ಹಾಗೂ ಸಹಾಯಕ ಇಂಜಿನೀಯರ್‍ಗಳ ಬಡ್ತಿ, ನಿವೃತ್ತಿ ಮತ್ತಿತರ ಕಾರಣಗಳಿಂದ ಸುಮಾರು 990 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಡಿಪ್ಲೋಮಾ ಮತ್ತು ಬಿಇ ಪದವಿ ಪಡೆದಿರುವ ಅರ್ಹ ಯುವಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಹೇಳಿದ್ದಾರೆ. ನಗರದ ಸರ್ಕಿಟ್ ಹೌಸ್‍ನಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆಯಲ್ಲಿ ಇಂಜಿನೀಯರ್‍ಗಳ ಕೊರತೆಯನ್ನು ತುರ್ತಾಗಿ ಸರಿದೂಗಿಸಲು ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಡಿಪ್ಲೋಮಾ ಮತ್ತು ಪದವೀಧರ ಇಂಜಿನೀಯರ್‍ಗಳನ್ನು ನೇಮಿಸಿಕೊಳ್ಳಲು ಇಂದು ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಲಾಗಿದೆ ಎಂದರು. ಸರ್ಕಾರದ ಅಧಿಕೃತ ಮಾನವ ಸಂಪನ್ಮೂಲ ಏಜೆನ್ಸಿಗಳಿಗೆ ಆಧ್ಯತೆ ನೀಡಲಾಗುವುದು. ಈ ಕ್ರಮದಿಂದ ಸ್ಥಳೀಯ ಯುವಕರು ಹಾಗೂ ಅರ್ಹ ಪದವಿಧರ ಇಂಜಿನೀಯರ್‍ಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಇಲಾಖೆಯ ಕಾರ್ಯಚಟುವಟಿಕೆಗಳಿಗೆ…
Year: 2020
1985 ರಿಂದ 2020 ರವರೆಗಿನ ಹಗರಣ ತನಿಖೆಗೆ ಎಸ್ಐಟಿ ರಚನೆಗೆ ಬಿಡಿಎ ಮನವಿ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ 1985 ರಿಂದ ಇಲ್ಲಿವರೆಗೆ ನಡೆದಿರುವ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಮಂಗಳವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಿಶ್ವನಾಥ್ ಅವರು, ಇತ್ತೀಚೆಗೆ ಬಿಡಿಎ ಮತ್ತು ಆಯುಕ್ತರು ಹಾಗೂ ಅಧಿಕಾರಿಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಡವರ ಹೆಸರಿನಲ್ಲಿ ಪಟ್ಟಭದ್ರ ಹಿತಾಸಕ್ತಿಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಸಿದ್ಧತೆ ನಡೆಸಿದ್ದ ಜಾಲವನ್ನು ಬೇಧಿಸಿರುವ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿತ್ತು ಎಂದರು. ಕಳೆದ ಹಲವು ವರ್ಷಗಳಿಂದ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ನಿವೇಶನಗಳನ್ನು ಏಜೆಂಟರ ಜೊತೆ ಶಾಮೀಲಾಗಿ ಪಟ್ಟಭದ್ರ ಹಿತಾಸಕ್ತಿಗಳಿಗೆ ಮಾರಾಟ ಮಾಡುತ್ತಾ ಬರಲಾಗಿದೆ. ಇದೀಗ ನಕಲಿ ದಾಖಲೆ ಸೃಷ್ಟಿಸಿ ನಿವೇಶನಗಳನ್ನು ಹಂಚಿಕೆ ಮಾಡಲು ಹೊರಟಿದ್ದ ಪ್ರಕರಣವು…
ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್-ಡಿಕೆಶಿ ಭೇಟಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ರಾತ್ರಿ ಭೇಟಿ ಮಾಡಿ, ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಶಿವಕುಮಾರ್ ಅವರು ತಾರಿಖ್ ಅನ್ವರ್ ಅವರನ್ನು ಸನ್ಮಾನಿಸಿದರು.
ಬೆಂಗಳೂರಿನ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರಕ್ಕೆ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ ಮಾನ್ಯತೆ
ಬೆಂಗಳೂರು: ಬೆಂಗಳೂರು ವಿದ್ಯಾನಗರದಲ್ಲಿರುವ ಶ್ರೀ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಘೋಷಿಸಿದ್ದಾರೆ. ಭಾರತದ 8 ರಾಜ್ಯಗಳ ಕ್ರೀಡಾ ಕೇಂದ್ರಗಳಿಗೆ ಈ ಮಾನ್ಯತೆ ದೊರೆತಿದ್ದು, ಬೆಂಗಳೂರು ಕೇಂದ್ರದಲ್ಲಿ ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳ ತರಬೇತಿ ನೀಡಲಾಗುವುದು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅತ್ಯುತ್ತಮ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ವಿದ್ಯಾನಗರದ ಯುವ ಕೇಂದ್ರಕ್ಕೆ ಉತ್ಕೃಷ್ಟತಾ ಕೇಂದ್ರದ ಮಾನ್ಯತೆ ದೊರೆತಿರುವುದರಿಂದ ಕ್ರೀಡೆಗೆ ಇನ್ನಷ್ಟು ಮೂಲಸೌಲಭ್ಯ ಒದಗಿಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ಕ್ರೀಡಾ ಹಾಸ್ಟೆಲ್ ಗಳು ಮತ್ತು ಇತರ ಸಂಘ ಸಂಸ್ಥೆಗಳಿಂದ ಓಲಿಂಪಿಕ್ ಪದಕ ಗೆಲ್ಲಬಲ್ಲ ಸಾಮರ್ಥ್ಯವುಳ್ಳ 32 ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿಗೆ…
ತೆಲಾಂಗಣ ಸಂಸದ ಕೋಮ್ಟಿರೆಡ್ಡಿ ವೆಂಕಟರೆಡ್ಡಿ ಡಿಕೆಶಿ ಭೇಟಿ
ತೆಲಾಂಗಣದ ಬೋಂಗಿರ್ ಲೋಕಸಭಾ ಕ್ಷೇತ್ರದ ಸದಸ್ಯ ಕೋಮ್ಟಿರೆಡ್ಡಿ ವೆಂಕಟರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಇನ್ನು ಮುಂದೆ ಪರೀಕ್ಷಾ ಪ್ರಾಧಿಕಾರದಿಂದ ಐಟಿಐ ಪರೀಕ್ಷೆ; ಒಪ್ಪಂದಗಳಿಗೆ ಸಹಿ
ಬೆಂಗಳೂರು: ವೃತ್ತಿಪರ ಕೋರ್ಸುಗಳಲ್ಲಿ ಒಂದಾದ ಐಟಿಐ ಪರೀಕ್ಷೆಯ ಸುಧಾರಣೆ ಹಾಗೂ ಗ್ರಾಮೀಣ ಪ್ರದೇಶದ ಕಡುಬಡ ಮಹಿಳೆಯರಿಗೆ ಹೈನುಗಾರಿಕೆ ಮೂಲಕ ಜೀವನೋಪಾಯ ಕಲ್ಪಿಸಿಕೊಡುವ ʼಕ್ಷೀರ ಸಂಜೀವಿನಿ ಯೋಜನೆʼ ಒಪ್ಪಂದಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಸಮಕ್ಷಮದಲ್ಲಿ ಸೋಮವಾರ ಬೆಂಗಳೂರಿನಲ್ಲಿ ಸಂಬಂಧಿತ ಅಧಿಕಾರಿಗಳು ಸಹಿ ಹಾಕಿದರು. ಯುವಜನರಿಗೆ ವೃತ್ತಿಪರ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರಾಗಿರುವ ಮಹಿಳೆಯರು ಸ್ವಾವಲಂಭನೆಯ ಬದುಕು ಕಟ್ಟಿಕೊಳ್ಳಲು ಇವೆರಡೂ ಒಪ್ಪಂದಗಳು ಅತ್ಯಂತ ಪರಿಣಾಮಕಾರಿಯಾಗಿ ನೆರವಾಗುತ್ತವೆ ಎಂದು ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ತಿಳಿಸಿದರು.
ಕೌಶಲ್ಯಾಭಿವೃದ್ಧಿಗೆ ಸಂಕಲ್ಪ ಹೆಲ್ಪ್‌ಲೈನ್; ಚಾಲನೆ ನೀಡಿದ ಡಿಸಿಎಂ
ಬೆಂಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ಅನುಷ್ಠಾನಕ್ಕೆ ತಂದಿರುವ ಕೌಶಲ್ಯ ತರಬೇತಿ ಮಾಹಿತಿ ನೀಡುವ ʼಸಂಕಲ್ಪʼ ಸಹಾಯವಾಣಿಗೆ ಕೌಶಲ್ಯಾಭಿವೃದ್ಧಿ ಮತ್ತು ಗ್ರಾಮೀಣ ಜೀವನೋಪಾಯ ಇಲಾಖೆಯ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಚಾಲನೆ ನೀಡಿದರು. ರಾಜ್ಯದ ಎಲ್ಲ ಯುವಜನರಿಗೆ ವರದಾನವಾಗಬಲ್ಲ, ಅವರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲೀಕರಣ ಮಾಡುವ ಉದ್ದೇಶದಿಂದ ಈ ಸಹಾಯವಾಣಿಯನ್ನು ರೂಪಿಸಲಾಗಿದ್ದು, ಡಿಸಿಎಂ ಅವರು ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಕೊಡಗು ಜಿಲ್ಲೆಯಲ್ಲಿನ ತರಬೇತಿ ಕೇಂದ್ರಗಳ ಬಗ್ಗೆ ಮಾಹಿತಿ ಪಡೆಯುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಯುವಜನರಿಗೆ ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕು. ಕೌಶಲ್ಯಾಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು ಎಂದ ಡಿಸಿಎಂ, 080-24482558 ಸಂಖ್ಯೆಗೆ ಕರೆ ಮಾಡುವಂತೆ ತಿಳಿಸಿದರು.
ಬೆಳೆ ವಿಮಾ ಯೋಜನೆ; ತ್ವರಿತ ಪರಿಹಾರ ಸೂತ್ರ
ಬೆಂಗಳೂರು: ರಾಜ್ಯದಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಯಡಿ ಬಾಕಿ ಉಳಿದಿರುವ ನಷ್ಟ ಪರಿಹಾರ ಇತ್ಯರ್ಥ ಕುರಿತು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಸಂಸದ ಪ್ರಹ್ಲಾದ್ ಜೋಷಿ ಹಾಗೂ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಸಣ್ಣಪುಟ್ಟ ಸಹಕಾರ ಸಮಸ್ಯೆಗಳಿದ್ದು, ಬೆಳೆವಿಮೆ ಕಂಪೆನಿಗಳ ಜೊತೆ ಕೃಷಿ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿರಬೇಕು. ಕಂಪೆನಿಗಳು ಹಾಗೂ ಕೃಷಿ ಇಲಾಖೆ ನಡುವೆ ಸಹಕಾರದ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೈತರ ಖಾತೆ ಬೆಳೆ ಸಮೀಕ್ಷೆ ಸೇರಿದಂತೆ ಯೋಜನೆಯಡಿಯಲ್ಲಿನ ತಾಂತ್ರಿಕ ವಿಚಾರದಲ್ಲಿ ಕಂಡುಬರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕೆಂದು ಚರ್ಚಿಸಲಾಯಿತು. ಸಂಸದ ಪ್ರಹ್ಲಾದ್ ಜೋಷಿ ಮಾತನಾಡಿ, ಇನ್ಸೂರೆನ್ಸ್ ಕಂಪೆನಿಗಳು ಪ್ರತಿ ತಾಲೂಕಿನ ಕೇಂದ್ರ ಕಚೇರಿಯಲ್ಲಿ ಕಚೇರಿಯನ್ನು ತೆರೆಯಬೇಕು.ಇನ್ಸೂರೆನ್ಸ್ ಕಂಪೆನಿಯ ಹಿರಿಯ ಅಧಿಕಾರಿಗಳು ಹಾಗೂ ಕೃಷಿ ಇಲಾಖೆ ಆಯುಕ್ತರು ಜಿಲ್ಲಾವಾರು…
ವಿಲೀನ- ಕಪೋಲಕಲ್ಪಿತ ಸುಳ್ಳು ವದಂತಿ: ಕ್ಯಾಪ್ಟನ್ ಕಾರ್ಣಿಕ್
ಬೆಂಗಳೂರು: ಬಿಜೆಪಿ- ಜೆಡಿಎಸ್ ವಿಲೀನ ಪ್ರಕ್ರಿಯೆಯ ಕುರಿತ ಸುದ್ದಿಗಳು ಸಂಪೂರ್ಣ ಕಪೋಲಕಲ್ಪಿತ. ಭಾರತೀಯ ಜನತಾ ಪಾರ್ಟಿ ಇದನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ಈ ಕುರಿತು ನಡೆದಿರುವ ಚರ್ಚೆಗಳು ಅನಗತ್ಯ ಗೊಂದಲ ಸೃಷ್ಟಿ ಮಾಡುವ ದುರುದ್ದೇಶದಿಂದ ಕೂಡಿವೆ. ಯಾರು ಕೂಡಾ ಈ ವದಂತಿಗಳಿಗೆ ಕಿವಿಗೊಡಬಾರದೆಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ. ನಮ್ಮ ನೆಚ್ಚಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರಕಾರವು ಇತ್ತೀಚಿನ ದಿನಗಳಲ್ಲಿ ಅತಿವೃಷ್ಟಿ ಹಾಗೂ ಕೋವಿಡ್ ಸಂಕಷ್ಟದ ಸಮಸ್ಯೆಗಳ ನಡುವೆಯೂ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಈಗ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯಪ್ರವೃತ್ತವಾಗಿದೆ. “ಬೆಂಗಳೂರು ಮಿಶನ್ 2022” ಬೆಂಗಳೂರಿಗೆ ನವ ಚೈತನ್ಯದಿಂದ ಕೂಡಿರುವ ನಿಟ್ಟಿನಲ್ಲಿ ಸರಕಾರದ ಅಭಿವೃದ್ಧಿ ಚಿಂತನೆಯನ್ನು ಸಾದರಪಡಿಸಿದೆ ಎಂದು ಅವರು ತಿಳಿಸಿದ್ದಾರೆ. ಗ್ರಾಮ ಸ್ವರಾಜ್ಯ ಸಮಾವೇಶಗಳ ಮೂಲಕ ಪಕ್ಷ ಸಂಘಟನೆ ಬಲಗೊಂಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ…
ಗ್ರಾಮ ಪಂಚಾಯಿತಿ ಸಮರ; ಮತದಾರರಲ್ಲೂ ಉತ್ಸಾಹ
ಬೆಂಗಳೂರು: ರಾಜ್ಯದ 3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತದಾನ ನಡೆಯುತ್ತಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೊರೋನಾ ಸೋಂಕು ಆತಂಕದ ನಡುವೆ ಪಂಚಾಯತ್ ಸಮಾರಾ ನಡೆಯುತ್ತಿದೆ. ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಮಾದಾರರು ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ಯಾನಿಂಗ್’ಗೆ ಓಲ್ಗಾಗುವುದು ಕಡ್ಡಾಯವಾಗಿದೆ. ಬಹುತೇಕ ಮತಗಟ್ಟೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮತದಾರರು ಉಸ್ತ್ಸಾಹದಲ್ಲಿ ಪಾಲ್ಗೊಂಡ ಸನ್ನಿವೇಶ ಬೆಳಗ್ಗೆಯೇ ಕಂಡುಬಂತು.
