ಬೆಂಗಳೂರು: ಕೇವಲ ದಕ್ಷ, ಆರಾಮದಿಂದ ಆರೆಸ್ಸೆಸ್ (ಸಂಘ) ಬೆಳೆದಿಲ್ಲ. ವೀಕಿರದ ನಂತರದ ಅನೌಪಚಾರಿಕತೆಯಲ್ಲಿ ಸಂಘ ಬೆಳೆದಿದೆ. ಅದರಂತೆ ಆತ್ಮೀಯತೆ, ಪ್ರೀತಿ, ವಿಶ್ವಾಸದೊಂದಿಗೆ ಪಕ್ಷವನ್ನು ಬೆಳೆಸಬೇಕು ಎಂದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ.ಟಿ.ರವಿ ಬಿಜೆಪಿ ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಿದ್ದಾರೆ. ಬೆಂಗಳೂರಿನಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಪಕ್ಷದ ಕಾರ್ಯ ವಿಸ್ತರಣೆ, ಗುಣಾತ್ಮಕ ಬದಲಾವಣೆ, ವ್ಯಕ್ತಿಗಳಲ್ಲಿ ಉತ್ತಮ ಗುಣ ಬೆಳೆಸುವುದು, ಯೋಗ್ಯ ವ್ಯಕ್ತಿಗಳನ್ನು ಮೇಲೆ ತರುವ ಕೆಲಸವನ್ನು ಪಕ್ಷ ಮಾಡಬೇಕು. ಪರಿಶ್ರಮದ ಕೆಲಸ ನಮ್ಮದಾದಾಗ ನಮಗೆ ಗೌರವ ಬರುತ್ತದೆ. ಸಾಂಸ್ಥಿಕ ವ್ಯವಸ್ಥೆಯ ಜೊತೆಗೆ ಜೋಡಿಸಿಕೊಂಡು ಕೆಲಸ ಮಾಡಿದಾಗ ನಮಗೆ ಗೌರವ ಲಭಿಸುತ್ತದೆ ಎಂದರು. ದಕ್ಷಿಣ ಭಾರತದಲ್ಲಿ ಕರ್ನಾಟಕ ರಾಜ್ಯವು ಬಿಜೆಪಿಯ ಹೆಬ್ಬಾಗಿಲು ಎಂಬ ಮಾತಿದೆ. ರಾಜಕೀಯವಾಗಿ ಹಿಂದಿರುವ ಜಿಲ್ಲೆಗಳಲ್ಲಿ ಬಿಜೆಪಿ ಬೆಳೆಯಲು ನಮ್ಮ ಆಲೋಚನೆ ಏನು? ಪಕ್ಷದ…
Year: 2020
ಪಂಚಾಯತ್ ಸಮರ; ಬಂಟ್ವಾಳ ಸುತ್ತಮುತ್ತ ಕೇಸರಿ ಸೈನ್ಯದ ಸವಾರಿ
ಮಂಗಳೂರು: ರಾಜಕೀಯ ಮೇಲಾಟದಲ್ಲಿ ಇಡೀ ರಾಜ್ಯದ ಗಮನಸೆಳೆದಿರುವ ಬಂಟ್ವಾಳ ಇದೀಗ ಗ್ರಾಮ ಪಂಚಾಯತ್ ಚುನಾವಣಾ ಸಂದರ್ಭದಲ್ಲೂ ಕುತೂಹಲದ ಕ್ಷೇತ್ರವೆನಿಸಿದೆ. ಗ್ರಾಮ ಪಂಚಾಯತ್ ಚುನಾವಣಾ ಘೋಷಣೆಯಾದಾಗಿನಿಂದ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಳೆದ ಚುನಾವಣೆಗಳಂತೆಯೇ ಬಂಟ್ವಾಳ ತಾಲೂಕಿನಲ್ಲಿ ಬಿಜೆಪಿ ಬೆಂಬಲಿಗರ ಪರವಾಗಿ ಇಡೀ ಸಂಘ ಪರಿವಾರವೇ ನಿಂತಿದೆ. ಅದರಲ್ಲೂ ಬೆಳ್ಳೂರು ಸುತ್ತಮುತ್ತಲ ಗ್ರಾಮಗಳಲ್ಲಿ ಬಿಜೆಪಿ, ಹಾಗೂ ಸಂಘ ಪರಿವಾರದ ಕಾರ್ಯಕರ್ತರ ತಂಡ ಸಮರ ಸಜ್ಜಿನಲ್ಲಿ ಮತ ಬೇಟೆ ಕೈಗೊಂಡಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಭದ್ರ ಕೋಟೆ ತೆಂಕಬೆಳ್ಳೂರು ಗ್ರಾಮದಲ್ಲಿ ವಾರಾಂತ್ಯದ ರಾಜಾ ದಿನಗಳಂದು ಸಂಘದ ವಿವಿಧ ಕ್ಷೇತ್ರಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣಾ ವೇದಿಕೆಯಾ ಸುಮಾರು 50 ಕಾರ್ಯಕರ್ತರ ವಿವಿಧ ತಂಡಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಜಿ ಬಿರುಸಿನ ಪ್ರಚಾರ ಕೈಗೊಂಡಿತು.
ರಾಯಿ ಬದನಡಿಯಲ್ಲಿ ಷಷ್ಠಿ ಉತ್ಸವ.. ಭಕ್ತಿ ಕೈಂಕರ್ಯದ ನೇಮೋತ್ಸವ
ಮಂಗಳೂರು: ಷಷ್ಠಿ ಹಿನ್ನೆಲೆಯಲ್ಲಿ ಕರಾವಳಿಯ ದೇವಾಲಯಗಳಲ್ಲಿ ವಿಶೇಷ ಮಹೋತ್ಸವ ನೆರವೇರಿತು. ಬಂಟ್ವಾಳ ಸಮೀಪದ ರಾಯಿಯ ಪ್ರಸಿದ್ಧ ಕ್ಷೇತ್ರ ಬದನಡಿಯಲ್ಲಿ ಸುಮಾರು 800 ವರ್ಷಗಳ ಹಿನ್ನೆಲೆ ಹೊಂದಿರುವ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಸಂಭ್ರಮ ಸಡಗರದಿಂದ ನೆರವೇರಿತು. ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ತಂತ್ರಿ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನ ನೆರವೇರಿಸಿತು. ದೇವರಿಗೆ ಸ್ಕಂದ ಯಾಗ, ಸಾಮೂಹಿಕ ಆಶ್ಲೇಷ ಬಲಿ, ಪಲ್ಲಕಿ ಉತ್ಸವ ಸಹಿತ ದೇವರ ಬಲಿ ಉತ್ಸವ, ಮಹಾಪೂಜೆಯಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡರು. ಪ್ರಧಾನ ಅರ್ಚಕ ಕೆ.ಸುಂದರ ರಾವ್, ಆಡಳಿತಾಧಿಕಾರಿ ನವೀನ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪ್ರಕಾಶ ಕುಮಾರ್ ಜೈನ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಪ್ರಮುಖರಾದ ಜಗದೀಶ ಕೊಯಿಲ, ರಶ್ಮಿತ್ ಶೆಟ್ಟಿ ಕೈತ್ರೋಡಿ, ರವೀಂದ್ರ ಪೂಜಾರಿ, ನಾಗೇಶ ರಾವ್, ಮೋಹನ್ ಕೆ.ಶ್ರೀಯಾನ್ ಕೈತ್ರೋಡಿ, ದಿನೇಶ ಸುವರ್ಣ…
ಕೇಂದ್ರ, ರಾಜ್ಯ ಸರಕಾರಗಳಿಂದ ಕೃಷಿಕರ ಪರ ಆಡಳಿತ; ನಳಿನ್‌ಕುಮಾರ್ ಕಟೀಲ್
ಬೆಂಗಳೂರು: ಕೇಂದ್ರ ಸರಕಾರವು ಕಿಸಾನ್ ಸಮ್ಮಾನ್, ಫಸಲ್ ಬಿಮಾ ಸೇರಿದಂತೆ ಅತ್ಯುತ್ತಮ ಯೋಜನೆಗಳನ್ನು ಜಾರಿಗೊಳಿಸಿ ರೈತಪರ ಸರಕಾರ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಹಾಗೂ ರೈತಪರ ಕಾರ್ಯಕ್ರಮಗಳ ವಿಷಯವನ್ನು ಜನರ ಗಮನಕ್ಕೆ ತರುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಕೇಂದ್ರದ ಕೃಷಿ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮಾರ್ ಅವರು ಈಗಾಗಲೇ ರೈತರಿಗೆ ಒಂದು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿನ ಅಂಶಗಳನ್ನೂ ರೈತರಿಗೆ ಮನದಟ್ಟು ಮಾಡಬೇಕು ಎಂದು ಅವರು ತಿಳಿಸಿದರು. ರಾಜ್ಯದಲ್ಲಿ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಸಾಲಮನ್ನಾದ ಸಾಧನೆಯೂ ಯಡಿಯೂರಪ್ಪ ಅವರಿಗೇ ಸಲ್ಲುತ್ತದೆ. ಈ ಎಲ್ಲಾ ವಿಚಾರಗಳನ್ನು ಜನರಿಗೆ ತಲುಪಿಸಬೇಕು ಎಂದರು.…
ಅನನ್ಯ ಷಷ್ಠಿ ವೈಭವಕ್ಕೆ ಸಾಕ್ಷಿಯಾದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ
ಮಂಗಳೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ನಾಡಿನ ದೇವಾಲಯಗಳಲ್ಲಿ ಷಷ್ಠಿ ಮಹೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು. ದಕ್ಷಿಣ ಭಾರತದ ಪುಣ್ಯ ಕ್ಷೇತ್ರ ಕುಕ್ಕೆಯಲ್ಲಿ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ರಥೋತ್ಸವ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಅನನ್ಯ ವೈಭವವನ್ನು ಕಣ್ತುಂಬಿಕೊಂಡರು. https://www.facebook.com/laxman.ak.1/videos/1305254323184951
ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ರಸ್ತೆಗಳಿಗೆ ಕಾಯಕಲ್ಪ; ಕೇಂದ್ರದ ನೆರವು
ಬೆಂಗಳೂರು: ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಈ ಸಂಬಂಧ ಕೇಂದ್ರ ಸರ್ಕಾರ 15 ಕೋಟಿ ರೂಪಾಯಿ ವೆಚ್ಚದ ಮೂರು ಕಾಮಗಾರಿಗಳನ್ನು ಮಂಜೂರು ಮಂಜೂರು ಮಾಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊನಿರುವ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ರಸ್ತೆ ಬಳಕೆದಾರರ ಸುರಕ್ಷತೆಯ ದೃಷ್ಠಿಯಿಂದ ರಾಷ್ಟ್ರೀಯ ಹೆದ್ದಾರಿ 75ರಲ್ಲಿರುವ ಶಿರಾಡಿ ಘಾಟ್, ರಾ.ಹೆ.73 ರ ಚಾರ್ಮಾಡಿ ಘಾಟ್ ಹಾಗೂ ರಾ.ಹೆ.275 ರಲ್ಲಿರುವ ಸಂಪಾಜೆ ಘಾಟ್‍ನ ಇಳಿಜಾರುಗಳಲ್ಲಿ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು 115 ಕೋಟಿ ರೂ.ಗಳ ವೆಚ್ಚದ ಮೂರು ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಇಲಾಖೆಯು ಮುಂಬರುವ ವರ್ಷಗಳಲ್ಲಿ ಕರ್ನಾಟಕದಲ್ಲಿ ಅಂದಾಜು 1,16,144 ಕೋಟಿ ರೂ.ಗಳ ಹೂಡಿಕೆ ಮಾಡಲಿದೆ ಎಂದ ಅವರು ಭಾರತ್‍ಮಾಲಾ ಮತ್ತಿತರ ಯೋಜನೆಗಳಡಿಯಲ್ಲಿ 31,035 ಕೋಟಿ ರೂ.ಗಳ ವೆಚ್ಚದಲ್ಲಿ 19 ಕಾಮಗಾರಿಗಳು…
ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾದರೂ ಸಿಗದ ಪರಿಹಾರ
ಬೆಂಗಳೂರು: ಬಿಡದಿ ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣದಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯ ಎಂದವರು ಹೇಳಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದಿದ್ದಾರೆ. ಕಾರ್ಮಿಕರ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸ್ವತಃ ನಾನೇ ಹಲವು ಸಭೆಗಳನ್ನು ನಡೆಸಿದ್ದೇನೆ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವೆ ಇರುವ ವ್ಯವಸ್ಥಾಪಕ…
ಬೆಂಗಳೂರಿನಲ್ಲಿ ಜಾಗೃತಿ ಅಭಿಯಾನ.. ‘ಫಿಟ್ ಇಂಡಿಯಾ ಸೈಕ್ಲಥಾನ್’
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಆಯೋಜಿತವಾಗಿರುವ ಫಿಟ್ ಇಂಡಿಯಾ ಜಾಗೃತಿ ಅಭಿಯಾನ ಗಮನಸೆಳೆದಿದೆ. ಕಬ್ಬನ್ ಪಾರ್ಕ್(ಹಡ್ಸನ್ ವೃತ್ತ)ದಿಂದ ಹಮ್ಮಿಕೊಂಡಿರುವ ಜಾಗೃತಿ ಅಭಿಯಾನ “ಫಿಟ್ ಇಂಡಿಯಾ ಸೈಕ್ಲಥಾನ್”ಗೆ ಬಿಬಿಎಂಪಿ ಆಡಳಿತಗಾರರು ಹಾಗೂ ಆಯುಕ್ತರು ಚಾಲನೆ ನೀಡಿದರು. ಪ್ರಧಾನಮಂತ್ರಿಗಳ ಕನಸಾಗಿರುವ ಪಿಟ್ ಇಂಡಿಯಾನ ಅಭಿಯಾನದ ಅಂಗವಾಗಿ ಇಂದು ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಸೈಕ್ಲಥಾನ್ ಆಯೋಜನೆ ಮಾಡಲಾಗಿದೆ. ಪ್ರತಿಯೊಬ್ಬ ನಾಗರಿಕರೂ ಆರೋಗ್ಯವಾಗಿ, ದೈಹಿಕವಾಗಿ ಸದೃಢವಾಗಿರಬೇಕಾದರೆ ಪ್ರತಿನಿತ್ಯ ದೈಹಿಕ ಶಿಕ್ಷಣ ಬಹಳ ಮುಖ್ಯವಾಗಿರುತ್ತದೆ. ಆದ್ದರಿಂದ ಎಲ್ಲರೂ ಫಿಟ್ ಆಗಿರುವ ಮೂಲಕ ಆರೋಗ್ಯಕರವಾಗಿರಬೇಕು ಎಂದು ಆಯುಕ್ತರು ಹೇಳಿದವು. ಇದೇ ವೇಳೆ, ಪಿಟ್ ಇಂಡಿಯಾ ಅಂಗವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿಯು ಕೋವಿಡ್-19 ವಾರಿಯರ್ಸ್ ಗಳಾಗಿ ಕಾರ್ಯನಿರ್ವಹಿಸುವ ವೈದ್ಯರು, ಸಂಚಾರಿ ವಿಭಾಗದ ಪೊಲೀಸರು ಹಾಗೂ ಮಾರ್ಷಲ್ ಗಳನ್ನು ಗುರುತಿಸಿ 2,000 ರೂ. ಪ್ರೋತ್ಸಾಹ ಗೌರವ ಮೊತ್ತ,…
ಆರೆಸ್ಸೆಸ್ ನಾಯಕ ಮಾ.ಮಾಧವ ಗೋವಿಂದ ವೈದ್ಯರಿಗೆ ಶ್ರದ್ದಾಂಜಲಿಯ ಮಹಾಪೂರ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮಾನನೀಯ ಮಾಧವ ಗೋವಿಂದ ವೈದ್ಯ ಅವರು ವಿಧಿವಶರಾಗಿದ್ದಾರೆ. ಪತ್ರಕರ್ತರೂ ಆಗಿದ್ದ ಮಾನನೀಯ ಮಾಧವ ಗೋವಿಂದ ವೈದ್ಯ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ. ತಮ್ಮ ಇಡೀ ಜೀವನವನ್ನೇ ಸಮಾಜ ಸೇವೆಗಾಗಿ ಮೀಸಲಿಟ್ಟಿದ್ದ ವೈದ್ಯ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಿಗೆ ಇವರ ಅಗಲಿಕೆಯ ಶೋಕ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಾರಕಿಹೊಳಿ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅರೆಸ್ಸೆಸ್ ಹಿರಿಯ ಕಾರ್ಯಕರ್ತ ಮಾ.ಮಾಧವ ಗೋವಿಂದ ವೈದ್ಯ ವಿಧಿವಶ
ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಮಾನನೀಯ ಮಾಧವ ಗೋವಿಂದ ವೈದ್ಯ ಅವರು ವಿಧಿವಶರಾಗಿದ್ದಾರೆ. 97 ವರ್ಷ ಹರೆಯದ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಶನಿವಾರ ವೈದ್ಯಾ ಅವರು ನಾಗಪುರದಲ್ಲಿ ಕೊನೆಯುಸಿರೆಳೆದಿದ್ದಾರೆ. ಸಂಘದ ಹಿರಿಯ ಕಾರ್ಯಕರ್ತರಾಗಿರುವ ಇವರು ಅರೆಸ್ಸೆಸ್’ನ ಆದ್ಯ ಸರಸಂಘಚಾಲಕ್ ಕೇಶವ ಬಲಿರಾಮ್ ಹೆಡಗೇವಾರ್ ಸಹಿತ ಈವರೆಗಿನ ಎಲ್ಲಾ ಸರಸಂಘಚಾಲಕರೊಂದಿಗೆ ಸಂಘದ ಚಟುವಟಿಕೆಗಳಲ್ಲಿ ಪಾಲ್ಗೊಂಡವರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೊದಲ ವಕ್ತಾರರಾಗಿ, ಬೌದ್ಧಿಕ ಪ್ರಮುಖರಾಗಿ ತಮ್ಮ ಭಾಷಣಕಾರರಾಗಿ ಎಲ್ಲರ ಗಮನಸೆಳೆಯುತ್ತಿದರು. 1923ರಲ್ಲಿ ಜನಿಸಿದ ಅವರು ಆರೆಸ್ಸೆಸ್ ನ ಪ್ರಾರಂಭದ ದಿನಗಳಿಗೆ ಸಾಕ್ಷಿಯಾದವರು.ಮರಾಠಿ ದೈನಿಕ ’ತರುಣ ಭಾರತ’ದ ಮಾಜೀ ಸಂಪಾದಕರಾಗಿರುವ ಮಾಧವ ಗೋವಿಂದ ವೈದ್ಯ ಅವರ ಮಗ ಮನಮೋಹನ ವೈದ್ಯ ಈಗ ಸಹಸರಕಾರ್‍ಯವಾಹರಾಗಿ ಸಂಘದ ಜವಾಬ್ಧಾರಿ ಹೊಂದಿದ್ದಾರೆ.
